Homeಮುಖಪುಟ'ಕೊನೆಯ ಉಸಿರು ಇರುವವರೆಗೂ ಹೋರಾಟ ಇರುತ್ತದೆ..'; 29ನೇ ದಿನಕ್ಕೆ ಕಾಲಿಟ್ಟ ರೈತ ನಾಯಕ ದಲ್ಲೆವಾಲ್ ಉಪವಾಸ...

‘ಕೊನೆಯ ಉಸಿರು ಇರುವವರೆಗೂ ಹೋರಾಟ ಇರುತ್ತದೆ..’; 29ನೇ ದಿನಕ್ಕೆ ಕಾಲಿಟ್ಟ ರೈತ ನಾಯಕ ದಲ್ಲೆವಾಲ್ ಉಪವಾಸ ಸತ್ಯಾಗ್ರಹ

- Advertisement -
- Advertisement -

ರೈತರ ಹಕ್ಕುಗಳಿಗಾಗಿ ಕಳೆದ 29 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜಗಜಿತ್ ಸಿಂಗ್ ದಲ್ಲೆವಾಲ್, 15 ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಅವರು, “ತಮ್ಮ ಬೇಡಿಕೆಗಳನ್ನು ಅಂಗೀಕರಿಸುವವರೆಗೆ ಅಥವಾ ನನ್ನ ಕೊನೆ ಉಸಿರೆಳೆಯುವವರೆಗೆ ಹೋರಾಟವನ್ನು ಮುಂದುವರಿಸುತ್ತೇನೆ” ಎಂದು ಮಂಗಳವಾರ ಪುನರುಚ್ಚರಿಸಿದರು.

ಫೆಬ್ರವರಿ 13 ರಿಂದ ರೈತರು ಧರಣಿ ಸತ್ಯಾಗ್ರಹ ನಡೆಸುತ್ತಿರುವ ಹರಿಯಾಣದ ಗಡಿಭಾಗದಲ್ಲಿರುವ ಖಾನೌರಿ ಪ್ರತಿಭಟನಾ ಸ್ಥಳದಲ್ಲಿ ವೇದಿಕೆಯ ಮೇಲೆ ಹಾಸಿಗೆಯ ಮೇಲೆ ಮಲಗಿರುವಾಗಲೇ ಹೇಳಿಕೆ ನೀಡಿದ್ದಾರೆ. ಉಪವಾಸ ಮತ್ತು ವಯಸ್ಸಾದ ಕಾರಣದಿಂದ ದಲ್ಲೇವಾಲ್ ಪ್ರಮುಖ ಅಂಗಗಳು ಕ್ಷೀಣಿಸುತ್ತಿವೆ ಎಂದು ವೈದ್ಯರು ಹೇಳಿದರು. “ರೈತರ ಪ್ರತಿಭಟನೆಯ ಕರೆಗೆ ಇತರ ರಾಜ್ಯಗಳು ಸಹ ಸೇರಬೇಕು, ಈ ಹೋರಾಟವು ಒಗ್ಗಟ್ಟಿನಿಂದ ಹೋರಾಡಬೇಕು” ಎಂದು ದಲ್ಲೇವಾಲ್ ಮನವಿ ಮಾಡಿದ್ದಾರೆ.

“ನಾನು ಕ್ಷೇಮವಾಗಿದ್ದೇನೆ.. ನಾವು ಈ ಯುದ್ಧವನ್ನು ಒಗ್ಗಟ್ಟಿನಿಂದ ಗೆಲ್ಲಬೇಕು” ಎಂದು 70 ವರ್ಷದ ದಲ್ಲೆವಾಲ್ ಹೇಳಿದರು. ಅವರ ಆರೋಗ್ಯವನ್ನು 24 ಗಂಟೆಗಳ ಕಾಲ ವೈದ್ಯರ ತಂಡವು ಮೇಲ್ವಿಚಾರಣೆ ಮಾಡುತ್ತಿದೆ. ರೈತ ನಾಯಕನಿಗೆ ಹೃದಯ ಸ್ತಂಭನದ ಅಪಾಯವಿದೆ ಎಂದು ಈಗಾಗಲೇ ಎಚ್ಚರಿಸಿದ್ದಾರೆ.

29 ದಿನಗಳ ಉಪವಾಸ ಸತ್ಯಾಗ್ರಹದಿಂದಾಗಿ ಅವರ ರೋಗನಿರೋಧಕ ಶಕ್ತಿ ದಿನದಿಂದ ದಿನಕ್ಕೆ ದುರ್ಬಲವಾಗುತ್ತಿದ್ದು, ಸೋಂಕಿನ ಅಪಾಯವನ್ನು ಎದುರಿಸುತ್ತಿದ್ದಾರೆ ಎಂದು ವೈದ್ಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಅವರ ಪ್ರಮುಖ ಅಂಗಗಳಾದ ಯಕೃತ್ತು ಮತ್ತು ಮೂತ್ರಪಿಂಡಗಳು ದುರ್ಬಲಗೊಳ್ಳುತ್ತಿವೆ. ಸ್ಥಿತಿಯು ಹದಗೆಡುತ್ತಿದೆ” ಎಂದು ಖಾನೌರಿ ಗಡಿಯಲ್ಲಿ ದಲ್ಲೆವಾಲ್ ಅವರನ್ನು ಪರೀಕ್ಷಿಸಿದ ವೈದ್ಯರು ಹೇಳಿದರು. ಇತ್ತೀಚಿನ ಪರೀಕ್ಷಾ ವರದಿಯ ಪ್ರಕಾರ, ಅವರ ದೇಹದಲ್ಲಿ ಕೀಟೋನ್ ಮಟ್ಟಗಳು ಸಾಕಷ್ಟು ಹೆಚ್ಚಾಗಿದ್ದು, ಅವರು ದುರ್ಬಲರಾಗಿದ್ದಾರೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕೇಂದ್ರದಿಂದ ಕಾನೂನು ಖಾತ್ರಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ನವೆಂಬರ್ 26 ರಂದು ಉಪವಾಸ ಸತ್ಯಾಗ್ರಹ ಆರಂಭಿಸಿದ 70 ವರ್ಷದ ದಲ್ಲೆವಾಲ್, “ರೈತರನ್ನು ಪ್ರತಿಭಟನಾ ಸ್ಥಳದಿಂದ ಕಳುಹಿಸುವುದಕ್ಕೆ ಸರ್ಕಾರಕ್ಕೆ ಅವಕಾಶ ನೀಡಬಾರದು” ಎಂದು ಹೇಳಿದರು.

“ಒಂದೋ ನಾವು ನಮ್ಮ ಬೇಡಿಕೆಗಳಿಗಾಗಿ ಹೋರಾಡುತ್ತೇವೆ ಅಥವಾ ನಾವು ಇಲ್ಲಿಯೇ ಸಾಯುತ್ತೇವೆ” ಎಂದು ಧ್ವನಿವರ್ಧಕದಲ್ಲಿ ಸಂಕ್ಷಿಪ್ತ ಭಾಷಣದಲ್ಲಿ ಅವರು ತಮ್ಮ ಕ್ಷೀಣವಾದ ಧ್ವನಿಯೊಂದಿಗೆ ಹೇಳಿದರು. “ಈಗ ದೊಡ್ಡಣ್ಣ (ಹರಿಯಾಣ) ಪ್ರತಿಭಟನೆಗೆ ಸೇರಿಕೊಂಡಿದ್ದಾರೆ” ಎಂದು ಹೇಳುವ ಮೂಲಕ ಆತ್ಮವಿಶ್ವಾಸವನ್ನು ಪ್ರತಿಧ್ವನಿಸಿದರು.

2020-21ರಲ್ಲಿ ಈಗ ರದ್ದಾದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನದ ಹಿಂದೆ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ ದಲ್ಲೆವಾಲ್, ಪಂಜಾಬ್ ರೈತರ ಇತ್ತೀಚಿನ ‘ದೆಹಲಿ ಚಲೋ’ ಮೆರವಣಿಗೆಯ ಹಿಂದಿನ ಮುಖವೂ ಹೌದು.

ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣದ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ರೈತರು ರಾಷ್ಟ್ರೀಯ ರಾಜಧಾನಿಗೆ ತಮ್ಮ ಮೆರವಣಿಗೆಯನ್ನು ಭದ್ರತಾ ಪಡೆಗಳು ವಿಫಲಗೊಳಿಸಿದ ನಂತರ ಬಿಡಾರ ಹೂಡಿದ್ದಾರೆ.

ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ, ಪಂಜಾಬ್ ಸರ್ಕಾರವು ಪಟಿಯಾಲ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಹಿರಿಯ ವೈದ್ಯರನ್ನು ಒಳಗೊಂಡ ವೈದ್ಯಕೀಯ ಮಂಡಳಿಯನ್ನು ಇಡೀ ದಿನದ ಮೇಲ್ವಿಚಾರಣೆಗಾಗಿ ಸ್ಥಾಪಿಸಿದೆ. ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಪ್ರತಿಭಟನಾ ಸ್ಥಳದಲ್ಲಿ ತಾತ್ಕಾಲಿಕ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ.

ರೈತರ ಹೋರಾಟವನ್ನು ಬೆಂಬಲಿಸಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹಠಮಾರಿತನವನ್ನು ಬಿಟ್ಟು ರೈತರೊಂದಿಗೆ ಮಾತನಾಡಬೇಕೆಂದು ಕೇಳಿಕೊಂಡರು.

“ಕೇಂದ್ರ ಸರ್ಕಾರ ತನ್ನ ಮೊಂಡುತನ ಬಿಟ್ಟು ರೈತ ಸಂಘಟನೆಗಳ ಜತೆ ಮಾತುಕತೆಗೆ ದಾರಿ ಮಾಡಿಕೊಡಬೇಕು.. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಮೋದಿಜೀ ತಡೆಯಲು ಸಾಧ್ಯವಾದರೆ, 200 ಕಿ.ಮೀ ದೂರದಲ್ಲಿ ಕೂತು ಅನ್ನದಾತರೊಂದಿಗೆ ಮಾತನಾಡಬಹುದಲ್ಲವೇ? ನೀವು ಕಾಯುತ್ತಿದ್ದೀರಾ..?” ಸಿಎಂ ಮಾನ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ; ಚಳಿಗಾಲದ ಅಧಿವೇಶನ ರದ್ದುಗೊಳಿಸಿದ ಮಣಿಪುರ ಸರ್ಕಾರ; ‘ಸಂವಿಧಾನ ನಿಯಮ ಉಲ್ಲಂಘಿಸಿಲ್ಲ’ ಎಂದ ಕಾನೂನು ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...