Homeಕರ್ನಾಟಕಶಾಸಕರ ಭತ್ಯೆ ತುರ್ತಾಗಿ ಹೆಚ್ಚಿಸುವ ಸರ್ಕಾರ, ಬಡ ಮಕ್ಕಳಿಗೆ ಶೂ ನೀಡಲು ಮೀನಮೇಷ ಎಣಿಸುತ್ತಿದೆ: ಎಐಡಿಎಸ್ಓ...

ಶಾಸಕರ ಭತ್ಯೆ ತುರ್ತಾಗಿ ಹೆಚ್ಚಿಸುವ ಸರ್ಕಾರ, ಬಡ ಮಕ್ಕಳಿಗೆ ಶೂ ನೀಡಲು ಮೀನಮೇಷ ಎಣಿಸುತ್ತಿದೆ: ಎಐಡಿಎಸ್ಓ ಆಕ್ರೋಶ

- Advertisement -
- Advertisement -

ಮೇ 29ರಿಂದ 2025-26ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಆರಂಭವಾದರೂ ಇಲ್ಲಿಯವರೆಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ಗಳನ್ನು ವಿತರಿಸದ ರಾಜ್ಯ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿ ಸಂಘಟನೆ ಎಐಡಿಎಸ್ಓ ಕರ್ನಾಟಕ ರಾಜ್ಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದ್ದು, “ಶಾಸಕರ ಭತ್ಯೆಯನ್ನು ತುರ್ತಾಗಿ ಹೆಚ್ಚಿಸಿಕೊಳ್ಳುವ ಸರ್ಕಾರ, ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಶೂ ನೀಡಲು ಮೀನಮೇಷ ಎಣಿಸಿದೆ” ಎಂದು ಹೇಳಿದೆ. ಶಾಸಕರ ಭತ್ಯೆ ತುರ್ತಾಗಿ

ಈ ಬಗ್ಗೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಎಐಡಿಎಸ್‌ಒ, “ವಿದ್ಯಾರ್ಥಿಗಳು ಕಳೆದ ವರ್ಷ ನೀಡಲಾಗಿದ್ದ ಹಳೆಯ ಶೂ ಮತ್ತು ಸಾಕ್ಸ್ ಧರಿಸಿ ಶಾಲೆಗೆ ಬರುವಂತಾಗಿದೆ. ಹಳೆಯ ಶೂ ಹರಿದು ಹೋದ ವಿದ್ಯಾರ್ಥಿಗಳು ಚಪ್ಪಲಿ ಧರಿಸಿ ಅಥವಾ ಬರಿಗಾಲಲ್ಲಿ ಶಾಲೆಗೆ ಬರುವ ಪರಿಸ್ಥಿತಿ ಎದುರಾಗಿದೆ. ಈ ವರ್ಷ ಎಲ್ಲೆಡೆ ಅಧಿಕ ಮಳೆಯಾಗುತ್ತಿದ್ದು, ಶೂಗಳಿಲ್ಲದೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ” ಎಂದು ಹೇಳಿದೆ.

“ಸರ್ಕಾರದಿಂದ ಹಣ ಮಂಜೂರಾಗದಿರುವುದೇ ಇದಕ್ಕೆ ಕಾರಣ ಎಂಬುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಸರ್ಕಾರವು ತನ್ನ ಈ ವಿಳಂಬ ಧೋರಣೆಯನ್ನು ಕೈಬಿಟ್ಟು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕೂಡಲೇ ಶೂ, ಸಾಕ್ಸ್ ಖರೀದಿಸಿ ವಿತರಿಸಬೇಕು” ಎಂದು ಎಐಡಿಎಸ್ಓ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.

ಶೂ ಮತ್ತು ಸಾಕ್ಸ್ ವಿತರಣೆಗೆ ಸಂಬಂಧಿಸಿದ ನಿರ್ದಿಷ್ಟ ಆದೇಶಗಳು ಅಥವಾ ಗುತ್ತಿಗೆ ಪ್ರಕ್ರಿಯೆಯ ವಿಳಂಬದಿಂದಾಗಿ ಈ ತೊಂದರೆ ಎದುರಾಗಿದೆ ಎಂದು ಮಾಧ್ಯಮ ವರದಿಗಳು ಉಲ್ಲೇಖಿಸಿವೆ. 2024-25ರ ಶೈಕ್ಷಣಿಕ ವರ್ಷದಲ್ಲಿ, ಶೂ ಮತ್ತು ಸಾಕ್ಸ್ ವಿತರಣೆಯ ಗುಣಮಟ್ಟದ ಕುರಿತು ದೂರುಗಳು ಬಂದಿದ್ದವು, ಇದರಿಂದಾಗಿ ಒಪ್ಪಂದದ ಪರಿಷ್ಕರಣೆ ಅಥವಾ ಹೊಸ ಗುತ್ತಿಗೆ ಪ್ರಕ್ರಿಯೆಯ ವಿಳಂಬವಾಗಿರಬಹುದು ಎನ್ನಲಾಗುತ್ತಿವೆ. ಶಾಸಕರ ಭತ್ಯೆ ತುರ್ತಾಗಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ಮುಸ್ಲಿಂ ನಿಯೋಗಗಳಿಂದ ವಕ್ಫ್ ಕಾಯಿದೆ ರದ್ದತಿಗೆ ಒತ್ತಾಯಿಸಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ

ಮುಸ್ಲಿಂ ನಿಯೋಗಗಳಿಂದ ವಕ್ಫ್ ಕಾಯಿದೆ ರದ್ದತಿಗೆ ಒತ್ತಾಯಿಸಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. After taking over this Government unnecessarily creating problems which are not existing. First they will create problems and They are acting they will solve this.

  2. No pension for govt employees since 2004. But salary and pension and other benifits are given to politicians such as MP. MLA. Etc for their five years social services.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...