Homeಕರ್ನಾಟಕಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಹೊರಡಿಸಿದ್ದ ಮೀಸಲಾತಿ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಹೊರಡಿಸಿದ್ದ ಮೀಸಲಾತಿ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್

- Advertisement -
- Advertisement -

ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿದ್ದ ಸರ್ಕಾರದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಮೀಸಲಾತಿ ನಿಗದಿಪಡಿಸುವಾಗ ಸರ್ಕಾರ ರೊಟೇಷನ್‌ ನಿಯಮ ಅನುಸರಿಸಿಲ್ಲ ಎಂದು ಆರೋಪಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು.

ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿ ಪಡಿಸಿ ಸರ್ಕಾರ ಅಕ್ಟೋಬರ್ 08 ರಂದು ಅಧಿಸೂಚನೆ ಹೊರಡಿಸಿತ್ತು. ಅಧಿಸೂಚನೆಯಲ್ಲಿ ಮೀಸಲಾತಿ ನಿಗದಿ ಪಡಿಸುವಾಗ ರೊಟೇಷನ್ ನಿಯಮ ಪಾಲನೆಯಾಗಿಲ್ಲ. ಆದ್ದರಿಂದ, ನಾಲ್ಕು ವಾರಗಳ ಒಳಗೆ ರೊಟೇಷನ್ ಪದ್ಧತಿ ಅನುಸಾರ ಮೀಸಲಾತಿ ಕಲ್ಪಿಸಿ ಮರು ಅಧಿಸೂಚನೆ ಹೊರಡಿಸಬೇಕೆಂದು ಆದೇಶಿಸಿದೆ.

ಇದನ್ನೂ ಓದಿ: ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್! 

ಅಕ್ಟೋಬರ್‌ 08 ರಂದು ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಹಾಸನ, ಅರಸಿಕೇರೆ, ಕೊಪ್ಪಳ, ಶಿಡ್ಲಘಟ್ಟ, ಹರಿಹರ ನಗರಸಭೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪುರಸಭೆ, ಕೊಡಗು ಜಿಲ್ಲೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸೇರಿ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಗುರುವಾರ ಮಾನ್ಯ ಮಾಡಿರುವ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಪೀಠ, ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿದೆ.

ಇದನ್ನೂ ಓದಿ: ತಮಿಳುನಾಡು: ವೈದ್ಯಕೀಯ ಸೀಟ್‌ನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 7.5% ಮೀಸಲಾತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...