Homeಕರ್ನಾಟಕಕೊರೊನಾ ವಿರುದ್ಧದ ಸರ್ಕಾರದ ಕ್ರಮಗಳು ಪ್ರಶ್ನಾರ್ಹವಾಗಿವೆ: ಎಚ್‌.ಡಿ ಕುಮಾರಸ್ವಾಮಿ

ಕೊರೊನಾ ವಿರುದ್ಧದ ಸರ್ಕಾರದ ಕ್ರಮಗಳು ಪ್ರಶ್ನಾರ್ಹವಾಗಿವೆ: ಎಚ್‌.ಡಿ ಕುಮಾರಸ್ವಾಮಿ

- Advertisement -
- Advertisement -

ಕೊರೊನಾ ವೈರಸ್‌ ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸರ್ಕಾರದ ಪ್ರತಿನಿಧಿಗಳು ಹೇಳುತ್ತಿರುವುದರ ನಡುವೆಯೇ ಕರ್ನಾಟಕ ಕೊರೊನಾ ಸೋಂಕು ಪೀಡಿತರ ಪಟ್ಟಿಯಲ್ಲಿ ದೇಶದಲ್ಲೇ 3ನೇ ಸ್ಥಾನಕ್ಕೇರಿದೆ. ನಿತ್ಯವೂ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದು ಸರ್ಕಾರದ ‘ಕಟ್ಟುನಿಟ್ಟಿನ ಕ್ರಮ’ಗಳನ್ನು ಪ್ರಶ್ನಿಸುವಂತೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಹೊರಡಿಸಿದ ಲಾಕ್‌ಡೌನ್‌ ಹೊರತುಪಡಿಸಿ, ವೈರಸ್‌ ತಡೆಗೆ ಸರ್ಕಾರ ಕ್ರಮಗಳನ್ನು ಕೈಗೊಂಡಿರುವುದು ನಿಜವೇ ಆಗಿದ್ದರೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ಸವಲತ್ತು, ರಕ್ಷಣಾ ಕವಚಗಳನ್ನು ಪೂರೈಸಿದ್ದರೆ, ಚಿಕಿತ್ಸೆಗೆ ವೈದ್ಯಕೀಯ ಸಲಕರಣೆಗಳನ್ನು ನೀಡಿದ್ದರೆ ಸೋಂಕು ಶರವೇಗದಲ್ಲಿ ವ್ಯಾಪಿಸುತ್ತಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಒಂದು ಸಾವಿರ ವೆಂಟಿಲೇಟರ್, 10 ಲಕ್ಷ #N95masks, 5ಲಕ್ಷ ಕಿಟ್, 15ಲಕ್ಷ ತ್ರೀ ಲೇಯರ್‌ ಮಾಸ್ಕ್‌ ಖರೀಸುವುದಾಗಿ ಸರ್ಕಾರ ಹೇಳಿ ವಾರವಾಯ್ತು. ಒಂದು ವಾರದಲ್ಲಿ ಸೋಂಕು ತೀವ್ರಗತಿಯಲ್ಲಿ ಏರಿದೆ. ಆದರೆ ಸರ್ಕಾರ ಹೇಳಿರುವುದೆಲ್ಲವೂ ಕಾರ್ಯಗತವಾಗಿದೆಯೇ? ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಸೋಂಕಿನ ವಿರುದ್ಧ ಇಷ್ಟು ನಿಧಾನದ ಕಾರ್ಯಾಚರಣೆ ಸರಿಯೇ ಎಂದಿದ್ದಾರೆ.

ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರಿಗೆ ಪ್ರೋತ್ಸಾಹ ಧನ ನೀಡುವಂತೆ ನಾನು ಕೋರಿದ್ದೆ. ಆದರೆ, ರಕ್ಷಣಾ ಕವಚವನ್ನೇ ನೀಡದಿರುವ ಬಗ್ಗೆ ಮಾಹಿತಿ ಇದೆ. ಜನ ರಸ್ತೆಗಿಳಿಯದಂತೆ ನೋಡಿಕೊಳ್ಳಲು ಪೊಲೀಸರನ್ನು ನಿಯೋಜಿಸಲಾಗಿದೆ. ಅವರಿಗೂ ಸೂಕ್ತ ರಕ್ಷಣಾ ಕವಚಗಳಿಲ್ಲ. ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಂತೆ ಪೊಲೀಸರಿಗೂ ರಕ್ಷಣಾ ಕವಚಗಳನ್ನು ವಿತರಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕೊರೊನಾ ವೈರಸ್‌ ಕುರಿತ ಸುದ್ದಿಗಳನ್ನು ಮಾಧ್ಯಮಗಳಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳಿವೆ ಎಂದು ನಾನು ಮೊದಲೇ ಹೇಳಿದ್ದೆ. ಕೊರೊನಾ ನಿಯಂತ್ರಣದ ಜವಾಬ್ದಾರಿ ಒಬ್ಬ ಸಚಿವರ ಹೆಗಲಿಗೆ ವಹಿಸುವ ಮೂಲಕ ಆ ಮುಸುಕಿನ ಗುದ್ದಾಟ ಬಯಲಾಗಿದೆ. ಇದು ಮಾಧ್ಯಮಗಳಲ್ಲೂ ವರದಿಯಾಗಿದೆ. ಈ ಸಂದರ್ಭದಲ್ಲಿ ಪ್ರತಿಷ್ಠೆ ಮುಖ್ಯವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರ ಮೊದಲು ಹೆಚ್ಚಿನ ಪ್ರಮಾಣದಲ್ಲಿ ವೈದ್ಯಕೀಯ ಪರಿಕರಗಳನ್ನು ಹೊಂದಿಸಿಕೊಳ್ಳಬೇಕು. ವೈದ್ಯರಿಗೆ ಸೂಕ್ತ ಸವಲತ್ತುಗಳನ್ನು ನೀಡಬೇಕು. ಘೋಷಣೆಗಳು ಹೇಳಿಕೆಗಳು ಅಷ್ಟಕ್ಕೆ ಸೀಮಿತವಾಗಬಾರದು, ಕಾರ್ಯರೂಪಕ್ಕೆ ಬರಬೇಕು. ಇಲ್ಲವಾದರೆ ಜಗತ್ತನ್ನೇ ಆವರಿಸಿರುವ ಮಹಾಮಾರಿ ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ “ಮರಣ ಮೃದಂಗ” ಬಾರಿಸುವ ಕಾಲ ದೂರವಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...