Homeಮುಖಪುಟಜೂನ್ ವೇಳೆಗೆ ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ ಮೊದಲ ಮಹಿಳಾ ಬ್ಯಾಚ್: ರಾಷ್ಟ್ರಪತಿ ಕೋವಿಂದ್

ಜೂನ್ ವೇಳೆಗೆ ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ ಮೊದಲ ಮಹಿಳಾ ಬ್ಯಾಚ್: ರಾಷ್ಟ್ರಪತಿ ಕೋವಿಂದ್

- Advertisement -
- Advertisement -

ಈ ವರ್ಷದ ಜೂನ್‌ನಲ್ಲಿ ಪುಣೆ ಮೂಲದ ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ ಮಹಿಳಾ ಕೆಡೆಟ್‌ಗಳ ಮೊದಲ ಬ್ಯಾಚನ್ನು ಸೇರಿಸಿಕೊಳ್ಳಲಾಗುವುದು ಎಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಹೇಳಿದ್ದಾರೆ.

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ) ನಡೆಸುವ ಎನ್‌ಡಿಎ ಮತ್ತು ನೌಕಾ ಅಕಾಡೆಮಿಯ ಪ್ರವೇಶ ಪರೀಕ್ಷೆಗಳಲ್ಲಿ ಅರ್ಹ ಮಹಿಳೆಯರಿಗೆ ಹಾಜರಾಗಲು ಅವಕಾಶ ನೀಡುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಕಳೆದ ವರ್ಷ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಲಾಗಿತ್ತು. ಮನವಿಯ ವಿಚಾರಣೆ ನಡೆಸುವ ಸಂದರ್ಭದಲ್ಲಿ 2021ರ ಆಗಸ್ಟ್‌ನಲ್ಲಿ ಮಧ್ಯಂತರ ಆದೇಶವನ್ನು ನೀಡಿದ್ದ ಕೋರ್ಟ್‌, ಪರೀಕ್ಷೆಗೆ ಅವಕಾಶ ನೀಡುವಂತೆ ನಿರ್ದೇಶನ ನೀಡಿತ್ತು. ಆದರೆ, ಮಹಿಳಾ ಅಭ್ಯರ್ಥಿಗಳ ಪ್ರವೇಶದ ಅರ್ಜಿಯು ತನ್ನ ಅಂತಿಮ ತೀರ್ಪಿನ ವಿಷಯವಾಗಿರುತ್ತದೆ ಎಂದು ಹೇಳಿತ್ತು.

ಇದನ್ನೂ ಓದಿ:ಧರ್ಮ ಆಚರಿಸಿ, ದ್ವೇಷ ಭಾಷಣವನ್ನಲ್ಲ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು 

ಮಹಿಳೆಯರ ಪ್ರವೇಶಕ್ಕೆ ಅನುಕೂಲವಾಗುವಂತೆ ಅಧ್ಯಯನ ತಂಡವನ್ನು ಸ್ಥಾಪಿಸಲಾಗಿದೆ ಮತ್ತು ಅದನ್ನು ಸುಗಮಗೊಳಿಸಲು ಅಗತ್ಯ ಕಾರ್ಯವಿಧಾನವನ್ನು ಮೇ 2022 ರೊಳಗೆ ಜಾರಿಗೆ ತರಬಹುದು ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ ಅಫಿಡೇವಿಟ್‌ ಸಲ್ಲಿಸಿದೆ.

ಸೋಮವಾರ, ಬಜೆಟ್ ಅಧಿವೇಶನಕ್ಕೂ ಮುನ್ನ ಸಂಸತ್ತಿನಲ್ಲಿ ಮಾತನಾಡಿದ ಕೋವಿಂದ್ ಅವರು, “ದೇಶದ ಪ್ರಸ್ತುತ 33 ಸೈನಿಕ ಶಾಲೆಗಳಲ್ಲಿ ಹೆಣ್ಣುಮಕ್ಕಳಿಗೆ ಪ್ರವೇಶ ಕಲ್ಪಿಸಿರುವುದು ಹೆಮ್ಮೆಯ ಸಂಗತಿ. ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ ಮಹಿಳಾ ಕೆಡೆಟ್‌ಗಳ ಪ್ರವೇಶಕ್ಕೂ ಸರ್ಕಾರ ಅನುಮೋದನೆ ನೀಡಿದೆ. 2022ರ ಜೂನ್‌ನಲ್ಲಿ ಮೊದಲ ಬ್ಯಾಚ್‌ಗೆ ಪ್ರವೇಶ ನೀಡಲಾಗುವುದು” ಎಂದು ಹೇಳಿದ್ದಾರೆ.

“ಸರ್ಕಾರದ ನೀತಿ ನಿರ್ಧಾರಗಳು ಮತ್ತು ಪ್ರೋತ್ಸಾಹದಿಂದಾಗಿ ದೇಶದ ವಿವಿಧ ಪೊಲೀಸ್ ಪಡೆಗಳಲ್ಲಿ ಮಹಿಳಾ ಸಾಮರ್ಥ್ಯವನ್ನು 2014ಕ್ಕೆ ಹೋಲಿಸಿದರೆ, ಈಗ ಮಹಿಳೆಯರ ಸಂಖ್ಯೆ ಎರಡು ಪಟ್ಟು ಹೆಚ್ಚಾಗಿದೆ” ಎಂದು ರಾಷ್ಟ್ರಪತಿ ಹೇಳಿದ್ದಾರೆ.

ಇದನ್ನೂ ಓದಿ: ಹರಿದ್ವಾರ ದ್ವೇಷದ ಭಾಷಣಗಳ ಕುರಿತು ರಾಷ್ಟ್ರಪತಿ, PM ಗೆ ಪತ್ರ ಬರೆದ 5 ಸಶಸ್ತ್ರ ಪಡೆಗಳ ಮಾಜಿ ಮುಖ್ಯಸ್ಥರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...