Homeಕರ್ನಾಟಕಪಠ್ಯಪುಸ್ತಕ ‘ಚಕ್ರತೀರ್ಥ’ದಲ್ಲಿ ಒದ್ದಾಡುತ್ತಾ ಸರ್ಕಾರವನ್ನು ಪೇಚಿಗೆ ಸಿಲುಕಿಸಿದೆ: ನಾಡೋಜ ಹಂಪನಾ

ಪಠ್ಯಪುಸ್ತಕ ‘ಚಕ್ರತೀರ್ಥ’ದಲ್ಲಿ ಒದ್ದಾಡುತ್ತಾ ಸರ್ಕಾರವನ್ನು ಪೇಚಿಗೆ ಸಿಲುಕಿಸಿದೆ: ನಾಡೋಜ ಹಂಪನಾ

ಅನಾರೋಗ್ಯಕರ ಬೆಳವಣಿಗೆಗೆ ತಟಸ್ಥನಾಗಿರದೆ ಸರ್ಕಾರ ಕೂಡಲೇ ಕಾರ್ಯ ಪ್ರವೃತ್ತವಾಗಬೇಕೆಂದು ಅವರು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

- Advertisement -
- Advertisement -

ಪಠ್ಯಪುಸ್ತಕವು ವಿವಾದದ ಚಕ್ರತೀರ್ಥದಲ್ಲಿ ಒದ್ದಾಡುತ್ತಾ ಸರ್ಕಾರವನ್ನು ಪೇಚಿಗೆ ಸಿಲುಕಿಸಿದ್ದು, ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ತಳಮಳ ಉಂಟು ಮಾಡಿದೆ. ವ್ಯಕ್ತಿಗಳನ್ನು ಅನಗತ್ಯವಾಗಿ ನಿಂದಿಸುವ ಅಪಾಯಕಾರಿ ಪ್ರವೃತ್ತಿ ಹಬ್ಬುತ್ತಿದ್ದು, ಈ ಅನಾರೋಗ್ಯಕರ ಬೆಳವಣಿಗೆಗೆ ತಟಸ್ಥನಾಗಿರದೆ ಸರ್ಕಾರ ಕೂಡಲೇ ಕಾರ್ಯ ಪ್ರವೃತ್ತವಾಗಬೇಕೆಂದು ಹಿರಿಯ ಸಾಹಿತಿ, ನಾಡೋಜ ಡಾ. ಹಂಪ ನಾಗರಾಜಯ್ಯ ಅವರು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ಬಗ್ಗೆ ಹಂಪನಾ ಅವರು ಮಂಗಳವಾರ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದು, “ಶಾಲೆಗಳು ಅರಂಭವಾಗಿವೆ, ಆದರೆ ಪಠ್ಯಪುಸ್ತಕ ವಿವಾದದ ಚಕ್ರತೀರ್ಥದಲ್ಲಿ ಒದ್ದಾಡುತ್ತಾ ಸರ್ಕಾರವನ್ನು ಪೇಚಿಗೆ ಸಿಲುಕಿಸಿದೆ. ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ತಳಮಳವಾಗಿದೆ. ವ್ಯಕ್ತಿಗಳನ್ನು ಅನಗತ್ಯವಾಗಿ ನಿಂದಿಸುವ ಅಪಾಯಕಾರಿ ಪ್ರವೃತ್ತಿ ಹಬ್ಬುತ್ತಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕುವೆಂಪು ಕುರಿತು ಅವಹೇಳನಕಾರಿ ಬರೆಹಗಳು ಹರಿದಾಡುತ್ತಿದ್ದು, ದಿನದಿಂದ ದಿನಕ್ಕೆ ಪರ-ವಿರೋಧ ಚರ್ಚೆಗಳು ತೂಕ ತಪ್ಪಿ ಬಿಸಿ ಏರುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿ ಆಗುತ್ತಿರುವ ಈ ಅನಾರೋಗ್ಯಕರ ಬೆಳವಣಿಗೆಗೆ ತಟಸ್ಥನಾಗಿರದೆ ಸರ್ಕಾರ ಕೂಡಲೇ ಕಾರ್ಯ ಪ್ರವೃತ್ತವಾಗಬೇಕು” ಎಂದು ಅವರು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮಕ್ಕಳಿಗೆ ವಿಷ ಉಣಿಸಲಾಗುತ್ತಿದೆ: ಇಂತಹ ಪಠ್ಯದಲ್ಲಿ ನನ್ನ ಪಾಠ ಸೇರಿಸಬೇಡಿ- ಜಿ. ರಾಮಕೃಷ್ಣ

“ಭಿನ್ನಾಭಿಪ್ರಾಯಗಳು ಒಂದು ತಾರ್ಕಿಕ ಅಂತ್ಯ ಕಾಣುವವರೆಗೆ ಪಠ್ಯ ಪುಸ್ತಕ ಸಮಿತಿ ಸಿದ್ದಪಡಿಸಿರುವ ಹೊಸ ಪಠ್ಯವನ್ನು ತಡೆಹಿಡಿದು ಹಿಂದಿನ ಪಠ್ಯವನ್ನೇ ಮುಂದುವರೆಸುವಂತೆ ಸತ್ತೋಲೆಯನ್ನು ಸರ್ಕಾರ ತಕ್ಷಣವೇ ಹೊರಡಿಸಿ ಕಲುಷಿತ ವಾತಾವರಣವನ್ನು ತಿಳಿಗೊಳಿಸಬೇಕು” ಎಂದು ಹಂಪನಾ ಅವರು ಮುಖ್ಯಮಂತ್ರಿಯನ್ನು ವಿನಂತಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...