Homeಮುಖಪುಟಪ್ರಧಾನಿ ಮೋದಿ ಕಾರ್ಯಕ್ರಮದ ವರದಿಗೆ ಬರುವ ಪತ್ರಕರ್ತರಿಗೆ ‘ನಡತೆ ಪ್ರಮಾಣಪತ್ರ’ ಕೇಳಿದ ಸರ್ಕಾರ

ಪ್ರಧಾನಿ ಮೋದಿ ಕಾರ್ಯಕ್ರಮದ ವರದಿಗೆ ಬರುವ ಪತ್ರಕರ್ತರಿಗೆ ‘ನಡತೆ ಪ್ರಮಾಣಪತ್ರ’ ಕೇಳಿದ ಸರ್ಕಾರ

- Advertisement -
- Advertisement -

ಪ್ರಧಾನಿ ಮೋದಿ ಬುಧವಾರದಂದು ಹಿಮಾಚಲ ಪ್ರದೇಶಕ್ಕೆ ಪ್ರವಾಸ ಮಾಡುತ್ತಿದ್ದು, ಅವರ ಭೇಟಿಯನ್ನು ವರದಿ ಮಾಡಲು ಬರುವ ಪತ್ರಕರ್ತರ ಪಾಸ್‌ಗಳಿಗಾಗಿ “ನಡತೆ ಪ್ರಮಾಣಪತ್ರ”ವನ್ನು ಹಾಜರುಪಡಿಸುವಂತೆ ಎಲ್ಲಾ ಪತ್ರಕರ್ತರಿಗೆ ತಿಳಿಸಲಾಗಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಕಳೆದ ತಿಂಗಳ 24ರಂದು ಹವಾಮಾನ ವೈಪರೀತ್ಯದ ಕಾರಣಕ್ಕೆ ಹಿಮಾಚಲ ಪ್ರದೇಶದ ಅವರ ಪ್ರವಾಸ ರದ್ದುಗೊಂಡಿತ್ತು.

ಖಾಸಗಿ ಒಡೆತನದ ಮುದ್ರಣ, ಡಿಜಿಟಲ್ ಮತ್ತು ಸುದ್ದಿ ದೂರದರ್ಶನ ಪತ್ರಕರ್ತರು ಮಾತ್ರವಲ್ಲದೆ, ಆಲ್ ಇಂಡಿಯಾ ರೇಡಿಯೋ (AIR) ಮತ್ತು ದೂರದರ್ಶನ ಸೇರಿದಂತೆ ಸರ್ಕಾರಿ ಮಾಧ್ಯಮದ ಪ್ರತಿನಿಧಿಗಳು ಕೂಡಾ “ನಡತೆ ಪ್ರಮಾಣಪತ್ರ”ಗಳನ್ನು ತರಲು ಕೇಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವಿಷಯದ ಕುರಿತು ಸೆಪ್ಟೆಂಬರ್ 29, 2022 ರಂದು ಪೊಲೀಸರು ಅಧಿಕೃತ ಅಧಿಸೂಚನೆಯನ್ನು ಸಹ ಹೊರಡಿಸಿದ್ದಾರೆ.  ಪತ್ರಕರ್ತರಿಗೆ ನೀಡಲಾಗಿರುವ ವಿಚಿತ್ರ ಆದೇಶವು ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಎಲ್ಲಾ ಪತ್ರಿಕಾ ವರದಿಗಾರರು, ಛಾಯಾಗ್ರಾಹಕರು, ವೀಡಿಯೋಗ್ರಾಫರ್‌ಗಳು ಮತ್ತು ದೂರದರ್ಶನ ಮತ್ತು AIR ತಂಡಗಳ ಪಟ್ಟಿಯನ್ನು “ಅವರ ನಡತೆ ಪರಿಶೀಲನೆಯ ಪ್ರಮಾಣಪತ್ರ” ದೊಂದಿಗೆ ಪೂರೈಸಲು ಅಧಿಸೂಚನೆಯು ಜಿಲ್ಲಾ ಸಾರ್ವಜನಿಕ ಸಂಪರ್ಕ ಅಧಿಕಾರಿ (DPRO) ಅವರನ್ನು ಕೇಳಿದೆ.

ಇದನ್ನೂ ಓದಿ: 2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

“ನಡತೆ ಪರಿಶೀಲನೆಯ ಪ್ರಮಾಣಪತ್ರವನ್ನು ಅಕ್ಟೋಬರ್ 1, 2022 ರೊಳಗೆ ಉಪ ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ, ಬಿಲಾಸ್‌ಪುರ ಕಚೇರಿಗೆ ನೀಡಬೇಕು. ರ್‍ಯಾಲಿ ಅಥವಾ ಸಭೆಯೊಳಗೆ ಅವರ ಪ್ರವೇಶದ ಕಚೇರಿಯು ನಿರ್ಧರಿಸುತ್ತದೆ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪೊಲೀಸ್‌‌‌‌‌‌ ಅಧಿಸೂಚನೆಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಾರ್ಟಿ ವಕ್ತಾರ ಪಂಕಜ್ ಪಂಡಿತ್, “ಪತ್ರಿಕೋದ್ಯಮದಲ್ಲಿ ತನ್ನ 22 ವರ್ಷಗಳ ವೃತ್ತಿಜೀವನದಲ್ಲಿ, ಇದೀಗ ಮೊದಲ ಬಾರಿಗೆ ಇಂತಹ ವಿಲಕ್ಷಣ ಬೇಡಿಕೆಗೆ ಸಾಕ್ಷಿಯಾಗಿದ್ದೇನೆ” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಮೋದಿ ಅವರು ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿಲ್ಲ. ನಡತೆ ಪ್ರಮಾಣಪತ್ರವನ್ನು ನೀಡುವ ಬೇಡಿಕೆಯು ಅವಮಾನಕರ ಮತ್ತು ಮಾಧ್ಯಮದ ಚಟುವಟಿಕೆಗಳನ್ನು ತಡೆಯುವ ಪ್ರಯತ್ನವಾಗಿದೆ” ಎಂದು ಪಂಕಜ್‌ ಪಂಡಿತ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: 3 ಗಂಟೆಗಳ ಮೋದಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ 37 ಲಕ್ಷ ರೂ.ಗಳನ್ನು ಖರ್ಚು ಮಾಡಿದ್ದ ರಾಜ್ಯದ ಬೊಮ್ಮಾಯಿ ಸರ್ಕಾರ!

ಹಿಮಾಚಲ ಕಾಂಗ್ರೆಸ್ ಸಮಿತಿಯ ಮುಖ್ಯ ವಕ್ತಾರ ನರೇಶ್ ಚೌಹಾಣ್ ಕೂಡ ಸರ್ಕಾರದ ಬೇಡಿಕೆಯನ್ನು ಖಂಡಿಸಿದ್ದು, ಈ ನಡೆಯು ಮಾಧ್ಯಮ ಸ್ವಾತಂತ್ರ್ಯದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

“ಭದ್ರತಾ ಪಾಸ್‌ ಬೇಕೆಂದರೆ ನಡತೆ ಪ್ರಮಾಣಪತ್ರವು ಕಡ್ಡಾಯವಾಗಿದೆ. ಪತ್ರಕರ್ತರ ಡಿಜಿಟಲ್ ಐಡಿ ಕಾರ್ಡ್‌ಗಳ ಮೇಲೆ ಅಧಿಕೃತ ಮುದ್ರೆ ಹಾಕಬೇಕಿದೆ. ಈ ಔಪಚಾರಿಕತೆಯು ಎಲ್ಲರಿಗೂ ಕಡ್ಡಾಯವಾಗಿದೆ. ಎಸ್ಪಿ ಮತ್ತು ಸಿಐಡಿ ಇಲಾಖೆಗಳು ನಡತೆ ಪರಿಶೀಲನೆಯ ಪ್ರಮಾಣಪತ್ರಗಳನ್ನು ಕೇಳುತ್ತಿವೆ” ಎಂದು ಬಿಲಾಸ್‌‌ಪುರ್‌ ಡಿಪಿಆರ್‌‌ಒ ಕುಲದೀಪ್ ಗುಲೇರಿಯಾ ಹೇಳಿದ್ದಾರೆ.

ಪತ್ರಕರ್ತರಿಗೆ ನಡತೆ ದೃಢೀಕರಣದ ಪ್ರಮಾಣಪತ್ರಗಳನ್ನು ನೀಡುವಂತೆ ಕೇಳಿರುವ ಸರ್ಕಾರವು, ರ್‍ಯಾಲಿಯಲ್ಲಿ ಭಾಗವಹಿಸಲು ಬರುವ ಸಾವಿರಾರು ಜನರಿಗೆ ಯಾವುದೇ ಗುರುತಿನ ಪುರಾವೆಗಳನ್ನು ಕೇಳುತ್ತಿಲ್ಲ ಎಂದು ಪರ್ತಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸರ್ಕಾರದ ಪ್ರಕಾರ, ನಡತೆ ಪ್ರಮಾಣಪತ್ರ ಎಂದರೆ, ಆಡಳಿತ ಸರ್ಕಾರದ ಬೂಟು ನೆಕ್ಕುವುದಾಗಿದೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವನ್ಯಜೀವಿ ರಕ್ಷಣೆ ವಿಚಾರದಲ್ಲಿ ಮೋದಿ ಮಾಡುತ್ತಿರುವುದೇನು?- ಇದು ಚೀತಾ ಕಥೆಯಷ್ಟೇ ಅಲ್ಲ!

ಬುಧವಾರ ಪ್ರಧಾನಿ ಮೋದಿ ಇಡೀ ದಿನ ಹಿಮಾಚಲ ಪ್ರದೇಶದಲ್ಲಿ ಇರಲಿದ್ದಾರೆ. ಅವರು ರಾಜ್ಯದ ಬಿಲಾಸ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಜೊತೆಗೆ ಏಮ್ಸ್‌ನ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ ಹಾಗೂ ಕುಲು ದಸರಾ ಆಚರಣೆಯಲ್ಲೂ ಭಾಗವಹಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...