ರೈತರ ಸ್ಥಿತಿ ನೋಡಿದರೆ ಹೊಟ್ಟೆ ಉರಿಯುತ್ತೆ ಎಂದು ಹೇಳುವ ಮೂಲಕ ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟಕ್ಕೆ ಖ್ಯಾತ ಕನ್ನಡ ಚಿತ್ರನಟ ಡಾ.ಶಿವರಾಜ್ ಕುಮಾರ್ ಮತ್ತೊಮ್ಮೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು “ರೈತರು ಬೀದಿಯಲ್ಲಿ ಕೂತು ಊಟ ಮಾಡ್ತಿರೋದು ನೋಡಿದ್ರೆ ಹೊಟ್ಟೆ ಉರಿಯುತ್ತೆ. ಅವರಿಗೆ ನಮ್ಮ ಸಪೋರ್ಟ್ ಖಂಡಿತಾ ಇದ್ದೇ ಇರುತ್ತೆ. ಮನುಷ್ಯ ಮನುಷ್ಯನಿಗೆ ಸಪೋರ್ಟ್ ಮಾಡದೇ ಇರಲು ಸಾಧ್ಯವಿಲ್ಲ. ಆದ್ರೆ ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ” ಎಂದು ಅವರು ಒತ್ತಾಯಿಸಿದ್ದಾರೆ.
ನಮ್ಮ ಸಮಸ್ಯೆಗಳನ್ನೇ ನಾವು ಪರಿಹಾರ ಪಡಿಸಿಕೊಳ್ಳೋಕೆ ಆಗ್ತಿಲ್ಲ.. ನಮ್ಮ ಕೈಯಲ್ಲಿ ಏನೂ ಇಲ್ಲ. ನನ್ ಕೈಯಲ್ಲಿ ಅಧಿಕಾರ ಇದ್ದಿದ್ರೆ ಎಲ್ಲವನ್ನೂ ಬರೆದುಕೊಡ್ತಿದ್ದೆ. ಆದ್ರೆ ಅಧಿಕಾರ ನನ್ನ ಕೈಯಲ್ಲಿ ಇಲ್ವಲ್ಲಾ ಎಂದು ಶಿವರಾಜ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ರೈತರು ಬೀದಿಯಲ್ಲಿ ಕೂತು ಊಟ ಮಾಡ್ತಿರೋದು ನೋಡಿದ್ರೆ ಹೊಟ್ಟೆ ಉರಿಯುತ್ತೆ. ಅವರಿಗೆ ನಮ್ಮ ಸಪೋರ್ಟ್ ಖಂಡಿತಾ ಇದ್ದೇ ಇರುತ್ತೆ.ಆದ್ರೆ ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ.#FarmersProtest #ShivarajKumar
ಪೂರ್ತಿ ಓದಿ: https://t.co/agpwGCbFlG pic.twitter.com/kCCjUpcOO7
— Naanu Gauri (@naanugauri) February 10, 2021
ಯಾರೂ ಹೋರಾಟದ ಬಗ್ಗೆ ಕಾಮೆಂಟ್ ಮಾಡ್ತಿಲ್ಲ ಅಂತಾರೆ.. ಆದ್ರೆ ಅದು ನಮ್ಮಿಂದ, ಇಂಡಸ್ಟ್ರಿಯಿಂದ ಅಥವಾ ಇಡೀ ಭಾರತೀಯ ಸಿನಿಮಾರಂಗ ಬೀದಿ ಇಳಿಯೋದ್ರಿಂದ ಏನೂ ಸಾಧ್ಯವಾಗಲ್ಲ.. ಹಾಗೇ ಆಗೋದಾದ್ರೆ ನಾವು ಬೀದಿಗಿಳಿಯಲು ಸಾಧ್ಯ. ಅದು ಸರ್ಕಾರದಿಂದ ಮಾಡೋಕಷ್ಟೇ ಸಾಧ್ಯ ಎಂದು ಅವರು ಹೇಳಿದ್ದಾರೆ.
ಈ ಹಿಂದೆಯು ಸಹ ಅವರು “ರೈತ ದೇಶದ ಬೆನ್ನೆಲುಬು, ರೈತ ಇದ್ರೇನೆ ದೇಶ.. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ.. ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ” ಎಂದು ಟ್ವೀಟ್ ಮಾಡುವ ಮೂಲಕ ರೈತರಿಗೆ ಬೆಂಬಲ ಸೂಚಿಸಿದ್ದರು.
ರೈತ ದೇಶದ ಬೆನ್ನೆಲುಬು , ರೈತ ಇದ್ರೇನೆ ದೇಶ .. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ ..ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ
— DrShivaRajkumar (@NimmaShivanna) December 8, 2020
ಇದನ್ನೂ ಓದಿ: ರೈತ ಇದ್ರೇನೆ ದೇಶ: ರೈತ ಹೋರಾಟಕ್ಕೆ ನಟ ಶಿವರಾಜ್‌ಕುಮಾರ್ ಬೆಂಬಲ



Formers jindabad.raithara horaatakke nanna bembalisutthene.