Homeಕರ್ನಾಟಕತಮ್ಮ ಮಾತಿನ ಫಲವನ್ನು ಬಿ. ಸಿ. ಪಾಟೀಲ್ ಶೀಘ್ರದಲ್ಲೇ ಅನುಭವಿಸಲಿದ್ದಾರೆ: ಕುರುಬೂರು ಶಾಂತಕುಮಾರ್‌‌

ತಮ್ಮ ಮಾತಿನ ಫಲವನ್ನು ಬಿ. ಸಿ. ಪಾಟೀಲ್ ಶೀಘ್ರದಲ್ಲೇ ಅನುಭವಿಸಲಿದ್ದಾರೆ: ಕುರುಬೂರು ಶಾಂತಕುಮಾರ್‌‌

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದ ರೈತರು ನಡೆಸುತ್ತಿರುವ ಶಾಂತಿಯುತ ಹೋರಾಟ ಮೂರನೇ ತಿಂಗಳಿಗೆ ಕಾಲಿಟ್ಟಿದೆ. ಆದರೆ, ಜನವರಿ 26 ರಂದು ಆಯೋಜಿಸಿದ್ದ ಟ್ರಾಕ್ಟರ್​ ರ್‍ಯಾಲಿ ವೇಳೆ ಕೆಂಪುಕೋಟೆಯ ಬಳಿ ಅಹಿತಕರ ಘಟನೆ ನಡೆದಿದೆ. ಈ ಬಗ್ಗೆ ಇಂದು ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿಷಾಧ ವ್ಯಕ್ತಪಡಿಸಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್​, ” ಸಮಾಜಘಾತುಕ ವ್ಯಕ್ತಿಗಳಿಂದ ರೈತರ ಹೆಸರಿಗೆ ಮಸಿಯಾಗಿದೆ. ಹೀಗಾಗಿ ದೆಹಲಿ‌ ಘಟನೆ ಬಗ್ಗೆ ಸರ್ವೋಚ್ಚನ್ಯಾಯಾಲದ ನ್ಯಾಯಾಧೀಶರಿಂದ ತನಿಖೆಯಾಗಬೇಕು” ಎಂದು ಒತ್ತಾಯಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, “60 ದಿನಗಳಿಂದ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಪ್ರತಿಭಟನಾನಿರತ ರೈತರ ಹೆಸರಿಗೆ ಮಸಿ ಬಳಿಯಲು ಸರ್ಕಾರ ಷಡ್ಯಂತ್ರ ರಚಿಸಿದೆ. ಆದರೆ, ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಘಟನೆ ದುರಾದೃಷ್ಠಕರ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ‌ ಬೇರೆ ಬಾವುಟ ಹಾರಿಸಿದ್ದು ಪಂಜಾಬಿನ ನಟ ದೀಪ್ ಸಿಧು. ದೀಪ್ ಸಿಧು ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದ. ಅಲ್ಲದೇ ಬಾವುಟ ಹಾರಿಸಿದ್ದು ನಾನೆ ಎಂದು ದೀಪ್ ಸಿಧು ಒಪ್ಪಿಕೊಂಡಿದ್ದಾನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೆಂಪು ಕೋಟೆಯಲ್ಲಿ ಅಹಿತಕರ ಘಟನೆ: ದೀಪ್ ಸಿಧು ವಾರ ಮೊದಲೇ ತಯಾರಿ ನಡೆಸಿದ್ದನೆ?

“ಇದು ರೈತರ ಹೆಸರಿಗೆ ಕಳಂಕ ತರಲು ನಡೆಸಿದ ಷಡ್ಯಂತ್ರ. ಇಂತಹ ಸಮಾಜಘಾತುಕ ವ್ಯಕ್ತಿಗಳ ಮೇಲೆ ಮೊಕದ್ದಮೆ ದಾಖಲಿಸಿ ಜೀವಾವಧಿ ಶಿಕ್ಷೆ ನೀಡಬೇಕು. ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಿಂದ ತನಿಖೆಯಾಗಬೇಕು. ಈ ವಿಚಾರ ಬೇಹುಗಾರಿಕೆ ಸಂಸ್ಥೆ ಮೂಲಕ ಕೇಂದ್ರ ಸರ್ಕಾರಕ್ಕೆ ತಿಳಿದಿದ್ದರೂ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಸಿದ್ದು ಯಾಕೆ..? ಇದಕ್ಕೆ ಕೇಂದ್ರ ಸರ್ಕಾರ ಉತ್ತರ ಕೊಡಬೇಕು” ಎಂದು ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.

“ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧದ ರೈತ ಹೋರಾಟ ಮುಂದುವರೆಯಲಿದೆ ಎಂದು ಹೇಳಿರುವ ಅವರು, “ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮುಂದುವರೆಯುತ್ತೆ. ಗಲಭೆಯಿಂದ ಹೋರಾಟಕ್ಕೆ ಯಾವುದೇ ಹಿನ್ನಡೆಯಾಗಿಲ್ಲ. ಲಾಕ್ಡೌನ್ ಸಂದರ್ಭದಲ್ಲಿ ರೈತರನ್ನು ಮನೆಯಲ್ಲಿ ಕೂಡಿಹಾಕಿ ಈ ಕಾಯ್ದೆಯನ್ನು ತಂದಿದ್ದಾರೆ. ರೈತರ ಜೊತೆ ನಾಟಕೀಯವಾಗಿ 11 ಸಭೆ ನಡೆಸಿದ್ದಾರೆ‌. 145 ರೈತರು ಚಳುವಳಿ ಮೂಲಕ ಪ್ರಾಣ ಕಳೆದುಕೊಂಡಾಗ ರೈತರ ಬಗ್ಗೆ ಕನಿಕರ ಇರಲಿಲ್ವಾ?’’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮಾಜಿ ಗ್ಯಾಂಗ್‌ಸ್ಟರ್ ಲಖಾ ಸಿಧಾನಾ – ಜ. 26 ರ ಹಿಂಸಾಚಾರದ ಇನ್ನೊಬ್ಬ ರೂವಾರಿ?

“ಇದು ಇಡೀ ರೈತ ಕುಲವನ್ನೇ ನಾಶ ಮಾಡುವ ಸಂಚು. ಈ ಕಾಯ್ದೆಗಳ ವಿರುದ್ಧ ನಮ್ಮ ಹೋರಾಟ ನಿಲ್ಲಲ್ಲ. ಇದೇ ಜ.30 ರಂದು ಉಪವಾಸ ನಿರಸನ ದಿನ ನಡೆಸಲು ತೀರ್ಮಾನಿಸಿದ್ದೇವೆ. ದೆಹಲಿಯ ಎಲ್ಲಾ ಗಡಿಭಾಗದಲ್ಲೂ ಉಪವಾಸ ನಿರಶನ ದಿನ ಆಚರಣೆ ಮಾಡಲಾಗುತ್ತದೆ. ನಾವು ಸಹ ರಾಜ್ಯದಿಂದ ತಂಡ ತಂಡವಾಗಿ ಚಳುವಳಿಗೆ ಹೋಗಲು ಚಿಂತನೆ ನಡೆಸಿದ್ದೇವೆ” ಎಂದು ಶಾಂತ ಕುಮಾರ್‌ ಹೇಳಿದ್ದಾರೆ.

ಇದೇ ವೇಳೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರ ಮೇಲೆ ಶಾಂತಕುಮಾರ್‌ ಹರಿಹಾಯ್ದಿದ್ದಾರೆ. “ಬಿ.ಸಿ. ಪಾಟೀಲ್ ಕೃಷಿ ಸಚಿವರಲ್ಲ. ಅವರೊಬ್ಬ ಸಿನಮಾ ಸಚಿವರು. ಎಷ್ಟೇ ಆಗಲಿ ಅವರು ಸಿನಿಮಾ ಕ್ಷೇತ್ರದಿಂದ ಬಂದವರಲ್ಲವೇ. ಅದಕ್ಕಾಗಿ ರೈತ ಹೋರಾಟದ ಬಗ್ಗೆ ಲಘುವಾಗಿ ಮಾತನಾಡುತ್ತಾರೆ. ಭತ್ತ ನಾಟಿ ಮಾಡುತ್ತಾ, ಜೋಳದ ತೆನೆ ಹೊತ್ತು ರೈತನೆಂದು ಫೋಸ್ ಕೊಡ್ತಾರೆ. ಅವರು ಕೃಷಿ ಸಚಿವರಾಗಲು ನಾಲಯಕ್. ಅವರ ಮಾತಿನ ಫಲವನ್ನು ಶೀಘ್ರದಲ್ಲೆ ಅವರು ಅನುಭವಿಸಲಿದ್ದಾರೆ” ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಯ ಭಾಷಣ ಬಹಿಷ್ಕರಿಸಲಿರುವ 16 ಪ್ರಮುಖ ಪಕ್ಷಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...