Homeಮುಖಪುಟತಬ್ಲೀಘಿ ಜಮಾತ್‌ನ 36 ವಿದೇಶಿಗರೂ ದೋಷಮುಕ್ತ ಎಂದ ಹೈಕೋರ್ಟ್: ಬಿಜೆಪಿಗೆ ಮುಖಭಂಗ

ತಬ್ಲೀಘಿ ಜಮಾತ್‌ನ 36 ವಿದೇಶಿಗರೂ ದೋಷಮುಕ್ತ ಎಂದ ಹೈಕೋರ್ಟ್: ಬಿಜೆಪಿಗೆ ಮುಖಭಂಗ

ವೀಸಾ ಷರತ್ತುಗಳ ಉಲ್ಲಂಘನೆ ಹಾಗೂ ಸರಕಾರದ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದೇ ಇರುವುದಕ್ಕೆ ದೆಹಲಿ ಪೊಲೀಸರು ಸುಮಾರು 955 ವಿದೇಶಿಗರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ನಡುವೆಯೂ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಮಾರ್ಚ್‌ನಲ್ಲಿ ದೆಹಲಿಯಲ್ಲಿ ನಡೆದ ತಬ್ಲೀಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂಬ ಆರೋಪದಲ್ಲಿ ನೂರಾರು ವಿದೇಶಿಯರ ಮೇಲೆ ಪ್ರಕರಣ ದಾಖಲಿಸಿ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. ಇವರಲ್ಲಿ 36 ವಿದೇಶಿಯರು ವಿಚಾರಣೆ ಎದುರಿಸುತ್ತಿದ್ದರು. ಈಗ ದೆಹಲಿ ಹೈಕೋರ್ಟ್ ಇವರ ಮೇಲಿನ ಪ್ರಕರಣವನ್ನು ಖುಲಾಸೆಗೊಳಿಸಿ ದೋಷಮುಕ್ತರನ್ನಾಗಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಲೈವ್ ಲಾ, “ಕೊರೊನಾ ಸಾಂಕ್ರಾಮಿಕ ರೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ತಬ್ಲೀಘಿ ಜಮಾತ್ ಸಭೆಗೆ ಹಾಜರಾಗಿದ್ದ ಆರೋಪದಡಿ 36 ವಿದೇಶಿಯರನ್ನು ದೆಹಲಿ ನ್ಯಾಯಾಲಯ ಖುಲಾಸೆಗೊಳಿಸಿದೆ” ಎಂದು ವರದಿ ಮಾಡಿದೆ.

ಇದನ್ನೂ ಓದಿ: ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

 

ಇದನ್ನೂ ಓದಿ: ತಬ್ಲೀಘಿ ಜಮಾತ್ ಕ್ಷಮೆಯಾಚಿಸಿದರೆ ಭಾರತವನ್ನು ತೊರೆಯಬಹುದು: ಕೇಂದ್ರ

ಕಳೆದ ಮಾರ್ಚ್‌ನಲ್ಲಿ ನಿಝಾಮುದ್ದೀನ್ ಮರ್ಕಝ್ ಕೋವಿಡ್-19 ಹಾಟ್‌ಸ್ಪಾಟ್ ಆಗಿ ಹೊರಹೊಮ್ಮಿದ್ದಾಗ ಭಾರೀ ಸುದ್ದಿಯಾಗಿತ್ತು. ವೀಸಾ ಷರತ್ತುಗಳ ಉಲ್ಲಂಘನೆ ಹಾಗೂ ಸರಕಾರದ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದೇ ಇರುವುದಕ್ಕೆ ದೆಹಲಿ ಪೊಲೀಸರು ಸುಮಾರು 955 ವಿದೇಶಿಗರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಬಹುಪಾಲು ವಿದೇಶಿ ತಬ್ಲೀಘಿ ಜಮಾತ್ ಸದಸ್ಯರು ಮನವಿಯ ಮೇರೆಗೆ ತಮ್ಮ ದೇಶಗಳಿಗೆ ಮರಳಿದ್ದರೆ, 44 ಮಂದಿ ದೆಹಲಿಯಲ್ಲಿ ವಿಚಾರಣೆ ಎದುರಿಸಲು ನಿರ್ಧರಿಸಿದ್ದರು. ಇವರ ಪೈಕಿ ಮೊದಲು 8 ಸದಸ್ಯರುಗಳನ್ನು ಬಿಡುಗಡೆ ಮಾಡಲಾಗಿತ್ತು. ಅವರ ವಿರುದ್ಧ ಯಾವುದೇ ಪ್ರಾಥಮಿಕ ಸಾಕ್ಷಧಾರಗಳಿರಲಿಲ್ಲ.

ಇದನ್ನೂ ಓದಿ: ತಬ್ಲಿಘಿಗಳ ಮೇಲೆ ಮತ್ತೊಂದು ಸುಳ್ಳು ಸುದ್ದಿ ಪ್ರಕಟಿಸಿ ಸಿಕ್ಕಿಬಿದ್ದ ಝೀ ನ್ಯೂಸ್‌!

ಇದೀಗ ಎಲ್ಲಾ ಸದಸ್ಯರ ಮೇಲಿನ ಪ್ರಕರಣವನ್ನು ಖುಲಾಸೆಗೊಳಿಸಿದೆ.

ಜುಲೈನಲ್ಲಿ ದೆಹಲಿಯ ನ್ಯಾಯಾಲಯವು ಈ ಕಾರ್ಯಕ್ರಮಕ್ಕೆ ಹಾಜರಾದ 82 ಬಾಂಗ್ಲಾದೇಶಿಗಳಿಗೆ ಜಾಮೀನು ನೀಡಿತ್ತು. ಮತ್ತೊಂದು ಸ್ಥಳೀಯ ನ್ಯಾಯಾಲಯವು ದಂಡ ಪಾವತಿಸಿದ ನಂತರ ಅರವತ್ತೆರಡು ಮಲೇಷಿಯನ್ನರು ಮತ್ತು 11 ಸೌದಿ ಅರೇಬಿಯನ್ನರನ್ನು ಬಿಡುಗಡೆ ಮಾಡಲಾಗಿದೆ.

ಕೇಂದ್ರವು ಜೂನ್‌ನಲ್ಲಿ 2,500 ಕ್ಕೂ ಹೆಚ್ಚು ತಬ್ಲೀಘಿ ಸದಸ್ಯರನ್ನು ಕಪ್ಪುಪಟ್ಟಿಗೆ ಸೇರಿಸಿ, 10 ವರ್ಷಗಳ ಕಾಲ ದೇಶಕ್ಕೆ ಪ್ರವೇಶಿಸುವುದನ್ನು ನಿಷೇಧಿಸಿತ್ತು.

ಇದನ್ನೂ ಓದಿ: ತಬ್ಲಿಘಿದು ಬೇಜವಾಬ್ದಾರಿ, ಸರ್ಕಾರದ್ದು ಹೊಣೆಗೇಡಿತನ : ಅದಕ್ಕಿಂತಲೂ ಭೀಕರ ಕಮ್ಯುನಲ್ ವೈರಸ್

ಮಾರ್ಚ್ 25 ರಂದು ಪ್ರಾರಂಭವಾದ ರಾಷ್ಟ್ರವ್ಯಾಪಿ ಲಾಕ್‌ಡೌನ್‌ನ ಆರಂಭಿಕ ವಾರಗಳಲ್ಲಿ ದೇಶಾದ್ಯಂತ  ಕೊರೊನಾ ವೈರಸ್ ಸೋಂಕು ಹರಡಿದ್ದಕ್ಕೆ ತಬ್ಲೀಘಿ ಜಮಾತ್ ಸಭೆಯನ್ನು ದೂಷಿಸಲಾಗಿತ್ತು.

ಈ ಸಭೆಯಲ್ಲಿ ಅನೇಕ ವಿದೇಶಿಯರು ಭಾಗವಹಿಸಿದ್ದರು. ತಬ್ಲೀಘಿ ಜಮಾತ್ ಸುನ್ನಿ ಮುಸ್ಲಿಂ ಪಂಥವಾಗಿದ್ದು, 80 ಕ್ಕೂ ಹೆಚ್ಚು ದೇಶಗಳಲ್ಲಿ ಅನುಯಾಯಿಗಳನ್ನು ಹೊಂದಿದೆ.


ಇದನ್ನೂ ಓದಿ: ಮತ್ತೇ 12 ತಬ್ಲೀಘಿಗಳನ್ನು ದೋಷಮುಕ್ತ ಗೊಳಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...