Homeಕರ್ನಾಟಕ'ಈ ನೆಲದ ಪರಂಪರೆಯೇ ಸರ್ವ ಜನಾಂಗದ ಶಾಂತಿಯ ತೋಟ..'; ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್

‘ಈ ನೆಲದ ಪರಂಪರೆಯೇ ಸರ್ವ ಜನಾಂಗದ ಶಾಂತಿಯ ತೋಟ..’; ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್

- Advertisement -
- Advertisement -

ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿ ಮಾತನಾಡಿದರು.

ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಅವರು ಇಂದು ಉದ್ಘಾಟಿಸಿದರು.

“ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಿಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ. ದಸರಾ ಎಂದರೆ ಕೇವಲ ಹಬ್ಬವಲ್ಲ, ಇದು ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಕ್ಕೂ ಈ ಮಣ್ಣಿನ ಬಾರಿಸುದಾರಿಕೆ, ಸ್ಪಂದನೆ ಮತ್ತು ನೆನಪುಗಳಿವೆ” ಎಂದರು.

“ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು,ಕನ್ನಡ ಭಾಷೆಯ ಅಂತರಾಳದ ಹೃದಯಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ. ಸಂಸ್ಕೃತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ. ವಿಭಿನ್ನತೆಯಲ್ಲೇ ಏಕತೆಯ ಸುಗಂಧ. ಮಹಾರಾಜರು ಜಯಚಾಮರಾಜೇಂದ್ರ ಒಡೆಯರು ಮುಸ್ಲಿಂರ ನಂಬಿ, ಅವರನ್ನು ಅನುಮಾನಿಸದೇ, ಅಂಗರಕ್ಷಕರ ಪಡೆಯ ಸದಸ್ಯರಾಗಿದ್ದರು, ಇದು ನಮಗೆ ಬಹಳ ಹೆಮ್ಮೆಯ ಮತ್ತು ಅಪ್ಯಾಯಮಾನವಾದ ವಿಷಯ. ಸಂಸ್ಕೃತಿ ಎಂದರೆ ಹೃದಯದಗಲವನ್ನು ಹುಟ್ಟಿಸುವ ನನ್ನ ಧಾರ್ಮಿಕ ನಂಬಿಕೆ, ಯಾವಗಾಗಲೂ ಜೀವ ಪರ ಮಾನವೀಯಪರ. ಈ ನೆಲದ ಸಂಸ್ಕೃತಿಯ ಮೂಲ- ಎಲ್ಲರನ್ನೊಳಗೊಳ್ಳುವ ಎಲ್ಲರ ಬದುಕನ್ನು ಗೌರವಿಸುವ, ನಮ್ಮೆಲ್ಲರ ಸರ್ವ ಜನಾಂಗದ ಶಾಂತಿಯ ತೋಟ” ಎಂದರು.

ದಸರಾ-ಶಾಂತಿಯ ಹಬ್ಬ, ಸೌಹಾರ್ದದ ಮೇಳ

“ಮೈಸೂರು ದಸರಾ ಘೋಷಣೆಯ ನಮ್ಮೆಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ. ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ, ಇದು ಸರ್ವಜನಾಂಗದ ಶಾಂತಿಯ ತೋಟ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಿ, ಪರಸ್ಪರರ ನಂಬಿಕೆಗಳನ್ನು, ಸಂಸ್ಕೃತಿಗಳನ್ನು ಗೌರವಿಸುವುದರ ಮೂಲಕ ನಮ್ಮ ಬದುಕನ್ನು ಶ್ರೀಮಂತಗೊಳಿಸಬೇಕಿದೆ. ಈ ನೆಲದ ಸುಗಂಧವನ್ನು ಐಕ್ಯತೆಯಾಗಲಿ, ನೆಲದ ಬಿಸಿಲು ಕೂಡ ಸಾಹಾರ್ದತೆಯಿಂದ ಕೂಡಿದೆ. ಈ ನೆಲದ ಬಿಸಿಲು ಕೂಡ ಮಾನವೀಯ ಪ್ರೀತಿಯ ಪ್ರತೀಕವಾಗಿದೆ. ಈ ಸಂದರ್ಭದಲ್ಲಿ ಚಾಮುಂಡಿ ತಾಯಿಯ ಮಹಿಮೆ ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಕವಾಗಿರಲಿ. ತಾಯಿ ಚಾಮುಂಡಿಯ ಸತ್ಯ, ಧೈರ್ಯ ಹಾಗೂ ರಕ್ಷಕತ್ವದ ಸಂಕೇತ. ನಮ್ಮೊಳಗಿನ ದ್ವೇಷ, ಅಸಹಿಷ್ಣುತೆಗಳನ್ನು ನಾಶವಾಗಲೆಂದು ಬಯಸುತ್ತೇನೆ. ಈ ದಸರಾ ಹಬ್ಬ ಕೇವಲ ಮೈಸೂರು ನಗರಕ್ಕೆ ಸೀಮಿತವಾಗದೇ, ನಮ್ಮ ನಾಡಿಗೆ ಮಾತ್ರ, ದೇಶಕ್ಕೆ ಮಾತ್ರ ಸೀಮಿತವಾಗದೇ, ಇಡೀ ಜಗಗತ್ತಿನಾದ್ಯಂತ ಮಾನವ ಕುಲಕ್ಕೆ ಶಾಂತಿ ಸಹಾನುಭೂತಿ, ಪ್ರೀತಿ ಮತ್ತು ನ್ಯಾಯದ ದೀಪವನ್ನು ಬೆಳೆಗಿಸಲೆಂದು ಹಾರೈಸುತ್ತೇನೆ. ಇಂದು ಬೆಳೆಗಿಸಿದ ದೀಪ ಈ ಸಂದೇಶದೊಂದಿಗೆ ಇಡೀ ಪ್ರಪಂಚದಾದ್ಯಂತ ತನ್ನ ನೆಲೆಯನ್ನು ಕಂಡುಕೊಳ್ಳಲಿ ಎಂದು ಆಶಿಸುತ್ತೇನೆ” ಎಂದರು.

ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವುದೇ ಬದುಕಿನ ನಿಜವಾದ ದಾರಿ

“ನನ್ನ ಬದುಕು ನನಗೆ ಅನೇಕ ಪಾಠಗಳನ್ನು ಕಲಿಸಿದೆ. ಅದರಲ್ಲಿ ಮುಖ್ಯಪಾಠವೆಂದರೆ, ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವ ದಾರಿ ಮಾತ್ರ ನಿಜವಾದ ದಾರಿ. ನನ್ನ ಧಾರ್ಮಿಕ ನಂಬಿಕೆಗಳು, ನನ್ನ ಜೀವನ ದರ್ಶನ ಎಂದಿಗೂ ಜೀವಪರ. ಅವು ಮರದ ನೆರಳಿನಂತೆ, ತಂಪಾದ ನದಿಯಂತೆ, ಇಂದಿನ ಜಗತ್ತು ಯುದ್ಧದ ಜ್ವಾಲೆಯಲ್ಲಿ ಸುಡುತ್ತಿದೆ. ಇಂದು ಮನುಕುಲವು ದ್ವೇಷ ಮತ್ತು ರಕ್ತಪಾತದಲ್ಲಿ ಮುಳುಗಿರುವಾಗ, ದಸರಾ ಘೋಷಣೆಯು ಎಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ, ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ. ಇದು ಸರ್ವಜನಾಂಗದ ಶಾಂತಿಯ ತೋಟ. ನನ್ನ ಜೀವನದ ದರ್ಶನ ಯಾವತ್ತಿಗೂ ಜೀವಪರ. ಅಸ್ತ್ರಗಳಿಂದಲ್ಲ, ಅಕ್ಷರದಿಂದ ಬದುಕನ್ನು ಗೆಲ್ಲಬಹುದು. ಹಗೆಗಳಿಂದಲ್ಲ, ಪ್ರೀತಿಯಿಂದ ಬದುಕನ್ನು ಅರಳಿಸಬಹುದು” ಎಂದು ಹೇಳಿದರು.

“ಈ ನೆಲದ ಪರಂಪರೆಯೇ ಸರ್ವಜನಾಂಗದ ಶಾಂತಿಯ ತೋಟವಾಗಿದೆ. ಈ ತೋಟದಲ್ಲಿ ಪ್ರತಿ ಹೂವು ತನ್ನ ಬಣ್ಣದಲ್ಲೇ ಅರಳಲಿ, ಪ್ರತಿ ಹಕ್ಕಿ ತನ್ನ ರಾಗದಲ್ಲೇ ಹಾಡಲಿ. ಆದರೆ, ಒಟ್ಟಿಗೆ ಸೇರಿದಾಗ ಅದು ಸೌಹಾರ್ದ ಸಿಂಫನಿಯಾಗಲಿ. ಪ್ರಜಾಪ್ರಭುತ್ವವು ಕೇವಲ ವ್ಯವಸ್ಥೆಯಲ್ಲ, ಅದು ಮೌಲ್ಯ. ಅದು ಪ್ರತಿಯೊಬ್ಬರ ಧ್ವನಿಯನ್ನು ಗೌರವಿಸುವ ಮನೋಭಾವ. ಅದು ಬೇರೆಯವರ ಬದುಕಿನಲ್ಲಿ ಅರ್ಥಪೂರ್ಣವಾಗಿ ನಡೆದುಕೊಳ್ಳುವ ಜವಾಬ್ದಾರಿ. ಅದನ್ನು ಗೌರವಿಸುವು ನಮ್ಮೆಲ್ಲರ ಕರ್ತವ್ಯ” ಎಂದರು.

ನಾವೆಲ್ಲಾ ಒಂದೇ ಗಗನದಡಿಯ ಪಯಣಿಗರು

“ನಾವು ಎಲ್ಲರೂ ಒಂದೇ ಗಗನದಡಿಯ ಪಯಣಿಗರು. ಆಕಾಶವು ಯಾರನ್ನೂ ಬೇರ್ಪಡಿಸುವುದಿಲ್ಲ. ಭೂಮಿ ಯಾರನ್ನೂ ತಳ್ಳುವುದಿಲ್ಲ. ಮನುಷ್ಯನು ಮಾತ್ರ ಗಡಿ ಹಾಕುತ್ತಾನೆ. ಆ ಗಡಿಗಳನ್ನು ನಾವೇ ಅಳಿಸಬೇಕು. ಇಂದು ಈ ಹಬ್ಬ ಮೈಸೂರಿನ ಬೀದಿಗಳಲ್ಲಿ ಮಾತ್ರವತ್ತ. ಇಡೀ ಜಗತ್ತಿನ ಹೃದಯಗಳಲ್ಲಿ ಬೆಳಗಲಿ” ಎಂದು ಹೇಳಿದರು.

“ಇತಿಹಾಸದತ್ತ ನೋಡಿದರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದೆಂದಿಗೂ ಪ್ರಸ್ತುತವಾಗುತ್ತಾರೆ. ಅವರು ಹಂಚಿಕೊಳ್ಳುವ ಮನದ ಅರಸ. ರಾಜಕೀಯ, ಆರ್ಥಿಕ, ಸಾಮಾಜಿಕ ನ್ಯಾಯದ ಔದಾರ್ಯದ ದೊರೆಯಾಗಿದ್ದರು. ಭೇದ ಭಾವಕ್ಕಿಂತ ವಿಶಾಲ ಮನಸ್ಸಿಗೆ ಗೌರವವಿತ್ತು. ಅವರು ನೀಡಿದ ಸಂದೇಶ ಸಂಪತ್ತನ್ನು ಹಂಚಿದಾದ ಮಾತ್ರ ಅದು ಬೆಳೆಯುತ್ತದೆ. ಶಕ್ತಿಯನ್ನು ಹಂಚಿಕೊಂಡಾಗ ಮಾತ್ರ ದೀರ್ಘಕಾಲ ಬದುಕತ್ತದೆ” ಎಂದರು.

ಸಂಸ್ಕೃತಿ ನಮ್ಮ ಬೇರು ಸೌಹಾರ್ದ ನಮ್ಮ ಶಕ್ತಿ

“ಸಂಸ್ಕೃತಿ ನಮ್ಮ ಬೇರು. ಸೌಹಾರ್ದ ನಮ್ಮ ಶಕ್ತಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಭಾರತದ ನೆಲೆಯಲ್ಲಿ ನಮ್ಮ ಯುವಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ , ಪ್ರೀತಿಯ ಹೊಸ ಸುಧಾರಿತ ಸಮಾಜವನ್ನು ಕಟ್ಟೋಣ” ಎಂದರು. ತಾನೊಬ್ಬ ಕವಿಯತ್ರಿಯಾಗಿದ್ದು, ಕವಿತೆಯ ಮೂಲಕ ನನ್ನ ಸಂದೇಶವನ್ನು ತಿಳಿಸಲು ಬಯಸಿದ್ದು, ಮುಸ್ಲಿಂ ಹೆಣ್ಣುಮಗಳು ಬಾಗಿನವನ್ನು ಪಡೆದಾಗಿನ ತನ್ನ ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸುವ ಕವಿತೆಯನ್ನು ಓದಿದರು.

ಮೈಸೂರು ದಸರಾ ಉತ್ಸವಕ್ಕೆ ಚಾಲನೆ ನೀಡಿದ ಅಂತಾರಾಷ್ಟ್ರೀಯ ಬೂಕರ್ ವಿಜೇತ ಲೇಖಕಿ ಬಾನು ಮುಷ್ತಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...