Homeಕರ್ನಾಟಕಬರ ಪರಿಹಾರ| ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಬೀದಿಗಳಲ್ಲಿ ಮಾತ್ರವಲ್ಲ, ನ್ಯಾಯಾಲಯದಲ್ಲೂ ಹೋರಾಟ ಮುಂದುವರೆಯಲಿದೆ: ಸಿಎಂ ಸಿದ್ದರಾಮಯ್ಯ

ಬರ ಪರಿಹಾರ| ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಬೀದಿಗಳಲ್ಲಿ ಮಾತ್ರವಲ್ಲ, ನ್ಯಾಯಾಲಯದಲ್ಲೂ ಹೋರಾಟ ಮುಂದುವರೆಯಲಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕರ್ನಾಟಕಕ್ಕೆ ನ್ಯಾಯ ಬದ್ಧವಾಗಿ ನೀಡಬೇಕಾಗಿರುವ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಕೂಡಾ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು ವಿಷಾದನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನ್ಯಾಯ ಬದ್ಧವಾಗಿ ಕರ್ನಾಟಕಕ್ಕೆ ನೀಡಬೇಕಾಗಿರುವ ಬರಪರಿಹಾರವನ್ನು ನೀಡದೆ ಕೇಂದ್ರ ಸರ್ಕಾರ ಕಳೆದ ಐದಾರು ತಿಂಗಳುಗಳಿಂದ ಸತಾಯಿಸುತ್ತಿರುವುದನ್ನು ಕಂಡು ಬೇರೆ ದಾರಿ ಕಾಣದೆ ನ್ಯಾಯ ಕೋರಿ ನಮ್ಮ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಇಂದು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ತುಷಾರ್ ಮೆಹ್ತಾ ಅವರು ಬರಪರಿಹಾರ ವಿಳಂಬಕ್ಕೆ ಕರ್ನಾಟಕ ಸರ್ಕಾರವೇ ಕಾರಣ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ ಎಂಬ ಅಭಿಪ್ರಾಯ ಮೂಡುವಂತೆ ವಾದ ಮಾಡಿದ್ದಾರೆ. ಇದು ಖಂಡನೀಯ ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಬರ ಪರಿಹಾರಕ್ಕಾಗಿ ಅವರು (ಕರ್ನಾಟಕ) ನಮ್ಮನ್ನು (ಕೇಂದ್ರ ಸರ್ಕಾರ)ವನ್ನು ಸಂಪರ್ಕಿಸಬಹುದಿತ್ತು. ಈ ಅರ್ಜಿ ಸಲ್ಲಿಸಿರುವ ಸಮಯದ ಮಹತ್ವ ನಮಗೆ ಅರ್ಥವಾಗುತ್ತದೆ. ಈ ಅರ್ಜಿಗೆ ಪ್ರತಿಕ್ರಿಯೆ ಕೋರಿ ನಮಗೆ ನೋಟೀಸ್ ನೀಡಬಾರದು. ಹಾಗೆ ಮಾಡಿದರೆ ಅದು ಸುದ್ದಿಯಾಗುತ್ತದೆ” ಎಂದು ಅಡ್ವೋಕೇಟ್ ಜನರಲ್ ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಲು ಕರ್ನಾಟಕ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ ಎಂದು ಸಿಎಂ ಕಿಡಿಕಾರಿದ್ದಾರೆ.

ಕಳೆದ ಎರಡು ಮೂರು ತಿಂಗಳ ಅವಧಿಯಲ್ಲಿ ನಾನು ಮತ್ತೆ ಮತ್ತೆ ಹೇಳಿರುವಂತೆ ‘ಬರಗಾಲಕ್ಕೆ ಪರಿಹಾರ ಕೋರಿ ನಮ್ಮ ಸರ್ಕಾರ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿಯೇ ನಷ್ಟದ ವಿವರ ಮತ್ತು ನಿರೀಕ್ಷಿತ ಪರಿಹಾರದ ಮೊತ್ತವನ್ನು ಒಳಗೊಂಡ ಮನವಿ ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೆವು. ಅದರ ನಂತರ ನಾನು ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದ್ದೆವು. ನಮ್ಮ ಉಪಮುಖ್ಯಮಂತ್ರಿಗಳು ಪ್ರತ್ಯೇಕವಾಗಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿದ್ದರು. ಹೀಗಿದ್ದರೂ ಕರ್ನಾಟಕ ಸರ್ಕಾರ ವಿಳಂಬವಾಗಿ ಮನವಿ ಸಲ್ಲಿಸಿದೆ ಎಂದು ಕೇಂದ್ರ ಹಣಕಾಸು ಸಚಿವರು ಮತ್ತು ಗೃಹ ಸಚಿವರು ಯಾವ ಮುಜುಗರ ಇಲ್ಲದೆ ಸುಳ್ಳು ಹೇಳುತ್ತಾ ಬಂದಿದ್ದಾರೆ. ಇಂದು ಇದೇ ಸುಳ್ಳನ್ನು ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಮುಂದೆಯೂ ಹೇಳಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ಅವರ ಹೇಳಿಕೆಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಸದ್ಯಕ್ಕೆ ಪ್ರಕರಣವನ್ನು ಎರಡು ವಾರಗಳ ಕಾಲ ಮುಂದೂಡಿದೆ. ಮುಂದಿನ ವಿಚಾರಣೆಯೊಳಗೆ ಕೇಂದ್ರ ಸರ್ಕಾರ ತನ್ನ ಉತ್ತರವನ್ನು ಸಿದ್ಧಗೊಳಿಸಬೇಕಾಗಿದೆ ಎಂದು ತಿಳಿಸಿದರು.

ಬರ ಪರಿಹಾರ ನೀಡಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯದ ವಿರುದ್ಧದ ನಮ್ಮ ಹೋರಾಟ ಬೀದಿಗಳಲ್ಲಿ ಮಾತ್ರವಲ್ಲ ನ್ಯಾಯಾಲಯದಲ್ಲಿಯೂ ಮುಂದುವರಿಯಲಿದೆ. ಕೇಂದ್ರ ಸರ್ಕಾರದ ಸುಳ್ಳುಗಳನ್ನು ಒಂದೊಂದಾಗಿ ಬಯಲುಗೊಳಿಸುತ್ತಾ ಅದರ ನಿಜಸ್ವರೂಪವನ್ನು ರಾಜ್ಯದ ಜನತೆಯ ಮುಂದಿಡುವ ಪ್ರಯತ್ನವನ್ನು ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಕೇಂದ್ರ ಮತ್ತು ರಾಜ್ಯಗಳ ನಡುವೆ ಸ್ಪರ್ಧೆ ಬೇಡ..’; ಕಳವಳ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...