Homeಕರ್ನಾಟಕಫೇಸ್‌ಬುಕ್ ಪ್ರಚೋದನೆ ಮತ್ತು ಗಲಭೆ ಎರಡೂ ಖಂಡನೀಯ; ಸಂಯಮದಿಂದ ವರ್ತಿಸಿ: ಸಿದ್ದರಾಮಯ್ಯ ಮನವಿ

ಫೇಸ್‌ಬುಕ್ ಪ್ರಚೋದನೆ ಮತ್ತು ಗಲಭೆ ಎರಡೂ ಖಂಡನೀಯ; ಸಂಯಮದಿಂದ ವರ್ತಿಸಿ: ಸಿದ್ದರಾಮಯ್ಯ ಮನವಿ

- Advertisement -

ಕಳೆದ ರಾತ್ರಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ. ಹಿಂದೂ-ಮುಸ್ಲಿಮ್ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಗಲಭೆಗೆ ಪ್ರಚೋದಿಸಿದ್ದ ಮತ್ತು ಹಿಂಸಾಚಾರದ ಮೂಲಕ ಪ್ರತಿಕ್ರಿಯಿಸಿದ್ದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್‌ಗೆ ತಿಳಿಸಿದ್ದೇನೆ ಎಂದಿರುವ ಅವರು, ಶಾಂತಿ ಸ್ಥಾಪನೆಯ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ನಮ್ಮ ಪಕ್ಷದ ಸಂಪೂರ್ಣ ಸಹಕಾರ ಇದೆ ಎಂದಿದ್ದಾರೆ.

“ಇಂತಹ ಕೋಮು ಗಲಭೆಗಳಲ್ಲಿ‌ ಸಾವು-ನೋವಿಗೆ ಈಡಾಗುವವರು ಅಮಾಯಕರು ಎಂಬ ಸತ್ಯವನ್ನು ಅನುಭವದ ಪಾಠ ನಮಗೆ ಹೇಳಿಕೊಟ್ಟಿದೆ. ಮೊದಲು ಎರಡೂ ಧರ್ಮಗಳ ಹಿರಿಯರು ಒಂದೆಡೆ ಕೂತು ಪರಸ್ಪರ ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ಪ್ರಯತ್ನ ನಡೆಸಬೇಕೆಂದು ಕೋರುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪೊಲೀಸ್ ಠಾಣೆಯ ಮೇಲೆ ನಡೆದ ದಾಳಿ ಖಂಡನೀಯ. ಇದರಿಂದ ಪೊಲೀಸರು ನೈತಿಕ ಸ್ಥೈರ್ಯ‌ ಕಳೆದು ಕೊಳ್ಳಬಾರದು ಎಂದು ಪೊಲೀಸರಿಗೆ ಧೈರ್ಯ ತುಂಬಿರುವ ಸಿದ್ದರಾಮಯ್ಯ, ಇಂತಹ ಪ್ರಕರಣಗಳ ಸಂದರ್ಭಗಳಲ್ಲಿ ಪೊಲೀಸರು ತಕ್ಷಣ ವಿವೇಚನೆಯಿಂದ ನಿರ್ಧಾರ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಸಣ್ಣ ನಿರ್ಲಕ್ಷ್ಯ ಅನಾಹುತಕ್ಕೆ ದಾರಿಮಾಡಿಕೊಡುತ್ತದೆ ಎಂದು ಎಚ್ಚರಿಸಿದ್ದಾರೆ.

ಗಲಭೆ ಸಂದರ್ಭದಲ್ಲಿ ವರದಿ ಮಾಡಲು ಹೋಗಿರುವ ಮಾಧ್ಯಮದವ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿದ ಸಿದ್ದರಾಮಯ್ಯ, ಪೊಲೀಸರು ತಕ್ಷಣ ಆರೋಪಿಗಳನ್ನು ಬಂಧಿಸಿ, ಪತ್ರಕರ್ತರು ನಿರ್ಭೀತಿಯಿಂದ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿದಿದ್ದಾರೆ.

ಅಲ್ಲದೆ ಅವರ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂಬ ಹೇಳಿಕೆಯನ್ನು ತಿರುಚಿ ಅವರನ್ನು ಹಿಂದೂ ವಿರೋಧಿ ಎನ್ನುವಂತೆ ಚಿತ್ರಿಸಿರುವುದಕ್ಕೆ ಅಸಮಧಾನ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, “ಮುಸ್ಲಿಮ್ ಗಲಭೆಕೋರರಿಗೆ ಮುಸ್ಲಿಮ್ ಹಿರಿಯರು, ಗಲಭೆಗೆ ಪ್ರಚೋದಿಸಿದ್ದ ಹಿಂದೂ ಯುವಕ ನವೀನ್‌‌ಗೆ ಹಿಂದೂ ಹಿರಿಯರೇ ಬುದ್ದಿ ಹೇಳಬೇಕಲ್ಲಾ? ನನ್ನ ಹೇಳಿಕೆಯಲ್ಲಿ ತಪ್ಪೇನಿದೆ?” ಎಂದು ಪ್ರಶ್ನಿಸಿದ್ದಾರೆ.


ಓದಿ: ಡಿಜೆ ಹಳ್ಳಿ ಫೇಸ್‌‌ಬುಕ್ ಪ್ರಚೋದನೆ ಮತ್ತು ಗುಂಪು ಗಲಭೆ: ನವೀನ್ ಮತ್ತು 110 ಜನರ ಬಂಧನ – ಶಾಂತಿ ಕಾಪಾಡಲು ಮುಖಂಡರ ಮನವಿ


 

+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೈಲ್ವೇ ಪರೀಕ್ಷೆಯಲ್ಲಿನ ಅಕ್ರಮ ವಿರೋಧಿಸಿ ಬಿಹಾರ ಬಂದ್‌; ರಸ್ತೆ ತಡೆ | Naanu Gauri

ರೈಲ್ವೇ ಪರೀಕ್ಷೆಯಲ್ಲಿನ ಅಕ್ರಮ ವಿರೋಧಿಸಿ ಬಿಹಾರ ಬಂದ್‌; ರಸ್ತೆ ತಡೆ ನಡೆಸಿ, ಟೈರ್‌ಗಳನ್ನು ಸುಟ್ಟ...

0
ರೈಲ್ವೇ ನೇಮಕಾತಿ ಮಂಡಳಿ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ವಿರೋಧ ಪಕ್ಷಗಳು ಇಂದು ಬಂದ್‌ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಬಿಹಾರದ ರಾಜಧಾನಿ ಪಾಟ್ನಾ ಮತ್ತು ರಾಜ್ಯದ ಇತರ ಸ್ಥಳಗಳಲ್ಲಿ ರಸ್ತೆ...
Wordpress Social Share Plugin powered by Ultimatelysocial