Homeಅಂತರಾಷ್ಟ್ರೀಯಗಾಲ್ವನ್ ಕಣಿವೆ ನಮ್ಮದು, ಭಾರತ ಅತಿಕ್ರಮಣ ಮಾಡಿದೆ : ಚೀನಾ ಪುನರುಚ್ಚಾರ

ಗಾಲ್ವನ್ ಕಣಿವೆ ನಮ್ಮದು, ಭಾರತ ಅತಿಕ್ರಮಣ ಮಾಡಿದೆ : ಚೀನಾ ಪುನರುಚ್ಚಾರ

- Advertisement -
- Advertisement -

ಗಾಲ್ವನ್ ಕಣಿವೆಯು ಚೀನಾ-ಭಾರತ ಗಡಿಯ ವಾಸ್ತವಿಕ ನಿಯಂತ್ರಣ ರೇಖೆಯ ಚೀನಾದ ಪಶ್ಚಿಮ ಭಾಗದಲ್ಲಿದ್ದು ಅದು ನಮ್ಮದು ಎಂದು ಚೀನ ವಿದೇಶಾಂಗ ಸಚಿವಾಲಯದ ವಕ್ತಾರ ಜಾವೋ ಲಿಜಿಯಾನ್ ಹೇಳಿದ್ದಾರೆ.

ಈ ಹಿಂದೆ ಪೀಪಲ್ಸ್ ಲಿಬರೇಶನ್ ಆರ್ಮಿಯ ವೆಸ್ಟರ್ನ್ ಥಿಯೇಟರ್ ಕಮಾಂಡ್‌ನ ವಕ್ತಾರರು ಸಹ ಇದೇ ಹಕ್ಕು ಮಂಡಿಸಿದ್ದರು. ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್, ಜರ್ಮನಿ, ಜಪಾನ್ ಮತ್ತು ಮಾಲ್ಡೀವ್ಸ್ ಸೇರಿದಂತೆ ಹಲವು ದೇಶಗಳ 20 ಭಾರತೀಯ ಸೈನಿಕರ ಹತ್ಯೆಗೆ ಸಂತಾಪ ಸೂಚಿಸಿ ಹೇಳಿಕೆ ನೀಡಿದ ನಂತರ ಚೀನಾದ ಪ್ರತಿಕ್ರಿಯೆ ಬಂದಿದೆ.

ಈ ಕುರಿತು ಹೇಳಿಕೆ ನೀಡಿರುವ ಅವರು ಹಲವು ವರ್ಷಗಳಿಂದ ಚೀನಾ ಪಡೆಗಳು ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿವೆ ಮತ್ತು ಕರ್ತವ್ಯ ನಿರ್ವಹಿಸುತ್ತಿವೆ. ಆದರೆ 2020ರ ಏಪ್ರಿಲ್ ತಿಂಗಳಿಂದ ಭಾರತೀಯ ಪಡೆಗಳು ಗಾಲ್ವನ್ ಕಣಿವೆಯ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಏಕಪಕ್ಷೀಯವಾಗಿ ಮತ್ತು ನಿರಂತರವಾಗಿ ರಸ್ತೆಗಳು, ಸೇತುವೆಗಳು ಇತರೆ ಸೌಲಭ್ಯಗಳನ್ನು ನಿರ್ಮಿಸಿವೆ ಎಂದು ಲಿಜಿಯಾನ್ ಆರೋಪಿಸಿದ್ದಾರೆ.

ಭಾರತವು ವಾಸ್ತವಿಕ ನಿಯಂತ್ರಣ ರೇಖೆ ದಾಟಲು ಮತ್ತು ಪ್ರಚೋದನೆಗೆ ಮತ್ತಷ್ಟು ಕುಮ್ಮಕ್ಕು ನೀಡಿದೆ. ಮೇ 6ರಂದು ಬೆಳಗ್ಗೆ  ಮತ್ತು ರಾತ್ರಿ ಸಮಯದಲ್ಲಿ ವಾಸ್ತವಿಕ ನಿಯಂತ್ರಣ ರೇಖೆ ದಾಟಿ ಚೀನಾದ ಭೂಪ್ರದೇಶಕ್ಕೆ ಅತಿಕ್ರಮಣ ಮಾಡಿರುವ ಭಾರತದ ಗಡಿ ಭದ್ರತಾ ಪಡೆಗಳು ಕೋಟೆ ಮತ್ತು ಬ್ಯಾರಿಕೇಡ್ ಗಳನ್ನು ನಿರ್ಮಿಸಿವೆ ಎಂದಿದ್ದಾರೆ.

ಇದು ಚೀನಾ ಯೋಧರು ಗಸ್ತು ತಿರುಗಲು ಅಡ್ಡಿಯಾಗಿದೆ. ನಿಯಂತ್ರಣ ಮತ್ತು ನಿರ್ವಹಣೆಯ ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸುವ ಪ್ರಯತ್ನದಲ್ಲಿ ಭಾರತೀಯ ಪಡೆಗಳು ಉದ್ದೇಶಪೂರಕವಾಗಿ ಪ್ರಚೋದನೆ ಮಾಡಿದರು ಎಂದು ಆರೋಪಿಸಿದ್ದಾರೆ.

ಹಾಂಗ್ ಕಾಂಗ್ ಮತ್ತು ಭಾರತ ಸೇರಿದಂತೆ ಹಲವು ಸ್ಥಳಗಳಲ್ಲಿ ಚೀನಿಯರು ಇತ್ತೀಚೆಗೆ ಕೈಗೊಂಡ ಹಲವಾರು ಕ್ರಮಗಳು “ನಿಜವಾಗಿಯೂ ರಚನಾತ್ಮಕವಾಗಿಲ್ಲ” ಎಂದು ಪೂರ್ವ ಏಷ್ಯಾ ಮತ್ತು ಪೆಸಿಫಿಕ್ ವ್ಯವಹಾರಗಳ ಯುಎಸ್ ಸಹಾಯಕ ಕಾರ್ಯದರ್ಶಿ ಡೇವಿಡ್ ಸ್ಟಿಲ್ವೆಲ್ ಹೇಳಿದ್ದಾರೆ.


ಇದನ್ನೂ ಓದಿ: ಚೀನಾ ಯಾವುದೇ ಭಾರತೀಯ ಭೂಪ್ರದೇಶ ವಶಪಡಿಸಿಕೊಂಡಿಲ್ಲ, ಗಡಿಯೊಳಗೆ ಕಾಲಿಟ್ಟಿಲ್ಲ: ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...