Homeಮುಖಪುಟಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಸರ್ಕಾರ ಚೆಲ್ಲಾಟವಾಡುತ್ತಿದೆ : ಕುಮಾರಸ್ವಾಮಿ

ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಸರ್ಕಾರ ಚೆಲ್ಲಾಟವಾಡುತ್ತಿದೆ : ಕುಮಾರಸ್ವಾಮಿ

- Advertisement -
- Advertisement -

ಪೂರ್ವ ಸಿದ್ಧತೆಗಳಿಲ್ಲದೇ ಜಾರಿ ಮಾಡಲಾದ ಲಾಕ್‌ಡೌನ್‌ಅನ್ನು ಈಗ ಮುನ್ನೆಚ್ಚರಿಕೆ ಇಲ್ಲದೇ ಸಡಿಲ ಮಾಡಲಾಗಿದೆ. ವಲಸೆ ಕಾರ್ಮಿಕರು ಊರಿಗೆ ಹೋಗಲು ಅವಕಾಶ ಮಾಡಿಕೊಟ್ಟಿರುವ ರಾಜ್ಯ ಸರ್ಕಾರ ಜನರು ಭಾರಿ ಪ್ರಮಾಣದಲ್ಲಿ ಗುಂಪುಗೂಡುವಂತೆ ಮಾಡಿದೆ. ಈ ಮೂಲಕ ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ವಿದೇಶದಿಂದ ಸೋಂಕು ಹೊತ್ತು ಬರುವವರನ್ನೆಲ್ಲ ಬರಮಾಡಿಕೊಂಡ ಸರ್ಕಾರ ಕೊನೆಗೆ ಪೂರ್ವ ಸಿದ್ಧತೆಗಳಿಲ್ಲದೇ, ಜನರಿಗೆ ಮಾಹಿತಿ ನೀಡದೇ ಲಾಕ್‌ಡೌನ್‌ ಜಾರಿ ಮಾಡಿತು. ಜನರೂ ಸರ್ಕಾರದ ನಿರ್ಧಾರವನ್ನು ಪಾಲಿಸಿದ್ದಾರೆ. ಹೀಗಾಗಿ ದೇಶ ಮತ್ತು ರಾಜ್ಯದಲ್ಲಿ ಕೋವಿಡ್‌ ಸಂಪೂರ್ಣ ನೀಗದೇ ಹೋದರೂ, ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾದ ತಪ್ಪಿದೆ ಎಂದಿದ್ದಾರೆ.

ಇಷ್ಟು ದಿನ ಸಾವಿರಾರು ಕೋಟಿ ರೂಪಾಯಿಗಳನ್ನು ನಷ್ಟ ಮಾಡಿಕೊಂಡು ಪಾಲಿಸಲಾದ ಲಾಕ್‌ಡೌನ್‌ನಿಂದ ಗಳಿಸಿಕೊಂಡಿದ್ದನ್ನು ಸರ್ಕಾರ ಒಂದು ಅವೈಜ್ಞಾನಿಕ ನಡೆಯಿಂದ ಕಳೆದುಕೊಳ್ಳಬಾರದು. ಕಾರ್ಮಿಕರು ಮತ್ತು ಹಳ್ಳಿಗಳು ಸೌಖ್ಯವಾಗಿರಬೇಕು. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನೂ ಕೈಗೊಳ್ಳಬೇಕು.

ಕಾರ್ಮಿಕರನ್ನು ಊರುಗಳಿಗೆ ತಲುಪಿಸುವುದು ಆಗಬೇಕಾದ ಕಾರ್ಯವೇ. ಆದರೆ, ಈ ಕಾರ್ಯದಲ್ಲಿ ಅವರ ಆರೋಗ್ಯಕ್ಕೆ ಅಪಾಯ ಎದುರಾಗಬಾರದು. ಅವರ ಹಿತಕ್ಕಾಗಿ ಕೈಗೊಂಡ ಈ ನಿರ್ಧಾರವೇ ಅವರಿಗೆ ಸಂಚಕಾರವಾಗಿ ಪರಿಣಮಿಸಬಾರದು. ಬಸ್‌ ಗಳಲ್ಲೂ ದೈಹಿಕ ಅಂತರ ಪಾಲನೆಯಾಗಲಿ, ಸೂಕ್ತ ರೀತಿಯ ಪರೀಕ್ಷೆಗಳು ನಡೆಯಲಿ ಎಂದು ಕುಮಾರಸ್ವಾಮಿಯವರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ! 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕರ್ನಾಟಕದಲ್ಲಿ ಮುಸ್ಲಿಮರು ರಸ್ತೆ ಮಧ್ಯೆ ಗೋಹತ್ಯೆ ಮಾಡಿದ್ದಾರೆ ಎಂಬುವುದು ಸುಳ್ಳು

0
"ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದವರು ರಸ್ತೆ ಮಧ್ಯೆಯೇ ಬಹಿರಂಗವಾಗಿ ಗೋಹತ್ಯೆ ಮಾಡಿದ್ದಾರೆ" ಎಂದು ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಜೀಪ್‌ ಒಂದರ ಮುಂಭಾಗದಲ್ಲಿ ಹಸುವಿನ ಕಳೇಬರ ಕಟ್ಟಿದಂತೆ ಕಾಣುತ್ತಿದೆ. ಫ್ಯಾಕ್ಟ್‌ಚೆಕ್ : ವಿಡಿಯೋದ ಸತ್ಯಾಸತ್ಯತೆಯನ್ನು ನಾವು...