Homeಕರ್ನಾಟಕಯಾವಾಗ ಸಾಧ್ಯವೋ ಆಗ, ಎಷ್ಟು ಸಾಧ್ಯವೋ ಅಷ್ಟು ಶುಲ್ಕ ಕಟ್ಟಿ ಎಂದ ಬೆಂಗಳೂರು ಶಾಲೆ!

ಯಾವಾಗ ಸಾಧ್ಯವೋ ಆಗ, ಎಷ್ಟು ಸಾಧ್ಯವೋ ಅಷ್ಟು ಶುಲ್ಕ ಕಟ್ಟಿ ಎಂದ ಬೆಂಗಳೂರು ಶಾಲೆ!

ಮಾಂಟೆಸ್ಸರಿಯನ್ನು ಜನಸಾಮಾನ್ಯರಿಗೆ ಕೊಂಡೊಯ್ಯುವುದು ನನ್ನ ಕನಸಾಗಿದೆ. ಗುಣಮಟ್ಟದ ಶಿಕ್ಷಣವು ಎಲ್ಲರಿಗೂ ಕೈಗೆಟುವಂತಾಗಬೇಕು ಎಂಬುದು ನನ್ನ ಗುರಿಯಾಗಿದೆ, ಅದನ್ನು ಸಾಧಿಸಲು ಈ ಕಾರ್ಯಕ್ರಮ ಸಹಾಯಕವಾಗಲಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಮತ್ತು ಲಾಕ್‌ಡೌನ್‌ನಿಂದ ಬಹಳಷ್ಟು ಜನರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿಯೂ ಕೂಡ ನೂರಾರು ಖಾಸಗಿ ಶಾಲೆಗಳು ಶಾಲಾ ಶುಲ್ಕ ಹೆಚ್ಚಿಸಿ ಈಗಲೇ ಕಟ್ಟುವಂತೆ ಒತ್ತಾಯಿಸುತ್ತಿರುವ ಹಲವು ವರದಿಗಳು ಬರುತ್ತಿವೆ. ಸರ್ಕಾರ ಒತ್ತಾಯ ಮಾಡಬೇಡಿ ಎಂದರೂ ಕೇಳದ ಹತ್ತಾರು ಖಾಸಗಿ ಶಾಲೆಗಳನ್ನು ನೋಡಿದ್ದೇವೆ. ಅವುಗಳೆಲ್ಲದರ ನಡುವೆ ಈ ಬೆಂಗಳೂರಿನ ಶಾಲೆಯೊಂದು ವಿಭಿನ್ನವಾಗಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ದಿ ಫ್ರೀಥಿಂಕಿಂಗ್ ಶಾಲೆಯು ತಮ್ಮ ಶಾಲೆಯ ಮಕ್ಕಳ ಪೋಷಕರಿಗೆ Freedom from Fees (ಶುಲ್ಕದಿಂದ ಸ್ವಾತಂತ್ರ್ಯ) ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ. ಅದರಂತೆ ಪೋಷಕರು ಯಾವಾಗ ಸಾಧ್ಯವೋ ಆಗ, ಎಷ್ಟು ಸಾಧ್ಯವೋ ಅಷ್ಟು ಶುಲ್ಕ ಕಟ್ಟಿ ಎಂದು ಹೇಳುವ ಮೂಲಕ ಗಮನ ಸೆಳೆದಿದೆ.

ಮಾಂಟೆಸ್ಸರಿ ಶಿಕ್ಷಣ ವಿಧಾನವನ್ನು ಅನುಸರಿಸುತ್ತಿರುವ ಈ ಶಾಲೆಯು ಪೋಷಕರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಶಾಲಾ ಶುಲ್ಕ ಕಟ್ಟಲು ಕೇಳಿಕೊಂಡಿದೆ. ಅದು ಅಲ್ಲದೇ ತಮಗೆ ಅನುಕೂಲವಾದಾಗ ಶುಲ್ಕ ಕಟ್ಟಿ ಎಂದಿದೆ. ಇದು ಆರಂಭಿಕ ತರಗತಿಗಳಿಗೆ ಅನ್ವಯವಾಗಲಿದ್ದು, ಮಾಸಿಕ ಚಂದಾದಾರಿಕೆಯಿಂದ ಕೂಡಿದ್ದು, 2021ರ ಮಾರ್ಚ್‌ವರೆಗೂ ಕಾರ್ಯಕ್ರಮ ಚಾಲ್ತಿಯಲ್ಲಿರುತ್ತದೆ ಎಂದು ಶಾಲೆಯ ವೆಬ್‌ಸೈಟ್ ತಿಳಿಸಿದೆ.

ನಿಮ್ಮ ಮನೆಯಲ್ಲಿ ಕೆಲಸ ಮಾಡುವ ಚಾಲಕರು, ಸಹಾಯಕ ಸಿಬ್ಬಂದಿ ಸೇರಿದಂತೆ ಇತರರು ಸಹ ತಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸಬಹುದು. ಅವರಿಗೆ ಶಿಕ್ಷಣ ಬೇಕು ಅನ್ನಿಸಿದ್ದಲ್ಲಿ ಇಲ್ಲಿ ಸೇರಿಸಿ ಎಂದು ಶಾಲೆ ಕೇಳಿಕೊಂಡಿದೆ.

“ಸೌಹಾರ್ದತೆ ಮತ್ತು ಸ್ವಾತಂತ್ರ್ಯದ ಸ್ಫೂರ್ತಿಯಲ್ಲಿ ಈ ಕಾರ್ಯಕ್ರಮವನ್ನು ಕೋವಿಡ್ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆಶಾ ಕಾರ್ಮಿಕರು, ದಾದಿಯರು ಮತ್ತು ಇತರ ಕೋವಿಡ್ ಯೋಧರಿಗೆ ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ. ಮಾಂಟೆಸ್ಸರಿಯನ್ನು ಜನಸಾಮಾನ್ಯರಿಗೆ ಕೊಂಡೊಯ್ಯುವುದು ನನ್ನ ಕನಸಾಗಿದೆ. ಗುಣಮಟ್ಟದ ಶಿಕ್ಷಣವು ಎಲ್ಲರಿಗೂ ಕೈಗೆಟುವಂತಾಗಬೇಕು ಎಂಬುದು ನನ್ನ ಗುರಿಯಾಗಿದೆ, ಅದನ್ನು ಸಾಧಿಸಲು ಈ ಕಾರ್ಯಕ್ರಮ ಸಹಾಯಕವಾಗಲಿದೆ” ಎಂದು ದಿ ಫ್ರೀಥಿಂಕಿಂಗ್ ಶಾಲೆಯ ನಿರ್ದೇಶಕಿ ಸ್ಯಾಂಡಿ ಫಿಲಿಪ್ಸ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಯನ್ನು ಶಾಲಾ ವೆಬ್‌ಸೈಟ್‌ನಲ್ಲಿ ತಿಳಿಯಿರಿ.


ಇದನ್ನೂ ಓದಿ: ಲಾಕ್‌ಡೌನ್ ಸಮಯದಲ್ಲಿ ಶಾಲಾ ಶುಲ್ಕ ಪಾವತಿಗೆ ಕಾಲಾವಕಾಶ ಕೋರಿದ್ದ ಪಿಐಎಲ್ ತಿರಸ್ಕರಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...