Homeಕರ್ನಾಟಕಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದೇ ಪಿಎಸ್ಐ ಆತ್ಮಹತ್ಯೆಗೆ ಕಾರಣ: ಎಚ್‌ಡಿಕೆ

ಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದೇ ಪಿಎಸ್ಐ ಆತ್ಮಹತ್ಯೆಗೆ ಕಾರಣ: ಎಚ್‌ಡಿಕೆ

ಆತ್ಮಹತ್ಯೆ ಮಾಡಿಕೊಂಡ ಕಿರಣ್ ಕುಮಾರ್ ಅವರ ಮೊಬೈಲ್ ಫೋನನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಜಪ್ತಿ ಮಾಡಿದ್ದು ಹಲವು ಶಂಕೆಗಳಿಗೆ ಎಡೆಮಾಡಿಕೊಟ್ಟಿದೆ.

- Advertisement -
- Advertisement -

ನಿನ್ನೆ ಅಸಹಜ ಸಾವೀಗೀಡಾಗಿರುವ ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪಿಎಸ್‌ಐ ಕಿರಣ್‌ಕುಮಾರ್ ಆತ್ಮಹತ್ಯೆ ಪ್ರಕರಣವನ್ನು ತಕ್ಷಣ ಉನ್ನತಮಟ್ಟದ ತನಿಖೆಗೆ ಆದೇಶಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಪೊಲೀಸರು ಮತ್ತು ಹಿರಿಯ ಪೊಲೀಸ್ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಟ ಮಾಡುವ ಪರಿಸ್ಥಿತಿಯಲ್ಲಿ ಅವರ ಆತ್ಮಾಭಿಮಾನ, ಸ್ವಾಭಿಮಾನಕ್ಕೆ ಧಕ್ಕೆ ತರುವಂತೆ ಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದೇ ಪಿಎಸ್ಐ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದಿದ್ದಾರೆ.

ಸೂಕ್ತ ತನಿಖೆಗೆ ಆದೇಶಿಸುವ ಮೂಲಕ ಕಿರಿಯ ಹಂತದ ಪೊಲೀಸ್ ಅಧಿಕಾರಿಗಳಲ್ಲಿ ನೈತಿಕ, ಸ್ಥೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕು. ಹಿಂದೆ ಗಣಪತಿ ಭಟ್, ಮಲ್ಲಿಕಾರ್ಜುನ ಬಂಡೆ, ಕಲ್ಲಪ್ಪ ಹಂಡಿಬಾಗ್ ಅವರ ಅಕಾಲಿಕ ಸಾವು ಮತ್ತು ಅನುಪಮಾ ಶೆಣೈ ಅವರ ರಾಜೀನಾಮೆ ವೇಳೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯದಾದ್ಯಂತ “ಜಾಗಟೆ” ಬಾರಿಸಿದ್ದ ಬಿಜೆಪಿ ಈಗ ಮೌನಕ್ಕೆ ಶರಣಾಗಿದೆ ಎಂದು ಟೀಕಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಕಿರಣ್ ಕುಮಾರ್ ಅವರ ಮೊಬೈಲ್ ಫೋನನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಜಪ್ತಿ ಮಾಡಿದ್ದು ಹಲವು ಶಂಕೆಗಳಿಗೆ ಎಡೆಮಾಡಿಕೊಟ್ಟಿದೆ. ಇವರ ಸಾವಿಗೆ ಆಯಕಟ್ಟಿನ ಜಾಗದಲ್ಲಿ ಕುಳಿತ ಹಿರಿಯ ಪೊಲೀಸ್ ಅಧಿಕಾರಿಗಳ ದೌರ್ಜನ್ಯ ಹಾಗೂ ಬೆದರಿಕೆ ತಂತ್ರ ಕಾರಣ ಎಂಬ ಮಾಹಿತಿ ನನಗಿದೆ ಎಂದು ಎಚ್‌ಡಿಕೆ ಹೇಳಿದ್ದಾರೆ.

ಬೇರೆ ಪಕ್ಷಗಳ ಆಡಳಿತಾವಧಿಯಲ್ಲಿ ಅಧಿಕಾರಿಗಳ ನಿಗೂಢ ಸಾವಿಗೆ ಸರ್ಕಾರವೇ ಕಾರಣ ಎಂದು ಬೊಬ್ಬೆ ಹಾಕಿದ್ದ ಬಿಜೆಪಿ ವರ್ಷದಿಂದ ಆಡಳಿತ ಚುಕ್ಕಾಣಿ ಹಿಡಿದಿದೆ. ಈಗ ಪಿ.ಎಸ್.ಐ, ಇದಕ್ಕೂ ಮುನ್ನ ಐಎಎಸ್ ಅಧಿಕಾರಿ, ಕಳೆದ ವರ್ಷ ಐ.ಎಫ್.ಎಸ್. ಅಧಿಕಾರಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸರ್ಕಾರ ದಿವ್ಯ ಮೌನಕ್ಕೆ ಶರಣಾಗಿರುವುದು ಸರಿಯಲ್ಲ ಎಂದಿದ್ದಾರೆ.

ಈ ಹಿಂದೆ ಪೊಲೀಸ್ ಅಧಿಕಾರಿಗಳು ಆತ್ಮಹತ್ಯೆಗೆ ಶರಣಾದಾಗ ನ್ಯಾಯಸಮ್ಮತ ತನಿಖೆಗೆ ಒತ್ತಡ ಹೇರುತ್ತಿದ್ದ ಬಿಜೆಪಿ ಈ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ತಕ್ಷಣ ಆದೇಶ ನೀಡಬೇಕು. ಯಾವುದೇ ಇಲಾಖೆಯಲ್ಲಿಯೂ ಪ್ರಾಮಾಣಿಕ ಅಧಿಕಾರಿಗಳು ಕಿರುಕುಳಕ್ಕೆ ಒಳಗಾಗದಂತೆ ಎಚ್ಚರವಹಿಸಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಚನ್ನರಾಯಪಟ್ಟಣ ಪಿಎಸ್ಐ ಕಿರಣ್ ಕುಮಾರ್‌ ಅಸಹಜ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...