Homeಮುಖಪುಟಕೊಲೆ ಪ್ರಕರಣದಲ್ಲಿ ಸರ್ಕಾರ ನನ್ನನ್ನು ಬಂಧಿಸಲು ಯತ್ನಿಸುತ್ತಿದೆ: ತಮಿಳುನಾಡು ಮಾಜಿ ಸಿಎಂ ಆರೋಪ

ಕೊಲೆ ಪ್ರಕರಣದಲ್ಲಿ ಸರ್ಕಾರ ನನ್ನನ್ನು ಬಂಧಿಸಲು ಯತ್ನಿಸುತ್ತಿದೆ: ತಮಿಳುನಾಡು ಮಾಜಿ ಸಿಎಂ ಆರೋಪ

- Advertisement -
- Advertisement -

ಕೊಡನಾಡು ಹತ್ಯೆ ಪ್ರಕರಣದಲ್ಲಿ ತನ್ನನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ತಮಿಳುನಾಡು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಬುಧವಾರ ಆರೋಪಿಸಿದ್ದಾರೆ. ವಿಧಾನಸಭೆ ಕಲಾಪ ಆರಂಭವಾಗುವ ಮುನ್ನವೇ ಪಳನಿಸ್ವಾಮಿ ಈ ವಿಷಯವನ್ನು ಪ್ರಸ್ತಾಪಿಸಿ, ಡಿಎಂಕೆ ಸರ್ಕಾರವನ್ನು ಖಂಡಿಸಿದ್ದಾರೆ.

ಎಐಎಡಿಎಂಕೆ ಶಾಸಕರು ಆಡಳಿತ ಪಕ್ಷದ ವಿರುದ್ದ ಸದನದಲ್ಲಿ ಪ್ರತಿಭಟನೆ ನಡೆಸಿದ್ದು, “ಸುಳ್ಳು ಪ್ರಕರಣಗಳನ್ನು ದಾಖಲಿಸಬೇಡಿ” “ಈ ಕ್ರಮವನ್ನು ನಾವು ಖಂಡಿಸುತ್ತೇವೆ” ಎಂಬ ಘೋಷಣಾ ಬಿತ್ತಿಪತ್ರಗಳನ್ನು ಪ್ರದರ್ಶಿಸಿ, ಸದನದಿಂದ ಹೊರನಡೆದ್ದಾರೆ.

ಇದನ್ನೂ ಓದಿ: ತಮಿಳುನಾಡು ಬಜೆಟ್ 2021: ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 3 ರೂಪಾಯಿ ಕಡಿತ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಎಂಕೆ ಸ್ಟಾಲಿನ್, “ಕೊಡನಾಡು ಕೊಲೆ ಮತ್ತು ದರೋಡೆ ಪ್ರಕರಣದಲ್ಲಿ ಸತ್ಯವನ್ನು ಹೊರಹಾಕುವುದು ಡಿಎಂಕೆ ಚುನಾವಣಾ ಸಮಯದಲ್ಲಿ ನೀಡಿರುವ ಭರವಸೆಗಳಲ್ಲಿ ಒಂದಾಗಿದೆ. ಇದನ್ನು ನ್ಯಾಯಾಲಯದ ಆದೇಶದ ಮೇರೆಗೆ ಮತ್ತು ಯಾವುದೇ ರಾಜಕೀಯ ಉದ್ದೇಶ ಅಥವಾ ದ್ವೇಷವಿಲ್ಲದೆ ಮಾಡಲಾಗುತ್ತಿದೆ. ಆದ್ದರಿಂದ ಈ ಬಗ್ಗೆ ಯಾರೂ ಭಯವನ್ನು ವ್ಯಕ್ತಪಡಿಸುವ ಅಗತ್ಯವಿಲ್ಲ. ನಮ್ಮ ಸರ್ಕಾರವು ಕೊಡನಾಡು ಪ್ರಕರಣದಲ್ಲಿ ಕಾನೂನಿನ ಪ್ರಕಾರ ನಡೆಯುತ್ತದೆ ಮತ್ತು ಅಪರಾಧಿಗಳನ್ನು ಪತ್ತೆ ಮಾಡುತ್ತದೆ” ಎಂದು ಹೇಳಿದ್ದಾರೆ.

ಹೊಸ ಶಿಕ್ಷಣ ನೀತಿ-2020 ಅನುಷ್ಠಾನ ಕುರಿತ ಕೇಂದ್ರದ ಸಭೆಯನ್ನು ಬಹಿಷ್ಕರಿಸಿದ ‘ಸ್ಟಾಲಿನ್’ ಸರ್ಕಾರ | NaanuGauri

ಪಿಎಂಕೆ ಪಕ್ಷದ ಶಾಸಕಾಂಗ ನಾಯಕ ಜಿಕೆ ಮಣಿ, ಸರ್ಕಾರವನ್ನು ಖಂಡಿಸಿ ತಮ್ಮ ಪಕ್ಷದ ಶಾಸಕರನ್ನು ಸದನದಿಂದ ಹೊರಗೆ ಕರೆದೊಯ್ದಿದ್ದಾರೆ. ಸರ್ಕಾರವು ಈ ನಡೆಯ ಮೂಲಕ ಅನಗತ್ಯ ‘ಭಯ’ವನ್ನು ಸೃಷ್ಟಿಸುತ್ತಿದೆ ಎಂದು ಬಿಜೆಪಿ ಶಾಸಕಾಂಗ ನಾಯಕ ನೈನಾರ್ ನಾಗೇಂದ್ರನ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, “ತಪ್ಪು ಮಾಡಿದವರು ಮಾತ್ರ ಭಯಪಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೇಕೆದಾಟು: ಕರ್ನಾಟಕದೊಂದಿಗೆ ಯಾವುದೇ ಮಾತುಕತೆಯಿಲ್ಲ, ಕೇಂದ್ರದ ಭರವಸೆಯಿದೆ ಎಂದ ತಮಿಳುನಾಡು ಸಿಎಂ

ವಿಧಾನಸಭೆಯಿಂದ ಹೊರನಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಳನಿಸ್ವಾಮಿ, ಡಿಎಂಕೆ ಸರ್ಕಾರವು ನನ್ನನ್ನು ಬಂಧಿಸುವ ಉದ್ದೇಶದಿಂದ ಪ್ರಕರಣವನ್ನು ಮರು ತನಿಖೆ ನಡೆಸುತ್ತಿದೆ. ಈ ಪ್ರಕರಣದ ಆರೋಪಿಗಳ ಪರವಾಗಿ ಹಾಜರಾದ ಕೆಲವು ವಕೀಲರು ಈಗ ಸರ್ಕಾರಿ ಅರ್ಜಿದಾರರಾಗಿದ್ದಾರೆ. ಅಲ್ಲದೆ ಡಿಎಂಕೆಯ ವಕೀಲರು ಕೊಲೆ ಪ್ರಕರಣದ ಕೆಲವು ಆರೋಪಿಗಳ ಪರವಾಗಿ ಹಾಜರಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಡಿಎಂಕೆ ಸರ್ಕಾರವು ಪ್ರಮುಖ ಆರೋಪಿಯ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದು, ಈ ಪ್ರಕರಣವನ್ನು ಬಳಸಿಕೊಂಡು, ನಮ್ಮ ಪಕ್ಷವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಆದರೆ ಎಐಎಡಿಎಂಕೆ ಅನ್ನು ಹತ್ತಿಕ್ಕಲು ಅವರಿಗೆ ಸಾಧ್ಯವಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನಿವಾಸದಲ್ಲಿ ನಡೆದ ಭದ್ರತಾ ಸಿಬ್ಬಂದಿಯ ಕೊಲೆಯ ಪ್ರಕರಣವಾಗಿದೆ ಕೊಡನಾಡು ಪ್ರಕರಣ. ಏಪ್ರಿಲ್ 23, 2017 ರಂದು 10 ಜನರ ತಂಡವೊಂದು ಭದ್ರತಾ ಸಿಬ್ಬಂದಿಯನ್ನು ಕೊಲೆ ಮಾಡಿ ದರೋಡೆ ನಡೆಸಿತ್ತು. ನೀಲಗಿರಿ ಪೊಲೀಸರು ಸೋಮವಾರವಷ್ಟೇ ಹತ್ಯೆಯ ಪ್ರಮುಖ ಆರೋಪಿ ಕೆವಿ ಸಾಯನ್‌ಗೆ ಹೊಸ ಸಮನ್ಸ್ ಜಾರಿ ಮಾಡಿದೆ.

ಇದನ್ನೂ ಓದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ‘ಅಣ್ಣಾಮಲೈ’ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...