Homeಕರೋನಾ ತಲ್ಲಣಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ

ಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ

ರಾಜ್ಯದಲ್ಲಿ ಕೊರೊನಾ ಜೊತೆಗೆ ಭ್ರಷ್ಟಾಚಾರವನ್ನು ಬಿಜೆಪಿ ಸರ್ಕಾರ ಹಂಚಿದೆ, ಕೊರೊನಾಕ್ಕಿಂತ ಬಿಜೆಪಿಯ ಭ್ರಷ್ಟಾಚಾರವೇ ದೊಡ್ಡ ರೋಗ.

- Advertisement -
- Advertisement -

ಕೊರೊನಾ ಸೋಂಕನ್ನು ನಿಭಾಯಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದು, ಕೊರೊನಾ ಸೋಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಪತ್ರಿಕಾಗೋಷ್ಠಿಯನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆಸಿದರು.

ಸರ್ಕಾರ ಜನರಿಗಾಗಿ ಮಾಡಿರುವ ಖರ್ಚಿನ ಲೆಕ್ಕ ಕೇಳಿದ್ದೇವೆ. ಈಗಾಗಲೇ ಸರ್ಕಾರ 4 ಸಾವಿರ ಕೋಟಿ ರೂ. ಖರ್ಚು ಮಾಡಿದ್ದು, ಅದರಲ್ಲಿ 2 ಸಾವಿರ ಕೋಟಿಯಷ್ಟು ಅವ್ಯವಹಾರ ನಡೆದಿದೆ ಎಂದು ಅವರು ಹೇಳಿದ್ದಾರೆ.

ಮುಖ್ಯಂತ್ರಿಯ ಕರೆಗೆ ಪಕ್ಷಭೇದ ಮರೆತು ಜನರ ಜೀವನ, ಜನರ ಬದುಕಿಗಾಗಿ ಎಲ್ಲ ಹಂತದಲ್ಲೂ ಸಹಕಾರ ನೀಡಿದ್ದೇವೆ. ಕೇವಲ ನಾಲ್ಕು ಗಂಟೆ ಅಂತರದಲ್ಲಿ ಲಾಕ್ ಡೌನ್ ಮಾಡಿದಿರಿ. ನಾವು 120 ದಿನ ಅದಕ್ಕೆ ಸಹಕಾರ ಕೊಟ್ಟಿದ್ದೇವೆ. ಆದರೆ ನೀವು ಕೊರೋನ ಪರಿಸ್ಥಿತಿಯಲ್ಲಿ ಹೆಣದ ಮೇಲೆ ಹಣ ಮಾಡಲು ಹೊರಟಿದ್ದೀರಲ್ಲಾ, ಇದನ್ನು ನೋಡಿಕೊಂಡು ನಾವು ಸುಮ್ಮನಿರಬೇಕೇ ಎಂದು ಶಿವಕುಮಾರ್ ಮುಖ್ಯಮಂತ್ರಿಗೆ ಪ್ರಶ್ನೆ ಹಾಕಿದ್ದಾರೆ.

8 ಸಚಿವರುಗಳು ಒಟ್ಟು ಒಂಬತ್ತು ಜನ ಸೇರಿ ಬೆಂಗಳೂರನ್ನು ಏನು ಮಾಡುತ್ತಿದ್ದಾರೆ? ಒಬ್ಬ ಮಂತ್ರಿಯೂ ಆಸ್ಪತ್ರೆಗೆ ಹೋಗಿ ರೋಗಿಯ ಜತೆ ಮಾತನಾಡಿ ಧೈರ್ಯ ತುಂಬಲಿಲ್ಲ. ವೈದ್ಯರಿಗೆ ಆತ್ಮಸ್ಥೈರ್ಯ ತುಂಬಲಿಲ್ಲ ಎಂದು ಅವರು ಆರೋಪಿದ್ದಾರೆ.

ಸೋಂಕಿತರು ತಾವೇ ಕಾಯಿಲೆ ತಂದುಕೊಂಳ್ಳಲಿಲ್ಲ, ಸರ್ಕಾರ ಅವರಿಗೆ ಕೊಟ್ಟಿದೆ. ಹೆಣಗಳನ್ನು ಯಾವ ರೀತಿ ಸಂಸ್ಕಾರ ಮಾಡಿದಿರಿ? ಇದುವೆ ದೇಶದ ಸಂಸ್ಕೃತಿ. ಇದೇನಾ ನಿಮ್ಮ ಸಂಸ್ಕೃತಿ? ಎಂದು ಅವರು ಕೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರಿಗೆ ಸೋಂಕು ಹಂಚಿದ್ದಲ್ಲದೇ ಭ್ರಷ್ಟಾಚಾರವನ್ನು ಹಂಚಿದೆ. ಸರ್ಕಾರಕ್ಕೆ ಪರಿಸ್ಥಿತಿ ಹೇಗೆ ನಿಭಾಯಿಸಬೇಕು, ರಾಜ್ಯವನ್ನು ಹೇಗೆ ಮುಂದೆ ತೆಗೆದುಕೊಂಡು ಹೋಗಬೇಕು ಎಂಬುದರ ಬಗ್ಗೆ ಒಂದು ಸ್ಪಷ್ಟ ದೂರದೃಷ್ಟಿ ಇಲ್ಲ. ಈ ಸರ್ಕಾರಕ್ಕೆ ದೂರದೃಷ್ಟಿ ಇಲ್ಲ, ಇರುವುದೆಲ್ಲ ಬರೀ ಭ್ರಷ್ಟಾಚಾರದ ದೃಷ್ಟಿ ಎಂದು ಕಿಡಿಕಾರಿದ್ದಾರೆ.

ಬಾಣಂತಿಯರು, ಮಕ್ಕಳ ಆಹಾರದ ಪ್ಯಾಕ್ ಮೇಲೆ ನಿಮ್ಮ ನಾಯಕರ ಫೋಟೋ ಹಾಕಿ ಅಕ್ರಮ ಮಾಡಿವರ ವಿರುದ್ಧ ಕೇಸ್ ಹಾಕಿದ್ದೀರಾ? ಒಬ್ಬರನ್ನಾದರೂ ಬಂಧಿಸಿದ್ದೀರಾ? ಆದರೂ ನಮ್ಮ ಸಹಕಾರ ಕೇಳುತ್ತಿದ್ದೀರಿ, ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ಕೇಳಿದರು.

ಕಾರ್ಮಿಕರಿಗೆ 1,200 ರೂಪಾಯಿಯ ಊಟ ಕೊಟ್ಟಿರುವುದಾಗಿ ಹೇಳುತ್ತೀರಲ್ಲಾ, ಯಾವ ಪಂಚತಾರಾ ಹೋಟೆಲ್ ನಿಂದ ತಂದು ಊಟ ಕೊಟ್ಟಿದ್ದೀರಿ ? ಎಷ್ಟು ಜನಕ್ಕೆ ಊಟ, ಮಾಸ್ಕ್, ಆಹಾರ ಕಿಟ್ ಕೊಟ್ಟಿದ್ದೀರಾ ಎಂದು ನೀವು ಲೆಕ್ಕ ಇಟ್ಟಿದ್ದೀರಾ? ಬರೀ ಲೂಟಿ ಮಾಡುವುದು ಬಿಟ್ಟರೆ ಬೇರೆ ಏನನ್ನೂ ಮಾಡಿಲ್ಲ. ಕಾರ್ಮಿಕರನ್ನು ನೀವು ನಡೆಸಿಕೊಂಡ ರೀತಿ ಹೇಗಿತ್ತು? ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೀರಾ ಎಂದು ಪ್ರಶ್ನಿಸಿದರು.

ಆರೋಗ್ಯ ಕ್ಷೇತ್ರದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಆರಂಭದ ಮೂರು ತಿಂಗಳುಗಳ ಒಂದು ಖಾಸಗಿ ಆಸ್ಪತ್ರೆಯವರನ್ನು ಕರೆದು ಮಾತನಾಡಲಿಲ್ಲ. ಪ್ರಕರಣ ಹೆಚ್ಚಾದ ಮೇಲೆ ಅವರನ್ನು ಕರೆದು ಮಾತನಾಡುತ್ತಿದ್ದೀರಿ. ಈಗ ನಿಮಗೆ ಕಾನೂನಿನ ಅರಿವಾಗಿ ಅವರನ್ನು ಬೆದರಿಸುತ್ತಿದ್ದೀರಿ. ಸರ್ವಪಕ್ಷ ಸಭೆಯಲ್ಲೇ ಖಾಸಗಿ ಆಸ್ಪತ್ರೆಗಳ ಜತೆ ಮಾತನಾಡಿ ಎಂದು ನಾವು ಹೇಳಿರಲಿಲ್ಲವೇ? ಎಂದು ರಾಜ್ಯ ಸರ್ಕಾರವನ್ನು ನೆನಪಿಸಿದ್ದಾರೆ.

ಕೊರೋನ ರೋಗಕ್ಕಿಂತ ರಾಜ್ಯಕ್ಕೆ ಬಿಜೆಪಿ ಭ್ರಷ್ಟಾಚಾರವೇ ದೊಡ್ಡ ರೋಗವಾಗಿದೆ. ರಾಜ್ಯದ ಪಾಲಿಗೆ ಬಿಜೆಪಿ ಸರ್ಕಾರ ದೊಡ್ಡ ಶಾಪವಾಗಿದೆ. ಮುಖ್ಯಮಂತ್ರಿಗಳು ಲಾಕ್‌ಡೌನ್ ಬೇಕಾಗಿಲ್ಲ ಎಂದು ಹೇಳುತ್ತಿದ್ದಾರೆ. ಮತ್ತೆ ಯಾಕೆ ಲಾಕ್ ಡೌನ್ ಮಾಡಿದ್ದೀರಿ? ಲಾಕ್‌ಡೌನ್ ಮಾಡಿ ಯಾವ ತಯಾರಿ ಮಾಡಿಕೊಂಡಿರಿ? ನಿಮ್ಮ ಕಾರ್ಯಯೋಜನೆ ಏನು? ಈ ಪರಿಸ್ಥಿತಿಯನ್ನು ನಿಭಾಯಿಸಲು ಯಾವ ಕಾರ್ಯತಂತ್ರ ಮಾಡುತ್ತೀರಿ ಎಂದು ಇಂದಿನವರೆಗೂ ಹೇಳಿಲ್ಲ. ಸರ್ಕಾರದ ನೀತಿಗಳು ನಿಶ್ಯಕ್ತವಾಗಿವೆ ಎಂದು ಹೇಳಿದರು.

ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದೇರಿ. ಕೇಂದ್ರ ಸರ್ಕಾರ ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್, ನೀವು ಘೋಷಿಸಿದ 1600 ಕೋಟಿ ಪ್ಯಾಕೇಜ್ ಎಲ್ಲವನ್ನೂ ಲೆಕ್ಕ ಕೊಡಿ. ಕೇಳುತ್ತಿರುವ ಪ್ರಶ್ನೆಗಳಿಗೆ ಸರ್ಕಾರ ಮಾಧ್ಯಮಗಳಿಗೆ, ರಾಜ್ಯದ ಜನರಿಗೆ, ಕಾರ್ಮಿಕರಿಗೆ ಉತ್ತರ ನೀಡಲಿ ಎಂದು ಅವರು ಆಗ್ರಹಿಸಿದರು.

ಸಿದ್ದರಾಮಯ್ಯ ಅವರಿಗೆ ಬಂದು ಲೆಕ್ಕ ನೋಡಿ ಅಂತಿರಲ್ಲಾ, ಸಾರ್ವಜನಿಕ ಲೆಕ್ಕ ಸಮಿತಿಯಲ್ಲಿ ಎಲ್ಲ ಪಕ್ಷದವರೂ ಇದ್ದಾರೆ. ಅವರಿಗೆ ಪರಿಶೀಲಿಸಲು ಅವಕಾಶ ನೀಡಿ. ನೀವು ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿದ್ದರೆ ಇವರಿಗೆ ತನಿಖೆಗೆ ಅವಕಾಶ ನೀಡಿ ಎಂದು ಒತ್ತಾಯಿಸಿದರು.

ಆಶಾ ಕಾರ್ಯಕರ್ತೆಯರು 16 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಇವರಿಗೆ 3 ಸಾವಿರ ರೂ. ಪ್ರೋತ್ಸಾಹ ಧನ ನೀಡುವುದಾಗಿ ಹೇಳಿದ್ದೀರಿ. 42 ಸಾವಿರ ಆಶಾ ಕಾರ್ಯಕರ್ತರಲ್ಲಿ ಶೇ.10 ರಷ್ಟು ಮಂದಿಗೆ ಪರಿಹಾರ ಕೊಟ್ಟಿಲ್ಲ. ಮೂರು ತಿಂಗಳು ಇವರು ತಮ್ಮ ಪ್ರಾಣ ಪಣಕ್ಕಿಟ್ಟು ಮನೆ ಮನೆಗೆ ಹೋಗಿ ನಿಮಗೆ ಮಾಹಿತಿ ಸಂಗ್ರಹಿಸಿಕೊಟ್ಟಿದ್ದರಲ್ಲ. ಅವರಿಗೆ ಚೆಕ್ ಬರೆದು ಕೊಡಲು ಏನು ಸಮಸ್ಯೆ? ಪೌರ ಕಾರ್ಮಿಕರಿಗೆ ವಿಮೆ ಕೊಟ್ಟಿದ್ದೀರಾ? ರೈತರಿಗೆ ಯಾವ ಮಾರುಕಟ್ಟೆ ಒದಗಿಸಿಕೊಟ್ಟಿರಿ? ಎಷ್ಟು ಬೆಳೆ ಖರೀದಿಸಿದಿರಿ? ಯಾರಿಗೆ ಕೊಟ್ಟಿದ್ದೀರಿ? ಎಂದು ಪ್ರಶ್ನೆ ಮಾಡಿದರು.

ಸರ್ಕಾರ 21 ದಿನಗಳಲ್ಲಿ ಕೊರೋನ ವಿರುದ್ಧ ಗೆಲ್ಲುತ್ತೇವೆ ಎಂದಿತ್ತು. ನಾವು ಕೂಡ ಅವರಿಗೆ ಸಹಕಾರ ಕೊಟ್ಟಿದ್ದೇವೆ. 121 ದಿನವಾಗಿದೆ, ಆದರೆ ಪರಿಹಾರ ಸಿಕ್ಕಿದೆಯೇ? ಪಿಪಿಇ ಕಿಟ್, ವೆಂಟಲೇಟರ್ ಸೇರಿ ಎಲ್ಲದರಲ್ಲೂ ಹಣ ಮಾಡಿದ ಸರ್ಕಾರ, ಈಗ ಹೆಣದ ಹೆಸರಲ್ಲೂ ಹಣ ಮಾಡಲು ನಿಂತಿದೆ. ದೇಶದಲ್ಲೇ ಕರ್ನಾಟಕವನ್ನು ಕಪ್ಪು ಚುಕ್ಕೆಯನ್ನಾಗಿ ಮಾಡಿದ್ದಾರೆ ಎಂದು ಡಿ. ಕೆ. ಶಿವಕುಮಾರ್‌ ತಿಳಿಸಿದ್ದಾರೆ.


ಓದಿ: ಕೊರೊನಾದಿಂದ ದೇವರೆ ಕಾಪಾಡುವುದಾದರೆ ನೀವು ಯಾಕೆ ? ರಾಜಿನಾಮೆ ಕೊಟ್ಟು ಹೋಗಿ: ಡಿ. ಕೆ. ಶಿವಕುಮಾರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...