Homeಕರ್ನಾಟಕಬಾಗಲಕೋಟೆಯನ್ನೂ ಬಿಡಲಿಲ್ಲ ಬಿಜೆಪಿಯ ಬಂಡಾಯದ ಬಿಸಿ; ಒಗ್ಗಟ್ಟಾದ ಚರಂತಿಮಠ ವಿರುದ್ಧದ ಧ್ವನಿಗಳು

ಬಾಗಲಕೋಟೆಯನ್ನೂ ಬಿಡಲಿಲ್ಲ ಬಿಜೆಪಿಯ ಬಂಡಾಯದ ಬಿಸಿ; ಒಗ್ಗಟ್ಟಾದ ಚರಂತಿಮಠ ವಿರುದ್ಧದ ಧ್ವನಿಗಳು

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಮಂಗಳವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಈ ಪಟ್ಟಿ ಬಿಡುಗಡೆಯ ಬಳಿಕ ರಾಜ್ಯದ ಬಹುತೇಕ ಕಡೆಗಳಲ್ಲಿ ಬಂಡಾಯ ಜೋರಾಗಿಯೇ ಸದ್ದು ಮಾಡುತ್ತಿದೆ. ಇದೀಗ ಬಾಗಲಕೋಟೆಯಲ್ಲೂ ಬಿಜೆಪಿಯ ಬಂಡಾಯದ ಬಿಸಿ ಜೋರಾಗಿದೆ. ಸಧ್ಯ ಹಾಲಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ಮತ್ತೆ ಟಿಕೆಟ್ ಘೋಷಣೆಯಾಗಿದ್ದು, ಅವರ ಸಹೋದರ ಹಾಗೂ ಹಲವು ಬಿಜೆಪಿ ಮುಖಂಡರು ವಿರೋಧ ವ್ಯಕ್ತಪಡಿಸಿ ಬಂಡಾಯದ ಬಾವುಟ ಹಾರಿಸಲು ಸಿದ್ಧರಾಗಿದ್ದಾರೆ.

ಬುಧವಾರ ಬೆಳಿಗ್ಗೆ ಬಿಜೆಪಿಯ ಯುವ ಮುಖಂಡ, ಶಾಸಕ ಚರಂತಿಮಠ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರು, ತಮ್ಮ ಅಭಿಮಾನಿಗಳು, ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾನು ಇಲ್ಲವೇ ಸಂತೋಷ ಹೊಕ್ರಾಣಿ ಕಣಕ್ಕೆ ಇಳಿಯುವುದು ನಿಶ್ಚಿತ ಎಂದು ಘೋಷಣೆ ಮಾಡಿದರು.

”ಈಗಾಗಲೇ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ್ಯಾಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ನಾನು ಇಲ್ಲವೇ ಸಂತೋಷ ಹೊಕ್ರಾಣಿ ಇಬ್ಬರಲ್ಲಿ ಒಬ್ಬರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿ ಸಲಿದ್ದೇವೆ” ಎಂದು ತಿಳಿಸಿದರು.

ಈ ವೇಳೆ ಯುವ ಮುಖಂಡ ಸಂತೋಷ ಹೊಕ್ರಾಣಿ ಮಾತನಾಡಿ, ”ಬೂತ ಮಟ್ಟದಲ್ಲಿ ಕಾರ್ಯಕರ್ತರು ಕೆಲಸ ಮಾಡಿ ಗೆಲ್ಲಿಸುವ ಕೆಲಸವನ್ನು ಎಲ್ಲರೂ ಮಾಡಬೇಕು. ಈಗಾಗಲೇ ನಗರ ಹಾಗೂ ಗ್ರಾಮೀಣ ಭಾಗ ದಲ್ಲಿ ಪ್ರಚಾರ ನಡೆಸಿದ್ದು ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜನಪ್ರತಿನಿಧಿಗಳ ಬಗ್ಗೆ ಆಕ್ರೋಶ
ವ್ಯಕ್ತಪಡಿಸುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಈಶ್ವರಪ್ಪ ನಿವೃತ್ತಿ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ಪಾಲಿಕೆಯ ಮೇಯರ್, ಉಪಮೇಯರ್ ಸೇರಿ 19 ಸದಸ್ಯರಿಂದ ರಾಜೀನಾಮೆ

ಈ ವೇಳೆ ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಗಂಗಾಧರ ಮುರನಾಳ ಮಾತನಾಡಿ, ”ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಚರಂತಿಮಠ ಇಲ್ಲವೇ ಸಂತೋಷ ಹೊಕ್ರಾಣಿ ಸ್ಪರ್ಧಿಸಲಿದ್ದಾರೆ ಅವರನ್ನು ಗೆಲ್ಲಿಸುವುದು ನಮ್ಮ ಗುರಿಯಾಗಿದೆ” ಎಂದರು.

”ನಾನು ಕಳೆದ ಹಲವು ವರ್ಷಗಳಿಂದ ಸಂಘ ಪರಿವಾರದಲ್ಲಿ ಕೆಲಸ ಮಾಡುತ್ತಾ ಬಂದಿದ್ದು ಈಗಲೂ ಕೆಲಸ ಮಾಡುತ್ತಿದ್ದೇನೆ. ಯಾರೂ ಬಂಡಾಯದ ಕುರಿತು ಹೆದರಬೇಡಿ ಧೈರ್ಯದಿಂದ ಮುನ್ನುಗಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವಂತಹ ಕೆಲಸ ಮಾಡಬೇಕಾಗಿದೆ. ಬದಲಾವಣೆ ಆಗುತ್ತಾರೆ ಎಂದು ನೋಡಿದೆವು ಆದರೆ ಅವರು ಯಾವುದೇ ಕಾರಣಕ್ಕೂ ಬದಲಾವಣೆ ಆಗುವುದಿಲ್ಲ. ನಾಯಿ ಬಾಲ ಯಾವತ್ತೂ ಡೊಂಕು ಇದ್ದಂತೆ” ಎಂದು ಸ್ಥಳೀಯ ಶಾಸಕ ವೀರಣ್ಣ ಚರಂತಿಮಠ ಬಗ್ಗೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಹಿಂದು ಸಂಘಟನೆಯ ಮುಖಂಡ ಅಶೋಕ ಮುತ್ತಿನಮಠ ಮಾತನಾಡಿ, ”ಅನ್ಯಾಯದ ವಿರುದ್ದ ನಮ್ಮ
ಹೋರಾಟವಾಗಿದ್ದು, ಇದರಲ್ಲಿ ಜಯಶಾಲಿಯಾಗುತ್ತೇವೆ. ಇಂದು ಆಯೋಜಿಸಿದ್ದ ”ಬದಲಾವಣೆಗಾಗಿ ಪಾದಯಾತ್ರೆ”ಗೆ ಚುನಾವಣಾಧಿಕಾರಿಗಳು ಅವಕಾಶ ನೀಡದ ಹಿನ್ನೆಲೆಯಲ್ಲಿ ಪಾದಯಾತ್ರೆ ಯನ್ನು ರದ್ದುಪಡಿಸಲಾಗಿದೆ” ಎಂದು ತಿಳಿಸಿದರು.

ಈ ಸಭೆಯಲ್ಲಿ ಪ್ರಮುಖರಾದ ಬಸವರಾಜ ಕಟಗೇರಿ, ವಿಜಯ ಸುಲಾಖೆ, ಅರುಣ ಲೋಕಾಪೂರ, ಗುರು ಅನಗವಾಡಿ, ಬಸವರಾಜ ಮಾ ಟೂರ ಸೇರಿದಂತೆ ನೂರಾರು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

ಕಾಮಧೇನು ಸಂಸ್ಥೆಯ ಅಧ್ಯಕ್ಷ ರವಿ ಕುಮಟಗಿ ಮಾತನಾಡಿ, ಸ್ಥಳೀಯರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಬಾಗಲಕೋಟೆ ಮತಕ್ಷೇತ್ರದ ಶಾಸಕರು ಯಾವುದೇ ಕೆಲಸ ಮಾಡಿಲ್ಲ. ಜನರು ಬೇಸತ್ತಿದ್ದು ನಮ್ಮ ತಂಡವು ಯುವಕರಿಂದ ಕೂಡಿದ್ದು ನಮ್ಮನ್ನು ಆಯ್ಕೆ ಮಾಡಿದರೆ ಯುವಕರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ
ಕೆಲಸ ಮಾಡುತ್ತೇವೆ. ಸಮಗ್ರವಾಗಿ ಬಾಗಲಕೋಟೆ ಮತಕ್ಷೇತ್ರವನ್ನು ಅಭಿವೃದ್ದಿ ಮಾಡುತ್ತೇವೆ ಎಂದರು. ನಮ್ಮನ್ನು ಗೆಲ್ಲಿಸಲು ಕಾರ್ಯಕರ್ತರು ಪಣ ತೊಡಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...