Homeಮುಖಪುಟ’ಕಾವೇರಿ ಕಾಲಿಂಗ್’ ಪ್ರಕರಣ: ಡಿಸ್ಕವರಿ ಚಾನೆಲ್‌ಗೆ ಕಾರ್ಯಕ್ರಮ ನಿಲ್ಲಿಸಲು ಕಾನೂನು ನೋಟಿಸು ನೀಡಿದ್ದೀರ ಎಂದು ಕೇಳಿದ...

’ಕಾವೇರಿ ಕಾಲಿಂಗ್’ ಪ್ರಕರಣ: ಡಿಸ್ಕವರಿ ಚಾನೆಲ್‌ಗೆ ಕಾರ್ಯಕ್ರಮ ನಿಲ್ಲಿಸಲು ಕಾನೂನು ನೋಟಿಸು ನೀಡಿದ್ದೀರ ಎಂದು ಕೇಳಿದ ಹೈಕೋರ್ಟ್

ಇಶಾ ಫೌಂಡೇಶನ್ ಸಾರ್ವಜನಿಕರಿಂದ ಒಂದು ಮರ ನೆಡುವಿಕೆಗೆ 42 ರೂ. ವನ್ನು ಪಡೆಯುತ್ತಿದ್ದು, ಅದಕ್ಕಾಗಿ ಒಟ್ಟು 10 ಸಾವಿರ ಕೋಟಿ ರೂಪಾಯಿಗಿಂತಲೂ ಹೆಚ್ಚು ಸಂಗ್ರಹಿಸುತ್ತಿದೆ. ಇದು ದೊಡ್ಡ ಹಗರಣವಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು.

- Advertisement -
- Advertisement -

ಕಾವೇರಿ ಕಾಲಿಂಗ್‌ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್, ಡಿಸ್ಕವರಿ ಚಾನೆಲ್‌ನಲ್ಲಿ ಪ್ರಸಾರವಾಗುತ್ತಿರುವ ಕಾವೇರಿ ಕಾಲಿಂಗ್ ಕಾರ್ಯಕ್ರಮದ ಪ್ರದರ್ಶನ ನಿಲ್ಲಿಸುವಂತೆ ಅರ್ಜಿದಾರ ಚಾನೆಲ್‌ಗೆ ನೋಟಿಸ್ ಕಳುಹಿಸಿದ್ದಾರೆಯೇ ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆ ಇಶಾ ಫೌಂಡೇಶನ್‌ಗೆ ನಿರ್ದೇಶಿಸಿತು.

ಇದಕ್ಕೆ ಉತ್ತರಿಸಿದ ಇಶಾ ಫೌಂಡೇಶನ್ ಪರವಾಗಿ ಹಾಜರಾದ ವಕೀಲ ಉದಯ್ ಹೊಲ್ಲಾ, ಪ್ರಕರಣವು ಹೈಕೋರ್ಟ್ ಮುಂದೆ ಬಾಕಿ ಇದೆ ಆದರೆ ಕಾರ್ಯಕ್ರಮ ಪ್ರಸಾರವಾದರೆ ಅದು ನ್ಯಾಯಾಲಯ ನಿಂದನೆಗೆ ಕಾರಣವಾಗಲಿದೆ ಎಂದು ತಿಳಿಸಿ ಅರ್ಜಿದಾರ ಮೂರು ನೋಟಿಸ್‌ಗಳನ್ನು ಚಾನೆಲ್‌ಗೆ ಕಳುಹಿಸಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮವನ್ನು ತಡೆಹಿಡಿಯಲು ನ್ಯಾಯಾಲಯವು ಯಾವುದೇ ಮಧ್ಯಂತರ ಆದೇಶವನ್ನು ಅಂಗೀಕರಿಸಿಲ್ಲ ಎಂದು ಅವರು ಸೂಚಿಸಿದರು.

ಇದನ್ನೂ ಓದಿ: ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ.

ಚಾನೆಲ್‌ಗೆ ನೋಟಿಸ್ ಕಳುಹಿಸಿದ್ದೀರಾ ಎಂದು ಅರ್ಜಿದಾರರೊಂದಿಗೆ ಪ್ರಶ್ನಿಸಿದ ನ್ಯಾಯಪೀಠಕ್ಕೆ ಉತ್ತರಿಸಿದ ಅವರು ಇಶಾ ಫೌಂಡೇಶನ್ ನನಗೆ ಅಫಿಡವಿಟ್ ಸಲ್ಲಿಸಿಲ್ಲ ಎಂದು ಹೇಳಿದರು. ಅರ್ಜಿದಾರರಿಗೆ ಮತ್ತೊಮ್ಮೆ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಪೀಠ ಇಶಾ ಫೌಂಡೇಶನ್‌ಗೆ ನಿರ್ದೇಶನ ನೀಡಿ, “ನೀವು ಚಾನೆಲ್‌ಗಳನ್ನು ತಪ್ಪುದಾರಿಗೆಳೆಯುವ ಹಾಗಿಲ್ಲ” ಎಂದು ಅಭಿಪ್ರಾಯಪಟ್ಟಿತು.

ವಿಚಾರಣೆಯ ಸಮಯದಲ್ಲಿ ನ್ಯಾಯಾಲಯವು, ಕಾವೇರಿ ಕಾಲಿಂಗ್‌ ಕಾರ್ಯಕ್ರಮವು ಸರ್ಕಾರಿ ಜಮೀನಿನಲ್ಲಿದೆ ಮತ್ತು ಇದು ಸರ್ಕಾರಿ ಯೋಜನೆಯಾಗಿದೆ ಎಂದು ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಲಾಗಿದೆ ಎಂಬ ಎರಡು ವಿಷಯಗಳನ್ನು ಮಾತ್ರ ನಿರ್ಧರಿಸಬೇಕಾಗಿದೆ ಎಂದು ಸೂಚಿಸಿತು.

ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಸೆಪ್ಟೆಂಬರ್ 8 ರಂದು ಮುಂದೂಡಿದೆ.

ಈ ಮಧ್ಯೆ, ಇಶಾ ಪ್ರತಿಷ್ಠಾನವು ಪ್ರಸ್ತಾಪಿಸಿರುವ ‘ಕಾವೇರಿ ಕಾಲಿಂಗ್’ ಯೋಜನೆ ರಾಜ್ಯ ಸರ್ಕಾರದ ಯೋಜನೆಯಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿತ್ತು.

ದೂರುದಾರರಾದ ವಕೀಲ ಎ.ವಿ. ಅಮರನಾಥ್ ಅವರ ಅರ್ಜಿಯ ಪ್ರಕಾರ, ಇಶಾ ಫೌಂಡೇಶನ್ ಕಾವೇರಿಯ ಉಗಮ ಸ್ಥಳವಾದ ತಲಕಾವೆರಿಯಿಂದ ತಿರುವರೂರಿನವರೆಗೆ 639 ಕಿಲೋಮೀಟರ್ ವ್ಯಾಪ್ತಿಯ ಕಾವೇರಿ ನದಿ ತೀರದಲ್ಲಿ 253 ಕೋಟಿ ಮರದ ಸಸಿಗಳನ್ನು ನೆಡಲು ಯೋಜಿಸಿದೆ. ಇದಕ್ಕಾಗಿ ಸಾರ್ವಜನಿಕರಿಂದ ಒಂದು ಮರ ನೆಡುವಿಕೆಗೆ 42 ರೂ. ವನ್ನು ಫೌಂಡೇಶನ್ ಪಡೆಯುತ್ತಿದ್ದು, ಅಂದರೆ ಇದು ಒಟ್ಟು 10 ಸಾವಿರ ಕೋಟಿ ರೂಪಾಯಿಗಿಂತಲೂ ಹೆಚ್ಚು ಸಂಗ್ರಹಿಸುತ್ತಿದೆ. ಇದು ದೊಡ್ಡ ಹಗರಣವಾಗಿದೆ ಎಂದು ಅರ್ಜಿದಾರ ವಕೀಲ ಅಮರನಾಥ್ ದೂರಿದ್ದಾರೆ.


ಓದಿ: ’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...