Homeಕರ್ನಾಟಕನಾಡಿನ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ (87) ಇನ್ನಿಲ್ಲ

ನಾಡಿನ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ (87) ಇನ್ನಿಲ್ಲ

- Advertisement -
- Advertisement -

ವಯೋಸಹಜ ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿದ್ದ ನಾಡಿನ ಖ್ಯಾತ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್‌ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಅವರಿಗೆ 87 ವರ್ಷ ವಯಸ್ಸಾಗಿತ್ತು.

ನ್ಯಾಯವಾದಿಯಾಗಿದ್ದ ತಂದೆ ಪಿ. ಅಹಮದ್, ತಾಯಿ ಜೈನಾಬಿ ಅವರ ಮಗಳಾಗಿ ಸಾರಾ ಅಬೂಬಕ್ಕರ್ ಅವರು 1936ರ ಜೂನ್ 30 ರಂದು ಕೇರಳದ ಕಾಸರಗೋಡಿನ ಚಂದ್ರಗಿರಿ ನದಿಯ ತೀರದ  ಗ್ರಾಮವೊಂದರಲ್ಲಿ ಜನಿಸಿದರು. ಪ್ರಾಥಮಿಕ ವಿದ್ಯಾಭ್ಯಾಸ ತಮ್ಮ ಹುಟ್ಟೂರಿನಲ್ಲೇ ಪಡೆದ ಅವರು, ಹೈಸ್ಕೂಲು ವಿದ್ಯಾಭ್ಯಾಸವನ್ನು ಕಾಸರಗೋಡಿನಲ್ಲಿ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂಜಿನಿಯರ್ ಆಗಿದ್ದ ಅಬೂಬಕ್ಕರ್‌‌ ಅವರನ್ನು ಸಾರಾ ವಿವಾಹವಾದ ನಂತರ ಅವರು ತಮ್ಮ ವಿದ್ಯಾಭ್ಯಾಸಕ್ಕೆ ವಿದಾಯ ಹೇಳುವಂತಾಯಿತು. ಆದರೆ ಅವರು ಓದಿನಲ್ಲಿ ನಿರಂತರ ಆಸಕ್ತರಾಗಿದ್ದ ಸಾಹಿತ್ಯ ಲೋಕದೆಡೆಗೆ ಆಕರ್ಷಿತರಾದರು. ಅವರ ಅಣ್ಣ ತಂದುಕೊಡುತ್ತಿದ್ದ ಕೇರಳದ ಪ್ರಸಿದ್ದ ಲೇಖಕ ವೈಕಂ ಮಹಮದ್ ಬಷೀರ್‌ ಅವರ ಕಾದಂಬರಿಗಳ ಓದಿನ ಪ್ರಭಾವದಿಂದ ಅವರು ಬರೆಯುವ ಆಸಕ್ತಿಯನ್ನು ತೆಳೆದರು.

ತಮ್ಮ ನಲವತ್ತನೆ ವಯಸ್ಸಿನ ನಂತರ ಬರೆಯಲು ಪ್ರಾರಂಬಿಸಿದ ಸಾರಾ ಅಬೂಬಕ್ಕರ್  ಅವರ ಮೊದಲ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ ಲಂಕೇಶ್ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತು. ಈ ಕಥೆಯಲ್ಲಿ ಹೊರಹೊಮ್ಮಿದ ವಾಸ್ತವಿಕ ಬದುಕಿನ ಚಿತ್ರಣ ಮತ್ತು ಧರ್ಮದ ಕಟ್ಟುಪಾಡುಗಳಲ್ಲಿ ಶೋಷಿತಗೊಂಡ ಮಹಿಳೆಯರ ಧ್ವನಿಗಳು ಅಸಂಖ್ಯಾತ ಓದುಗರ ಹೃದಯವನ್ನು ತಟ್ಟಿ ಈ ಕಾದಂಬರಿ ಎಲ್ಲೆಡೆಯಿಂದ ಮೆಚ್ಚುಗೆ ಪಡೆಯಿದೆ.

ಚಂದ್ರಗಿರಿಯ ತೀರದಲ್ಲಿ- ೧೯೮೪, ಸಹನಾ, – ೧೯೮೫, ವಜ್ರಗಳು, ಕದನವಿರಾಮ, – ೧೯೮೮, ಸುಳಿಯಲ್ಲಿ ಸಿಕ್ಕವರು,೧೯೯೪, ಪ್ರವಾಹ-ಸುಳಿ (ಸುಳಿಯಲ್ಲಿ ಸಿಕ್ಕವರು ಕೃತಿಯ ಭಾಗ-೨), ತಳ ಒಡೆದ ದೋಣಿ, ೧೯೯೭, ಪಂಜರ, ಇಳಿಜಾರು, ಕಾಣಿಕೆ ಇವರ ಪ್ರಮುಖ ಕೃತಿಗಳಾಗಿವೆ.

ಚಪ್ಪಲಿಗಳು, ೧೯೮೯, ಪಯಣ ಮತ್ತು ಇತರ ಕಥೆಗಳು, ಅರ್ಧರಾತ್ರಿಯಲ್ಲಿ ಹುಟ್ಟಿದ ಕೂಸು, ೧೯೯೨, ಖೆಡ್ಡ, ಸುಮಯ್ಯಾ (ಜನಪದ ಆಧರಿಸಿದ ಕಥೆಗಳು), ೨೦೦೪, ಗಗನ ಸಖಿ, ೨೦೦೭ ಇವರ ಪ್ರಮುಖ ಕಥಾ ಸಂಕಲನಗಳಾಗಿವೆ.

ಕಮರಿದ ಕನಸು, ಮಗಳು ಹುಟ್ಟಿದಳು, ತೇಲಾಡುವ ಮೋಡಗಳು, ತಾಳ, ಹೀಗೂ ಒಂದು ಬದುಕು ಇವರ ಬರೆದ ಬಾನುಲಿ ನಾಟಕಗಳಾಗಿದ್ದು, ಲೇಖನ ಗುಚ್ಛ, ಮನೋಮಿ, ಬಲೆ, ನಾನಿನ್ನು ನಿದ್ರಿಸುವೆ (ಕಾದಂಬರಿಗಳು) ಇವರ ಪ್ರಮುಖ  ಲೇಖನ ಮತ್ತು ಅನುವಾದಗಳಾಗಿವೆ. ಐಷಾರಾಮದ ಆಳದಲ್ಲಿ ಎಂಬ ಪ್ರವಾಸಕಥನವನ್ನು ಕೂಡಾ ಸಾರಾ ಅವರು ಬರೆದಿದ್ದಾರೆ.

ಸಾರಾ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ, ‘ಸಹನಾ’ ಕಾದಂಬರಿಗೆ ವರ್ಧಮಾನ ಪ್ರಶಸ್ತಿ, ‘ಸುಳಿಯಲ್ಲಿ ಸಿಕ್ಕವರು’ ಕೃತಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ, ಸಂದೇಶ ಪ್ರಶಸ್ತಿ, ಅನುಪಮ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಮುಖ ಪ್ರಶಸ್ತಿ ಗೌರವಗಳು ಸಂದಿವೆ.

ಮೃತರ ಪಾರ್ಥೀವ ಶರೀರವನ್ನು ಮಂಗಳೂರಿನ ಲೇಡಿಹಿಲ್ ಬಳಿ ಇರುವ ಅವರ ನಿವಾಸದಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ರಾತ್ರಿ 8 ಗಂಟೆಗೆ ಅಂತ್ಯ ಕ್ರಿಯೆ ನೆರವೇಸಿಸಲಾಗುತ್ತದೆ ಎಂದು ಅವರ ಆಪ್ತ ಮೂಲಕಗಳು ನಾನುಗೌರಿ.ಕಾಂಗೆ ತಿಳಿಸಿವೆ.

ಹಿರಿಯ ಸಾಹಿತಿಗೆ ನಾಡಿನ ಹಲವರು ಗಣ್ಯ ವ್ಯಕ್ತಿಗಳು ಶ್ರದ್ದಾಂಜಲಿ ಕೋರಿದ್ದು, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗೆ ಅವರ ಕೊಡುಗೆಗಳನ್ನು ನೆನೆಸಿಕೊಂಡಿದ್ದಾರೆ.

ಸಂಸ್ಕೃತಿ ಚಿಂತಕ, ಸಾಹಿತಿ ರಹಮತ್ ತರಿಕೆರೆ ಅವರು, “ನಿನ್ನೆಯಷ್ಟೆ ಅಕ್ಕರದವ್ವ ಫಾತಿಮಾ ಶೇಖರ ಜನ್ಮದಿನವಿತ್ತು. ಈ ದಿನ ‘ಮುಸ್ಲಿಂ‌ಹುಡುಗಿ ಶಾಲೆ‌ ಕಲಿತದ್ದು’ ಬರೆಹದ ಮೂಲಕ ಸಾಹಿತ್ಯಲೋಕ ಪ್ರವೇಶಿಸಿದ ಸಾರಾ ಇಲ್ಲವಾದರು. ಸಾರಾ ಎಂದರೆ ಅರಬ್ಬಿಯಲ್ಲಿ ಸಂತೋಷದಾಯಕಿ ರಾಜಕುಮಾರಿ ಎಂದರ್ಥಗಳಿವೆ. ಆದರೆ ಇವರು ಬದುಕೆಲ್ಲ ಬವಣೆಗೊಳಗಾದ ಮಹಿಳೆಯರ ಬಗ್ಗೆಯೇ ಧ್ಯಾನಿಸಿದರು. ಬರೆದರು. 25 ವರ್ಷಗಳ ಹಿಂದೆ ಅವರೊಡನೆ ಇಡೀ ದಿನವಿದ್ದು ಸಂದರ್ಶನ ಮಾಡಿ ಪ್ರಕಟಿಸಿದ್ದು ನೆ‌ನಪಾಗುತ್ತಿದೆ. ವೈಚಾರಿಕವಾಗಿ ಕಠೋರ ನಿಷ್ಠುರೆ; ಅಂತಃಕರಣದಲ್ಲಿ ತಾಯಿಯಾಗಿದ್ದರು” ಎಂದು ಹೇಳಿದ್ದಾರೆ.

“ತಾ‌ನು ನಂಬಿದ ಮೌಲ್ಯಗಳಿಗೆ ಬದ್ಧರಾಗಿ, ಎದುರಾದ ವಿರೋಧಗಳನ್ನು ದಿಟ್ಟತನದಿಂದ ಎದುರಿಸಿ, ಮುಸ್ಲಿಂ ಲೋಕದ ತವಕ-ತಲ್ಲಣಗಳಿಗೆ ದನಿಯಾಗಿದ್ದ ಹಿರಿಯ ಸಾಹಿತಿ ಸಾರಾ ಅಬೂಬಕರ್ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ. ಅವರ ಬಂಧುಗಳು ಮತ್ತು ಓದುಗ ಬಳಗದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇ‌ನೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ವಿಧಾನಪರಿಷತ್‌‌ನ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಅವರು, “ಕರಾವಳಿ ಸೌಹಾರ್ದತೆಯ ಗಟ್ಟಿ ಧ್ವನಿ,ಕೋಮುವಾದದ ವಿರುದ್ಧದ ದಿಟ್ಟ ದನಿ ಅಸ್ತಂಗತವಾಗಿದೆ. ಲೇಖಕಿ ಸಾರಾ ಅಬೂಬಕ್ಕರ್ ನಿಧನ ಸಾಹಿತ್ಯ ಲೋಕಕ್ಕೆ ತುಂಬಿ ಬಾರದ ನಷ್ಟ. ದುರಿತ ಕಾಲದಲ್ಲಿ ಸಾರಾ ಅವರ ಅಗಲಿಕೆ ಕುಟುಂಬದ ಸದಸ್ಯರನ್ನೇ ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬಸ್ಥರು ಹಾಗೂ ಅವರ ಒಡನಾಡಿಗಳ ನೋವಲ್ಲಿ ನಾನು ಭಾಗಿ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಖ್ಯಾತ ವ್ಯಂಗ್ಯಚಿತ್ರಕಾರ ಪಿ.ಮೊಹಮದ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...