Homeಚಳವಳಿಅನನ್ಯ ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿಯವರ ಸಂಘರ್ಷಗಾಥೆ: 'ಮಹಾನ್ ತಾತ' ಸಾಕ್ಷ್ಯಚಿತ್ರ ಬಿಡುಗಡೆ

ಅನನ್ಯ ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿಯವರ ಸಂಘರ್ಷಗಾಥೆ: ‘ಮಹಾನ್ ತಾತ’ ಸಾಕ್ಷ್ಯಚಿತ್ರ ಬಿಡುಗಡೆ

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮಾಧ್ಯಮ ಸಂಸ್ಥೆ ತಯಾರಿಸಿರುವ ಈ ಸಾಕ್ಷ್ಯಚಿತ್ರವನ್ನು ಪ್ರತಿಭಾನ್ವಿತ ನಿರ್ದೇಶಕ ದೀಪುರವರು ನಿರ್ದೇಶಿಸಿದ್ದಾರೆ.

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್.ಎಸ್ ದೊರೆಸ್ವಾಮಿಯವರ ಜೀವನ ಮತ್ತು ಹೋರಾಟದ ಕುರಿತು ಸಾಕ್ಷ್ಯಚಿತ್ರ ‘ಮಹಾನ್ ತಾತ / The Great Grand Father’ ಇದೇ ಅಕ್ಟೋಬರ್ 2 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮಾಧ್ಯಮ ಸಂಸ್ಥೆ ತಯಾರಿಸಿರುವ ಈ ಸಾಕ್ಷ್ಯಚಿತ್ರವನ್ನು ಪ್ರತಿಭಾನ್ವಿತ ನಿರ್ದೇಶಕ ದೀಪುರವರು ನಿರ್ದೇಶಿಸಿದ್ದಾರೆ. ಗಾಂಧಿ ಜಯಂತಿಯ ಅಕ್ಟೋಬರ್ 2 ರ ಸಂಜೆ 4 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯ ಕರ್ನಾಟಕ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ಬಿಡುಗಡೆಯಾಗಲಿದ್ದು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯು ರಾಜ್ಯದ ಹಲವು ಜಿಲ್ಲಾ ಕೇಂದ್ರಗಳಲ್ಲಿ ಅಂದೇ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಿದೆ ಎಂದು ಹೇಳಿಕೆ ತಿಳಿಸಿದೆ.

ದೊರೆಸ್ವಾಮಿಯವರ ಬಗ್ಗೆ

ಹಲವರು ಹುಟ್ಟುತ್ತಲೇ ಮುದುಕರು ಆದರೆ ಕೆಲವರು ಸಾಯುವವರೆಗೂ ಚಿರಯುವಕರು ಎಂಬ ನಾಣ್ಣುಡಿಯಂತೆ’ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್‌.ಎಸ್‌ ದೊರೆಸ್ವಾಮಿಯವರು ಇಂದಿಗೂ ಜನಪರರ ಪಾಲಿಗೆ ರಾಕ್‌ಸ್ಟಾರ್‌ ಆಗಿಯೇ ಲವಲವಿಕೆಯಿಂದ ದೃಢವಾಗಿದ್ದಾರೆ. ಬಡಜನರ ಪರ ಸದಾ ಹೋರಾಟನಿರತ ಸ್ವಾತಂತ್ರ್ಯ ಸೇನಾನಿಗೆ ಈಗ 103 ವರ್ಷ.

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮತ್ತು ದೀಪು

ದೀಪು ಎಂದೇ ಚಿರಪರಿಚಿತರಾದ ಕೆ.ಪಿ ಪ್ರದೀಪ್‌ರವರು ಪೆಡೆಸ್ಟ್ರಿಯನ್ ಪಿಕ್ಚರ್ಸ್ ಎಂಬ ಜನಪರ ಮಾಧ್ಯಮ ಸಂಸ್ಥೆಯ ಸ್ಥಾಪಕ ಸದಸ್ಯರಲ್ಲೊಬ್ಬರು. ಮೂಲತಃ ಕೇರಳದ ತಿರುವೂರು ಜಿಲ್ಲೆಯ ಮಲಪ್ಪುರಂರವರಾದ ಇವರು ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಸಮಾಜದಲ್ಲಿ ಅಸ್ತಿತ್ವದಲ್ಲಿರುವ ಸಾಮಾಜಿಕ-ರಾಜಕೀಯ ವಾಸ್ತವಗಳ ಬಗ್ಗೆ ತಿಳುವಳಿಕೆಯನ್ನು ಮೂಡಿಸಲು ಸಿನಿಮಾ-ಸಾಕ್ಷ್ಯಚಿತ್ರವನ್ನು ಪರಿಣಾಮಕಾರಿಯಾಗಿ ಬಳಸಬೇಕೆನ್ನುವುದು ಅವರ ಅಭಿಲಾಷೆ.

2001 ರಲ್ಲಿ ಸಮಾನ ಮನಸ್ಕ ಗೆಳೆಯರೊಂದಿಗೆ ಪೆಡೆಸ್ಟ್ರಿಯನ್ ಪಿಕ್ಚರ್ಸ್ ಆರಂಭಿಸಿದ ಅವರು, ಕರ್ನಾಟಕದ ಬಾಬಾಬುಡನ್ ಗಿರಿ, ಬಿಎಂಐಸಿ ಹೋರಾಟ ಸೇರಿದಂತೆ ಹಲವು ಚಳವಳಿಗಳ ಸಾಕ್ಷ್ಯಚಿತ್ರಗಳನ್ನು ನಿರ್ಮಿಸಿದ್ದಾರೆ. ಅವರು ನಿರ್ದೇಶಿಸಿದ ‘Shit’ ಸಾಕ್ಷ್ಯಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಸಹ ಲಭಿಸಿದೆ. ಗೌರಿ ಲಂಕೇಶ್‌ರವರ ಕುರಿತ ‘Our Gauri’, ಹೋರಾಟಗಾರ ನಜೀಬ್ ನಾಪತ್ತೆಯ ನಂತರ ‘ಅಮ್ಮಿ’ ಎಂಬ ಸಾಕ್ಷ್ಯಚಿತ್ರಗಳನ್ನು ಇತ್ತೀಚೆಗೆ ನಿರ್ದೇಶಿಸಿದ್ದಾರೆ.

#ಮಹಾನ್_ತಾತಅನನ್ಯ ಸ್ವಾತಂತ್ರ್ಯ ಸೇನಾನಿಯ ಸಂಘರ್ಷಗಾಥೆದೊರೆಸ್ವಾಮಿಯವರ ಹೋರಾಟದ ಕುರಿತು ಸಿನಿಮಾ ಅಕ್ಟೋಬರ್ 2 ಕ್ಕೆ ಬಿಡುಗಡೆಸ್ಥಳ: ಕರ್ನಾಟಕ ಸ್ಕೌಟ್ಸ್ ಅಂಡ್ ಗೈಡ್ಸ್ ಅರಮನೆ ಮೈದಾನ ಬೆಂಗಳೂರು

Posted by Naanu Gauri on Wednesday, September 23, 2020

ದಣಿವರಿಯದ ಹೋರಾಟಗಾರ ದೊರೆಸ್ವಾಮಿಯವರ ಕುರಿತ ಸಾಕ್ಷ್ಯಚಿತ್ರವನ್ನು ನೋಡಲು ಬಯಸುವವರು 500 ರೂ ಪಾವತಿಸಿದರೆ ಅವರ ಮನೆಗೆ ತಲುಪಿಸಲಾಗುವುದು ಎಂದು ಯುವ ಹೋರಾಟಗಾರ ತ್ರಿಮೂರ್ತಿ ತಿಳಿಸಿದ್ದಾರೆ. ಆಸಕ್ತರು ಅವರನ್ನು 9964676400 ಸಂಪರ್ಕಿಸಬಹುದು.


ಇದನ್ನೂ ಓದಿ: ಊಟ, ಉದ್ಯೋಗ, ಸ್ವಾವಲಂಬನೆ ಎಲ್ಲರ ಹಕ್ಕಾಗಲಿ: 103ನೇ ಜನ್ಮದಿನದಂದು HS ದೊರೆಸ್ವಾಮಿಯವರ ಆಶಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...