Homeಚಳವಳಿ'ಕ್ರೌರ್ಯದ ಪರಮಾವಧಿ' | ಬಿಹಾರ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ - ಪ್ರಿಯಾಂಕಾ ಟೀಕೆ

‘ಕ್ರೌರ್ಯದ ಪರಮಾವಧಿ’ | ಬಿಹಾರ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ – ಪ್ರಿಯಾಂಕಾ ಟೀಕೆ

- Advertisement -
- Advertisement -

ಪಾಟ್ನಾದಲ್ಲಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಆಡಳಿತ ಪಕ್ಷದ ಏಕೈಕ ಗುರಿ ತನ್ನ ಕುರ್ಚಿಯನ್ನು ಉಳಿಸುವುದಾಗಿದೆ ಎಂದು ಹೇಳಿದ್ದಾರೆ. ಉದ್ಯೋಗ ಕೇಳುತ್ತಿರುವವರು ದೌರ್ಜನ್ಯಕ್ಕೊಳಗಾಗುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಬಿಹಾರ ವಿದ್ಯಾರ್ಥಿಗಳ

ಬಿಹಾರ ಪಬ್ಲಿಕ್ ಸರ್ವಿಸ್ ಕಮಿಷನ್ (BPSC) ನಡೆಸಿದ ಡಿಸೆಂಬರ್ 13 ರ ಸಂಯೋಜಿತ ಪ್ರಾಥಮಿಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ಪಾಟ್ನಾದಲ್ಲಿ ಬುಧವಾರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಹಿಂಸಾಚಾರ ನಡೆದಿದ್ದು, ಪೊಲೀಸರು ಉದ್ಯೋಗ ಆಕಾಂಕ್ಷಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ.

ಪೊಲೀಸರು ನಡೆಸಿದ ಲಾಠಿ ಚಾರ್ಜ್ ವೇಳೆ ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದು, ಆದರೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈ ಆರೋಪವನ್ನು ನಿರಾಕರಿಸಿದ್ದಾರೆ. ಬಿಹಾರ ವಿದ್ಯಾರ್ಥಿಗಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಕೈ ಕಟ್ಟಿ ನಿಂತ ಯುವಕರ ಮೇಲೆ ಲಾಠಿ ಚಾರ್ಜ್ ಕ್ರೌರ್ಯದ ಪರಮಾವಧಿಯಾಗಿದೆ. ಬಿಜೆಪಿ ಆಡಳಿತದಲ್ಲಿ ಉದ್ಯೋಗಕ್ಕಾಗಿ ಬೇಡಿಕೆಯಿರುವ ಯುವಕರನ್ನು ಲಾಠಿಯಿಂದ ಥಳಿಸಲಾಗುತ್ತದೆ. ಉತ್ತರ ಪ್ರದೇಶ, ಬಿಹಾರ ಅಥವಾ ಮಧ್ಯಪ್ರದೇಶ ಇರಲಿ ಯುವಕರು ಧ್ವನಿ ಎತ್ತಿದರೆ, ಅವರನ್ನು ಅಮಾನುಷವಾಗಿ ಥಳಿಸಲಾಗುತ್ತದೆ” ಎಂದು ಪ್ರಿಯಾಂಕಾ ಹೇಳಿದ್ದಾರೆ.

ಬಿಹಾರ ಲೋಕಸೇವಾ ಆಯೋಗದ (ಬಿಪಿಎಸ್‌ಸಿ) ಆಕಾಂಕ್ಷಿಗಳ ಮೇಲೆ ಪೊಲೀಸರು ಬುಧವಾರ ಲಾಠಿ ಚಾರ್ಜ್ ಮಾಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆ ಆಕಾಂಕ್ಷಿಗಳು ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪಟ್ನಾದಲ್ಲಿರುವ ಆಯೋಗದ ಕಚೇರಿಗೆ “ಘೇರಾವ್” ಮಾಡಲು ಜಮಾಯಿಸಿದ ಪೊಲೀಸರು ಆಕಾಂಕ್ಷಿಗಳ ಮೇಲೆ ದಾಳಿ ಮಾಡಿದ್ದಾರೆ. ಲಾಠಿ ಚಾರ್ಜ್ ನಂತರ ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಪೊಲೀಸರು, ಆಕಾಂಕ್ಷಿಗಳ ಮೇಲೆ “ಸೌಮ್ಯ ಬಲ”ವನ್ನು ಪ್ರಯೋಗಿಸಿರುವುದಾಗಿ ಹೇಳಿದ್ದು, ಯಾವುದೆ ವಿದ್ಯಾರ್ಥಿಗಳಿಗೆ ಗಾಯಗಳಾಗಿಲ್ಲ ಎಂದು ಹೇಳಿದ್ದಾರೆ.

ಅದಾಗ್ಯೂ, ಕೋಚಿಂಗ್ ಶಿಕ್ಷಕರು ಆಕಾಂಕ್ಷಿಗಳನ್ನು ಪ್ರತಿಭಟನೆಗೆ ಪ್ರೇರೇಪಿಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಆರೋಪಿಸಿದ್ದು, ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಹಲವಾರು ಸಾಮಾಜಿಕ ಮಾಧ್ಯಮ ಖಾತೆಗಳನ್ನು ಹೆಸರಿಸಿದ್ದಾರೆ.

ಮಂಗಳವಾರ, BPSC ಅಧ್ಯಕ್ಷ ಪರ್ಮಾರ್ ರವಿ ಮನುಭಾಯಿ ಅವರು ಈ ತಿಂಗಳ ಆರಂಭದಲ್ಲಿ ನಡೆದ 70 ನೇ ಇಂಟಿಗ್ರೇಟೆಡ್ ಕಂಬೈನ್ಡ್ ಸ್ಪರ್ಧಾತ್ಮಕ ಪರೀಕ್ಷೆ (CCE) 2024 ರ ರದ್ದತಿಯನ್ನು ತಳ್ಳಿಹಾಕಿದ್ದರು. ಮಂಗಳವಾರ, ಖಾನ್ ಸರ್ ಎಂದು ಜನಪ್ರಿಯರಾಗಿರುವ ಯೂಟ್ಯೂಬರ್ ಮತ್ತು ಶಿಕ್ಷಣತಜ್ಞ ಫೈಸಲ್ ಖಾನ್ ಅವರು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ್ದಾರೆ.

ಬಿಹಾರ ಲೋಕಸೇವಾ ಆಯೋಗದ (ಬಿಪಿಎಸ್‌ಸಿ) ಅಧ್ಯಕ್ಷ ಪರ್ಮಾರ್ ರವಿ ಮನುಭಾಯಿ ಮಂಗಳವಾರ (ಡಿಸೆಂಬರ್ 24, 2024) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದಲ್ಲಿ ಸಿಲುಕಿರುವ ಈ ತಿಂಗಳ ಆರಂಭದಲ್ಲಿ ನಡೆದ 70ನೇ ಇಂಟಿಗ್ರೇಟೆಡ್ ಕಂಬೈನ್ಡ್ ಸ್ಪರ್ಧಾತ್ಮಕ ಪರೀಕ್ಷೆ (ಸಿಸಿಇ) 2024 ರ ರದ್ದತಿಯನ್ನು ತಳ್ಳಿಹಾಕಿದ್ದಾರೆ.

ಡಿಸೆಂಬರ್ 13 ರಂದು ಬಾಪು ಪರೀಕ್ಷಾ ಪರಿಸರ ಪರೀಕ್ಷಾ ಕೇಂದ್ರಕ್ಕೆ ನಿಯೋಜಿಸಲಾದ ಅಭ್ಯರ್ಥಿಗಳ ಮರುಪರೀಕ್ಷೆ ನಡೆಸುತ್ತೇವೆ ಎಂದು BPSC ಸ್ಪಷ್ಟಪಡಿಸಿದ್ದು, ಮರು ಪರೀಕ್ಷೆಯನ್ನು ಜನವರಿ 4, 2025 ರಂದು ನಡೆಸಲಾಗುವುದು ಎಂದು ಹೇಳಿದೆ.

ಇದನ್ನೂ ಓದಿ: ಬಿಹಾರ ಪ್ರಶ್ನೆ ಪತ್ರಿಕೆ ಸೋರಿಕೆ | ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್; ಸೌಮ್ಯ ಬಲ ಪ್ರಯೋಗ ಎಂದ ಪೊಲೀಸ್!

ಬಿಹಾರ ಪ್ರಶ್ನೆ ಪತ್ರಿಕೆ ಸೋರಿಕೆ | ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್; ಸೌಮ್ಯ ಬಲ ಪ್ರಯೋಗ ಎಂದ ಪೊಲೀಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...