Homeಕರ್ನಾಟಕಕವಿತಾ ಲಂಕೇಶ್ ಅಧ್ಯಕ್ಷತೆಯಲ್ಲಿ 'ಪಾಶ್‌ ಕಮಿಟಿ' ರಚಿಸಿದ ಚಲನಚಿತ್ರ ವಾಣಿಜ್ಯ ಮಂಡಳಿ

ಕವಿತಾ ಲಂಕೇಶ್ ಅಧ್ಯಕ್ಷತೆಯಲ್ಲಿ ‘ಪಾಶ್‌ ಕಮಿಟಿ’ ರಚಿಸಿದ ಚಲನಚಿತ್ರ ವಾಣಿಜ್ಯ ಮಂಡಳಿ

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಚಿತ್ರರಂಗದ ಸದಸ್ಯರು ಹಾಗೂ ಮಹಿಳಾ ಸಂಘಟನೆಗಳ ಹಲವು ತಿಂಗಳುಗಳ ಒತ್ತಡಕ್ಕೆ ಮಣಿದಿರುವ ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’, ಕೊನೆಗೂ “ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ” (posh act) ಸಮಿತಿ ರಚಿಸಿ ಆದೇಶ ಹೊರಡಿಸಿದೆ.

ಕೇರಳ ಚಿತ್ರರಂಗದ ಲೈಂಗಿಕ ದೌರ್ಜನ್ಯದ ಕುರಿತು ಜಸ್ಟೀಸ್ ಹೇಮಾ ಸಮಿತಿ ವರದಿ ನೀಡಿದ ಬಳಿಕ, ಕರ್ನಾಟಕದಲ್ಲಿ ಸಹ ಸಮಿತಿ ರಚಿಸಬೇಕು ಎಂಬ ಕೂಗು ಎದ್ದಿತ್ತು. ಆದರೆ, ಇದಕ್ಕೆ ಚಿತ್ರರಂಗದ ಪ್ರಮುಖರು ಆಸಕ್ತಿ ತೋರಿರಲಿಲ್ಲ. ಇದೀಗ, ಹಿರಿಯ ನಿರ್ದೇಶಕಿ ಕವಿತಾ ಲಂಕೇಶ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.

ಖಾಯಂ ಸದಸ್ಯರಾಗಿ,  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು, ಸದಸ್ಯರಾಗಿ ಹಿರಿಯ ನಟಿ ಪ್ರಮೀಳಾ ಜೋಶಾಯ್, ಮಹಿಳಾ ಹಕ್ಕುಗಳ ಹೋರಾಟಗಾರ್ತಿ ವಿಮಲಾ ಕೆ.ಎಸ್, ಹಿರಿಯ ವಕೀಲೆ ರಾಜಲಕ್ಷ್ಮಿ ಅಂಕಲಗಿ, ಟ್ರಾನ್ಸ್‌ ಜೆಂಡರ್ ಹೋರಾಟಗಾರರಾದ ಮಲ್ಲು ಕುಂಬಾರ್, ನಟಿ ಶೃತಿ ಹರಿಹರನ್, ಹಿರಿಯ ಪತ್ರಕರ್ತ ಮುರುಳೀಧರ್ ಖಜಾನೆ, ರಂಗಕರ್ಮಿ ಶಶಿಕಾಂತ್ ಯಡಹಳ್ಳಿ, ನಿರ್ಮಾಕಪಕರಾದ ಸಾರಾ ಗೋವಿಂದ್ ಸಮಿತಿಯಲ್ಲಿ ಇದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಜೊತೆಗೆ ಮಾತನಾಡಿದ ಕವಿತಾ ಲಂಕೇಶ್, “ಪಾಶ್ ಕಮಿಟಿ ರಚಿಸಬೇಕು ಎಂದು ಮಹಿಳಾ ಆಯೋಗದ ನಾಗಲಕ್ಷ್ಮಿ ಅವರೊಟ್ಟಿಗೆ ನಾವು ಹೋಗಿ ಒತ್ತಡ ಹಾಕಿದ್ದೆವು. ಇದಕ್ಕಾಗಿ ನಾವು ಕಳೆದ ಐದು ವರ್ಷಗಳಿಂದ ಎಷ್ಟೇ ಪ್ರಯತ್ನ ಮಾಡಿದರೂ ಆಗಿರಲಿಲ್ಲ; ಈಗ ಸಮಿತಿ ರಚಿಸಿರುವುದು ಸಂತಸ ತಂದಿದೆ” ಎಂದರು.

“ಈಗಷ್ಟೇ ಸಮಿತಿ ರಚನೆ ಆಗಿದೆ, ಇನ್ನಷ್ಟು ಕೆಲಸಗಳು ಬಾಕಿ ಇವೆ. ವಿಭಿನ್ನ ಕ್ಷೇತ್ರಗಳಿಂದ ಸದಸ್ಯರನ್ನು ನೇಮಕ ಮಾಡಿರುವುದು ನನಗೆ ಸಂತಸವಾಗಿದೆ. ದೌರ್ಜನ್ಯವಾದರೆ ನಾವು ಏನು ಮಾಡಬೇಕು ಎಂಬ ಬಗ್ಗೆ ಕೆಲಸ ಆರಂಭಿಸಬೇಕು. ಮೊದಲು ಅದಕ್ಕೊಂದು ಹೆಲ್ಪ್‌ಲೈನ್ ಆಗಬೇಕು. ಏಕೆಂದರೆ, ಯಾರೋ ದೂರು ಕೊಡಬೇಕು ಎಂದರೆ ಸಾಕಷ್ಟು ಗೊಂದಲದಲ್ಲಿ ಇರುತ್ತಾರೆ; ಮೊದಲಿನಿಂದಲೂ ಈ ಸಮಸ್ಯೆ ಇದೆ. ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೋದರೆ ಸಾಕಷ್ಟು ನಿರ್ಲಕ್ಷ್ಯ ಮಾಡುತ್ತಿದ್ದರು. ದೂರು ಬಂದರೆ ಏನು ಮಾಡಬಹುದು ಎಂದು ನಾವು ನೋಡಬೇಕು” ಎಂದು ಹೇಳಿದರು.

“ಸಮಿತಿಯಲ್ಲಿ ಟ್ರಾನ್ಸ್‌ ಜೆಂಡರ್‌ ಸಮುದಾಯದ ಮಲ್ಲು ಕುಂಬಾರ್ ಸೇರಿದಂತೆ ಬೇರೆಬೇರೆ ಕ್ಷೇತ್ರದ ಜನರಿದ್ದಾರೆ. ಕೆ.ಎಸ್. ವಿಮಲಾ ಮತ್ತು ರಾಜಲಕ್ಷ್ಮಿ ಅಂಕಲಗಿ ಮಹಿಳೆಯರ ಪರವಾಗಿ ಸಾಕಷ್ಟು ಹೋರಾಟ ಮಾಡಿದ್ದಾರೆ. ನಾವು ಸೂಚಿಸಿದ ಹೆಸರುಗಳನ್ನು ಒಪ್ಪಿಕೊಂಡು ಸಮಿತಿ ರಚಿಸಿದ್ದಾರೆ. ಸದ್ಯಕ್ಕಂತೂ ಕಮಿಟಿ ಚೆನ್ನಾಗಿದೆ ಎಂದು ನನಗೆ ಅನಿಸುತ್ತಿದೆ. ಕೆಲಸ ಚೆನ್ನಾಗಿ ಆಗುತ್ತದೆ ಎನ್ನುವ ವಿಶ್ವಾಸ ನನಗಿದೆ. ಇಷ್ಟು ದಿನ ಸಮಸ್ಯೆಗಳಾದರೆ ಅದನ್ನು ಕೇಳುವುದಕ್ಕೇ ಯಾರೂ ಇರಲಿಲ್ಲ” ಎಂದರು.

ಸಮಿತಿ ಸದಸ್ಯರಾದ ರಾಜಲಕ್ಷ್ಮಿ ಅಂಕಲಗಿ ಮಾತನಾಡಿ, “ಎಲ್ಲ ಅಸಂಘಟಿತ ವಲಯಗಳಲ್ಲಿ ಲೈಂಗಿಕ ದೌರ್ಜನ್ಯ ತಡೆ ಸಮಿತಿ ರಚಿಸಬೇಕು ಎಂಬ ಕಾನೂನಿದೆ. ಆದರೆ, ಚಲನಚಿತ್ರ ವಾಣಿಜ್ಯ ಮಂಡಳಿ ಸಮಿತಿ ರಚಿಸಿಲ್ಲ ಎಂಬ ದೂರು ಹಲವು ದಿನಗಳಿಂದ ಕೇಳಿಬರುತ್ತಿತ್ತು. ಕೇರಳದಲ್ಲಿ ಹೇಮಾ ಸಮಿತಿ ವರದಿ ಹೊರಗೆ ಬಂದ ಬಳಿಕ, ಇಲ್ಲಿಯೂ ಸಮಿತಿ ಆಗಲೇಬೇಕು ಎಂಬ ಒತ್ತಾಯ ಕೇಳಿಬಂದಿದ್ದವು. ಈಗ ವಾಣಿಜ್ಯ ಮಂಡಳಿ ಸಮಿತಿ ರಚಿಸಿ, ಹಲವು ಕ್ಷೇತ್ರಗಳ ಪ್ರಮುಖರನ್ನು ಸದಸ್ಯರನ್ನಾಗಿ ನೇಮಿಸಿದ್ದಾರೆ. ಇಂಥ ಸಮಿತಿ ರಚಿಸುವುದು ಅಗತ್ಯ” ಎಂದರು.

“ಮುಖ್ಯವಾಗಿ, ಇತ್ತೀಚಿನ ದಿನಗಳಲ್ಲಿ ಮೊದಲಿಗಿಂತಲೂ ಹೆಚ್ಚಾಗಿ ಕಲಾವಿದರು, ತಂತ್ರಜ್ಞರು ಸೇರಿದಂತೆ ಹಲವು ವಿಭಾಗಗಳಲ್ಲಿ ಕೆಲಸ ಮಾಡಲು ಅನ್ಯ ರಾಜ್ಯಗಳಿಂದ ಇಲ್ಲಿಗೆ ಬರುತ್ತಿದ್ದಾರೆ. ಇತ್ತೀಚೆಗೆ ಫ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗಿದ್ದು, ಇಲ್ಲಿಗೆ ಕೆಲಸ ಮಾಡಲು ಬಂದವರ ರಕ್ಷಣೆ ಮಾಡುವ ಜವಾಬ್ದಾರಿಯೂ ನಮ್ಮ ಮೇಲಿದೆ. ಈ ಎಲ್ಲವೂ ಗಮನದಲ್ಲಿಟ್ಟುಕೊಂಡು ಈಗ ಸಮಿತಿ ರಚನೆ ಆಗಿದೆ. ಪಾಶ್ ಕಮಿಟಿ ನಿಯಮಗಳ ಪ್ರಕಾರ, ಸಮಿತಿಯಲ್ಲಿ ಯಾರ್ಯಾರು ಇರಬೇಕು ಎಂದು ಗಮನದಲ್ಲಿ ಇಟ್ಟುಕೊಂಡು ಮಾಡಿದ್ದಾರೆ, ಇದು ಸ್ವಾಗತಾರ್ಹ” ಎಂದು ಹೇಳಿದರು.

ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ‘ಕರ್ನಾಟಕ ರಾಜ್ಯ ಮಹಿಳಾ ಆಯೋಗ’ದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ, “ಚಲನಚಿತ್ರ ವಾಣಿಜ್ಯ ಮಂಡಳಿ ಅಂತಿಮವಾಗಿ ಪಾಶ್ ಸಮಿತಿ ರಚಿಸಿರುವುದು ನನಗೆ ಸಂತಸ ತಂದಿದೆ. ನಿಯಮಗಳನ್ನು ಪಾಲನೆ ಮಾಡಿ ಸಮಿತಿ ರಚಿಸಿರುವುದಾಗಿ ನನಗೆ ಮೊದಲೇ ತಿಳಿಸಿದ್ದರು. ಈ ಬಗ್ಗೆ ಮಾಹಿತಿ ನೀಡಲು ಪತ್ರಿಕಾಗೋಷ್ಠಿಗೆ ಬರುವಂತೆ ನನ್ನನ್ನೂ ಕರೆದಿದ್ದರು. ಹೆಣ್ಣು ಮಕ್ಕಳ ರಕ್ಷಣೆ ಪ್ರಮುಖ ಆದ್ಯತೆಯಾಗಿರುವದರಿಂದ ನೀವು ಕಾಲ ದೂಡುವಂತೆ ಇಲ್ಲ ಎಂದು ನಾನು ಅವರಿಗೆ ಮೊದಲೇ ತಿಳಿಸಿದ್ದೆ; ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸಹ ನಾನು ಪತ್ರ ಬರೆದಿದ್ದೆ” ಎಂದರು.

“ನಾನು ಪತ್ರಿಕಾಗೋಷ್ಠಿ ನಡೆಸಿದ ನಂತರ, ಅದನ್ನು ಗಂಭೀರವಾಗಿ ಪರಿಗಣಿಸಿ ಸಮಿತಿ ರಚಿಸಿದ್ದಾರೆ. ಇದು ಸ್ವಾಗತಾರ್ಹ, ಮೊದಲ ಬಾರಿಗೆ ಚಲನಚಿತ್ರೋದ್ಯಮದಲ್ಲಿ ಸಮಿತಿ ರಚನೆಯಾಗಿದೆ. ಚಿತ್ರರಂಗದಲ್ಲಿ ಕೆಲಸ ಮಾಡುವ ಯಾವುದೇ ಹೆಣ್ಣು ಮಗಳಿಗೆ ಲೈಂಗಿಕ ದೌರ್ಜನ್ಯ ನಡೆದರೆ, ಅಲ್ಲಿಯೇ ದೂರು ನೀಡಿ, ನ್ಯಾಯ ಪಡೆಯುವ ಪಾಶ್ ಕಮಿಟಿ ರಚನೆಯಾಗಿದೆ. ಹಣ್ಣು ಮಕ್ಕಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಿರುವ ವಾಣಿಜ್ಯ ಮಂಡಳಿಗೆ ಅಭಿನಂಧಿಸುತ್ತೇನೆ” ಎಂದು ಹೇಳಿದರು.

“ಆರಂಭದಲ್ಲಿ ವಾಣಿಜ್ಯ ಮಂಡಳಿಯಲ್ಲಿ ಇದಕ್ಕೆ ಭಾರೀ ವಿರೋಧವಿತ್ತು. ನಾನು ಅಲ್ಲಿ ಪತ್ರಿಕಾಗೋಷ್ಠಿ ನಡೆಸಲು ಹೋದಾಗಲೂ ಸಹ ಅಪಸ್ವರವಿತ್ತು. ಜೋರಾಗಿ ಚೀರಾಡಿ, ಜಗಳ ಮಾಡಿ ಪಾಶ್ ಸಮಿತಿ ರಚನೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಏನೋ ಆಗುತ್ತದೆ ಎಂಬ ಕಾರಣಕ್ಕೆ ಅವರು ಸಮಿತಿ ರಚನೆಗೆ ಒಪ್ಪಿಕೊಂಡಿರಲಿಲ್ಲ. ಅವರು ಅರ್ಥ ಮಾಡಿಕೊಳ್ಳುವುದಕ್ಕೆ ಇಷ್ಟು ಕಾಲ ಬೇಕಾಯಿತು. ನಮ್ಮ ಕನ್ನಡದ ನಟಿಯರು ಹಾಗೂ ಉಳಿದವರಿಗೆ ದೌರ್ಜನ್ಯವಾದಾಗ ನ್ಯಾಯ ಪಡೆಯಲು ಅವರದ್ದೇ ತಾಯಿ ಸಂಸ್ಥೆಯಲ್ಲಿ ಕಮಿಟಿ ಇರಬೇಕು. ಅವರ ನಿರ್ಧಾರವನ್ನು ನಾನು ಸ್ವಾಗತ ಕೋರುತ್ತೇನೆ. ಚಲನಚಿತ್ರರಂಗದಲ್ಲಿ ಇದೊಂದು ಮೈಲಿಗಲ್ಲು” ಎಂದು ವಿವರಿಸಿದರು.

ಇದನ್ನೂ ಓದಿ; ತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...