Homeಚಳವಳಿರೈತ ಹೋರಾಟದ ತೀವ್ರ ಒತ್ತಡಕ್ಕೆ ಸಿಲುಕಿದ ಹರಿಯಾಣ ಸರ್ಕಾರ; ಎಲ್ಲ ಶಾಸಕರು ದೆಹಲಿಗೆ ದೌಡು

ರೈತ ಹೋರಾಟದ ತೀವ್ರ ಒತ್ತಡಕ್ಕೆ ಸಿಲುಕಿದ ಹರಿಯಾಣ ಸರ್ಕಾರ; ಎಲ್ಲ ಶಾಸಕರು ದೆಹಲಿಗೆ ದೌಡು

ರೈತರ ಆಂದೋಲನ ಬಲಗೊಳ್ಳುತ್ತಿದ್ದಂತೆ ಸಚಿವರು ಮತ್ತು ಶಾಸಕರಿಗೆ ಹಳ್ಳಿಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸುವುದು ಕಷ್ಟಕರವಾಗಿದೆ.

- Advertisement -
- Advertisement -

ಭಾನುವಾರ ಪ್ರತಿಭಟನಾ ನಿರತ ರೈತರು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ “ಕಿಸಾನ್ ಮಹಾಪಂಚಾಯತ್” ಸಭೆ ನಡೆಯುವ ಸ್ಥಳಕ್ಕೆ ಆಗಮಿಸಿ ವೇದಿಕೆಯನ್ನು ಪುಡಿಗಟ್ಟಿದ್ದರು. ಇದರಂದ ತೀವ್ರ ಒತ್ತಡಕ್ಕೆ ಒಳಗಾಗಿರುವ ಖಟ್ಟರ್ ಮತ್ತು ಉಪಮುಖ್ಯಮಂತ್ರಿ ದುಶ್ಯಂತ್ ಚೌತಲಾ ಸೇರಿದಂತೆ ಬಿಜೆಪಿ-ಜೆಜೆಪಿ ಮೈತ್ರಿಕೂಟದ ಉನ್ನತ ನಾಯಕರು ರಾಜ್ಯದ ರಾಜಕೀಯ ಸನ್ನಿವೇಶದ ಕುರಿತು ಚರ್ಚೆ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ಸಿದ್ಧತೆ ನಡೆಸಿದ್ದಾರೆ.

ಸಭೆಯು ನವದೆಹಲಿಯಲ್ಲಿ ಮಂಗಳವಾರ(ಇಂದು) ನಡೆಯಲಿದೆ. ಆದರೆ ಅದಕ್ಕೂ ಮುನ್ನ ದುಶ್ಯಂತ್ ಚೌತಾಲಾ ಜೆಜೆಪಿ ಶಾಸಕರೊಂದಿಗೆ ದೆಹಲಿಯ ತಮ್ಮ ತೋಟದ ಮನೆಯಲ್ಲಿ ಸಭೆ ನಡೆಸಲಿದ್ದಾರೆ. ಎಲ್ಲಾ ಜೆಜೆಪಿ ಶಾಸಕರಿಗೆ ಮಂಗಳವಾರ ರಾಜಧಾನಿಗೆ ಬರಲು ತಿಳಿಸಲಾಗಿದೆ.

ಕಳೆದ ಒಂದೂವರೆ ತಿಂಗಳಿನಿಂದ ಹರಿಯಾಣ ರಾಜಕೀಯದಲ್ಲಿ ರೈತರ ಆಂದೋಲನ ಮೇಲುಗೈ ಸಾಧಿಸುತ್ತಿದೆ. ಸರ್ಕಾರದ ಮೇಲೆ ಹೆಚ್ಚುತ್ತಿರುವ ಒತ್ತಡದ ಮಧ್ಯೆ ಶಾಸಕರನ್ನು ಮೈತ್ರಿಕೂಟದಲ್ಲಿ ಉಳಿಸಿಕೊಳ್ಳುವ ಪ್ರಯತ್ನವಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ವೇದಿಕೆಗೆ ನುಗ್ಗಿ ಕೃಷಿ ಕಾಯ್ದೆಗಳ ವಿರುದ್ಧ ಧಿಕ್ಕಾರ ಕೂಗಿದ ರೈತರು: ಬೆದರಿ ರೈತ ಕಾರ್ಯಕ್ರಮ ರದ್ದುಗೊಳಿಸಿದ ಹರಿಯಾಣ ಸಿಎಂ

ಸೋಮವಾರದಂದು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಹೂಡಾ ಆಡಳಿತರೂಢ ಒಕ್ಕೂಟದ ಹಲವಾರು ಶಾಸಕರು ಒಕ್ಕೂಟವನ್ನು ತ್ಯಜಿಸಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಮಧ್ಯೆ ಈ ಸಭೆ ನಡೆಯುತ್ತಿದೆ. 90 ಸದಸ್ಯ ಬಲವಿರುವ ಹರಿಯಾಣ ವಿಧಾನಸಭೆಯಲ್ಲಿ ಬಿಜೆಪಿಗೆ 40 ಸ್ಥಾನಗಳಿದ್ದರೆ, ಜೆಜೆಪಿಯಲ್ಲಿ 10 ಶಾಸಕರಿದ್ದಾರೆ. ಅಲ್ಲದೆ ಏಳು ಪಕ್ಷೇತರ ಶಾಸಕರಲ್ಲಿ ಐವರು ಸರ್ಕಾರದ ಪರವಾಗಿದ್ದಾರೆ.

ರೈತರ ಆಂದೋಲನ ಬಲಗೊಳ್ಳುತ್ತಿದ್ದಂತೆ ಸಚಿವರು ಮತ್ತು ಶಾಸಕರಿಗೆ ಹಳ್ಳಿಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸುವುದು ಕಷ್ಟಕರವಾಗಿದೆ. ರೈತರು ಕಪ್ಪು ಧ್ವಜಗಳನ್ನು ಪ್ರದರ್ಶನ ಮಾಡುವುದು, ವಾಹನಗಳನ್ನು ಬೆನ್ನಟ್ಟುವುದು, ಹೆಲಿಪ್ಯಾಡ್‌ಗಳಿಗೆ ಹಾನಿ ಮಾಡುವುದು ಸೇರಿದಂತೆ ಅಂತಹ ಸಭೆಗಳ ವಿರುದ್ದ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಭಾನುವಾರ ಕರ್ನಾಲ್ ಗ್ರಾಮದಲ್ಲಿ ಯಾವುದೇ ತೊಂದರೆಯಾಗದಂತೆ ಸಭೆ ನಡೆಯಲು ಸರ್ಕಾರಿ ಯಂತ್ರಾಂಗದ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಅಲ್ಲಿಗೆ ರೈತರು ನುಗ್ಗಿ ವೇದಿಕೆಯನ್ನು ಪುಡಿಗಟ್ಟಿರುವುದುರಿಂದ ಸರ್ಕಾರವು ಆತಂಕಕ್ಕೊಳಗಾಗಿದೆ.

ಇದನ್ನೂ ಓದಿ: ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ರಾಜ್ಯದಲ್ಲಿ ನಡೆದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಬಿಜೆಪಿ-ಜೆಜೆಪಿ ನಾಯಕರು ಕೇಂದ್ರ ಗೃಹ ಸಚಿವರಿಗೆ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಖಟ್ಟರ್ ಮತ್ತು ದುಶ್ಯಂತ್ ಅವರಲ್ಲದೆ, ರಾಜ್ಯ ಬಿಜೆಪಿ ಅಧ್ಯಕ್ಷ ಓಂ ಪ್ರಕಾಶ್ ಧಂಕರ್, ರಾಜ್ಯ ಶಿಕ್ಷಣ ಸಚಿವ ಕನ್ವರ್ ಪಾಲ್ ಗುಜ್ಜರ್ ಮತ್ತು ಜೆಜೆಪಿ ರಾಜ್ಯ ಅಧ್ಯಕ್ಷ ನಿಶಾನ್ ಸಿಂಗ್ ಅವರು ನಿಯೋಗದಲ್ಲಿ ಇರಲಿದ್ದಾರೆ ಎಂದು ಅದು ವರದಿ ಮಾಡಿದೆ.

ನಿನ್ನೆಯಷ್ಟೇ, ಪಕ್ಷೇತರ ಶಾಸಕ ರಾಜ್ಯ ವಿದ್ಯುತ್ ಸಚಿವ ರಂಜಿತ್ ಚೌತಾಲಾ ಅವರ ನಿವಾಸದಲ್ಲಿ ಮೈತ್ರಿ ಸರ್ಕಾರವನ್ನು ಬೆಂಬಲಿಸುವ ಐದು ಪಕ್ಷೇತರ ಶಾಸಕರೊಂದಿಗೆ ಮುಖ್ಯಮಂತ್ರಿ ಸಂವಾದ ನಡೆಸಿದ್ದರು.

ಈ ಮಧ್ಯೆ ಐಎನ್ಎಲ್ಡಿ ನಾಯಕ ಅಭಯ್ ಚೌತಲಾ ಸೋಮವಾರ ವಿಧಾನಸಭೆ ಸ್ಪೀಕರ್‌ಗೆ ಪತ್ರವೊಂದನ್ನು ಬರೆದು, ಜನವರಿ 26 ರೊಳಗೆ ಸರ್ಕಾರವು ಮೂರು ಕರಾಳ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳದಿದ್ದರೆ ಈ ಪತ್ರವನ್ನೇ ರಾಜೀನಾಮೆ ಎಂದು ಪರಿಗಣಿಸುವಂತೆ ಕೇಳಿಕೊಂಡಿದ್ದಾರೆ. ತಮ್ಮನ್ನು ತಾವು ರೈತ ನಾಯಕ ಎಂದು ಬಿಂಬಿಸಿಕೊಳ್ಳುವ ಉಪಮುಖ್ಯಮಂತ್ರಿ ದುಶ್ಯಂತ್ ಚೌತಾಲಾ ಅವರಿಗೆ ಈ ರಾಜಿನಾಮೆ ಪತ್ರವು ಹೆಚ್ಚಿನ ಒತ್ತಡವನ್ನು ಉಂಟುಮಾಡಿದೆ.

ಇದನ್ನೂ ಓದಿ: ಕೃಷಿ ಕಾನೂನುಗಳನ್ನು ರದ್ದು ಪಡಿಸದಿದ್ದರೆ ರಾಜಿನಾಮೆ ನೀಡುತ್ತೇನೆ: ಹರಿಯಾಣ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...