Homeಮುಖಪುಟಪ್ರಸಿದ್ದ ‘ಕೋಟ್ಟಕ್ಕಲ್‌ ಆಯುರ್ವೇದ’ ವೈದ್ಯ ಡಾ.ಪಿ.ಕೆ. ವಾರಿಯರ್‌ (100) ನಿಧನ

ಪ್ರಸಿದ್ದ ‘ಕೋಟ್ಟಕ್ಕಲ್‌ ಆಯುರ್ವೇದ’ ವೈದ್ಯ ಡಾ.ಪಿ.ಕೆ. ವಾರಿಯರ್‌ (100) ನಿಧನ

- Advertisement -
- Advertisement -

‘ಕೋಟ್ಟಕ್ಕಲ್‌ ಆಯುರ್ವೇದ’ ಎಂದು ಪ್ರಸಿದ್ದವಾಗಿರುವ ಆರ್ಯ ವೈದ್ಯ ಶಾಲಾದ ವ್ಯವಸ್ಥಾಪಕ ಟ್ರಸ್ಟಿ ಡಾ. ಪಿ.ಕೆ. ವಾರಿಯರ್‌ ನಿಧನರಾಗಿದ್ದಾರೆ. ಆಯುರ್ವೇದ ಔಷಧಗಳಿಗೆ ವಿಶ್ವದಾದ್ಯಂತ ಹೆಸರುವಾಸಿಯಾಗಿರುವ ಕೇರಳದ ಕೋಟ್ಟಕ್ಕಲ್‌‌ನ ವೈದ್ಯರತ್ನಂ ಪಿಎಸ್ ವಾರಿಯರ್‌‌‌ ಅವರ ‘ಆರ್ಯ ವೈದ್ಯ ಶಾಲಾ’ದ ಮುಖ್ಯ ಕಚೇರಿಯಾದ ಕೈಲಾಸ ಮಂದಿರಂನಲ್ಲಿ ಶನಿವಾರದಂದು ಅವರು ತಮ್ಮ ಕೊನೆಯುಸಿರೆಳೆದಿದ್ದಾರೆ. ಅವರು ತಿಂಗಳ ಹಿಂದೆಯಷ್ಟೆ ತನ್ನ ನೂರನೇ ಜನ್ಮ ದಿನವನ್ನು ಆಚರಿಸಿದ್ದರು.

ವೈದ್ಯರತ್ನಂ ಪಿಎಸ್ ವಾರಿಯರ್‌‌‌ ಅವರು ಪ್ರಾರಂಭಿಸಿದ್ದ ಆರ್ಯ ವೈದ್ಯ ಶಾಲಾದ ವ್ಯವಸ್ಥಾಪಕ ಟ್ರಸ್ಟಿಯಾಗಿ 1954 ರಲ್ಲಿ ಡಾ. ವಾರಿಯರ್‌ ನೇಮಕವಾಗಿದ್ದು. ಡಾ. ವಾರಿಯರ್ ಶತಮಾನದಷ್ಟು ಹಳೆಯದಾದ ಸಂಸ್ಥೆಯನ್ನು ವೈಭವ ಮತ್ತು ಖ್ಯಾತಿಯ ಉತ್ತುಂಗಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸ್ವಾತಂತ್ರ್ಯ ಹೋರಾಟಗಾರರಾದ ಡಾ. ವಾರಿಯರ್, ಆಯುರ್ವೇದಕ್ಕೆ ದೇಹ ಮತ್ತು ಮನಸ್ಸನ್ನು ಸಮಗ್ರವಾಗಿ ಪರಿಗಣಿಸುವ ಮೂಲಕ ಮನುಷ್ಯರನ್ನು ಸಮಗ್ರವಾಗಿ ನೋಡುವ ಹೊಸ ದೃಷ್ಟಿಕೋನವನ್ನು ನೀಡಿದ್ದರು ಎಂದು ದಿ ಹಿಂದೂ ಪತ್ರಿಕೆ ಉಲ್ಲೇಖಿಸಿದೆ.

ಇದನ್ನೂ ಓದಿ: ಕೊರೊನಾ: ರೋಗ ನಿರೋಧಕತೆ ಕುರಿತು ಆಯುರ್ವೇದದ ದೃಷ್ಟಿಕೋನ

‘ಸ್ಮೃತಿಪರ್ವಂ’ ಎಂಬ ಅವರ ಪುಸ್ತಕವು 2009 ರಲ್ಲಿ ಅತ್ಯುತ್ತಮ ಆತ್ಮಚರಿತ್ರೆಗಾಗಿ ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಇದರ ಇಂಗ್ಲಿಷ್ ಅನುವಾದ ‘ದಿ ಕ್ಯಾಂಟೊ ಆಫ್ ಮೆಮೊರೀಸ್’ ಕೂಡ ಹೆಚ್ಚು ಜನಪ್ರಿಯವಾಗಿತ್ತು. ಅವರು ಅಖಿಲ ಭಾರತ ಆಯುರ್ವೇದ ಕಾಂಗ್ರೆಸ್ ಅಧ್ಯಕ್ಷರಾಗಿ ಎರಡು ಬಾರಿ ಆಯ್ಕೆಯಾಗಿದ್ದರು.

ಡಾ. ವಾರಿಯರ್ ಅವರ ನಿಧನಕ್ಕೆ ಭಾರತದ ರಾಷ್ಟ್ರಪತಿ, ಪ್ರಧಾನ ಮಂತ್ರಿ ಸೇರಿದಂತೆ ದೇಶದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಅವರಿಗೆ 1999 ರಲ್ಲಿ ಪದ್ಮಶ್ರೀ, 2010 ರಲ್ಲಿ ಪದ್ಮಭೂಷಣ ನೀಡಿ ಗೌರವಿಸಲಾಗಿತ್ತು. ಕ್ಯಾಲಿಕಟ್ ವಿಶ್ವವಿದ್ಯಾಲಯವು ಅವರಿಗೆ 1999 ರಲ್ಲಿ ಡಿಲಿಟ್ ಪದವಿಯನ್ನು ನೀಡಿ ಗೌರವಿಸಿತು. ಕೋಪನ್ ಹ್ಯಾಗನ್ ವಿಶ್ವವಿದ್ಯಾಲಯದ ಡಾಕ್ಟರ್ ಆಫ್ ಮೆಡಿಸಿನ್ ಪ್ರಶಸ್ತಿ ಸೇರಿದಂತೆ ಅವರು ಅನೇಕ ಗೌರವ ಪದವಿಗಳನ್ನು ಪಡೆದಿದ್ದಾರೆ.

ಅವರ ಪತ್ನಿ ಮಾಧವಿಕುಟ್ಟಿ ಮತ್ತು ಮಗ ವಿಜಯನ್ ವಾರಿಯರ್ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದರು. ಅವರಿಗೆ ಮಗ ಬಾಲಚಂದ್ರ ವಾರಿಯರ್ ಮತ್ತು ಮಗಳು ಸುಭದ್ರಾ ರಾಮಚಂದ್ರನ್ ಇದ್ದಾರೆ.

ಇದನ್ನೂ ಓದಿ: ಪತಂಜಲಿ ಕೊರೊನಾ ಔಷಧಿ: ಆಯುರ್ವೇದ ವೈದ್ಯಶಾಸ್ತ್ರಕ್ಕೆ ಮಸಿ ಬಳಿಯುವ ಪ್ರಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...