HomeUncategorizedಅನಪೇಕ್ಷಿತ ಪತ್ರಿಕಾ ಹೇಳಿಕೆ ನೀಡದಂತೆ ಅಧಿಕಾರಿಗಳಿಗೆ ಸರ್ಕಾರ ಎಚ್ಚರಿಕೆ

ಅನಪೇಕ್ಷಿತ ಪತ್ರಿಕಾ ಹೇಳಿಕೆ ನೀಡದಂತೆ ಅಧಿಕಾರಿಗಳಿಗೆ ಸರ್ಕಾರ ಎಚ್ಚರಿಕೆ

- Advertisement -
- Advertisement -

ಅಧಿಕಾರಿಗಳು ಅನಪೇಕ್ಷಿತ ಪತ್ರಿಕಾ ಹೇಳಿಕೆಗಳನ್ನು ನೀಡಬಾರದು. ನಿಯಮ ಉಲ್ಲಂಘನೆ ಮಾಡಿರುವುದು ಕಂಡು ಬಂದರೆ ಕ್ರಮ ಜರುಗಿಸಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಅಧಿಕಾರಿಗಳು ಅನಪೇಕ್ಷಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಸುದ್ದಿಗೋಷ್ಠಿಗಳನ್ನು ನಡೆಸುತ್ತಿದ್ದಾರೆ ಎಂದಿರುವ ಸರ್ಕಾರ, “ಅಧಿಕಾರಿಯು ನಂಬಿಕಾರ್ಹ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವುದು ಹೊರತುಪಡಿಸಿ, ಪತ್ರಿಕಾಗೋಷ್ಠಿ/ಪತ್ರಿಕಾ ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದನ್ನು ನಿಷೇಧಿಸಲಾಗಿದೆ” ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ತಿಳಿಸಿದ್ದಾರೆ.

ಯಾರೇ ಸರ್ಕಾರಿ ನೌಕರನು, ಆಕಾಶವಾಣಿ ಪ್ರಸಾರದಲ್ಲಾಗಲಿ, ದೂರದರ್ಶನ ಕಾರ್ಯಕ್ರಮದಲ್ಲಾಗಲೀ ಅಥವಾ ಯಾವುದೇ ಸಾರ್ವಜನಿಕ ಮಾಧ್ಯಮಗಳಲ್ಲಿ ಅಭಿಪ್ರಾಯ ನೀಡಬಾರದು. ತನ್ನ ಹೆಸರಲ್ಲಿ ಅಥವಾ ಅನಾಮಧೇಯವಾಗಿ, ಗುಪ್ತನಾಮದಲ್ಲಿ ಅಥವಾ ಬೇರೊಬ್ಬರ ಹೆಸರಿನಲ್ಲಿ ಪ್ರಕಟಿಸಲಾದ ವಿಚಾರಗಳು ಸರ್ಕಾರದ ನೀತಿಗಳಿಗೆ ವಿರುದ್ಧ ಇರುವಂತಿಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ನೀತಿಗಳ ಬಗ್ಗೆ ಪ್ರತಿಕೂಲ ಟೀಕೆಯ ಪರಿಣಾಮ ಹೊಂದುವಂತಹ ಯಾವುದೇ ನಿರೂಪಣೆಯನ್ನು ಮಾಡುವುದು ನಿಯಮ ಬಾಹಿರ ಎಂದು ಎಚ್ಚರಿಸಿದ್ದಾರೆ.


ಇದನ್ನೂ ಓದಿ: ಸಿಎಂಗೆ ಕೊಲೆ ಬೆದರಿಕೆ ಹಾಕಿದ್ದ ಹಿಂದೂ ಮಹಾಸಭಾ ಕಾರ್ಯದರ್ಶಿ ಯೂಟರ್ನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...