Homeಅಂತರಾಷ್ಟ್ರೀಯಮೊದಲ ಕೊರೊನಾ ಸೋಂಕಿತ ಜರ್ಮನ್ ಶೆಫರ್ಡ್ ತಳಿಯ ನಾಯಿ ಸಾವು

ಮೊದಲ ಕೊರೊನಾ ಸೋಂಕಿತ ಜರ್ಮನ್ ಶೆಫರ್ಡ್ ತಳಿಯ ನಾಯಿ ಸಾವು

ಪಶುವೈದ್ಯರು ಮೇ ತಿಂಗಳಲ್ಲಿ ನಾಯಿಯನ್ನು ಪರೀಕ್ಷಿಸಿದ್ದರು. ನಂತರ ಸೊಂಕು ದೃಢಪಟ್ಟಿರುವುದು ಕಂಡು ಬಂದಿತ್ತು

- Advertisement -
- Advertisement -

ಕೊರೊನಾ ಸೋಂಕು ದೃಢಪಟ್ಟಿದ್ದ ಜರ್ಮನ್ ಶೆಫರ್ಡ್ ಎಂಬ ಉನ್ನತ ತಳಿಯ ನಾಯಿ ಅಮೇರಿಕಾದ ನ್ಯೂಯಾರ್ಕ್ನನಲ್ಲಿ ಮೃತಪಟ್ಟಿದೆ.

ಏಪ್ರಿಲ್ ಮಧ್ಯದಲ್ಲಿ ತಮ್ಮ 7 ವರ್ಷದ ಜರ್ಮನ್ ಶೆಫರ್ಡ್ ಉಸಿರಾಟದ ತೊಂದರೆಗಳನ್ನು ಅನುಭವಿಸುತ್ತಿದ್ದ. ನಂತರ ಹಲವಾರು ವಾರಗಳವರೆಗೆ ಕೊರೊನಾ ವೈರಸ್‌ನಿಂದ ಬಳಲುತ್ತಿದ್ದ ಎಂದು ಸ್ಟೇಟನ್ ದ್ವೀಪದ ರಾಬರ್ಟ್ ಮತ್ತು ಆಲಿಸನ್ ಮಹೋನಿ ನ್ಯಾಷನಲ್ ಜಿಯಾಗ್ರಫಿಕ್‌ಗೆ ತಿಳಿಸಿದ್ದರು.

ಪಶುವೈದ್ಯರು ಮೇ ತಿಂಗಳಲ್ಲಿ ನಾಯಿಯನ್ನು ಪರೀಕ್ಷಿಸಿದ್ದರು. ನಂತರ ಸೊಂಕು ದೃಢಪಟ್ಟಿರುವುದು ಕಂಡು ಬಂದಿತ್ತು.

ನ್ಯೂಯಾರ್ಕ್ ನಲ್ಲಿ ಜರ್ಮನ್ ಶೆಫರ್ಡ್ ಕೊರೊನಾ ಸೋಂಕು ದೃಢಪಟ್ಟ ದೇಶದ ಮೊದಲ ನಾಯಿ. ಆದರೆ ಅದರ ಮಾಲೀಕರನ್ನು ಬಹಿರಂಗಗೊಳಿಸುವುದಿಲ್ಲ ಎಂದು ಅಮೇರಿಕಾ ಕೃಷಿ ಇಲಾಖೆ ಜೂನ್‌ನಲ್ಲಿ ವರದಿ ಮಾಡಿದೆ,

ಏಪ್ರಿಲ್‌ನಲ್ಲಿ ಉಸಿರಾಟದ ತೊಂದರೆ ಮತ್ತು ದಟ್ಟವಾದ ಮೂಗಿನ ಲೋಳೆಯ ಬೆಳವಣಿಗೆಯ ನಂತರ ನಾಯಿಯ ಆರೋಗ್ಯವು ಕುಸಿಯಿತು. ಹೆಪ್ಪುಗಟ್ಟಿದ ರಕ್ತವನ್ನು ವಾಂತಿ ಮಾಡಲು ಪ್ರಾರಂಭಿಸಿದ ನಂತರ ಜುಲೈ 11 ರಂದು ಅದನ್ನು ದಯಾಮರಣಗೊಳಿಸಲಾಯಿತು ಎಂದು ಮಹೋನಿ ನ್ಯಾಷನಲ್ ಜಿಯಾಗ್ರಫಿಕ್‌ಗೆ ತಿಳಿಸಿದರು.

ನ್ಯೂಯಾರ್ಕ್ ನಗರದ ಆರೋಗ್ಯ ಇಲಾಖೆಯ ವಕ್ತಾರರು, ನಾಯಿಯ ದೇಹವನ್ನು ನೆಕ್ರೋಪ್ಸಿಗಾಗಿ ತೆಗೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ದೇಹವನ್ನು ಈಗಾಗಲೇ ದಹನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಯುಎಸ್‌ಡಿಎ ಡೇಟಾಬೇಸ್‌ನಲ್ಲಿ  ಅಮೇರಿಕಾದಲ್ಲಿ ಇದುವರೆಗೆ ಪ್ರಾಣಿಗಳಲ್ಲಿ ಕೊರೊನಾ ವೈರಸ್ ದೃಢಪಟ್ಟ 12 ನಾಯಿಗಳು, 10 ಬೆಕ್ಕುಗಳು, ಹುಲಿ ಮತ್ತು ಸಿಂಹಗಳು ಸೇರಿವೆ.

ಕೊರೊನಾ ವೈರಸ್ ಹರಡುವಲ್ಲಿ ಪ್ರಾಣಿಗಳು ಮಹತ್ವದ ಪಾತ್ರ ವಹಿಸುತ್ತವೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಸಂಸ್ಥೆ ಹೇಳುತ್ತದೆ. ಆದರೆ ಕೆಲವು ಸಂದರ್ಭಗಳಲ್ಲಿ ವೈರಸ್ ಜನರಿಂದ ಪ್ರಾಣಿಗಳಿಗೆ ಹರಡಬಹುದು ಎಂದು ಊಹಿಸಿದ್ದಾರೆ.


ಇದನ್ನೂ ಓದಿ: ಪ್ರಶಾಂತ್ ಭೂಷಣ್ ಪರ ನಿಂತ 8ಕ್ಕೂ ಹೆಚ್ಚು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಧೀಶರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...