Homeಕರ್ನಾಟಕಗಣೇಶ ಮತ್ತು ಭಕ್ತರ ನಡುವೆ ಸರ್ಕಾರ ಹಸ್ತಕ್ಷೇಪ ಮಾಡಬಾರದು: ಡಿ.ಕೆ. ಶಿವಕುಮಾರ್

ಗಣೇಶ ಮತ್ತು ಭಕ್ತರ ನಡುವೆ ಸರ್ಕಾರ ಹಸ್ತಕ್ಷೇಪ ಮಾಡಬಾರದು: ಡಿ.ಕೆ. ಶಿವಕುಮಾರ್

- Advertisement -
- Advertisement -

‘‘ಗಣೇಶ ಹಬ್ಬದಲ್ಲಿ ಎಷ್ಟು ಗಾತ್ರದ ಮೂರ್ತಿಗೆ ಪೂಜೆ ಮಾಡಬೇಕು ಎಂಬುದು ಭಕ್ತ ಹಾಗೂ ಭಗವಂತನಿಗೆ ಬಿಟ್ಟ ವಿಚಾರ. ಈ ಮೂರ್ತಿ ಹಿಂದೆ ಅನೇಕ ವರ್ಗದ ಜನರ ಜೀವನ ಅವಲಂಬಿತವಾಗಿದೆ. ಯಾರು, ಯಾವ ರೀತಿಯಲ್ಲಿ ಪೂಜೆ ಮಾಡಬೇಕು ಎಂಬುದು ಅವರವರ ವೈಯಕ್ತಿಕ ಭಾವಕ್ಕೆ ಬಿಟ್ಟ ವಿಚಾರ. ಇದಕ್ಕೆ ಬಿಜೆಪಿ ಸರ್ಕಾರ ನಿರ್ಬಂಧ ಹೇರಬಾರದು. ಸರ್ಕಾರ ತನ್ನ ನಿರ್ಬಂಧ ಆದೇಶ ಹಿಂಪಡೆಯಬೇಕು” ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಗಣೇಶ ಹಬ್ಬದ ಸಂದರ್ಭದಲ್ಲಿ ಮೂರ್ತಿಯ ಗಾತ್ರ ಹಾಗೂ ಹಬ್ಬ ಆಚರಣೆ ಅವಧಿಗೆ ಸರ್ಕಾರ ನಿರ್ಬಂಧ ಹೇರಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ನಗರದ ಮಾವಳ್ಳಿಯ ಗಣೇಶ ಮೂರ್ತಿ ತಯಾರಕರು ಮತ್ತು ಮಾರಾಟಗಾರರನ್ನು ಗುರುವಾರ ಭೇಟಿ ಮಾಡಿ, ಅವರ ಸಮಸ್ಯೆ ಆಲಿಸಿದ್ದಾರೆ. ಈ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘‘ಈ ದೇಶದ ಸಂಸ್ಕೃತಿ ನಮ್ಮ ಆಸ್ತಿ. ಈ ಸಂಸ್ಕೃತಿಯಲ್ಲಿ ನಾವು ಬೆಳೆಯುತ್ತಿದ್ದೇವೆ. ಯಾವ ಧರ್ಮದವರು ಹೇಗೆ ಪೂಜೆ ಮಾಡಬೇಕು ಎಂಬುದು ಭಕ್ತ ಹಾಗೂ ಭಗವಂತನಿಗೆ ಬಿಟ್ಟ ವಿಚಾರ. ಭಾರತದಲ್ಲಿ ಹಿಂದೂಗಳ ಜತೆಗೆ ಇತರೆ ಧರ್ಮದವರು ಕೂಡ ವಿಘ್ನಗಳನ್ನು ನಿವಾರಣೆ ಮಾಡುವ ವಿನಾಯಕನ ಪೂಜೆ ಮಾಡುತ್ತಾರೆ. ಸಣ್ಣ ಸಗಣಿ ಉಂಡೆಗೆ ಒಂದು ಗರಿಕೆಯಿಟ್ಟು ಅದನ್ನು ಗಣೇಶ ಎಂದು ನಾವು ಪೂಜೆ ಮಾಡುತ್ತೇವೆ. ಇದೇ ನಮ್ಮ ಹಿರಿಯರು, ನಮ್ಮ ಸಂಸ್ಕೃತಿ ನಮಗೆ ತೋರಿರುವ ಮಾರ್ಗದರ್ಶನ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ- ಬಸವಳಿದ ಸಾಮಾನ್ಯ; ತರಕಾರಿ-ದಿನಸಿ: ವ್ಯಾಪಾರ, ಹೋಟೆಲ್ ಉದ್ಯಮಕ್ಕೂ ತಟ್ಟಿದ ಬಿಸಿ

“ಕೋವಿಡ್ ಸಮಯದಲ್ಲಿ ದೇವಸ್ಥಾನ ತೆರೆಯಲು ಅವಕಾಶ ಕೊಟ್ಟಿದ್ದೀರಿ. ನಿಮ್ಮವರು ಒಕ್ಕೂಟ ಸರ್ಕಾರದ ಸಚಿವರಾದರು ಎಂಬುದಕ್ಕೇ ಜನಾಶೀರ್ವಾದ ಯಾತ್ರೆ ಮಾಡಿಸುತ್ತಿದ್ದೀರಿ. ಚುನಾವಣೆ ನಡೆಸುತ್ತಿದ್ದೀರಿ. ಈಗ ಬಿಜೆಪಿ ನಾಯಕರು ಶಿಫಾರಸ್ಸು ಮಾಡುವ ಕಡೆ ವಾರ್ಡ್‌ನಲ್ಲಿ ಒಂದು ಗಣೇಶ ಇಟ್ಟು ಪೂಜೆ ಮಾಡಬೇಕು. ಅದೂ ಮನೆಯಲ್ಲಿ 2 ಅಡಿ, ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಮೂರ್ತಿ ಮಾತ್ರ ಇಡಬೇಕು ಎಂದು ನಿರ್ಬಂಧ ಹಾಕಿದ್ದೀರಿ? ಇದು ಸರಿಯೇ? ಈಗ ಇಷ್ಟು ದೊಡ್ಡ ಗಣೇಶ ಮೂರ್ತಿ ಮಾಡಿರುವವರ ಕತೆ ಏನಾಗಬೇಕು. ಸರ್ಕಾರ ಇದೇ ಆದೇಶವನ್ನು 3 ತಿಂಗಳ ಹಿಂದೆಯೇ ಯಾಕೆ ಪ್ರಕಟಿಸಲಿಲ್ಲ?” ಎಂದು ಶಿವಕುಮಾರ್‌ ಪ್ರಶ್ನಿಸಿದ್ದಾರೆ.

“ಎಷ್ಟು ಗಾತ್ರದ ವಿಗ್ರಹ ಪೂಜೆ ಮಾಡಬೇಕು ಅಂತಾ ನಿರ್ದೇಶನ ನೀಡಲು ನೀವ್ಯಾರು? ಇದು ನಮ್ಮ ವೈಯಕ್ತಿಕ ವಿಚಾರ. ಇದರಲ್ಲಿ ನಿಮ್ಮ ಸಮಸ್ಯೆ ಏನು? ಕೋವಿಡ್ ಮಾರ್ಗಸೂಚಿ ಏನು ಬೇಕಾದರೂ ಮಾಡಿಕೊಳ್ಳಿ, ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಒಕ್ಕೂಟ ಸರ್ಕಾರ ಇಡೀ ದೇಶಕ್ಕೆ ಒಂದು ಕೋವಿಡ್ ಮಾರ್ಗಸೂಚಿ ಪ್ರಕಟಿಸಿರುವಾಗ ಬಿಜೆಪಿ ಆಡಳಿತದಲ್ಲಿರುವ ಕರ್ನಾಟಕಕ್ಕೂ ಗುಜರಾತ್, ಮಧ್ಯ ಪ್ರದೇಶ ಹಾಗೂ ಇತರೆ ರಾಜ್ಯಗಳಲ್ಲಿ ಕೋವಿಡ್ ನಿಯಮದಲ್ಲಿ ವ್ಯತ್ಯಾಸ ಏಕಿದೆ?” ಎಂದು ಅವರು ಕೇಳಿದ್ದಾರೆ.

“ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿಗಳು ಕೋವಿಡ್ ನಿಯಮಾವಳಿ ಹಾಕಿದರೆ ಅದನ್ನು ನಿಮ್ಮ ಪಕ್ಷದ ಕಾರ್ಯಕರ್ತರೇ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಇದು ಉಲ್ಟಾ ಆಗಿದೆ. ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವ ಒಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ. ಹೀಗೆ ಇದು ನಮ್ಮ ವೈಯಕ್ತಿಕ ವಿಚಾರ. ಅದಕ್ಕೆ ನಿರ್ಬಂಧ ಹಾಕುವುದು ಸರಿಯಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ವಾಟ್ಸ್ಆ್ಯಪ್ ನಿಮ್ಮ ಖಾಸಗಿತನ ಕದಿಯುತ್ತಿದೆ: ಪ್ರೊಪಬ್ಲಿಕಾ ವರದಿ | ಭಾಗ-1

“ಗಣೇಶ ವಿಗ್ರಹವನ್ನು ಸಾಮಾನ್ಯರು ಮಾಡಲು ಸಾಧ್ಯವಿಲ್ಲ. ಈ ಕಸುಬು, ಕಲೆಯನ್ನು ಕಲಿತು, ಅದನ್ನೇ ನಂಬಿ ಜೀವನ ಮಾಡುತ್ತಿರುವವರು ಮಾತ್ರ ಮಾಡಲು ಸಾಧ್ಯ. ಬೇರೆ ರಾಜ್ಯಗಳಲ್ಲಿ ಇವರಿಗೆ ಪರಿಹಾರ ನೀಡಿದ್ದಾರೆ. ಆದರೆ ನೀವು ಯಾವ ಪರಿಹಾರ ಕೊಟ್ಟಿದ್ದೀರಿ? ಲೆಕ್ಕ ಇದೆಯಾ? ರಾಜ್ಯದಲ್ಲಿ ಹೂವು, ಹಣ್ಣು ವ್ಯಾಪಾರದವರು, ಆರ್ಕೆಸ್ಟ್ರಾ, ಪೆಂಡಾಲ್ ವ್ಯಾಪಾರಿಗಳಲ್ಲಿ ಯಾರಿಗೆ ನೀವು ಪರಿಹಾರ ಕೊಟ್ಟಿದ್ದೀರಿ? ಮೂರ್ತಿಗೆ ನಿರ್ಬಂಧ ಹೇರಿರುವುದರಿಂದ ಇವರೆಲ್ಲರಿಗೂ ಹೊಡೆತ ಬೀಳಲಿದೆ. ಇದು ಕೇವಲ ಪಾಲಿಕೆ ವ್ಯಾಪ್ತಿಗೆ ಸೀಮಿತವಲ್ಲ. ಇಡೀ ರಾಜ್ಯಕ್ಕೆ ಒಂದೇ ನೀತಿ ಇರಬೇಕು. ಒಂದೇ ದೃಷ್ಟಿಯಲ್ಲಿ ನೋಡಬೇಕು” ಎಂದು ಅವರು ಹೇಳಿದ್ದಾರೆ.

‘‘ಇಲ್ಲಿ ಹಿಂದೂ ಭಾವನೆ ಒಂದೇ ಅಲ್ಲ. ಇದು ಎಲ್ಲರ ಭಕ್ತಿ, ಉತ್ಸಾಹದ ವಿಚಾರ. ಸರ್ಕಾರ ಗಣೇಶ ಹಬ್ಬ ಆಚರಣೆಗೆ 10-15 ದಿನಗಳ ಅವಕಾಶ ನೀಡಬೇಕು. ಆರ್ಕೆಸ್ಟ್ರಾ ಮತ್ತಿತರ ಮನರಂಜನೆ ಕಾರ್ಯಕ್ರಮಕ್ಕೂ ಅವಕಾಶ ಇರಬೇಕು. ಕೋವಿಡ್ ನಿಯಮಾವಳಿ ವ್ಯಾಪ್ತಿಯಲ್ಲೇ ಆಚರಣೆಗೆ ಅವಕಾಶ ನೀಡಬೇಕು. ಕೋವಿಡ್ ನಿಯಮ ಮಾಡಿದರೆ ಅದು ಎಲ್ಲರಿಗೂ ಅನ್ವಯವಾಗಬೇಕು” ಎಂದು ಡಿಕೆಶಿ ತಿಳಿಸಿದ್ದಾರೆ.

“ಹೊಸದಾಗಿ ಒಕ್ಕೂಟ ಸರ್ಕಾರದ ಮಂತ್ರಿಯಾದವರಿಗೆ ಜನಾಶೀರ್ವಾದ ಮಾಡಲು ಅವಕಾಶ ಕೊಟ್ಟಿದ್ದೇಕೆ? ಬೇರೆ ರಾಜಕೀಯ ಚಟುವಟಿಕೆಗಳಿಗೆ ನಿರ್ಬಂಧ ಯಾಕೆ? ಪ್ರತಿಭಟನೆ ಮಾಡುತ್ತಿದ್ದ ಹೆಣ್ಣು ಮಕ್ಕಳನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದೇಕೆ? ಕಾನೂನು ಒಬ್ಬೊಬ್ಬರಿಗೆ ಒಂದು ಎಂಬಂತೆ ಮಾಡುವುದು ಸರಿಯಲ್ಲ. ಮುಖ್ಯಮಂತ್ರಿಗಳು ತಮ್ಮ ಪಕ್ಷದ ಆಂತರಿಕ ವಿಚಾರಕ್ಕೆ ಕೈಗೊಂಬೆಯಾಗಬಾರದು. ಗಣೇಶನ ಪೂಜೆ ಎಲ್ಲರ ಹಕ್ಕು, ಎಲ್ಲರ ಆಸ್ತಿ. ಎಲ್ಲ ಧರ್ಮದವರು ತಮ್ಮ ಸಂಪ್ರದಾಯ ಆಚರಣೆಗೆ ಅವಕಾಶ ಮಾಡಿಕೊಡಿ. ಈ ಹಬ್ಬ ಅನೇಕರ ಜೀವನಕ್ಕೆ ಆಸರೆಯಾಗಿದೆ. ಸರ್ಕಾರ ನಮ್ಮ ಭಾವನೆ ಕೆರಳಿಸಲು ಪ್ರಯತ್ನಿಸಬಾರದು.” ಎಂದು ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಪೆಟ್ರೋಲ್-ಡೀಸೆಲ್ ದರದಲ್ಲಿ ನಿರಂತರ ಏರಿಕೆ; ಬಡತನದತ್ತ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...