Homeಕರ್ನಾಟಕ40% ಕಮಿಷನ್‌: ರಾಜ್ಯ ಸರಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ

40% ಕಮಿಷನ್‌: ರಾಜ್ಯ ಸರಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ

- Advertisement -
- Advertisement -

ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಗುತ್ತಿಗೆಗಳಲ್ಲಿ ಶೇ 40ರಷ್ಟು ಕಮಿಷನ್‌ ಪಡೆದಿರುವ ಆರೋಪದ ಕುರಿತು ತನಿಖೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌ಎನ್‌ ನಾಗಮೋಹನ್‌ ದಾಸ್‌ ನೇತೃತ್ವದ ಏಕವ್ಯಕ್ತಿ ತನಿಖಾ ಸಮಿತಿ ರಚಿಸಿದ್ದ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ.

2019-20ರಿಂದ 2022-23ರ ನಡುವೆ ನಗರಾಭಿವೃದ್ಧಿ, ಜಲಸಂಪನ್ಮೂಲ, ಸಣ್ಣ ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಲ್ಲಿ ಹಂಚಿಕೆಯಾಗಿರುವ ಕಾಮಗಾರಿಗಳಲ್ಲಿ ಶೇ 40ರಷ್ಟು ಕಮಿಷನ್‌ ಪಡೆದಿರುವ ಆರೋಪದ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರವು ಆ.5 2023ರಂದು ಆದೇಶವನ್ನು ಹೊರಡಿಸಿತ್ತು.

ಹಲವು ಗುತ್ತಿಗೆದಾರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, ಸರ್ಕಾರದ ಆದೇಶಕ್ಕೆ ತಡೆ ನೀಡಿದೆ.  ಸರ್ಕಾರದ ಆದೇಶ ಪ್ರಶ್ನಿಸಿ ನಿಕ್ಷೇಪ ಇನ್ಸಾ ಪ್ರಾಜೆಕ್ಟ್ ಸೇರಿ 17 ಗುತ್ತಿಗೆ ಕಂಪನಿ, 28 ಜನ ಗುತ್ತಿಗೆದಾರರು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಿಸಿದ ನ್ಯಾ.ಎಂ.ನಾಗಪ್ರಸನ್ನ ಅವರ ನ್ಯಾಯಪೀಠ ಈ ಆದೇಶ ಮಾಡಿದೆ.

ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿರುವ ತನ್ನ ಕ್ರಮದ ಕುರಿತು ರಾಜ್ಯ ಸರ್ಕಾರ ಸಮರ್ಥನೆ ನೀಡಬೇಕಿದೆ. ಅದಕ್ಕಾಗಿ ತನಿಖಾ ಸಮಿತಿ ಮತ್ತು ಏಕ ವ್ಯಕ್ತಿ ತನಿಖಾ ಆಯೋಗ ರಚನೆ ಮಾಡಿರುವ ಸರ್ಕಾರದ ಆದೇಶ, ಸಂಬಂಧಿಸಿದ ಮುಂದಿನ ಎಲ್ಲಾ ಪ್ರಕ್ರಿಯೆಗಳಿಗೆ ತಡೆ ನೀಡಲಾಗಿದೆ ಎಂದು ಆದೇಶದಲ್ಲಿ ಹೈಕೋರ್ಟ್ ತಿಳಿಸಿದೆ.

ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಗೆ ನೋಟಿಸ್ ಸ್ವೀಕರಿಸಲು ಹೆಚ್ಚುವರಿ ಸರ್ಕಾರಿ ವಕೀಲರಿಗೆ ಕೋರ್ಟ್‌ ಸೂಚಿಸಿದೆ. ಗುತ್ತಿಗೆದಾರರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಎರಡನೇ ಪ್ರತಿವಾದಿಯನ್ನಾಗಿ ಮಾಡಿದ್ದಾರೆ.

2019ರಿಂದ 2023ರ ಮೇ ವರೆಗೆ ವಿವಿಧ ಅನುದಾನಗಳ ಅಡಿಯಲ್ಲಿ ಹಲವು ಕಾಮಗಾರಿ ನಡೆದಿದ್ದವು. ಈ ಸಂಬಂಧ ಟೆಂಡರ್‌ನಲ್ಲಿ ನಿಯಮ ಉಲ್ಲಂಘನೆ, ನಕಲಿ ಗುತ್ತಿಗೆದಾರರಿಗೆ ಹಣ ಪಾವತಿ, ಬಿಲ್ ಸೃಷ್ಟಿ, ಕಳಪೆ ಕಾಮಗಾರಿ ಸೇರಿ ಹಲವು ಆರೋಪ ಕೇಳಿಬಂದಿದ್ದವು. ಆ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗಿತ್ತು.

ಇದನ್ನು ಓದಿ: ಗಾಝಾದಲ್ಲಿ ಮಕ್ಕಳ ರಕ್ತಪಾತಕ್ಕೆ ಅಮೆರಿಕ ನೇರ ಹೊಣೆ: ಪ್ಯಾಲೆಸ್ತೀನ್

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಮಹಾಲಕ್ಷಿ ಮತ್ತು ಮೆಟ್ರೋ’: ತೆಲಂಗಾಣ ಸರ್ಕಾರ-ಎಲ್‌&ಟಿ ನಡುವೆ ಜೋರಾದ ಜಟಾಪಟಿ

0
ಹೈದರಾಬಾದ್ ಮಹಾನಗರ ಮೆಟ್ರೋ ಸೇವೆ ಸೇರಿದಂತೆ ತೆಲಂಗಾಣ ರಾಜ್ಯದ ಹಲವು ಬೃಹತ್ ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆ ಮಾಡುತ್ತಿರುವ 'ಲಾರ್ಸೆನ್ ಮತ್ತು ಟೂಬ್ರೊ (ಎಲ್ & ಟಿ)' ಕಂಪನಿ ಮತ್ತು ರಾಜ್ಯ ಸರ್ಕಾರದ...