Homeರಾಷ್ಟ್ರೀಯದೆಹಲಿ ಹನುಮ ಜಯಂತಿ ಘರ್ಷಣೆ: ಎರಡೂ ಸಮುದಾಯಗಳ 23 ಆರೋಪಿಗಳ ಬಂಧನ

ದೆಹಲಿ ಹನುಮ ಜಯಂತಿ ಘರ್ಷಣೆ: ಎರಡೂ ಸಮುದಾಯಗಳ 23 ಆರೋಪಿಗಳ ಬಂಧನ

- Advertisement -
- Advertisement -

ವಾಯುವ್ಯ ದೆಹಲಿಯ ಜಹಾಂಗೀರ್‌‌ಪುರಿಯಲ್ಲಿ ಶನಿವಾರ ಸಂಜೆ ನಡೆದ ಹಿಂಸಾಚಾರದಲ್ಲಿ 23 ಮಂದಿಯನ್ನು ಬಂಧಿಸಲಾಗಿದ್ದು, ಆರೋಪಿಗಳಲ್ಲಿ ‘ಎರಡೂ ಸಮುದಾಯ’ಕ್ಕೆ ಸೇರಿದವರು ಇದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಹಿಂಸಾಚಾರದಲ್ಲಿ ಎಂಟು ಪೊಲೀಸರು ಮತ್ತು ನಾಗರಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

“ಎರಡೂ ಸಮುದಾಯಕ್ಕೆ ಸೇರಿದ 23 ಜನರನ್ನು ಬಂಧಿಸಲಾಗಿದೆ. ಅದರಲ್ಲಿ ಎಂಟು ಮಂದಿ ಈ ಹಿಂದೆ ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿರುವ ದಾಖಲೆಯನ್ನು ಹೊಂದಿದ್ದಾರೆ. ವರ್ಗ, ಧರ್ಮ, ಸಮುದಾಯ ಮತ್ತು ಧರ್ಮವನ್ನು ಲೆಕ್ಕಿಸದೆ ಯಾವುದೇ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನ ಅವರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಕರಣವನ್ನು ಕ್ರೈಂ ಬ್ರಾಂಚ್ ತನಿಖೆ ನಡೆಸುತ್ತಿದೆ. 14 ತಂಡಗಳನ್ನು ರಚಿಸಲಾಗಿದೆ. ನಾಲ್ಕು ವಿಧಿವಿಜ್ಞಾನ ತಂಡಗಳು ಇಂದು ಅಪರಾಧ ಸ್ಥಳಗಳಿಗೆ ಭೇಟಿ ನೀಡಿ ಮಾದರಿಗಳನ್ನು ಸಂಗ್ರಹಿಸಿವೆ. ಸಿಸಿಟಿವಿ ದೃಶ್ಯಗಳು ಮತ್ತು ಡಿಜಿಟಲ್ ಮಾಧ್ಯಮಗಳ ವಿಶ್ಲೇಷಣೆಯನ್ನು ಮಾಡಲಾಗುತ್ತಿದೆ” ಎಂದು ಅಸ್ತಾನಾ ಹೇಳಿದ್ದಾರೆ.

ಇದನ್ನೂ ಓದಿ: ಕೇಜ್ರಿವಾಲ್‌ ಅವರ ನಕಲಿ ವಿಡಿಯೋ ಪ್ರಸಾರ: ದೆಹಲಿ ಬಿಜೆಪಿ ನಾಯಕನ ಮನೆಯಲ್ಲಿ ಪಂಜಾಬ್ ಪೊಲೀಸರು!

“ಕೆಲವರು ಸಾಮಾಜಿಕ ಮಾಧ್ಯಮದ ಮೂಲಕ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ನಾವು ಸಾಮಾಜಿಕ ಮಾಧ್ಯಮವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ತಪ್ಪು ಮಾಹಿತಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು” ಎಂದು ಅವರು ವಿನಂತಿಸಿದ್ದಾರೆ.

ಬಂಧಿತರಿಂದ ಐದು ಬಂದೂಕುಗಳು ಮತ್ತು ಐದು ಕತ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಈಗಾಗಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬಂಧಿತ ಆರೋಪಿ ಅಸ್ಲಂ ಎಂಬಾತ ದೆಹಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮೆದಲಾಲ್ ಮೀನಾ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದು, ಆತನಿಂದ ದೇಶಿ ನಿರ್ಮಿತ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

ಬಂದೂಕಿನೊಂದಿಗೆ ಇದ್ದ ಸೋನು ಚಿಕ್ನಾ ಎಂದು ಗುರುತಿಸಲಾದ ಮತ್ತೊಬ್ಬ ವ್ಯಕ್ತಿ ಪರಾರಿಯಾಗಿದ್ದಾನೆ. ಪೊಲೀಸರು ಆತನ ಅತ್ತಿಗೆಯನ್ನು ಪ್ರಶ್ನಿಸಲು ಪ್ರಯತ್ನಿಸುತ್ತಿದ್ದಾಗ ಮಹಿಳೆಯರ ನೇತೃತ್ವದ ಪ್ರತಿಭಟನಾಕಾರರ ಗುಂಪು ಅವರ ಮೇಲೆ ಕಲ್ಲು ತೂರಾಟ ಮಾಡಿದೆ.

ಶನಿವಾರ ಸಂಜೆ ಹನುಮ ಜಯಂತಿ ಮೆರವಣಿಗೆ ವೇಳೆ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿದೆ. ಎರಡೂ ಕಡೆಯವರು ಹಿಂಸಾಚಾರಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ. ಹನುಮ ಜಯಂತಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರು ಆಯುಧಗಳನ್ನು ಹಿಡಿದು ಮಸೀದಿಯನ್ನು ಧ್ವಂಸ ಮಾಡಲು ಯತ್ನಿಸಿದರು ಎಂದು ಆ ಪ್ರದೇಶದ ಮುಸ್ಲಿಮರು ಆರೋಪಿಸಿದ್ದಾರೆ.

ಮಸೀದಿಯಲ್ಲಿ ಕೇಸರಿ ಧ್ವಜವನ್ನು ಹಾರಿಸಲು ಪ್ರಯತ್ನಿಸಲಾಗಿದೆ ಎಂಬ ಹೇಳಿಕೆಯನ್ನು ಪೊಲೀಸ್ ಕಮಿಷನರ್ ರಾಕೇಶ್ ಅಸ್ಥಾನ ನಿರಾಕರಿಸಿದ್ದು, ಘರ್ಷಣೆಗೆ ಕಾರಣವೇನು ಎಂಬುದನ್ನು ಕಂಡುಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ: ಹನುಮ ಜಯಂತಿ ಮೆರವಣಿಗೆ ವೇಳೆ ಹಿಂಸಾಚಾರ 

ಮೆರವಣಿಗೆಯಲ್ಲಿ ಭಾಗವಹಿಸಿದವರು ತಾವು ಶಸ್ತ್ರಾಸ್ತ್ರಗಳನ್ನು ಹೊಂದಿದ್ದೆವು ಎಂದು ಒಪ್ಪಿಕೊಂಡಿದ್ದು, ಆದರೆ ಹಿಂಸಾಚಾರವನ್ನು ಮುಸ್ಲಿಮರು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಮುಸ್ಲಿಮರು ತಮ್ಮ ಮೇಲೆ ಕಲ್ಲುಗಳನ್ನು ಎಸೆದಿದ್ದಾರೆ ಎಂದು ಅವರು ಹೇಳಿದ್ದಾರೆ.

ಕಳೆದ ವಾರ ಗುಜರಾತ್, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ರಾಮ ನವಮಿಯ ಆಚರಣೆಯ ಸಂದರ್ಭದಲ್ಲಿ ಕೋಮು ಘರ್ಷಣೆಗಳು ಸಂಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...