Homeಕರ್ನಾಟಕಫೇಸ್‌ಬುಕ್ ಪ್ರಚೋದನೆ ಮತ್ತು ಗಲಭೆ ಎರಡೂ ಖಂಡನೀಯ; ಸಂಯಮದಿಂದ ವರ್ತಿಸಿ: ಸಿದ್ದರಾಮಯ್ಯ ಮನವಿ

ಫೇಸ್‌ಬುಕ್ ಪ್ರಚೋದನೆ ಮತ್ತು ಗಲಭೆ ಎರಡೂ ಖಂಡನೀಯ; ಸಂಯಮದಿಂದ ವರ್ತಿಸಿ: ಸಿದ್ದರಾಮಯ್ಯ ಮನವಿ

- Advertisement -
- Advertisement -

ಕಳೆದ ರಾತ್ರಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ. ಹಿಂದೂ-ಮುಸ್ಲಿಮ್ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಗಲಭೆಗೆ ಪ್ರಚೋದಿಸಿದ್ದ ಮತ್ತು ಹಿಂಸಾಚಾರದ ಮೂಲಕ ಪ್ರತಿಕ್ರಿಯಿಸಿದ್ದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್‌ಗೆ ತಿಳಿಸಿದ್ದೇನೆ ಎಂದಿರುವ ಅವರು, ಶಾಂತಿ ಸ್ಥಾಪನೆಯ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ನಮ್ಮ ಪಕ್ಷದ ಸಂಪೂರ್ಣ ಸಹಕಾರ ಇದೆ ಎಂದಿದ್ದಾರೆ.

“ಇಂತಹ ಕೋಮು ಗಲಭೆಗಳಲ್ಲಿ‌ ಸಾವು-ನೋವಿಗೆ ಈಡಾಗುವವರು ಅಮಾಯಕರು ಎಂಬ ಸತ್ಯವನ್ನು ಅನುಭವದ ಪಾಠ ನಮಗೆ ಹೇಳಿಕೊಟ್ಟಿದೆ. ಮೊದಲು ಎರಡೂ ಧರ್ಮಗಳ ಹಿರಿಯರು ಒಂದೆಡೆ ಕೂತು ಪರಸ್ಪರ ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ಪ್ರಯತ್ನ ನಡೆಸಬೇಕೆಂದು ಕೋರುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪೊಲೀಸ್ ಠಾಣೆಯ ಮೇಲೆ ನಡೆದ ದಾಳಿ ಖಂಡನೀಯ. ಇದರಿಂದ ಪೊಲೀಸರು ನೈತಿಕ ಸ್ಥೈರ್ಯ‌ ಕಳೆದು ಕೊಳ್ಳಬಾರದು ಎಂದು ಪೊಲೀಸರಿಗೆ ಧೈರ್ಯ ತುಂಬಿರುವ ಸಿದ್ದರಾಮಯ್ಯ, ಇಂತಹ ಪ್ರಕರಣಗಳ ಸಂದರ್ಭಗಳಲ್ಲಿ ಪೊಲೀಸರು ತಕ್ಷಣ ವಿವೇಚನೆಯಿಂದ ನಿರ್ಧಾರ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಸಣ್ಣ ನಿರ್ಲಕ್ಷ್ಯ ಅನಾಹುತಕ್ಕೆ ದಾರಿಮಾಡಿಕೊಡುತ್ತದೆ ಎಂದು ಎಚ್ಚರಿಸಿದ್ದಾರೆ.

ಗಲಭೆ ಸಂದರ್ಭದಲ್ಲಿ ವರದಿ ಮಾಡಲು ಹೋಗಿರುವ ಮಾಧ್ಯಮದವ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿದ ಸಿದ್ದರಾಮಯ್ಯ, ಪೊಲೀಸರು ತಕ್ಷಣ ಆರೋಪಿಗಳನ್ನು ಬಂಧಿಸಿ, ಪತ್ರಕರ್ತರು ನಿರ್ಭೀತಿಯಿಂದ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿದಿದ್ದಾರೆ.

ಅಲ್ಲದೆ ಅವರ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂಬ ಹೇಳಿಕೆಯನ್ನು ತಿರುಚಿ ಅವರನ್ನು ಹಿಂದೂ ವಿರೋಧಿ ಎನ್ನುವಂತೆ ಚಿತ್ರಿಸಿರುವುದಕ್ಕೆ ಅಸಮಧಾನ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, “ಮುಸ್ಲಿಮ್ ಗಲಭೆಕೋರರಿಗೆ ಮುಸ್ಲಿಮ್ ಹಿರಿಯರು, ಗಲಭೆಗೆ ಪ್ರಚೋದಿಸಿದ್ದ ಹಿಂದೂ ಯುವಕ ನವೀನ್‌‌ಗೆ ಹಿಂದೂ ಹಿರಿಯರೇ ಬುದ್ದಿ ಹೇಳಬೇಕಲ್ಲಾ? ನನ್ನ ಹೇಳಿಕೆಯಲ್ಲಿ ತಪ್ಪೇನಿದೆ?” ಎಂದು ಪ್ರಶ್ನಿಸಿದ್ದಾರೆ.


ಓದಿ: ಡಿಜೆ ಹಳ್ಳಿ ಫೇಸ್‌‌ಬುಕ್ ಪ್ರಚೋದನೆ ಮತ್ತು ಗುಂಪು ಗಲಭೆ: ನವೀನ್ ಮತ್ತು 110 ಜನರ ಬಂಧನ – ಶಾಂತಿ ಕಾಪಾಡಲು ಮುಖಂಡರ ಮನವಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...