Homeಮುಖಪುಟಸಂವಿಧಾನದಿಂದ ಮಾತ್ರ ರೈತನ ಮಗನಾದ ನಾನು ಸುಪ್ರೀಂ ಕೋರ್ಟ್‌ವರೆಗೂ ತಲುಪಲು ಸಾಧ್ಯವಾಯಿತು: ಜಸ್ಟಿಸ್ ನಾಗಮೋಹನ್ ದಾಸ್

ಸಂವಿಧಾನದಿಂದ ಮಾತ್ರ ರೈತನ ಮಗನಾದ ನಾನು ಸುಪ್ರೀಂ ಕೋರ್ಟ್‌ವರೆಗೂ ತಲುಪಲು ಸಾಧ್ಯವಾಯಿತು: ಜಸ್ಟಿಸ್ ನಾಗಮೋಹನ್ ದಾಸ್

ಭಾರತ ಇಂದು ಎಂದಿಗಿಂತಲೂ ಅತಿ ಹೆಚ್ಚು ಶ್ರೀಮಂತ ರಾಷ್ಟ್ರವಾಗಿದೆ. ಆದರೆ ಶೇ.60 ರಷ್ಟು ಸಂಪತ್ತು ಕೇವಲ ಶೇ.1 ರಷ್ಟು ಜನರ ಕೈಯಲ್ಲಿದೆ.

- Advertisement -
- Advertisement -

ರೈತನ ಮಗನಾದ ನಾನು ಬೆಂಗಳೂರಿನಲ್ಲಿ ಕಾನೂನು ಪದವಿ ಪಡೆದು 2004ರಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕವಾದೆ. ಹತ್ತು ವರ್ಷಗಳ ನಂತರ 2014ರಿಂದ ದೆಹಲಿಯಲ್ಲಿ ಸರ್ವೋಚ್ಚ ನ್ಯಾಯಾಲಯದ ಹಿರಿಯ ವಕೀಲರಾಗಿ ನೇಮಕವಾದೆ. ಇಷ್ಟೆಲ್ಲಾ ಸಾಧ್ಯವಾಗಿದ್ದು ಸಂವಿಧಾನದಿಂದ ಮಾತ್ರ ಎಂದು ಜಸ್ಟಿಸ್ ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು.

ಹಿಂದುತ್ವವಾದಿಗಳ ಗುಂಡೇಟಿಗೆ ಹುತಾತ್ಮರಾದ ಗೌರಿ ಲಂಕೇಶ್, ಎಂ.ಎಂ ಕಲಬುರ್ಗಿ, ಗೋವಿಂದ ಪನ್ಸಾರೆ ಮತ್ತು ನರೇಂದ್ರ ದಾಬೋಲ್ಕರ್ ನೆನಪಿನಲ್ಲಿ ಗೌರಿ ಸ್ಮಾರಕ ಟ್ರಸ್ಟ್ ಮತ್ತು ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್‌ ಸಂಸ್ಥೆಗಳ ಸಹಯೋಗದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳ ಮುಂದಿರುವ ಸವಾಲುಗಳು’ ವಿಷಯದ ಕುರಿತ ವೆಬಿನಾರ್ ಸರಣಿಯಲ್ಲಿ ಅವರು ಮಾತನಾಡಿದರು.

ಇಂದು ಸ್ವಾತಂತ್ರ್ಯ ದಿನಾಚರಣೆ. ನಮ್ಮ ಸ್ವಾತಂತ್ರ್ಯಕ್ಕಾಗಿ ಹಲವು ದಶಕಗಳ ಕಾಲ ಜನ ಹೋರಾಡಿ ಪ್ರಾಣ ಕೊಟ್ಟಿದ್ದಾರೆ. ಸ್ವಾತಂತ್ರ್ಯ ಹೋರಾಟದ ತ್ಯಾಗ ಬಲಿದಾನಗಳನ್ನು ಮರೆಯಬಾರದು. ಅಂಬೇಡ್ಕರ್ ಹೇಳಿದಂತೆ ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು ಎಂಬುದನ್ನು ನೆನೆಸಿಕೊಳ್ಳಬೇಕು ಎಂದು ಅವರು ಹೇಳಿದರು.

ಭಾರತದ ಸ್ವಾತಂತ್ರ್ಯ ಹೋರಾಟ ಕೇವಲ ರಾಜಕೀಯ ಹೋರಾಟವಾಗಿರಲಿಲ್ಲ. ಅದು ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯದ ಹೋರಾಟವೂ ಆಗಿತ್ತು. ಉಳುವವನಿಗೆ ಭೂಮಿ, ದುಡಿಯುವವರಿಗೆ ನ್ಯಾಯಯುತ ಕೂಲಿ ಸಿಗಬೇಕು. ಸತಿ ಪದ್ದಿತಿ, ಬಾಲ್ಯವಿವಾಹ ಪದ್ದತಿ ನಿರ್ಮೂಲನೆಯಾಗಬೇಕು ಎಂಬ ಹಕ್ಕೊತ್ತಾಯಗಳು ಅದರೊಡನಿದ್ದವು ಎಂದರು.

ಇಂದು ದೇಶದಲ್ಲಿ ಕೇವಲ ರಾಜಕೀಯ ಪ್ರಜಾಪ್ರಭುತ್ವದ ಬಗ್ಗೆ, ಚುನಾವಣೆಗಳ ಬಗ್ಗೆ ಮಾತ್ರ ಚರ್ಚೆ ನಡೆಯುತ್ತಿದೆ. ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವದ ಬಗ್ಗೆ ನಾವು ಮಾತನಾಡಲಿಲ್ಲ, ಅವನ್ನು ರಾಜಕೀಯ ಪ್ರಜಾಪ್ರಭುತ್ವದೊಂದಿಗೆ ಸಮೀಕರಿಸಲಿಲ್ಲ. ಆದ್ದರಿಂದ ಚುನಾವಣೆ ಎಂದರೆ ಭಾವನಾತ್ಮಕ ವಿಚಾರಗಳು ಚರ್ಚೆಗೆ ಬರುತ್ತವೆಯೇ ಹೊರತು ಬದುಕಿನ ಬಗ್ಗೆ ಚರ್ಚೆಗಳಾಗುವುದಿಲ್ಲ. ನಿರುದ್ಯೋಗ, ಕೈಗಾರಿಕಾ ಬಿಕ್ಕಟ್ಟು, ಕೃಷಿ ಬಿಕ್ಕಟ್ಟನ ಕುರಿತು ಚರ್ಚೆಯಾಗುವುದಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಧರ್ಮ, ಭಾಷೆ, ನಮ್ಮ ಮೂಲ ಯಾವುದು, ಮಂದಿರ, ಮಸೀದಿಯ ಬಗ್ಗೆ ಭಾವನಾತ್ಮಕ ವಿಚಾರದಲ್ಲಿಯೇ ಮುಳುಗಿ ಹೋಗಿದ್ದೇವೆ. ಮಹಿಳೆಯರು, ದಲಿತರ ಮೇಲೆ ದೌರ್ಜನ್ಯ ದಾಳಿ ನಡೆಯುತ್ತಿದ್ದರೂ ಅದನ್ನು ಚುನಾವಣೆ ಸಂದರ್ಭದಲ್ಲಿ ಚರ್ಚೆಗೆ ಬರುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ರಾಜಕೀಯದಲ್ಲಿ ಹಣ, ಜಾತಿ ಮತ್ತು ಧರ್ಮದ ಪ್ರಭಾವ ತಾಂಡವವಾಡುತ್ತಿವೆ. ಶೇ.88 ರಷ್ಟು ಚುನಾಯಿತ ಸಂಸತ್ ಸದಸ್ಯರು ಕೋಟ್ಯಾಧೀಶ್ವರರಾಗಿದ್ದಾರೆ. ಶೇ.43 ರಷ್ಟು ಜನರ ಮೇಲೆ ಕ್ರಿಮಿನಲ್ ಕೇಸುಗಳಿವೆ. 54% ವಂಶಪಾರಂಪರ್ಯ ರಾಜಕೀಯ ಮಾಡುತ್ತಿದ್ದಾರೆ. ಅವರಲ್ಲಿ ಬಹುತೇಕರು ರಿಯಲ್ ಎಸ್ಟೇಟ್, ಕೈಗಾರಿಕೆ ಹಿನ್ನೆಲೆಯವರು. ಹಾಗಾದರೆ ರೈತರನ್ನು, ಕಾರ್ಮಿಕರನ್ನು ಪ್ರತಿನಿಧಿಸುವವರು ಎಲ್ಲಿದ್ದಾರೆ ಎಂದು ಪ್ರಶ್ನಿಸಿದರು.

ಸ್ವಾತಂತ್ರ್ಯ ಬಂದ ನಂತರ ವಿಜ್ಞಾನ ಮತ್ತು ತಂತ್ರಜ್ಞಾನ ಬಳಕೆಯಿಂದ ಅತಿ ಹೆಚ್ಚು ಉತ್ಪಾದಿಸಿದ್ದೇವೆ. ಭಾರತ ಇಂದು ಎಂದಿಗಿಂತಲೂ ಅತಿ ಹೆಚ್ಚು ಶ್ರೀಮಂತ ರಾಷ್ಟ್ರವಾಗಿದೆ. ಆದರೆ ಶೇ.60 ರಷ್ಟು ಸಂಪತ್ತು ಕೇವಲ ಶೇ.1 ರಷ್ಟು ಜನರ ಕೈಯಲ್ಲಿದೆ. ಶೇ.20 ರಷ್ಟು ಸಂಪತ್ತು ಶೇ.9 ರಷ್ಟು ಜನರ ಕೈನಲ್ಲಿದೆ. ಉಳಿದ ಶೇ.20 ರಷ್ಟು ಸಂಪತ್ತು ಶೇ.90 ಜನರ ಕೈನಲ್ಲಿದೆ. ಈ ಅಸಮಾನ ಭಾರತವನ್ನು ಕಟ್ಟಿದ್ದೇವೆ. ಸಂಪತ್ತಿದ್ದರೂ ಬಡತನ, ನಿರುದ್ಯೋಗ, ಅನಾರೋಗ್ಯ, ಅನಕ್ಷರತೆ ಇದೆ. ನಾವು ಈ ಅಸಮಾನತೆಯನ್ನು ಮುಂದುವರೆಸಿಕೊಂಡು ಪ್ರಜಾಪ್ರಭುತ್ವವನ್ನು ಕಾಣಲು ಸಾಧ್ಯವಿಲ್ಲ. ಹಾಗಾಗಿ ರಾಜಕೀಯ ಸ್ವಾತಂತ್ರ್ಯದೊಂದಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯಕ್ಕಾಗಿ ಹೋರಾಡಬೇಕಿದೆ ಎಂದರು.

ಪ್ರಜಾಪ್ರಭುತ್ವದ ಸಂಸ್ಥೆಗಳನ್ನು ಬಲಹೀನಗೊಳಿಸಲಾಗುತ್ತಿದೆ. ಚುನಾವಣಾ ಆಯೋಗ, ಸಿಬಿಐ, ವಿಚರಣಾ ತನಿಖಾ ಸಂಸ್ಥೆಗಳು, ಆರ್‌ಬಿಐ, ಆದಾಯ ತೆರಿಗೆ ಇಲಾಖೆ ಎಲ್ಲವನ್ನು ದುರ್ಬಲಗೊಳಿಸಿ ತಮ್ಮ ಮೂಗಿನ ನೇರಕ್ಕೆ ಕುಣಿಸಲಾಗುತ್ತಿದೆ. ಕಳೆದ ಸಂಸತ್ ಅಧಿವೇಶನದಲ್ಲಿ ಒಂದೇ ಒಂದು ಮಸೂದೆಯನ್ನು ಸರಿಯಾಗಿ ಚರ್ಚೆ ನಡೆಸಲಿಲ್ಲ. ಎಲ್ಲಾ ರಾಜಕೀಯ ಪಕ್ಷಗಳು ಸೇರಿ ಒಬಿಸಿ ಬಿಲ್ ಮಾತ್ರ ಪಾಸು ಮಾಡಿದರು. ಆದರೆ ಕೊರೊನಾದ ಕುರಿತಾಗಿ, ಅಸಂಘಟಿತ ಕಾರ್ಮಿಕರ ಕುರಿತಾಗಿ, 18-20 ಕೋಟಿ ಯುವಜನರು ನಿರುದ್ಯೋಗಿಗಳಾಗಿದ್ದಾರೆ ಇದರ ಬಗ್ಗೆ ಚರ್ಚೆ ನಡೆಯಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಳೆದ 72 ವರ್ಷಗಳಲ್ಲಿ ಭೂ ಸುಧಾರಣೆ, ಆರೋಗ್ಯ ಸುಧಾರಣೆ, ಕೈಗಾರಿಕೆ ಸುಧಾರಣೆ ಕಂಡೆವು. ಇದರಿಂದ ಜನಜೀವನ ಸ್ವಲ್ಪ ಉತ್ತಮವಾಗಿತ್ತು. ಆದರೆ ಇವತ್ತು ಅಪ್ರಜಾತಾಂತ್ರಿಕ ಸುಧಾರಣೆಗಳ ಪರ್ವ ಶುರುವಾಗಿದೆ. ರೈತರು ಬಿಕ್ಕಟ್ಟಿನಲ್ಲಿದ್ದಾರೆ. ಆತ್ಮಹತ್ಯೆಗಳತ್ತ ಮುಖಮಾಡಿ ಪರಿಹಾರ ಬಯಸುತ್ತಿದ್ದರೆ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿತು. ವಿದ್ಯುತ್ ಮಸೂದೆ ತಂದಿದೆ. ಎಪಿಎಂಸಿ ಕಾಯ್ದೆ ರದ್ದುಪಡಿಸಿದೆ. ರೈತರನ್ನು ಗುಲಾಮರನ್ನಾಗಿ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಜಾತ್ಯಾತೀತ ರಾಷ್ಟ್ರ ನಿರ್ಮಾಣ ಮಾಡುವುದು ಸಂವಿಧಾನದ ಆಶಯ. ರಾಜಕೀಯದಿಂದ ಧರ್ಮವನ್ನು ಪ್ರತ್ಯೇಕಿಸಬೇಕು. ಸರ್ಕಾರಕ್ಕೆ ಯಾವುದೇ ಧರ್ಮವಿರಬಾರದು. ಆದರೆ ಇವತ್ತು ನಮ್ಮ ದುರಾದೃಷ್ಟ ಮಠಾಧೀಶರು, ಧಾರ್ಮಿಕ ಮುಖಂಡರು ಸಕ್ರಿಯ ರಾಜಕೀಯಕ್ಕೆ ಇಳಿಯುತ್ತಿದ್ದಾರೆ. ಕರ್ನಾಟಕದಲ್ಲಿ ಮೀಸಲಾತಿ ವಿಚಾರ ಒಂದು ರಾಜಕೀಯ ನಿರ್ಣಯವಾಗಬೇಕು. ಆದರೆ ಅದು ಸ್ವಾಮೀಜಿಗಳು ಮತ್ತು ಮಠಾಧೀಶರ ಹೋರಾಟವಾಗಿ ನಿಂತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ದಲಿತರು, ಮಹಿಳೆಯರು, ಬುಡಕಟ್ಟು ಜನಾಂಗ, ಅಲ್ಪಸಂಖ್ಯಾತ ಜನ ಇಂದು ಎಲ್ಲಾ ವಿಭಾಗಗಳಿಗೆ ಪ್ರವೇಶ ಪಡೆಯಬೇಕಾಗಿದೆ. ಅವರು ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗ ಕ್ಷೇತ್ರಗಳಿಗೆ ಪ್ರವೇಶ ಮಾಡುವ ಮೂಲಕ ಒಂದಷ್ಟು ಘನತೆ ಮತ್ತು ಸ್ವಾಭಿಮಾನವನ್ನು ತಂದುಕೊಡಲು ಸಾಧ್ಯವಾಗಿದೆ. ಆದರೆ ಸಾಮಾಜಿಕ ನ್ಯಾಯ ಎಂಬುದು ಅಪ್ರಸ್ತುತಗೊಳಿಸುತ್ತಿದ್ದೇವೆ. ಇಂದು ಕೇಂದ್ರ ಸರ್ಕಾರದಲ್ಲಿ 62 ಲಕ್ಷ ಉದ್ಯೋಗಗಳು ಖಾಲಿ ಬಿದ್ದಿವೆ. ಇದನ್ನು ತುಂಬುತ್ತಿಲ್ಲ. ಈ ಸವಾಲುಗಳನ್ನು ಹಿಮ್ಮೆಟ್ಟಿಸಬೇಕು.  ಈ ಎಲ್ಲಾ ಬಿಕ್ಕಟ್ಟಿಗೆ ಪರಿಹಾರ ಸಂವಿಧಾನ ಮಾರ್ಗವಾಗಿದೆ. ಅದನ್ನು ಓದಿ, ಅರ್ಥೈಸಿಕೊಂಡು ಅಳವಡಿಸಿಕೊಳ್ಳಬೇಕಿದೆ. ಆ ಮೂಲಕ ಈ ದೇಶವನ್ನು ಉಳಿಸಿಕೊಳ್ಳಬೇಕಾಗಿದೆ ಎಂದರು.

ವೆಬಿನಾರ್‌ನಲ್ಲಿ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್‌ ಸಂಸ್ಥೆಯ ತೀಸ್ತಾ ಸೆಟ್ಲವಾದ್, ಚಿಂತಕರಾದ ಪ್ರೊ.ವಿ.ಎಸ್ ಶ್ರೀಧರ್, ನಗರಗೆರೆ ರಮೇಶ್ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ರೈತ ಹೋರಾಟ: ದೆಹಲಿಯ ಗಡಿಗಳಲ್ಲಿ ರೈತರ ತಿರಂಗಾ ಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಜಸ್ಟಿಸ್ ನಾಗಮೋಹನದಾಸ್ ಅನುಭವ ಮತ್ತು ಅನಿಸಿಕೆ ನಮ್ಮೆಲ್ಲರದೂ ಆಗಿದೆ. ನೆಹರು, ಶಾಸ್ತ್ರಿ ಅಧಿಕಾರದಲ್ಲಿ ಇದ್ದಾಗ ನಾವು ತುಂಬಾ ಚಿಕ್ಕವರು. ಇಂದಿರಾ ಬಂದಾಗ ನಾವು ಬ್ಯಾಂಕ್ ರಾಷ್ಟ್ರೀಕರಣ, , ಸರ್ಕಾರಿ ಸೇವೆಯಲ್ಲಿ ರಿಸರ್ವೇಸನ್, ಮತ್ತು ಭೂಮಿ ಪಡೆಯಲು ಅವಕಾಶ ಆಯ್ತು. ಭಾರತೀಯ ಸಂದರ್ಭದಲ್ಲಿ ಅದೊಂದು ರೆಸಲ್ಯೂಶನ್ ಕಂಡ ಯುಗ! ಅವುಗಳಿಲ್ಲದಿದ್ದಲ್ಲಿ ನಾವು ಆತ್ಮ ಗೌರವದಿಂದ ಬಾಳುವುದು ಕನಸಿನ ಮಾತಾಗಿತ್ತು.

  2. ನನ್ನಂಥಹ ವಿಚಾರವಂತರನ್ನು ಕಾಡುತ್ತಿರುವ ಅನೇಕ ವಿಚಾರಗಳ ಬಗ್ಗೆ ಜಸ್ಟಿಸ್ ನಾಗಮೋಹನದಾಸ್ ಮನಬಿಚ್ಚಿ ಮಾತಾಡಿದ್ದಾರೆ. ಸತ್ಯವನ್ನು ಹೇಳಲು ಜನ ಹಿಂಜರಿಯುತ್ತಿರುವ ಈ ಸಂಧರ್ಭದಲ್ಲಿ ದಾಸ್ ಅವರು ದೇಶ ಅದಪಾತಾಳಕ್ಕೆ ತಲುಪಿರುವ ಬಗ್ಗೆ ಸವಿಸ್ತಾರವಾಗಿ ತಮ್ಮ ನೋವನ್ನು ಹೊರಹಕಿದ್ದಾರೆ. ಮಾನ್ಯರ ಈ ಮಾತುಗಳು ಹೆಚ್ಚು ಜನಕ್ಕೆ ತಲುಪಬೇಕಾಗಿದೆ. Hats off to you Sir.

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...