Homeಕರ್ನಾಟಕಸೌಟು ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು: ಶರಣ್ ಪಂಪ್ವೆಲ್ ಪ್ರಚೋದನಕಾರಿ ಹೇಳಿಕೆ; ಪ್ರಕರಣ ದಾಖಲು

ಸೌಟು ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು: ಶರಣ್ ಪಂಪ್ವೆಲ್ ಪ್ರಚೋದನಕಾರಿ ಹೇಳಿಕೆ; ಪ್ರಕರಣ ದಾಖಲು

- Advertisement -
- Advertisement -

ಹಿಂದೂ ತಾಯಂದಿರು ಸೌಟು ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು ಎಂದು  ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಸಧ್ಯ ಅವರು ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಈ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಉಡುಪಿ ನಗರ ಠಾಣೆಯ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಶರಣ್ ಪಂಪ್ವೆಲ್, ”ಜಿಹಾದಿ ರಾಕ್ಷಸಿಯರಿಗೆ ಹಿಂದು ರಕ್ಷಕರಾಗಿ ಉತ್ತರ ಕೊಡುತ್ತೇವೆ. ಇಂತಹ ದಾಳಿ ಇಂದಿಗೇ ಕೊನೆಯಾಗಬೇಕು. ಹಿಂದೂ ತಾಯಂದಿರು ಎಚ್ಚರ ಆಗಬೇಕು. ಸೌಟು ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು. ಅನ್ಯಾಯವಾದಾಗ ತಲವಾರು, ಕತ್ತಿ, ಹಿಡಿಯಲು ಸಿದ್ಧರಾಗಬೇಕು, ನಮ್ಮ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂಬ ಎಚ್ಚರಿಕೆ ಕೊಡಬೇಕು” ಎಂದು ಪ್ರಚೋದನೆ ನೀಡುವ ಹೇಳಿಕೆ ನೀಡಿದ್ದಾರೆ.

ಈ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಕೂಡ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬಂದೋಬಸ್ತಿನಲ್ಲಿದ್ದ ಸ್ಥಳೀಯ ಅಧಿಕಾರಿಯೊಬ್ಬರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಇವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು ಮತ್ತು ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಕಾಂಗ್ರೆಸ್ ಶುಕ್ರವಾರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...