Homeಮುಖಪುಟಪ್ರಜಾಪ್ರಭುತ್ವ ನಾಶ ಮಾಡುತ್ತಿರುವ ಕೇಂದ್ರದ ವಿರುದ್ಧ ಹೋರಾಟ ಮುಂದುವರೆಯಲಿದೆ: 18 ಪ್ರತಿಪಕ್ಷಗಳ ನಿರ್ಧಾರ

ಪ್ರಜಾಪ್ರಭುತ್ವ ನಾಶ ಮಾಡುತ್ತಿರುವ ಕೇಂದ್ರದ ವಿರುದ್ಧ ಹೋರಾಟ ಮುಂದುವರೆಯಲಿದೆ: 18 ಪ್ರತಿಪಕ್ಷಗಳ ನಿರ್ಧಾರ

- Advertisement -
- Advertisement -

ಕೇಂದ್ರ ಸರ್ಕಾರದ ದಮನಕಾರಿ ನಡೆಯ ವಿರುದ್ಧ ಎಲ್ಲ ಪ್ರತಿಪಕ್ಷಗಳು ಒಂದಾಗುತ್ತಿವೆ. ಸೋಮವಾರ ರಾತ್ರಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಅವರ ನಿವಾಸದಲ್ಲೇ 18 ವಿರೋಧ ಪಕ್ಷಗಳ ನಾಯಕರು ಸೇರಿ ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ. ಇದರ ವಿರುದ್ಧ ನಮ್ಮ ಹೋರಾಟ ಮುಂದುವರಿಸಲು ಸರ್ವಪಕ್ಷಗಳು ನಿರ್ಧರಿಸಿದವು.

ಡಿಎಂಕೆ, ಎನ್‌ಸಿಪಿ, ಜೆಡಿಯು, ಬಿಆರ್‌ಎಸ್, ಎಂಡಿಎಂಕೆ, ಕೆಸಿ, ಟಿಎಂಸಿ, ಆರ್‌ಎಸ್‌ಪಿ, ಆರ್‌ಜೆಡಿ, ಎನ್‌ಸಿ, ಐಯುಎಂಎಲ್, ವಿಸಿಕೆ ಎಸ್‌ಪಿ ಹಾಗೂ ಜೆಎಂಎಂ ಪಕ್ಷಗಳ ನಾಯಕರು ‌‌ಸಭೆಯಲ್ಲಿ ಹಾಜರಿದ್ದರು. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸಹ ಸಭೆಯಲ್ಲಿ ಭಾಗಿಯಾಗಿದ್ದರು.

ಅದಾನಿ ಸಮೂಹದ ವಿರುದ್ಧ ಕೇಳಿಬಂದಿರುವ ವಂಚನೆ ಆರೋಪಗಳಿಗೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿಯಿಂದ(ಜೆಪಿಸಿ) ತನಿಖೆ ಮತ್ತು ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಬಂದಿರುವ ಹಿನ್ನೆಲೆಯಲ್ಲಿ ಲೋಕಸಭಾ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹತೆ ಬಗ್ಗೆ ಚರ್ಚೆ ನಡೆಯಿತು. ಈ ಸಂಬಂಧ ಬಿಜೆಪಿ ವಿರುದ್ಧ ಹೋರಾಟ ಮುಂದುವರಿಸಲು ಪ್ರತಿಪಕ್ಷಗಳ ನಾಯಕರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸಭೆಯಲ್ಲಿ ಟಿಎಂಸಿ ನಾಯಕರು ಪ್ರತ್ಯಕ್ಷ; ಕೇಂದ್ರದ ವಿರುದ್ಧ “ಕಪ್ಪು” ಬಟ್ಟೆ ಧರಿಸಿ ಪ್ರತಿಭಟನೆ

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಅವರು, ”ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿರುವ ಮತ್ತು ಎಲ್ಲಾ ಸಂಸ್ಥೆಗಳನ್ನು ಬುಡಮೇಲು ಮಾಡಿರುವ ಮೋದಿ ಆಡಳಿತದ ವಿರುದ್ಧ ತಮ್ಮ ಅಭಿಯಾನವನ್ನು ಒಂದೇ ಧ್ವನಿಯಲ್ಲಿ ಮುಂದುವರಿಸಲು ಖರ್ಗೆ ಅವರ ನಿವಾಸದಲ್ಲಿ ಸಭೆ ಸೇರಿದ್ದ 18 ವಿರೋಧ ಪಕ್ಷಗಳ ನಾಯಕರು ನಿರ್ಧರಿಸಿದರು” ಎಂದು ಹೇಳಿದರು.

”ಮೋದಿಯವರ ಬೆದರಿಕೆ ರಾಜಕೀಯವನ್ನು ಎದುರಿಸಲು ಅವರು ತಮ್ಮ ಸಾಮೂಹಿಕ ಸಂಕಲ್ಪವನ್ನು ವ್ಯಕ್ತಪಡಿಸಿದರು. ಈ ಸಂಕಲ್ಪವು ಈಗ ಸಂಸತ್ತಿನ ಒಳಗೂ ಹೊರಗೂ ಪ್ರತಿಫಲಿಸುತ್ತದೆ” ಎಂದು ಜೈರಾಮ್ ರಮೇಶ್ ಹೇಳಿದರು.

ಈ ಸಭೆಯಿಂದ ಶಿವಸೇನಾ ದೂರ ಉಳಿದಿತ್ತು ಏಕೆಂದರೆ, ರಾಹುಲ್ ಗಾಂಧಿ ಅವರು ವೀರ ಸಾವರ್ಕರ್ ಕುರಿತಂತೆ ನೀಡಿರುವ ಹೇಳಿಕೆಗೆ ಅಸಮಧಾನಗೊಂಡಿದ್ದು, ಪ್ರತಿಭಟನಾರ್ಥವಾಗಿ ಶಿವಸೇನಾ ಸಭೆಯಿಂದ ದೂರ ಉಳಿದಿತ್ತು.

ಅದಾನಿ ತನಿಖೆ ವಿಚಾರವಾಗಿ ಕೇಂದ್ರದ ವಿರುದ್ಧ ಟ್ವೀಟ್ ಮಲ್ಲಿಕಾರ್ಜುನ ಖರ್ಗೆ, ”ಒಬ್ಬ ವ್ಯಕ್ತಿಯನ್ನು ಉಳಿಸುವ ಉದ್ದೇಶದಿಂದ ಮೋದಿ, 140 ಕೋಟಿ ಜನರ ಹಿತಾಸಕ್ತಿಯನ್ನು ಬಲಿಕೊಟ್ಟಿದ್ದಾರೆ. ಮೋದಿಯ ಪರಮ ಆಪ್ತನನ್ನು ರಕ್ಷಿಸಲು ಬಿಜೆಪಿ, ಸಂಸತ್ತಿನಲ್ಲಿ ಜನರ ವಿಷಯಗಳ ಕುರಿತ ಚರ್ಚೆಗೆ ತಡೆಹಾಕಿದೆ. ತಪ್ಪೇನೂ ನಡೆದಿಲ್ಲವೆಂದಾದರೆ ಜಂಟಿ ಸದನ ಸಮಿತಿ ರಚನೆಗೆ ಏಕೆ ಹಿಂದೇಟು?” ಎಂದು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....