Homeಕರ್ನಾಟಕಕೆಲವೇ ಜನರ ಹಿತಾಸಕ್ತಿಯ ಇ-ಬೈಕ್‌‌‌‌ ಯೋಜನೆಯಿಂದ ಲಕ್ಷಾಂತರ ಚಾಲಕರ ಜೀವನಕ್ಕೆ ಧಕ್ಕೆ: NCTU ಆಕ್ರೋಶ

ಕೆಲವೇ ಜನರ ಹಿತಾಸಕ್ತಿಯ ಇ-ಬೈಕ್‌‌‌‌ ಯೋಜನೆಯಿಂದ ಲಕ್ಷಾಂತರ ಚಾಲಕರ ಜೀವನಕ್ಕೆ ಧಕ್ಕೆ: NCTU ಆಕ್ರೋಶ

- Advertisement -
- Advertisement -

ರಾಜ್ಯದಲ್ಲಿ ಶೀಘ್ರವೇ ಎಲೆಕ್ಟ್ರಿಕ್‌ ಬೈಕ್ (ಇ-ಬೈಕ್) ಟ್ಯಾಕ್ಸಿ ಸೇವೆಗಳು ಪ್ರಾರಂಭವಾಗಿಲಿದ್ದು, ಸಾರಿಗೆ ಇಲಾಖೆಯು ಅದರ ಕಾರ್ಯಾಚರಣೆಗೆ ಅನುಮೋದನೆ ನೀಡಲಿದೆ. ಆದರೆ ಇದಕ್ಕೆ ‘ನಮ್ಮ ಚಾಲಕರ ಟ್ರೇಡ್ ಯುನಿಯನ್(NCTU)’ ಆಕ್ಷೇಪ ವ್ಯಕ್ತಪಡಿಸಿದ್ದು, ಸರ್ಕಾರವು ಒಂದು ಅಥವಾ ಎರಡು ಸಂಸ್ಥೆಗಳ ಅನುಕೂಲಕ್ಕಾಗಿ ಇ-ಬೈಕ್‌ ಟ್ಯಾಕ್ಸಿ ಜಾರಿಗೆ ತರುವ ಮೂಲಕ ಲಕ್ಷಾಂತರ ಚಾಲಕರ ಜೀವನಕ್ಕೆ ಕೊಳ್ಳಿ ಇಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೆ ಬೈಕ್ ಟ್ಯಾಕ್ಸಿ ಚಾಲನೆಗೆ ಬಂದರೆ ಆಟೋ ಕ್ಯಾಬ್ ಹಾಗೂ ಬಿಎಂಟಿಸಿಗೆ ಹೊಡೆತ ಬೀಳುತ್ತದೆ ಎಂದು ಅದು ಹೇಳಿದೆ.

ಇ-ಬೈಕ್ ಟ್ಯಾಕ್ಸಿ ಪ್ರಾರಂಭವಾದರೆ ಚಾಲಕ ವೃತ್ತಿಯನ್ನೇ ನಂಬಿ ಸುಮಾರು ನಲವತ್ತು ವರ್ಷಗಳಿಂದ ದುಡಿಯುತ್ತಿರುವ ಹಿರಿಯ ಆಟೋ ಚಾಲಕರ ಪರಿಸ್ಥಿತಿ ಹೀನಾಯವಾಗುತ್ತದೆ. ಈಗಾಗಲೆ ಹಳ್ಳಿಗಳಲ್ಲಿ ಅಲ್ಪಸ್ವಲ್ಪ ಉಳಿದಂತಹ ಜಮಿನುಗಳನ್ನು, ಮನೆಗಳನ್ನು, ಮನೆಯ ಆಭರಣಗಳನ್ನು ಮಾರಿ ಅಥವಾ ಅಡ ಇಟ್ಟು ಸಾಲ ಮಾಡಿ ಕ್ಯಾಬ್‌ ಆಟೋ ಖರೀದಿ ಮಾಡಿ ಜೀವನ ನಡೆಸುತ್ತಿರುವವರ ಪರಿಸ್ಥಿತಿ ಏನಾಗಬಹುದು ಎಂದು ಯುನಿಯನ್ ಪ್ರಶ್ನಿಸಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಶೀಘ್ರದಲ್ಲೇ ‘ಇ-ಬೈಕ್ ಟ್ಯಾಕ್ಸಿ’ ಸೇವೆ ಪ್ರಾರಂಭ!

“ಚಾಲಕರು ಸುಮಾರು ಒಂದೂವರೆ ವರ್ಷಗಳಿಂದ ದುಡಿಮೆಯಿಲ್ಲದೆ EMI, ಇನ್ಶೂರೆನ್ಸ್ ,ಟ್ಯಾಕ್ಸ್‌ ಅನ್ನು ಕಟ್ಟಿದ್ದಾರೆ. ಕೋವಿಡ್ 1ನೇ ಅಲೆಯ ಸಮಯದಲ್ಲಿ ಮಾತ್ರ ಕೇವಲ 3 ತಿಂಗಳ EMI ಅನ್ನು ಮುಂದೂಡಲಾಗಿತ್ತು. ಆದರೆ ಅದರ ಬಡ್ಡಿಯನ್ನು ಸಹ ಕಡಿಮೆ ಮಾಡಿರಲಿಲ್ಲ. ಚಾಲಕರು ಕೊರೊನಾದಿಂದಾಗಿ ಕಂಗೆಟ್ಟು ಸುಮಾರು 2 ವರ್ಷಗಳಿಂದ ಸರಿಯಾದ ದುಡಿಮೆಯಿಲ್ಲದೆ ಸಾಲ ಮಾಡಿ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಇದೀಗ ಇ-ಬೈಕ್‌‌ ಟ್ಯಾಕ್ಸಿಯಿಂದ ಅವರ ಜೀವನ ಮತ್ತಷ್ಟು ಹದಗೆಡುತ್ತದೆ” ಎಂದು ಯುನಿಯನ್ ಆತಂಕ ವ್ಯಕ್ತಪಡಿಸಿದೆ.

“ಖಾಸಗಿ ಫೈನಾನ್ಸ್‌ನವರು ಚಾಲಕರಿಗೆ ಹಿಂಸೆ ನೀಡುತ್ತಾ ದಬ್ಬಾಳಿಕೆ ಮಾಡಿ EMI ವಸೂಲಿ ಮಾಡುತ್ತಿರುವುದನ್ನು ಅನೇಕ ಬಾರಿ ಸರಕಾರದ ಗಮನಕ್ಕೆ ತಂದಿದ್ದೆವು. ಆದರೂ ಸಹ ಅವರ ವಿರುದ್ಧ ಕ್ರಮ ಜರುಗಿಸದೇ ಇದ್ದುದರಿಂದ ಅನೇಕ ಚಾಲಕರು ಆತ್ಮಹತ್ಯೆಯ ದಾರಿ ಹಿಡಿದು ಅವರ ಕುಟುಂಬ ಸದಸ್ಯರು ಬೀದಿ ಪಾಲಾಗುವಂತಾಗಿದೆ. ಇದಕ್ಕೆಲ್ಲಾ ಈ ಸರ್ಕಾರವೇ ಹೊಣೆ. ಇದೀಗ ಒಂದು ಅಥವಾ ಎರಡು ಸಂಸ್ಥೆಗಳ ಅನುಕೂಲಕ್ಕಾಗಿ ಇ-ಬೈಕ್‌ ಟ್ಯಾಕ್ಸಿ ತರುವ ಮೂಲಕ ಲಕ್ಷಾಂತರ ಚಾಲಕರ ಜೀವನಕ್ಕೆ ಕೊಳ್ಳಿ ಇಡುವಂತಾಗಿದೆ” ಎಂದು ಯುನಿಯನ್ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸುದ್ದಿಯೇನೇ ಮನೋಲ್ಲಾಸಿನಿ; ಮಾಧ್ಯಮ ನಲ್ಲರು – ರಾಜಧಾನಿ ಎಂಬ ಮಾಯಾಮೋಹಿನಿ

ರಾಜ್ಯದಲ್ಲಿ ಶೀಘ್ರವೇ ಎಲೆಕ್ಟ್ರಿಕ್‌ ಬೈಕ್ (ಇ-ಬೈಕ್) ಟ್ಯಾಕ್ಸಿ ಸೇವೆಗಳು ಪ್ರಾರಂಭವಾಗಿಲಿದ್ದು, ಸಾರಿಗೆ ಇಲಾಖೆಯು ಅದರ ಕಾರ್ಯಾಚರಣೆಗೆ ಅನುಮೋದನೆ ನೀಡಲಿದೆ. ಅಧಿಕಾರಿಗಳ ಪ್ರಕಾರ, ಇ-ಬೈಕನ್ನು ಟ್ಯಾಕ್ಸಿಯಾಗಿ ನೋಂದಾಯಿಸಲು ವ್ಯಕ್ತಿಗಳಿಗೆ ಅವಕಾಶ ನೀಡಲು ಸರ್ಕಾರ ನಿರ್ಧರಿಸಿದೆ. ಇದರಂತೆ ವೈಯಕ್ತಿಕವಾಗಿ ಅಥವಾ ಒಂದು ಸಂಸ್ಥೆಯಾಗಿ ರಿಜಿಸ್ಟರ್‌ ಮಾಡಿ ಈ ಸೇವೆಯನ್ನು ನೀಡಬಹುದಾಗಿದೆ.

ಇ-ಬೈಕ್ ಟ್ಯಾಕ್ಸಿಗಳು ಆರಂಭದಲ್ಲಿ ಬೆಂಗಳೂರಿನಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತವೆ ಮತ್ತು ನಂತರ ರಾಜ್ಯದಾದ್ಯಂತ ಇತರ ನಗರ ಕೇಂದ್ರಗಳಿಗೆ ವಿಸ್ತರಿಸಲಾಗುವುದು ಎಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿತ್ತು.

ಇದನ್ನೂ ಓದಿ: ಟಿಎಸ್‌ಆರ್‌ಟಿಸಿ: ಸಂಜೆ 7: 30 ರ ನಂತರ ಮಹಿಳೆಯರು ಎಲ್ಲಾದರೂ ಬಸ್ಸು ಏರಬಹುದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...