ಮಾನ್ಸೂನ್ ಅಧಿವೇಶನಕ್ಕೆ ಮುಂಚಿತವಾಗಿ ಸರ್ವಪಕ್ಷ ಮುಖಂಡರ ಸಭೆ ಕರೆದ ಒಕ್ಕೂಟ ಸರ್ಕಾರ | Naanu Gauri
PC: UNI

ಸಂಸತ್ತಿನ ಮಾನ್ಸೂನ್ ಅಧಿವೇಶನಕ್ಕೆ ಮುಂಚಿತವಾಗಿ ಒಕ್ಕೂಟ ಸರ್ಕಾರ ಭಾನುವಾರದಂದು ಸರ್ವಪಕ್ಷ ಸಭೆ ಕರೆದಿದೆ. ಪ್ರಧಾನಿ ನರೇಂದ್ರ ಮೋದಿ ಈ ಸಭೆಗೆ ಹಾಜರಾಗುವ ಸಾಧ್ಯತೆ ಇದ್ದು, ರಾಜಕೀಯ ಪಕ್ಷಗಳ ಮುಖಂಡರನ್ನು ಆಹ್ವಾನಿಸಿದ್ದೇನೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಅಧಿವೇಶನದಲ್ಲಿ ಸದನದ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಇಂತಹ ಸಭೆಗಳನ್ನು ಕರೆಯಲಾಗುತ್ತದೆ. ಮಾನ್ಸೂನ್‌ ಅಧಿವೇಶನವು ಜುಲೈ 19 ರಂದು ಪ್ರಾರಂಭವಾಗುತ್ತದೆ ಮತ್ತು ಆಗಸ್ಟ್ 13 ರಂದು ಮುಕ್ತಾಯಗೊಳ್ಳಲಿದೆ.

ಮಾನ್ಸೂನ್ ಅಧಿವೇಶನದಲ್ಲಿ ಕೊರೊನಾ ಸಂಬಂಧಿತ ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗುವುದು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೋಮವಾರ ತಿಳಿಸಿದ್ದರು. ಕೊರೊನಾ ವೈರಸ್ ವಿರುದ್ಧ ಲಸಿಕೆ ನೀಡದವರು ಅಧಿವೇಶನದಲ್ಲಿ ಸಂಸತ್ತಿನ ಆವರಣಕ್ಕೆ ಪ್ರವೇಶಿಸುವ ಮೊದಲು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗುವಂತೆ ಕೋರಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜುಲೈ 19 ರಿಂದ ಮಾನ್ಸುನ್‌ ಅಧಿವೇಶನ; ಸಂಸತ್‌ ಬಳಿ ಪ್ರತಿಭಟನೆಗೆ ರೈತರು ಸಜ್ಜು!

ಸಂಸತ್ತಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಓಂ ಬಿರ್ಲಾ, 323 ಸಂಸದರು ಕೊರೊನಾ ವೈರಸ್ ವಿರುದ್ಧದ ಲಸಿಕೆಯನ್ನು ಸಂಪೂರ್ಣವಾಗಿ ಪಡೆದಿದ್ದು, 23 ಮಂದಿ ಕೆಲವು ವೈದ್ಯಕೀಯ ಕಾರಣಗಳಿಂದಾಗಿ ತಮ್ಮ ಲಸಿಕೆಯ ಮೊದಲ ಡೋಸ್‌ ಅನ್ನು ಕೂಡಾ ಪಡೆಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಉಭಯ ಸದನಗಳು ಏಕಕಾಲದಲ್ಲಿ ನಡೆಯಲಿದ್ದು, ಬೆಳಿಗ್ಗೆ 11 ರಿಂದ ಅಧಿವೇಶನ ಆರಂಭವಾಗಲಿದೆ.

ಈ ಮಧ್ಯೆ, ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ, 200 ಮಂದಿ ರೈತರು ಜುಲೈ 22 ರಿಂದ ಸಂಸತ್ ಭವನದ ಬಳಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಕಳೆದ ಶನಿವಾರ ಹೇಳಿದ್ದಾರೆ.

“ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾನೂನುಗಳ ಕುರಿತು ಚರ್ಚೆ ನಡೆಸಲು ಬಯಸಿದರೆ, ನಾವು ಮಾತುಕತೆಗೆ ಸಿದ್ಧರಿದ್ದೇವೆ. ಆದರೆ, ಮಾತುಕತೆ ನಡೆಯದಿದ್ದರೆ, ರೈತರ ಪರವಾಗಿ ನಿರ್ಧಾರ ಬರದಿದ್ದರೆ, ಜುಲೈ 22 ರಿಂದ 200 ಮಂದಿ ರೈತರು ಸಂಸತ್ತಿನ ಬಳಿ ಪ್ರತಿಭಟನೆ ನಡೆಸುತ್ತಾರೆ” ಎಂದು ಟಿಕಾಯತ್ ಹೇಳಿದ್ದಾರೆ.

ಇದನ್ನೂ ಓದಿ: ಸಂಪೂರ್ಣ ಅಸ್ತವ್ಯಸ್ಥ: ಕೋವಿಡ್ ಕುರಿತು ವಿಶೇಷ ಸಂಸತ್ ಅಧಿವೇಶನಕ್ಕೆ ಶಿವಸೇನೆ ಆಗ್ರಹ

“ಕೃಷಿ ಕಾನೂನುಗಳನ್ನು ಹಿಂಪಡೆಯದ ಸರ್ಕಾರ, ರೈತ ಪ್ರತಿಭಟನೆಯನ್ನು ಕೊನೆಗೊಳಿಸಲು ಹೇಳುತ್ತಿದ್ದಾರೆ. ರೈತರು 8 ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವುದು ಸರ್ಕಾರದ ಆದೇಶಗಳನ್ನು ಪಾಲಿಸಲು ಅಲ್ಲ. ಸರ್ಕಾರ ಮಾತನಾಡಲು ಬಯಸಿದರೆ, ರೈತರ ಜೊತೆಗೆ ಮಾತನಾಡಬಹುದು, ಆದರೆ ಯಾವುದೇ ಷರತ್ತು ವಿಧಿಸಬಾರದು” ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಕಳೆದ ವರ್ಷ ನವೆಂಬರ್‌ನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಸಂಘಟನೆಗಳ ಮುಖಂಡರು ಮತ್ತು ಸರ್ಕಾರದ ನಡುವೆ ಹತ್ತಕ್ಕೂ ಹೆಚ್ಚು ಸುತ್ತಿನ ಚರ್ಚೆಗಳು ನಡೆದಿವೆ, ಆದರೆ ಇಲ್ಲಿಯವರೆಗೂ ಸರ್ಕಾರದ ಯಾವುದೇ ಷರತ್ತುಗಳಿಗೂ ರೈತರು ಒಪ್ಪಿಲ್ಲ.

ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ, ಸಂಸತ್ತಿನ ಮೂರು ಅಧಿವೇಶನಗಳನ್ನು ಮೊಟಕುಗೊಳಿಸಲಾಗಿದ್ದು, ಕಳೆದ ವರ್ಷ ಚಳಿಗಾಲದ ಅಧಿವೇಶನವನ್ನು ರದ್ದುಗೊಳಿಸಲಾಯಿತು. ಸಾಮಾನ್ಯವಾಗಿ ಜುಲೈನಲ್ಲಿ ಪ್ರಾರಂಭವಾಗುವ ಮಾನ್ಸೂನ್ ಅಧಿವೇಶನವು ಸಾಂಕ್ರಾಮಿಕದಿಂದಾಗಿ ಕಳೆದ ವರ್ಷ ಸೆಪ್ಟೆಂಬರ್‌‌ನಲ್ಲಿ ಪ್ರಾರಂಭವಾಗಿತ್ತು.

ಇದನ್ನೂ ಓದಿ: ತಮಿಳುನಾಡು: ಕೃಷಿ ಕಾನೂನು ವಿರುದ್ಧ ವಿಶೇಷ ಅಧಿವೇಶನ ಕರೆಯುವಂತೆ ’ಸ್ಟಾಲಿನ್’ ಪತ್ರ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here