Homeಕರ್ನಾಟಕಮಹಾಚೇತನ ದೊರೆಸ್ವಾಮಿ ಅಗಲಿ ಒಂದು ವರ್ಷ; ಅನುಯಾಯಿಗಳಿಂದ ಸ್ಮರಣೆ

ಮಹಾಚೇತನ ದೊರೆಸ್ವಾಮಿ ಅಗಲಿ ಒಂದು ವರ್ಷ; ಅನುಯಾಯಿಗಳಿಂದ ಸ್ಮರಣೆ

- Advertisement -
- Advertisement -

‘ಎಚ್.ಎಸ್.ದೊರೆಸ್ವಾಮಿ ಅನುಯಾಯಿಗಳ ಬಳಗ’ದ ವತಿಯಿಂದ ಹಿರಿಯ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿ ಅವರ ಮೊದಲನೇ ವರ್ಷದ ಸ್ಮರಣೆ ಮತ್ತು ಶ್ರದ್ಧಾಂಜಲಿ ಸಮರ್ಪಣೆ ಕಾರ್ಯಕ್ರಮವು ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಮಹಾತ್ಮ ಗಾಂಧೀ ಉದ್ಯಾನವನದಲ್ಲಿ ಗುರುವಾರ ನಡೆಯಿತು. ಪಾಲ್ಗೊಂಡಿದ್ದ ಅವರ ಅಭಿಮಾನಿಗಳು ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ದೊರೆಸ್ವಾಮಿಯವರಿಗೆ ಪುಷ್ಪನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ದೊರೆಸ್ವಾಮಿ ಅವರ ಅನುಯಾಯಿಗಳು, ಒಡನಾಡಿಗಳು, ವಿವಿಧ ಸಂಘಟನೆಗಳ ಮುಖಂಡರು, ಪೌರಕಾರ್ಮಿಕರು, ಭೂಮಿ-ವಸತಿಗಾಗಿ ಹೋರಾಟ ನಡೆಸುತ್ತಿರುವ ವಸತಿ ವಂಚಿತರು ಹಾಗೂ ಸಾಮಾಜಿಕ ಚಿಂತಕರು ಪಾಲ್ಗೊಂಡಿದ್ದರು.

ದೊರೆಸ್ವಾಮಿಯವರ ಹೋರಾಟದ ಬದುಕು, ಆಶಯ, ಗಾಢವಾದ ಪ್ರಜಾತಾಂತ್ರಿಕ ನಡವಳಿಕೆ, ಅಚಲ ನಂಬಿಕೆ, ಅವರಿಂದ ಪಡೆದ ಹೋರಾಟದ ಸ್ಫೂರ್ತಿ ಮುಂತಾಗಿ, ದೊರೆಸ್ವಾಮಿ ಅವರನ್ನು ಆದರ್ಶವಾಗಿಸಿಕೊಂಡು ಹೋರಾಟದ ಬದುಕು ನಡೆಸುತ್ತಿರುವ ಹೋರಾಟಗಾರರು, ಅಭಿಮಾನಿಗಳು, ತಮ್ಮ ಅನುಭವ ಮತ್ತು ದೊರೆಸ್ವಾಮಿ ಅವರೊಟ್ಟಿಗಿದ್ದ ಒಡನಾಟದ ಬಗ್ಗೆ ಹಂಚಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿವೃತ್ತ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್‌ ಮಾತನಾಡಿ, ದೊರೆಸ್ವಾಮಿ ಅವರು ತನ್ನನ್ನು ಕರೆದು -ಸೆಂಥಿಲ್, ಇನ್ನುಮುಂದೆ ಈ ಹೋರಾಟಗಳನ್ನು ಮುಂದುವರಿಸುವ ಹೊಣೆ ನಿಮ್ಮಂಥ ಯುವ ಪೀಳಿಗೆಯದು ಎಂದಿದ್ದರು- ಎಂದು ನೆನಪಿಸಿಕೊಂಡರು.

ದೊರೆಸ್ವಾಮಿಯವರೊಂದಿಗಿನ ತಮ್ಮ ಅನುಭವಗಳನ್ನು ವಿವರಿಸಿ ಮಾತನಾಡಿದ ಹೋರಾಟಗಾರ್ತಿ ಬಿ.ಟಿ.ಲಲಿತಾ ನಾಯಕ್, “ದೊರೆಸ್ವಾಮಿ ಅವರು ರಾಜ್ಯದಾದ್ಯಂತ ಎಲ್ಲಾ ಜನಪರ ಹೋರಾಟಗಳ ಶಕ್ತಿಯಾಗಿದ್ದರು. ಕೋಮುವಾದದ ವಿರುದ್ಧ ಅವರದು ರಾಜಿಯಿಲ್ಲದ ಹೋರಾಟವಾಗಿತ್ತು” ಎಂದು ಬಣ್ಣಿಸಿದರು.

ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರಾದ ನೂರ್‌ ಶ್ರೀಧರ್‌ ಮಾತನಾಡಿ, “ದೊರೆಸ್ವಾಮಿಯವರು ಕೊನೆಯ ದಿನಗಳಲ್ಲಿ ಆಸ್ಪತ್ರೆಯ ಐಸಿಯುನಲ್ಲಿದ್ದಾಗಲೂ ನಾವು ಸೋತಿಲ್ಲ, ಸೋಲುವುದೂ ಇಲ್ಲ; ಹೋರಾಟಕ್ಕೆ ಸೋಲೆಂಬುದಿಲ್ಲ ಎಂದು ಅತ್ಯಂತ ಆತ್ಮವಿಶ್ವಾಸದಿಂದ ಹೇಳುತ್ತಿದ್ದರು. ಅವರು ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿಕೊಂಡು ಹೋಗುತ್ತೇವೆ” ಎಂಬ ಸಂಕಲ್ಪ ಮಾಡಿದರು.

ಹೋರಾಟಗಾರರಾದ ಸಿರಿಮನೆ‌ ನಾಗರಾಜ್ ಮಾತನಾಡಿ, “ಸ್ವಾತಂತ್ರ್ಯ ಹೋರಾಟ 1947ರ ಆಗಸ್ಟ್‌ 14ರ ರಾತ್ರಿಗೆ ಮುಗಿಯಲಿಲ್ಲ. ಈ ದೇಶದಲ್ಲಿ ಬಡತನ ಸಂಪೂರ್ಣವಾಗಿ ನಿವಾರಣೆ ಆಗಬೇಕು, ಕಟ್ಟಕಡೆಯ ಮನುಷ್ಯನ ಕಣ್ಣೀರನ್ನೂ ಒರೆಸುವುದೇ ಸ್ವಾತಂತ್ರ್ಯದ ಗುರಿ ಎಂದು ಬಯಸಿದ್ದ ಗಾಂಧೀಜಿಯವರ ಆಶಯ ಸಾಕಾರವಾಗುವವರೆಗೂ ಸ್ವಾತಂತ್ರ್ಯ ಹೋರಾಟ ಮುಂದುವರಿಯುತ್ತದೆ ಎಂದು ಹೇಳುತ್ತಿದ್ದ ದೊರೆಸ್ವಾಮಿಯವರ ಧ್ಯೇಯವನ್ನು ನಾವೆಲ್ಲರೂ ಒಗ್ಗೂಡಿ ಈಡೇರಿಸೋಣ” ಎಂದು ತಿಳಿಸಿದರು.

ಕರ್ನಾಟಕ ಜನಶಕ್ತಿಯ ಗೌರಿ ಅವರು ಮಾತನಾಡಿ, “ದೊರೆಸ್ವಾಮಿಯವರು ಇಡೀ ರಾಜ್ಯದ ಭೂಮಿ ಮತ್ತು ವಸತಿ ವಂಚಿತರಿಗಾಗಿ ತನ್ನ ಕೊನೆಯ ಉಸಿರಿರುವವರೆಗೆ ಹೋರಾಟ ನಡೆಸಿದರು. ಅವರ ಹೋರಾಟದ ಛಲವನ್ನು ನಾವು ಆದಷ್ಟೂ ಮೈಗೂಡಿಸಿಕೊಂಡು ಭೂಮಿ ವಸತಿ ಇಲ್ಲದವರಿಗಾಗಿ ಹೋರಾಟ ಮುಂದುವರಿಸಬೇಕಾಗಿದೆ. ಅದೇ ದೊರೆಸ್ವಾಮಿಯವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ಕೊಪ್ಪಳ: ಮಾದಿಗ ಸಮುದಾಯದ ಮೇಲಿನ ಮಾರಣಾಂತಿಕ ಹಲ್ಲೆ ಖಂಡಿಸಿ ಕಾರಟಗಿ ಬಂದ್‌ಗೆ ಕರೆ

ಅಧ್ಯಕ್ಷತೆಯ ಮಾತುಗಳನ್ನಾಡಿದ ಹಿರಿಯ ಪತ್ರಕರ್ತರಾದ ಡಾ.ವಿಜಯಮ್ಮ, “ದೊರೆಸ್ವಾಮಿಯವರ ಹೋರಾಟದ ಬದುಕು ಮತ್ತು ಅವರು ಭಾಗವಹಿಸಿದ ಎಲ್ಲಾ ಹೋರಾಟ, ಚಳವಳಿಗಳ ಕುರಿತು ಒಂದು ಪುಸ್ತಕವನ್ನು ಒಂದು ವರ್ಷದೊಳಗಾಗಿಯಾದರೂ ಹೊರತರಬೇಕು. ಅವರ ಬದುಕು, ಚಿಂತನೆ, ಹೋರಾಟಗಳ ಒಂದು ಚಿತ್ರಣವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯವಿದೆ. ಆ ಜವಾಬ್ದಾರಿ ನಮ್ಮ ಮೇಲಿದೆ” ಎಂದು ಆಶಿಸಿದರು.

ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ, ಸಾಮಾಜಿಕ ಚಳವಳಿಗಾರರಾದ ವೆಂಕಟೇಶ್, ಅಜಯ್, ನರಸಿಂಹಮೂರ್ತಿ, ಕರ್ನಾಟಕ ಜನಾಂದೋಲನ ಸಂಘಟನೆಯ ಕೆ.ಮರಿಯಪ್ಪ, ಸಮಾಜವಾದಿ ಮುಖಂಡ ರಾಬಿನ್ ಮ್ಯಾಥ್ಯೂ, ‘ಸೋಲಾರ್’ ಖ್ಯಾತಿಯ ಸೈಯದ್ ಸಿದ್ದಿಕಿ ಸೇರಿದಂತೆ ಮೊದಲಾದ ಗಣ್ಯರು ದೊರೆಸ್ವಾಮಿಯವರಿಗೆ ನುಡಿನಮನ ಸಲ್ಲಿಸಿದರು.

ದೊರೆಸ್ವಾಮಿಯವರು ನಿಧನರಾದಾಗ ಬರೆದಿದ್ದ ಕವನವನ್ನು ಚಿಂತಕರಾದ ಶಿವಸುಂದರ್ ವಾಚಿಸಿದರು. ಜ್ಞಾನವಿಜ್ಞಾನ ಸಮಿತಿಯ ಪ್ರಭಾ ಬೆಳವಂಗಲ ಅವರು ಕಾರ್ಯಕ್ರಮ ನಿರ್ವಹಣೆ ಮಾಡಿದರು. ನಾಗೇಶ್ವರರಾವ್ ವಂದನಾರ್ಪಣೆ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...