Homeಮುಖಪುಟಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ

ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ

- Advertisement -
- Advertisement -

ವಲಸೆ ಕಾರ್ಮಿಕರ ಮೇಲಿನ ಸರ್ಕಾರದ ಶೋಷಣೆ ನಿರಂತರವಾಗಿ ಮುಂದುವರೆದಿದೆ. ಕಳೆದ ಸೋಮವಾರ ಉಚಿತ ರೈಲು ಪ್ರಯಾಣಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ ಎಂದು ಬಡಾಯಿ ಕೊಚ್ಚಿಕೊಂಡಿದ್ದ ಕೇಂದ್ರ ಸರ್ಕಾರ ಕಾರ್ಮಿಕರಿಂದ ಹಣ ವಸೂಲಿ ಮಾಡಿಯೇ ರೈಲು ಓಡಿಸುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ವಲಸೆ ಕಾರ್ಮಿಕರನ್ನು ಮೆಜೆಸ್ಟಿಕ್‌ನಿಂದ ಮಾಲೂರು, ಚಿಕ್ಕಬಾಣಾವರ ಸೇರಿದಂತೆ ಹಲವು ರೈಲು ನಿಲ್ದಾಣಕ್ಕೆ ಕರೆದೊಯ್ಯುವ  ಬಿಎಂಟಿಸಿ ಬಸ್‌ಗಳಿಗೂ ದುಪ್ಪಟ್ಟು/ಮೂರು ಪಟ್ಟು ಹಣ ವಸೂಲಿ ಮಾಡಿಯೇ ಅವನ್ನು ರೈಲಿಗೆ ಹತ್ತಿಸಲಾಗುತ್ತಿದ್ದು, ಈಗಾಗಲೇ ಬೆಂದು ಬಸವಳಿದಿರುವ ಕಾರ್ಮಿಕರ ಮತ್ತಷ್ಟು ಶೋಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ

ಮೇ 1 ರಂದು ರೈಲು ಸೇವೆ ಒದಗಿಸುತ್ತೇವೆ ಎಂದು ಕೇಂದ್ರ ಸರ್ಕಾರ ಘೋಷಿಸಿತ್ತು. ಆದರೆ ಆಗ ಕಾರ್ಮಿಕರು ಟಿಕೆಟ್‌ ಖರೀದಿಸುವುದು ಕಡ್ಡಾಯವಾಗಿತ್ತು. ಇದನ್ನು ವಿರೋಧಿಸಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕಾರ್ಮಿಕರ ಟಿಕೆಟ್‌ ಹಣವನ್ನು ಕಾಂಗ್ರೆಸ್‌ ಪಕ್ಷ ಭರಿಸಲಿದೆ ಎಂದು ಘೋಷಿಸಿದ್ದರು.


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ


ಆಗ ಸ್ಪಷ್ಟನೆ ನೀಡಿದ್ದ ಕೇಂದ್ರ ಸರ್ಕಾರ ತಾನು ಶೇ.85% ಹಣ ಒದಗಿಸುವುದಾಗಿಯೂ ರಾಜ್ಯ ಸರ್ಕಾರಗಳು ಶೇ.15% ಕಟ್ಟಿದರೆ ಸಾಕುಕ, ಉಚಿತ ರೈಲು ಪ್ರಯಾಣ ಎಂದು ಘೋಷಿಸಿತ್ತು. ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ರವರು ಟ್ರೈನ್‌ ಪ್ರಯಾಣ ಉಚಿತವಾಗಿದೆ ಎಂದು ಘೋಷಿಸಿದ್ದರು. ಈಗ ನೋಡಿದರೆ ಕರ್ನಾಟಕದ ಬೆಂಗಳೂರಿನಿಂದ ಹೊರಡುತ್ತಿರುವ ಎಲ್ಲಾ ವಲಸೆ ಕಾರ್ಮಿಕರಿಂದ ಟಿಕೆಟ್‌ಗಾಗಿ ಹಣ ವಸೂಲಿ ಮಾಡಲಾಗುತ್ತಿದೆ. ಈಗಾಗಲೇ ಕಷ್ಟದಲ್ಲಿರುವ ವಲಸೆ ಕಾರ್ಮಿಕರು ಟಿಕೆಟ್‌ ಹಣ ಭರಿಸಲಾಗದೇ ಒಡ್ಡಾಡುವ ಪರಿಸ್ಥಿತಿ ಬಂದಿದೆ.

ಪಿಎಂ ಕೇರ್ಸ್‌ ಹಣ ಎಲ್ಲಿಗೋಗುತ್ತಿದೆ?

ವಲಸೆ ಕಾರ್ಮಿಕರು ರೈಲು ಇಲ್ಲದೇ, ಇದ್ದರೂ ದುಡ್ಡು ಇಲ್ಲದೇ ಕಾಲ್ನಡಿಗೆಯಲ್ಲಿ ತಮ್ಮ ಊರುಗಳಿಗೆ ಹೊರಟಿರುವ ದೃಶ್ಯಗಳು ಮನಕಲಕುತ್ತಿವೆ. ಇಂತಹ ಸಂದರ್ಭದಲ್ಲಿ ಅವರ ಸಹಾಯಕ್ಕೆ ನಿಲ್ಲಬೇಕಿದ್ದ ಕೇಂದ್ರ ಸರ್ಕಾರ ಅವರ ಬಳಿಯೇ ಲೂಟಿಗಿಳಿದಿದೆ. ಸರ್ಕಾರದ ಪಿಎಂ ಕೇರ್ಸ್‌ ನಿಧಿಗೆ ಸಾವಿರಾರು ಕೋಟಿ ಹಣ ಹರಿದುಬಂದಿದ್ದರು ಅದರ ಮಾಹಿತಿ ನೀಡುತ್ತಿಲ್ಲ ಏಕೆ ಎಂಬ ಪ್ರಶ್ನೆ ಉದ್ಭವವಾಗಿದೆ. ಅದರಿಂದ ಹಣ ತೆಗೆದು ಕಾರ್ಮಿಕರ ರೈಲು ಪ್ರಯಾಣಕ್ಕೆ ನೀಡಬೇಕು ಎಂಬ ಆಗ್ರಹ ಜೋರಾಗಿ ಕೇಳಿಬಂದಿದೆ.

ಅಲ್ಲದೇ ಒಂದು ರೈಲಿನಲ್ಲಿ ಕೇವಲ 1200 ಜನರನ್ನು ಮಾತ್ರ ಕರೆದೊಯ್ಯಲಾಗುತ್ತಿದೆ. ಕರ್ನಾಟಕ ರಾಜ್ಯವೊಂದರಲ್ಲೇ ಸುಮಾರು 5-6 ಲಕ್ಷ ಜನ ವಲಸೆ ಕಾರ್ಮಿಕರು ಸಿಕ್ಕಿಕೊಂಡಿದ್ದು ಅವರೆಲ್ಲರನ್ನು ಅವರ ಸ್ವಂತ ಊರುಗಳಿಗೆ ತಲುಪಿಸಲು ಕನಿಷ್ಟ 2 ತಿಂಗಳು ಸಮಯ ಬೇಕಾಗುತ್ತದೆ. ಇದು ಕಾರ್ಮಿಕರ ಹತಾಶೆಯನ್ನು ಹೆಚ್ಚಿಸಲಿದೆ. ಹಾಗಾಗಿ ಸರ್ಕಾರ ಹೆಚ್ಚು ರೈಲುಗಳನ್ನು ಓಡಿಸಬೇಕೆಂದ ಆಗ್ರಹ ಕೇಳಿಬಂದಿದೆ.

ಒಟ್ಟಾರೆಯಾಗಿ ಲಾಕ್‌ಡೌನ್‌ ದಿಸೆಯಿಂದ ವಲಸೆ ಕಾರ್ಮಿಕರ ಬದುಕು ಅನಿಶ್ಚಿತವಾಗಿದೆ. ಸರ್ಕಾರ ದಿನಕ್ಕೊಂದು ನಿಯಮಗಳನ್ನು ತರುವ ಮೂಲಕ ವಲಸೆ ಕಾರ್ಮಿಕರನ್ನು ಇಕ್ಕಟ್ಟಿಗೆ ಸಿಉಕಿಸಿದೆ ಎಂಬ ಆರೋಪವು ಸಹ ಕೇಳಿಬಂದಿದೆ.


ಇದನ್ನೂ ಓದಿ; ಕೊರೊನ ಸಮಯದ ಮತ್ತು ಕೊರೊನೋತ್ತರ ಆರ್ಥಿಕ ಪುನಶ್ಚೇತನಕ್ಕೆ ನಮ್ಮ ಸರ್ಕಾರ ಮಾಡುತ್ತಿರುವುದೇನು? 

ವಲಸೆ ಕಾರ್ಮಿಕರನ್ನು ಊರಿಗೆ ಕಳಿಸಿಕೊಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಏನು ಮಾಡಿವೆ? ಕರ್ನಾಟಕದ ಪರಿಸ್ಥಿತಿ ಏನು? ನಾನುಗೌರಿ.ಕಾಂ ವರದಿ

Posted by Naanu Gauri on Sunday, May 10, 2020

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...