Homeಕರ್ನಾಟಕಸರ್ಕಾರದ ವೈಫಲ್ಯವನ್ನು ಹಿಜಾಬ್ ಮತ್ತು ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಸಾಧ್ಯವಿಲ್ಲ: ಕರ್ನಾಟಕ ಜನಶಕ್ತಿ

ಸರ್ಕಾರದ ವೈಫಲ್ಯವನ್ನು ಹಿಜಾಬ್ ಮತ್ತು ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಸಾಧ್ಯವಿಲ್ಲ: ಕರ್ನಾಟಕ ಜನಶಕ್ತಿ

- Advertisement -
- Advertisement -

ಸರ್ಕಾರದ ವೈಫಲ್ಯವನ್ನು ಹಿಜಾಬ್ ಮತ್ತು ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಸಾಧ್ಯವಿಲ್ಲ. ಏನೇ ಕಾರಣ ನೀಡಿದರೂ ವಿದ್ಯಾರ್ಥಿನಿಯರ ಕಲಿಯುವ ಹಕ್ಕನ್ನು ಕಸಿಯಲು ಸಾಧ್ಯವಿಲ್ಲ. ಅಮಾಯಕ ವಿದ್ಯಾರ್ಥಿಗಳನ್ನು ಕೋಮು ರಾಜಕಾರಣಕ್ಕೆ ದುರ್ಬಳಕೆ ಮಾಡುವುದನ್ನು ಬಿಜೆಪಿ ಸರ್ಕಾರ ಕೈಬಿಡಬೇಕು. ಕಠಿಣ ನಿರ್ದೇಶನಗಳನ್ನು ನೀಡಿ ಕೂಡಲೇ ಕಾಲೇಜುಗಳಲ್ಲಿ ಶಾಂತಿ-ಸುವ್ಯವಸ್ಥೆ ಮರುಸ್ಥಾಪನೆ ಮಾಡಬೇಕು ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಘಟನೆಗಳ ಹಿನ್ನಲೆಯಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕರ್ನಾಟಕ ಜನಶಕ್ತಿ, “ಕಳೆದ ಕೆಲವು ದಿನಗಳು ಕರ್ನಾಟಕದ ಪ್ರಜ್ಞಾವಂತರನ್ನು ತೀವ್ರವಾದ ಆತಂಕಕ್ಕೆ ದೂಡಿವೆ. ಕ್ಷುಲ್ಲಕ ನೆಪವೊಡ್ಡಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಶಿಕ್ಷಣದ ಗೇಟುಗಳನ್ನು ಮುಚ್ಚುತ್ತಿರುವುದು, ಶಾಲಾ-ಕಾಲೇಜುಗಳಲ್ಲಿ ಎಳೆವಯಸ್ಸಿನ ವಿದ್ಯಾರ್ಥಿಗಳನ್ನು ರಾಜಕಾರಣದ ಕೆಸರಿನೊಳಕ್ಕೆ ಎಳೆದು ತರುತ್ತಿರುವುದು ನಾಗರಿಕರನ್ನು ತಲೆ ತಗ್ಗಿಸುವಂತೆ ಮಾಡಿದೆ. ಇದು ಸಮವಸ್ತ್ರದ ಸುತ್ತಲಿನ ಸಮಸ್ಯೆಯೆಂಬಂತೆ ಬಿಂಬಿಸಲಾಗುತ್ತಿದ್ದರೂ, ಇದರ ಹಿಂದೆ ಸಂಘಪರಿವಾರದ ಕೋಮುವಾದಿ ರಾಜಕಾರಣ ಕೆಲಸ ಮಾಡುತ್ತಿರುವುದು ನಿಚ್ಚಳವಾಗಿ ಗೋಚರಿಸುತ್ತಿದೆ” ಎಂದು ಹೇಳಿದೆ.

ಇದನ್ನೂ ಓದಿ: ಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

“ಇದ್ಯಾವುದೂ ಆಕಸ್ಮಿಕವಾಗಿ ಸಂಭವಿಸುತ್ತಿರುವುದೆಂದು ಅಥವಾ ವಿದ್ಯಾರ್ಥಿಗಳು ತಮ್ಮಂತೆ ತಾವೇ ಇಂತಹ ಗದ್ದಲಕ್ಕಿಳಿದಿದ್ದಾರೆಂದು ನಂಬಲು ಸಾಧ್ಯವಿಲ್ಲ. ನಿನ್ನೆ ಮೊನ್ನೆಯಯವರೆಗೆ ವಿದ್ಯಾರ್ಥಿನಿಯರು ಹಿಜಾಬ್ ಅಥವಾ ಬುರ್ಖಾ ಧರಿಸಿ ಬಂದಾಗ ಯಾವುದೇ ಅವಘಡಗಳೂ ನಡೆದಿರಲಿಲ್ಲ. ಧಿಡೀರನೆ ಕೆಲವು ದಿನಗಳೊಳಗಾಗಿ ವಿದ್ಯಾರ್ಥಿಗಳು ಆಕ್ರೋಶಗೊಳ್ಳುವುದು ಸಹಜವಾದ ಬೆಳವಣಿಗೆಯಲ್ಲ. ಇದರ ಹಿಂದೆ ಸರ್ಕಾರದ ಮತ್ತು ಸಂಘಪರಿವಾರದ ನೇರ ಕೈವಾಡ ಇದೆಯೆಂಬ ಬಗ್ಗೆ ಯಾವುದೇ ಅನುಮಾನಕ್ಕೆ ಆಸ್ಪದವಿಲ್ಲ” ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

“ಇದು ಸರ್ಕಾರದ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳುವ ಪ್ರಯತ್ನ ಮತ್ತು ಹಾಗೆಯೇ ಧರ್ಮಾಧಾರಿತವಾದ ದೃವೀಕರಣವನ್ನು ಉಂಟುಮಾಡಿ ಮುಂಬರುವ ಚುನಾವಣೆಗಳಲ್ಲಿ ಲಾಭ ಪಡೆದುಕೊಳ್ಳುವ ಕೀಳುಮಟ್ಟದ ತಂತ್ರಗಾರಿಕೆ. ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿ ಕಾಲೇಜುಗಳಲ್ಲಿ ಬೆಂಕಿ ಹೊತ್ತಿಸುತ್ತಿದೆ. ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಅದಕ್ಕೆ ಎಣ್ಣೆ ಸುರಿಯುತ್ತಿದೆ. ‘ಶಾಲಾ ಕಾಲೇಜುಗಳ ಮೇಲುಸ್ತುವಾರಿ ಸಮಿತಿಗಳು ಹಾಗೂ ಪೋಷಕ-ಶಿಕ್ಷಕ ಸಮಿತಿಗಳು ನಿರ್ಧರಿಸಿದಲ್ಲಿ ಅದಕ್ಕೆ ತಕ್ಕಂತೆ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸಬೇಕಾಗಿರುತ್ತದೆ’ ಎಂಬಂತಹ ಸುತ್ತೋಲೆಯನ್ನು ಹೊರಡಿಸಿ, ಅದರಲ್ಲಿ ತನಗೇನೂ ಪಾತ್ರ ಇಲ್ಲ ಎಂಬಂತೆ ಸರ್ಕಾರ ನಡೆದುಕೊಳ್ಳುತ್ತಿದೆ.

ಸಂಘಪರಿವಾರದ ಕಾಲಾಳುಗಳನ್ನು ಮೇಲುಸ್ತುವಾರಿ ಸಮಿತಿಗಳಲ್ಲಿ ತೂರಿಸಿ, ಅವರುಗಳ ಮೂಲಕ ಅಲ್ಪಸಂಖ್ಯಾತ ವಿದ್ಯಾರ್ಥಿನಿಯರು ಹಿಜಾಬ್ ಧರಿಸದಂತೆ ಆದೇಶ ಮಾಡಿಸಿ, ಅದಕ್ಕೆ ಬರುವ ವಿರೋಧವನ್ನು ಬಳಸಿಕೊಂಡು ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿಸುವ ಹಾಗೂ ಜನರ ಗಮನವನ್ನು ದಿಕ್ಕುತಪ್ಪಿಸುವ ನೀಚ ಷಡ್ಯಂತ್ರ ರಾಜ್ಯದಲ್ಲಿ ನಡೆಯುತ್ತಿದೆ” ಎಂದು ಕರ್ನಾಟಕ ಜನಶಕ್ತಿ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

“ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನೂ ಸೇರಿಸಿದೆ ಮತ್ತು ಅದರ ಪ್ರಕಾರ ಅಲ್ಪಸಂಖ್ಯಾತ ಸಮುದಾಯಗಳಿಗೆ ತಮ್ಮ ಧಾರ್ಮಿಕ ಅಸ್ಮಿತೆಗಳೊಂದಿಗೆ ಗೌರವಯುತವಾಗಿ ಬದುಕಲು ಅವಕಾಶ ಕಲ್ಪಿಸಬೇಕಿರುವುದು ಸರ್ಕಾರದ ಜವಾಬ್ದಾರಿಯಾಗಿದೆ. ಇದರಲ್ಲಿ ಶಾಲಾ-ಕಾಲೇಜುಗಳ ಸಮವಸ್ತ್ರಗಳಿಗೆ ಸಂಬಂಧಿಸಿದ ನಿರ್ದಿಷ್ಟ ಸೂಚನೆಗಳಿರುವುದಿಲ್ಲವಾದ್ದರಿಂದ ಅದು ಆಯಾ ಸರ್ಕಾರಗಳ ಅಥವಾ ನ್ಯಾಯಾಲಯಗಳ ವಿವೇಚನೆಗೆ ತಕ್ಕಂತೆ ಬೇರೆ ಬೇರೆ ರೀತಿಗಳಲ್ಲಿ ವ್ಯಾಖ್ಯಾನಗೊಂಡಿದೆ. ಇಡೀ ಭಾರತದಲ್ಲಿ ಒಟ್ಟಾರೆಯಾಗಿ ನೋಡುವುದಾದರೆ, ವಿದ್ಯಾರ್ಥಿಗಳು ಸಮವಸ್ತ್ರದ ಜೊತೆಗೆ ತಮ್ಮ ಪಗಡಿ, ರುಮಾಲು, ತಲೆವಸ್ತ್ರ, ದುಪಟ್ಟಾ, ಕುಂಕುಮ, ಬೊಟ್ಟು, ಟೋಪಿ ಮುಂತಾದ ತಮ್ಮ ಸಾಂಸ್ಕೃತಿಕ-ಧಾರ್ಮಿಕ ಗುರುತುಗಳನ್ನು ಬಳಸುವುದು ಯಾವಾಗಿನಿಂದಲೂ ಚಾಲ್ತಿಯಲ್ಲಿದೆ.

ಹಿಂದೂಗಳನ್ನೂ ಒಳಗೊಂಡಂತೆ ಎಲ್ಲಾ ಧರ್ಮದ ಕೆಲವು ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಮ್ಮ ಧಾರ್ಮಿಕ ಅಸ್ಮಿತೆಯ ಭಾಗವಾಗಿ ಇದನ್ನು ಬಳಸುವುದಿದೆ. ಕಳೆದ ಕೆಲವು ವರ್ಷಗಳ ತನಕ ಈ ವಿಚಾರದಲ್ಲಿ ಎಲ್ಲೂ ಗೊಂದಲ, ಗಲಭೆ ಉಂಟಾದ ಉದಾಹರಣೆಗಳಿಲ್ಲ. ವಿದ್ಯಾರ್ಥಿಗಳ ನಡುವೆಯಂತೂ ಇದು ಎಂದೂ ವಿವಾದದ ವಿಚಾರವಾಗಿರಲಿಲ್ಲ. ಆದರೆ ಕೇಂದ್ರದಲ್ಲಿ ಮತ್ತು ದೇಶದ ವಿವಿಧ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳು ಅಸ್ತಿತ್ವಕ್ಕೆ ಬಂದಂತೆಲ್ಲ ಇಂತಹ ಸೂಕ್ಷ್ಮ ವಿಚಾರಗಳು ಅಶಾಂತಿಯ ಕಾರಣಗಳಾಗುತ್ತಿವೆ” ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

“ಈ ಇಡೀ ಗದ್ದಲದಲ್ಲಿ ವಿದ್ಯಾರ್ಥಿಗಳ, ವಿಶೇಷವಾಗಿ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ದೊಡ್ಡ ಹೊಡೆತ ಬೀಳುತ್ತಿದೆಯೆಂಬುದನ್ನು ಗಮನಿಸಬೇಕು. ಒಂದೆಡೆ, ಸಾಚಾರ್ ವರದಿ ಸ್ಪಷ್ಟವಾಗಿ ಮುಸ್ಲಿಂ ಸಮುದಾಯದ ಶೈಕ್ಷಣಿಕ ಸ್ಥಿತಿಗತಿ ಎಷ್ಟು ಶೋಚನೀಯವಾಗಿದೆಯೆಂಬುದನ್ನು ಎತ್ತಿತೋರಿಸಿರುವಾಗ, ಆ ಸಮುದಾಯದ ಹೆಣ್ಣುಮಕ್ಕಳು ಹೇಗೋ ಮಾಡಿ ಕಾಲೇಜಿನ ಮೆಟ್ಟಿಲು ಹತ್ತುತ್ತಿರುವುದನ್ನು ಸ್ವಾಗತಿಸಬೇಕೇ ಹೊರತು ಅವರನ್ನು ಧಾರ್ಮಿಕ ಆಚರಣೆಗಳ ಕಾರಣ ಮುಂದಿಟ್ಟು ಕಾಲೇಜುಗಳ ಗೇಟುಗಳ ಹೊರಗೆ ನಿಲ್ಲಿಸುವುದಲ್ಲ. ಅದೇ ರೀತಿಯಿಂದ ಆ ಹೆಣ್ಣುಮಕ್ಕಳು ಮಾತ್ರವಲ್ಲದೆ ಇಡೀ ವಿದ್ಯಾರ್ಥಿ ಸಮುದಾಯದ ಮೇಲೆ ಅನಿಶ್ಚಿತತೆಯ ಕತ್ತಿ ತೂಗುತ್ತಿದೆ. ಶಾಲಾಕಾಲೇಜುಗಳ ಶೈಕ್ಷಣಿಕ ವಾತಾವರಣ ಕಲುಷಿತಗೊಳ್ಳುತ್ತಿದೆ. ಕೋವಿಡ್‌ನ ಕಾರಣದಿಂದ ಅಪಾರ ಏರುಪೇರುಗಳನ್ನು ಕಂಡಿದ್ದ ಶಿಕ್ಷಣ ವ್ಯವಸ್ಥೆಯು ನಿಧಾನವಾಗಿ ಒಂದಿಷ್ಟು ಚೇತರಿಸಿ ಕೊಳ್ಳುತ್ತಿರುವಂತೆಯೇ ಆರಂಭಿಸಲಾಗಿರುವ ಈ ಗದ್ದಲದಿಂದ ದೂರಗಾಮಿ ದುಷ್ಪರಿಣಾಮಗಳು ಉಂಟಾಗಲಿವೆ” ಎಂದು ಸಂಘಟನೆ ಹೇಳಿದೆ.

ಇದನ್ನೂ ಓದಿ: ಶಾಲೆ ತೆರೆಯಲು ಹೈಕೋರ್ಟ್ ಮೌಖಿಕ ಆದೇಶ; ಹಿಜಾಬ್‌‌, ಕೇಸರಿ ವಿಚಾರಣೆ ಮುಂದೂಡಿಕೆ

“ದುಬಾರಿ ಫೀಸು ಮತ್ತು ಡೋನೆಷನ್ ಹಾವಳಿ ಬಡ ವಿದ್ಯಾರ್ಥಿಗಳನ್ನು ಹಿಂಡುತ್ತಿದೆ ಮತ್ತು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ. ಹಾಗೆಯೇ ಕಾಲೇಜು ಶಿಕ್ಷಣ ಮುಗಿಸುವ ವಿದ್ಯಾರ್ಥಿಗಳಿಗೆ ತಕ್ಕನಾದ ಸಾಕಷ್ಟು ಉದ್ಯೋಗಾವಕಾಶಗಳಿಲ್ಲದೆ, ಅಭದ್ರ ಉದ್ಯೋಗಗಳಲ್ಲಿ ನಮ್ಮ ಯುವಜನರು ನಲುಗುತ್ತಿದ್ದಾರೆ. ವಸ್ತುಸ್ಥಿತಿ ಹೀಗಿರುವಾಗ, ಯುವಜನರ ಈ ಮೂಲ ಸಮಸ್ಯೆಗಳನ್ನು ಸರ್ಕಾರ ಹಿಜಾಬ್ ಹಿಂದೆ ಮರೆಮಾಚಲು ಹೊರಟಿದೆ” ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

“ಪುರುಷಾಧಿಪತ್ಯದ ಪ್ರಶ್ನೆಯನ್ನು ಶಿಕ್ಷಣದ ಹಕ್ಕಿಗೆ ಎದರುಬದರು ನಿಲ್ಲಿಸಬಾರದು. ಎಲ್ಲಾ ಧರ್ಮಗಳಲ್ಲೂ ವಿವಿಧ ಬಗೆಯಲ್ಲಿ ಗಂಡು ಹೆಣ್ಣಿನ ತಾರತಮ್ಯ ಮತ್ತು ಮಹಿಳೆಯರ ಮೇಲಿನ ಕಟ್ಟುಪಾಡುಗಳು ಮುಂದುವರಿಯುತ್ತಿವೆ. ಆದರೆ ಅದರ ಚರ್ಚೆಯನ್ನು ಮಾಡುವ ಸಮಯ ಇದಲ್ಲ. ಹಿಜಾಬ್ ಹಾಕದೆ ಕಾಲೇಜಿಗೆ ಹೆಣ್ಣುಮಕ್ಕಳು ಹೋಗಬಾರದು ಎಂದು ಮೂಲಭೂತವಾದಿಗಳು ಫತ್ವಾ ಹೊರಡಿಸುವುದನ್ನು ನಾವು ಖಂಡಿಸುತ್ತೇವೆ. ಹಾಗೆಯೇ ಹಿಜಾಬ್ ಹಾಕಿದ ಕಾರಣಕ್ಕೆ ಕಾಲೇಜಿಗೆ ಬರಬಾರದು ಎಂದು ಕೋಮುವಾದಿಗಳು ಆಜ್ಞೆ ನೀಡಿದರೆ ಅದನ್ನೂ ನಾವು ತೀವ್ರವಾಗಿ ವಿರೋಧಿಸುತ್ತೇವೆ” ಎಂದು ಅದು ಹೇಳಿದೆ.

“ಈಗ ಇಲ್ಲಿ ನಡೆಯುತ್ತಿರುವುದು ಕೋಮುವಾದಿ ರಾಜಕಾರಣವಾಗಿರುವುದರಿಂದ ಅದನ್ನು ನಾಗರೀಕರೆಲ್ಲರೂ ಒಕ್ಕೊರಲಿನಿಂದ ಖಂಡಿಸಬೇಕು ಮತ್ತು ವಿದ್ಯಾರ್ಥಿನಿಯರ ಕಲಿಕೆಯ ಹಕ್ಕಿನ ಜೊತೆ ನಿಲ್ಲಬೇಕು. ತನ್ನ ಸೋಲುಗಳಿಂದ ಆಕ್ರೋಶಗೊಂಡಿರುವ ಜನಸಾಮಾನ್ಯರನ್ನು ದಿಕ್ಕುತಪ್ಪಿಸಲು ಕಾಲೇಜುಗಳಲ್ಲಿ ಬೆಂಕಿ ಹಚ್ಚುತ್ತಿರುವ ಬಿಜೆಪಿಯ ನೀಚ ತಂತ್ರಗಾರಿಕೆಯನ್ನು ಶಾಂತಿ-ಸಹಬಾಳ್ವೆಯ ತತ್ವದಲ್ಲಿ ನಂಬಿಕೆ ಇರುವ ಈ ನಾಡಿನ ಜನಸಾಮಾನ್ಯರು ಒಗ್ಗೂಡಿ ಸೋಲಿಸಬೇಕು” ಎಂದು ಕರ್ನಾಟಕ ಜನಶಕ್ತಿ ರಾಜ್ಯದ ಜನತೆಗೆ ಕರೆಕೊಟ್ಟಿದೆ.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...