Homeಕರ್ನಾಟಕಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ತಾತ್ಕಾಲಿಕ ಬ್ರೇಕ್ ನೀಡಿದ ಹೈಕೋರ್ಟ್

ಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ತಾತ್ಕಾಲಿಕ ಬ್ರೇಕ್ ನೀಡಿದ ಹೈಕೋರ್ಟ್

- Advertisement -
- Advertisement -

ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2-ಎ ಮೀಸಲಾತಿ ನೀಡಬಾರದು ಮತ್ತು ಮೀಸಲು ಪ್ರವರ್ಗ ಮಾರ್ಪಾಡು ಮಾಡುವಂತೆ ಕೋರಿ ಯಾವುದೇ ಜಾತಿ, ಉಪಜಾತಿ, ಸಮುದಾಯ ಬುಡಕಟ್ಟುಗಳು ಸಲ್ಲಿಸುವ ವೈಯಕ್ತಿಕ ಬೇಡಿಕೆಗಳನ್ನು ರಾಜ್ಯ ಸರ್ಕಾರ ಪ್ರೋತ್ಸಾಹಿಸದಂತೆ ತಡೆ ನೀಡಬೇಕು ಎಂಬ ಮಧ್ಯಂತರ ಮನವಿಯನ್ನು ಹೈಕೋರ್ಟ್‌ ಮಾನ್ಯ ಮಾಡಿದೆ. ಈ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ಬಹುದಿನಗಳಿಂದ 2-ಎ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪಂಚಮಸಾಲಿ ಲಿಂಗಾಯತ ಸಮುದಾಯ, ಈ ಚುನಾವಣೆ ಹೊಸ್ತಿಲಲ್ಲಿ ಮೀಸಲಾತಿ ಹೋರಾಟ ಅಸ್ತ್ರ ಪ್ರಯೋಗಿಸಿತ್ತು. ರಾಜ್ಯ ಬಿಜೆಪಿ ಸರ್ಕಾರ, ಹೊಸದಾಗಿ 2-ಸಿ ಹಾಗು 2-ಡಿ ಎಂದು ಪ್ರವರ್ಗ ಸೃಷ್ಟಿಸಿ ಈ ಸಮುದಾಯಕ್ಕೆ ಮೂಗಿಗೆ ತುಪ್ಪ ಸವರುವ ಕೆಲಸಕ್ಕೆ ಮುಂದಾಯಿತು. ಆದರೆ ಪಂಚಮಸಾಲಿ ಸಮುದಾಯ ಮಾತ್ರ 2ಎ ಮೀಸಲಾತಿ ಪಟ್ಟಿಗೆ ಸೇರಿಸಲೇಬೇಕು ಎಂದು ಪಟ್ಟು ಹಿಡಿದಿದೆ.

ಇದೀಗ ಹೈಕೋರ್ಟ್, ಮುಂದಿನ ವಿಚಾರಣೆವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಹೀಗಾಗಿ, ಸಮುದಾಯದ ಪ್ರವರ್ಗ 2–ಎಗೆ ಸೇರ್ಪಡೆ ಮಾಡುವ ಬೇಡಿಕೆ ಹಾಗೂ ಸರ್ಕಾರದ 2–ಸಿ, 2–ಡಿ ಪ್ರವರ್ಗ ಸೃಷ್ಟಿ ಮಾಡಿರುವ ನಿರ್ಣಯದ ಪ್ರಕ್ರಿಯೆಗೆ ಈಗ ತಾತ್ಕಾಲಿಕ ತಡೆ ಬಿದ್ದಂತಾಗಿದೆ.

ಬೆಂಗಳೂರಿನ ಜ್ಞಾನಭಾರತಿಯ ಮೃತ್ಯುಂಜಯ ನಗರದ ನಿವಾಸಿ ಡಿ.ಜಿ ರಾಘವೇಂದ್ರ ಬಿನ್ ಸೂರ್ಯ ದೇವಾಡಿಗ ಅವರು ಈ ವಿಚಾರವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ಅಶೋಕ್‌ ಎಸ್‌.ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠವು ಗುರುವಾರ ವಿಚಾರಣೆ ನಡೆಸಿತು.

ದಿನದ ಕಲಾಪ ಮುಗಿಯುವಾಗ ಸಂಜೆ 5.45 ರಲ್ಲಿ ಅರ್ಜಿದಾರರ ಪರ ಹಿರಿಯ ವಕೀಲ ರವಿವರ್ಮ ಕುಮಾರ್‌ ಅವರು, ‘ಪಂಚಮಸಾಲಿ ಸಮುದಾಯಕ್ಕೆ 2-ಎ ಮೀಸಲಾತಿ ನೀಡಬೇಕು ಎಂಬ ಬೇಡಿಕೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು ರಾಜ್ಯ ಸರ್ಕಾರಕ್ಕೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದೆ. ಈ ವರದಿಯನ್ನು ರಾಜ್ಯ ಸರ್ಕಾರ ಇನ್ನೂ ಕೋರ್ಟ್‌ಗೆ ಸಲ್ಲಿಸಿಲ್ಲ’ ಎಂದು ಆಕ್ಷೇಪಿಸಿದರು.

ಇದಕ್ಕೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಹಾಜರಾಗಿ ಪ್ರತಿಕ್ರಿಯಿಸಿದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ, ‘ವರದಿ ಸರ್ಕಾರದ ಪರಿಶೀಲನೆಯಲ್ಲಿದೆ. ಸರ್ಕಾರ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ವರದಿಯ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ನೀಡಬೇಕು. ಹಾಗಾಗಿ, ತಡೆ ನೀಡಬಾರದು’ ಎಂದು ಮನವಿ ಮಾಡಿದರು.

ಇದಕ್ಕೆ ರವಿವರ್ಮ ಕುಮಾರ್ ಪ್ರತಿಕ್ರಿಯಿಸಿ, ‘ಸರ್ಕಾರ ಸಮಯ ತೆಗೆದುಕೊಳ್ಳಲು ನಮ್ಮ ತಕರಾರಿಲ್ಲ, ಆದರೆ ಕೆಲವು ಸಮುದಾಯಗಳು ಸರ್ಕಾರದ ಮೇಲೆ ಅಸಾಂವಿಧಾನಿಕ ಬೇಡಿಕೆಯ ಈಡೇರಿಕೆಗಾಗಿ ಒತ್ತಡ ಹೇರುತ್ತಿವೆ. ಹಾಗಾಗಿ ಈ ವಿಷಯದಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಲು ಅದೇಶಿಸಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಇದೇ 30ಕ್ಕೆ ನಿಗದಿಪಡಿಸಿ ಅಲ್ಲಿಯವರೆಗೂ ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಆದೇಶಿಸಿತು.

ಪಿಐಎಲ್ ನಲ್ಲಿ ಏನಿದೆ?

‘ದೇವಾಡಿಗ ಸಮುದಾಯಕ್ಕೆ ಸೇರಿದವನಾಗಿದ್ದು ಹಿಂದುಳಿದ ವರ್ಗಗಳಿಗೆ ದೊರೆಯುವ 2-ಎ ಮೀಸಲಾತಿಯ ಫಲಾನುಭವಿಯಾಗಿದ್ದೇನೆ‌. ಇತ್ತೀಚೆಗೆ ಲಿಂಗಾಯತ-ವೀರಶೈವ ಪಂಚಮಸಾಲಿ ಸಮುದಾಯದವರು ಪ್ರವರ್ಗ 2-ಎಗೆ ಸೇರಿಸಬೇಕು ಎಂ‌ಬ ಬೇಡಿಕೆಯನ್ನು ಮಂಡಿಸಿದ್ದಾರೆ. ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಂಚಮಸಾಲಿ ಸಮುದಾಯವನ್ನು 2-ಎಗೆ ಸೇರ್ಪಡೆ ಮಾಡುವುದನ್ನು ಖಚಿತಪಡಿಸಿದ್ದು ಅದಕ್ಕಾಗಿ 2022ರ ಡಿಸೆಂಬರ್‌ 29ರ ಗಡುವು ನೀಡಿದ್ದರು. ಒಂದು ವೇಳೆ ಈ ಬಲಾಢ್ಯ ಹಾಗೂ ಮುಂದುವರಿದ ಸಮುದಾಯವನ್ನು 2-ಎಗೆ ಸೇರ್ಪಡೆ ಮಾಡಿದರೆ ಹಿಂದುಳಿದ ವರ್ಗಗಳಿಗೆ ಭರಿಸಲಾಗದ ಅನ್ಯಾಯ ಉಂಟಾಗಲಿದೆ. ಹಾಗಾಗಿ, ಈ ಅರ್ಜಿ ಇತ್ಯರ್ಥವಾಗುವತನಕ ಮೀಸಲು ಪ್ರವರ್ಗಗಳನ್ನು ಮಾರ್ಪಾಡು ಮಾಡುವಂತೆ ಕೋರುವ ಬೇಡಿಕೆಗಳನ್ನು ಸರ್ಕಾರ ಪ್ರೋತ್ಸಾಹಿಸದಂತೆ ಮಧ್ಯಂತರ ತಡೆ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

‘ಇನ್ನು ಪಂಚಮಸಾಲಿ ಮೀಸಲಾತಿಗಾಗಿ ಹೋರಾಟದ ನೇತೃತ್ವ ವಹಿಸಿರುವ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ಇದೇ 13ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾವಿ ನಿವಾಸದ ಮುಂದೆ ಸತ್ಯಾಗ್ರಹ ನಡೆಸುವ ನಿರ್ಧಾರ ಮಾಡಿದ್ದಾರೆ. ಇದು ನ್ಯಾಯಾಂಗ ನಿಂದನೆ ನ್ಯಾಯಾಂಗ ನಿಂದನೆಯಾಗುತ್ತದೆ. ಕೋರ್ಟ್‌ ಆದೇಶ ಈ ಪ್ರಕ್ರಿಯೆಯಲ್ಲಿನ ಎಲ್ಲ ವಿಧವಾದ ನಡೆಗಳಿಗೂ ಅನ್ವಯ ಆಗುತ್ತದೆ. ಸತ್ಯಾಗ್ರಹವನ್ನು ಪ್ರಶ್ನಿಸಿ ವಿಚಾರಣೆಗೆ ಒಳಪಡಿಸುವಂತೆ ಕೋರಿದರೆ ಆಗ ಅದು ಖಂಡಿತಾ ನ್ಯಾಯಾಂಗ ನಿಂದನೆ ಎನಿಸಿಕೊಳ್ಳುತ್ತದೆ’ ಎಂದು ಹಿರಿಯ ವಕೀಲ ರವಿವರ್ಮ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಇತ್ತ ಮೃತ್ಯುಂಜಯ ಸ್ವಾಮೀಜಿ, ‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಮುಖ್ಯಮಂತ್ರಿ ನಮ್ಮ ಹೋರಾಟದ ದಿಕ್ಕು ತಪ್ಪಿಸಲು, 2ಡಿ ಮೀಸಲಾತಿ ಘೋಷಿಸಿದರು. ಇದನ್ನು ಜನವರಿ 5ರಂದು ಬೆಳಗಾವಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸಂಪೂರ್ಣವಾಗಿ ತಿರಸ್ಕರಿಸಿದ್ದೇವೆ. 2ಎ ಮೀಸಲಾತಿ ಕೊಡುವ ಅಧಿಕಾರ ಮುಖ್ಯಮಂತ್ರಿಯವರ ಕೈಯಲ್ಲಿತ್ತು. ಆದರೆ, ಮೀಸಲಾತಿ ಕೊಡದೆ ಕಾಲಹರಣ ಮಾಡಿದರು’ ಎಂದು ಸ್ವಾಮೀಜಿ ದೂರಿದರು.

‘ಇದೀಗ ಹೈಕೋರ್ಟ್‌ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸರ್ಕಾರಕ್ಕೆ ಆದೇಶಿಸಿದೆ. ನಮ್ಮ ಹೋರಾಟಕ್ಕೆ ಯಾವುದೇ ತಡೆ ನೀಡಿಲ್ಲ. ಹೀಗಾಗಿ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ. ಸರ್ಕಾರದ ಅನ್ಯಾಯ ಖಂಡಿಸಿ ಜ.13ರಂದು ಶಿಗ್ಗಾವಿಯಲ್ಲಿರುವ ಸಿಎಂ ಮನೆಗೆ ಮುತ್ತಿಗೆ ಕಾರ್ಯಕ್ರಮ ಹಾಕಿಕೊಂಡಿದ್ದೇವೆ’ ಎಂದು ಸ್ವಾಮೀಜಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...