296 ಕಿ.ಮೀ ಉದ್ದದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ರಸ್ತೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಒಂದು ವಾರದೊಳಗೆ ಭಾರೀ ಮಳೆಯಿಂದಾಗಿ ರಸ್ತೆಯ ಒಂದು ಭಾಗವು ಕುಸಿದು ಗುಂಡಿಯಾಗಿದ್ದು ವರದಿಯಾಗಿದೆ. ಕುಸಿದ ರಸ್ತೆಯ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಪ್ರಧಾನಿ ಮೋದಿಯನ್ನು ಟೀಕಿಸಲಾಗುತ್ತಿದೆ.
ಉತ್ತರ ಪ್ರದೇಶದ ಜಲೌನ್ ಜಿಲ್ಲೆಯ ಚಿರಿಯಾ ಸೇಲಂಪುರದಲ್ಲಿ ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ರಸ್ತೆಯಯಲ್ಲಿ 1.5 ಅಡಿ ಆಳದ ಗುಂಡಿ ಸೃಷ್ಟಿಯಾಗಿದೆ ಎಂದು ಉತ್ತರ ಪ್ರದೇಶ ಎಕ್ಸ್‌ಪ್ರೆಸ್‌ವೇ ಕೈಗಾರಿಕಾ ಪ್ರಾಧಿಕಾರದ ವಕ್ತಾರ ದುರ್ಗೇಶ್ ಉಪಾಧ್ಯಾಯ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಗುಂಡಿಗಳನ್ನು ಕೂಡಲೇ ಸರಿಪಡಿಸಿ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅಂತವುಗಳನ್ನು ಸರಿಪಡಿಸಲು ಬುಲ್ಡೋಜರ್‌ಗಳು ಮತ್ತು ಅಗತ್ಯ ಉಪಕರಣಗಳೊಂದಿಗೆ ಒಂದು ತಂಡವನ್ನು ಪ್ರಾಧಿಕಾರ ನಿಯೋಜಿಸಿದೆ.
Tomorrow, 16th July is a special day for my sisters and brothers of the Bundelkhand region. At a programme in Jalaun district, the Bundelkhand Expressway will be inaugurated. This project will boost the local economy and connectivity. https://t.co/wYy4pRQgx4 pic.twitter.com/Y2liHsxE5U
— Narendra Modi (@narendramodi) July 15, 2022
ರಸ್ತೆ ಕುಸಿದು ಗುಂಡಿ ಸೃಷ್ಟಿಯಾಗಿರುವ ಘಟನೆಗೆ ದೇಶದಾದ್ಯಂತ ಭಾರಿ ಟೀಕೆ ವ್ಯಕ್ತವಾಗಿದ್ದು, ಘಟನೆಗೆ ಉತ್ತರ ಪ್ರದೇಶದ ಪ್ರತಿಪಕ್ಷವಾದ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಅಲ್ಲದೆ, ಬಿಜೆಪಿ ಸಂಸದ ವರುಣ್ ಗಾಂಧಿ ಅವರು ನಿರ್ಮಾಣ ಕಾಮಗಾರಿಯ ಗುಣಮಟ್ಟವನ್ನು ಪ್ರಶ್ನಿಸಿದ್ದಾರೆ. ಘಟನೆಯ ಹಿನ್ನಲೆಯಲ್ಲಿ ಅಧಿಕಾರಿಗಳು ಮತ್ತು ಸಂಬಂಧಿಸಿದ ಕಂಪನಿಗಳ ವಿರುದ್ಧ ಕ್ರಮಕ್ಕೆ ಅವರು ಒತ್ತಾಯಿಸಿದ್ದಾರೆ.
“15,000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಎಕ್ಸ್‌ಪ್ರೆಸ್‌ವೇ ಐದು ದಿನಗಳ ಮಳೆಯನ್ನೂ ತಡೆದುಕೊಳ್ಳಲು ಸಾಧ್ಯವಾಗದಿದ್ದರೆ, ಅದರ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳು ಉದ್ಭವಿಸುತ್ತವೆ. ಯೋಜನೆಯ ಮುಖ್ಯಸ್ಥರು, ಸಂಬಂಧಪಟ್ಟ ಎಂಜಿನಿಯರ್ ಮತ್ತು ಜವಾಬ್ದಾರಿಯುತ ಕಂಪನಿಗಳನ್ನು ಕರೆಸಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ವರುಣ್ ಗಾಂಧಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಕಸದ ಗಾಡಿಯಲ್ಲಿ ಮೋದಿ, ಯೋಗಿ ಫೋಟೋ: ಕೆಲಸದಿಂದ ಪೌರಕಾರ್ಮಿಕ ವಜಾ!
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “ಬಿಜೆಪಿಯ ಅರ್ಧಂಬರ್ಧ ಅಭಿವೃದ್ಧಿಯ ಗುಣಮಟ್ಟಕ್ಕೆ ಇದು ಒಂದು ಮಾದರಿಯಾಗಿದೆ. ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇಯನ್ನು ದೊಡ್ಡ ಜನರು ಉದ್ಘಾಟಿಸಿದರು, ಆದರೆ ಒಂದೇ ವಾರದಲ್ಲಿ ಭ್ರಷ್ಟಾಚಾರದ ದೊಡ್ಡ ಹೊಂಡಗಳು ಹೊರಬಂದಿವೆ” ಎಂದು ಹೇಳಿದ್ದಾರೆ.
“ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ರಸ್ತೆ ನಿರ್ಮಾಣದಲ್ಲಿ ಡಬಲ್ ಇಂಜಿನ್ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಸಾಬೀತುಪಡಿಸುತ್ತಿದೆ. ಅರ್ಧಬಂರ್ಧ ಕಾಮಗಾರಿಯಾದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸುವ ಮೂಲಕ ಜನರ ಜೀವಕ್ಕೆ ಅಪಾಯ ತಂದ ಸಿಎಂ ಕ್ಷಮೆಯಾಚಿಸಬೇಕು” ಎಂದು ಸಮಾಜವಾದಿ ಪಕ್ಷ ಹೇಳಿದ್ದು, ವೀಡಿಯೊವನ್ನು ಸಹ ಟ್ಯಾಗ್ ಮಾಡಿದೆ.
उद्घाटन के कुछ ही दिन बाद बुंदेलखंड एक्स्प्रेसवे की सड़क का धंसना "डबल इंजन" भाजपा सरकार के सड़क निर्माण में भ्रष्टाचार को सत्यापित करता है।
आधे अधूरे बुंदेलखंड एक्स्प्रेसवे का उद्घाटन करवा लोगों के जीवन को खतरे में डालने के लिए माफ़ी मांगे मुख्यमंत्री। pic.twitter.com/vlQ3SwWdxp
— Samajwadi Party (@samajwadiparty) July 21, 2022
ಟ್ವಿಟರ್‌ನಲ್ಲಿ ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿಕೊಂಡ ಕಾಂಗ್ರೆಸ್, “ಸರ್ಕಾರವು ಗುಂಡಿ ಮುಕ್ತ ರಸ್ತೆಗಳ ಭರವಸೆ ನೀಡಿದೆ. ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೊಂಡ ನಾಲ್ಕು ದಿನಗಳಲ್ಲೇ ಅಭಿವೃದ್ಧಿಗೆ ಹೊಡೆತ ಬಿದ್ದಿದೆ” ಎಂದು ಹೇಳಿದೆ.
ಇದನ್ನೂ ಓದಿ: ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮಿದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ
ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯ ದಿನದಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಯೋಗಿ ಆದಿತ್ಯನಾಥ್ ಸರ್ಕಾರದ “ಅರ್ಧ ಪೂರ್ಣಗೊಂಡ” ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.
ಜುಲೈ 16 ರಂದು 296 ಕಿಮೀ ಉದ್ದದ ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದರು.


