Homeಮುಖಪುಟಕೃಷಿ ಮಸೂದೆ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕೇರಳ ಸರ್ಕಾರ

ಕೃಷಿ ಮಸೂದೆ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕೇರಳ ಸರ್ಕಾರ

- Advertisement -
- Advertisement -

ವಿವಾದಾತ್ಮಕ ಕೃಷಿ ಸುಗ್ರೀವಾಜ್ಞೆಗಳ ಅಂಗೀಕಾರದ ವಿರುದ್ಧ ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರ ಸುಪ್ರೀಂಕೋರ್ಟ್ ಮೇಟ್ಟಿಲೇರಲು ನಿರ್ಧರಿಸಿದೆ. ಕೇಂದ್ರ ಸರ್ಕಾರದ ಈ ಕ್ರಮವು ಒಕ್ಕೂಟ ವ್ಯವಸ್ಥೆಯನ್ನು ಉಲ್ಲಂಘಿಸಿದೆ ಎಂದು ಕೇರಳ ಸರ್ಕಾರ ಆರೋಪಿಸಿದೆ.

ಕೇರಳ ರಾಜ್ಯ ಕೃಷಿ ಸಚಿವ ವಿ.ಎಸ್.ಸುನೀಲ್ ಕುಮಾರ್ ಈ ಕಾಯ್ದೆಗಳನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುವ ಕುರಿತು ಕಾನೂನು ಸಲಹೆ ಪಡೆದಿದ್ದರು. ನಂತರ ರಾಜ್ಯ ಸಚಿವ ಸಂಪುಟದಲ್ಲಿ ಚರ್ಚಿಸಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ

“ಸಂವಿಧಾನದ ಏಳನೇ ಶೆಡ್ಯೂಲ್ ಪ್ರಕಾರ ಕೃಷಿ ರಾಜ್ಯ ಪಟ್ಟಿಗೆ ಸೇರುತ್ತದೆ. ಆದರೆ ಈ ಮಸೂದೆಗಳನ್ನು ತರುವ ಮೊದಲು ಒಂದೇ ಒಂದು ರಾಜ್ಯವನ್ನು ಕೇಂದ್ರ ಸರ್ಕಾರ ಸಂಪರ್ಕಿಸಿಲ್ಲ. ಈ ಮಸೂದೆಗಳು ದೊಡ್ಡ ದೊಡ್ಡ ಕಾರ್ಪೋರೇಟ್‌ಗಳಿಗೆ ಮಾತ್ರ ಪ್ರಯೋಜನವನ್ನು ನೀಡುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಕೃಷಿ ಸಚಿವ ವಿ.ಎಸ್.ಸುನೀಲ್ ಕುಮಾರ್ ಹೇಳಿದ್ದಾರೆ.

PC: Mathrubhumi English (ಕೇರಳ ಕೃಷಿ ಸಚಿವ ಎಸ್‌.ವಿ.ಸುನೀಲ್ ಕುಮಾರ್‌)

“ದೇಶಾದ್ಯಂತ ಲಕ್ಷಾಂತರ ರೈತರು ಶೋಚನೀಯ ಜೀವನ ನಡೆಸುತ್ತಿದ್ದಾರೆ ಮತ್ತು ಅನೇಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಂಕ್ರಾಮಿಕ ರೋಗದಿಂದ ತತ್ತರಿಸಿದ್ದಾರೆ ಇಂತಹ ಸ್ಥಿತಿಯಲ್ಲಿ ಮೋದಿ ಸರ್ಕಾರ ಸುಧಾರಣೆಗಳ ಹೆಸರಿನಲ್ಲಿ ಹೊಸ ನೀತಿಗಳನ್ನು ತಂದಿದೆ. ಆದರೆ ಈ ಹೊಸ ನೀತಿಗಳು ದೊಡ್ಡ ಕೃಷಿ ಸಂಸ್ಥೆಗಳ ಹಿತಾಸಕ್ತಿಗಳನ್ನು ಮಾತ್ರ ಪೂರೈಸುತ್ತವೆ” ಎಂದು ಸಚಿವರು ಹೇಳಿದ್ದಾರೆ.

ಕೇರಳವು ಕೃಷಿ ರಾಜ್ಯವಲ್ಲದಿದ್ದರೂ, ಸೆಪ್ಟೆಂಬರ್ 25 ರಂದು ರೈತ ಸಂಘಟನೆಗಳು ನೀಡಿರುವ ರಾಷ್ಟ್ರವ್ಯಾಪಿ ಬಂದ್‌ಗೆ ತಮ್ಮ ಬೆಂಬಲವನ್ನು ನೀಡಿದೆ. ಜೊತೆಗೆ ರಾಜ್ಯಸಭೆಯಲ್ಲಿ ಕೃಷಿ ಮಸೂದೆಗಳನ್ನು ವಿರೋಧಿಸಿ ಗದ್ದಲ ನಡೆಸಿದ್ದಕ್ಕಾಗಿ ರಾಜ್ಯಸಭಾ ಸಂಸದರಾದ ಕೆ.ಕೆ. ರಾಗೇಶ್ ಮತ್ತು ಎಲಮಾರೋಮ್ ಕರೀಮ್ ಅಮಾನತುಗೊಂಡಿದ್ದಾರೆ. ಸದ್ಯ ಕೇರಳ ಸರ್ಕಾರ ಮಸೂದೆಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಲಿದೆ.


ಇದನ್ನೂ ಓದಿ: ಮೂರು ಬೇಡಿಕೆಗಳ ಈಡೇರಿಕೆಗೆ ಪಟ್ಟು: ಪ್ರತಿಪಕ್ಷಗಳಿಂದ ರಾಜ್ಯಸಭಾ ಅಧಿವೇಶನ ಬಾಯ್ಕಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ...

0
ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ...