Homeಕರ್ನಾಟಕಹಿಜಾಬ್‌ ವಿವಾದ: ಮುಸ್ಲಿಂ ಹೆಣ್ಣುಮಕ್ಕಳ ಮೇಲಾದ ಪರಿಣಾಮಗಳ ಕುರಿತು ಪಿಯುಸಿಎಲ್‌ ವರದಿ

ಹಿಜಾಬ್‌ ವಿವಾದ: ಮುಸ್ಲಿಂ ಹೆಣ್ಣುಮಕ್ಕಳ ಮೇಲಾದ ಪರಿಣಾಮಗಳ ಕುರಿತು ಪಿಯುಸಿಎಲ್‌ ವರದಿ

- Advertisement -
- Advertisement -

ಸಾವಿತ್ರಿಬಾಯಿ ಫುಲೆಯವರ ನಿಕಟವರ್ತಿಯಾಗಿದ್ದ ಸಮಾಜ ಸುಧಾರಕಿ ಮತ್ತು ಶಿಕ್ಷಣತಜ್ಞೆ ಫಾತಿಮಾ ಶೇಖ್ ಅವರ ಜನ್ಮದಿನದ ಸಂದರ್ಭದಲ್ಲಿ ‘ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ’ ಸಂಸ್ಥೆಯು ವಿಶೇಷ ವರದಿಯನ್ನು ಬಿಡುಗಡೆ ಮಾಡಿದ್ದು, “ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ನ ವಾಸ್ತವಿಕ ನಿಷೇಧದಿಂದಾಗಿ ಮುಸ್ಲಿಂ ಹೆಣ್ಣುಮಕ್ಕಳ ಶಿಕ್ಷಣ, ಘನತೆ ಮತ್ತು ಖಾಸಗಿತನದ ಹಕ್ಕುಗಳ ಮೇಲೆ ಉಂಟಾಗಿರುವ ಪರಿಣಾಮವನ್ನು ಸರಿಪಡಿಸಬೇಕು” ಎಂದು ಒತ್ತಾಯಿಸಿದೆ.

“ಕ್ಲೋಸಿಂಗ್‌ ದಿ ಗೇಟ್ಸ್‌ ಟು ಎಜುಕೇಷನ್‌: ವಯೊಲೇಶನ್ಸ್‌ ಆಫ್‌ ರೈಟ್ಸ್‌ ಆಫ್‌ ಮುಸ್ಲಿಂ ವುಮೆನ್‌ ಸ್ಟೂಡೆಂಟ್ಸ್” ಎಂಬ ವರದಿಯನ್ನು ಪಿಯುಸಿಎಲ್ ಬಿಡುಗಡೆ ಮಾಡಿದೆ. “ಹಿಜಾಬ್ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪುಗಳು ಶಿಕ್ಷಣ ಸಂಸ್ಥೆಗಳಿಗೆ ಹಿಜಾಬನ್ನು ನಿಷೇಧಿಸುವುದಂತೆ ಆದೇಶಿಸುವುದಿಲ್ಲವಾದರೂ, ವಾಸ್ತವವಾಗಿ ರಾಜ್ಯದ ಹಲವಾರು ಶಿಕ್ಷಣ ಸಂಸ್ಥೆಗಳು ಹಿಜಾಬನ್ನು ನಿಷೇಧಿಸಿದವು. ಈ ವರದಿಯು ಹಿಜಾಬ್‌ನ ಮೇಲೆ ಹೇರಿದ ಈ ನಿಷೇಧದ ಪರಿಣಾಮವನ್ನು ದಾಖಲಿಸುತ್ತದೆ ಮತ್ತು ಹಠಾತ್ ನಿಷೇಧವನ್ನು ರಾಜ್ಯಾದ್ಯಂತ ಹೇರಿದಾಗ ಕಿರುಕುಳ, ಅವಮಾನ ಮತ್ತು ಪ್ರತ್ಯೇಕತೆಯನ್ನು ಅನುಭವಿಸಿದ  ಮುಸ್ಲಿಂ ಮಹಿಳಾ ವಿದ್ಯಾರ್ಥಿನಿಯರ ಹೇಳಿಕೆ ಮತ್ತು  ಸಾಕ್ಷ್ಯಗಳನ್ನು ಮುನ್ನೆಲೆಗೆ ತರುತ್ತದೆ” ಎಂದು ಪಿಯುಸಿಎಲ್‌ ತಿಳಿಸಿದೆ.

“ಕರ್ನಾಟಕ ಸರ್ಕಾರವು ಮುಸ್ಲಿಂ ಯುವತಿಯರ ಮೂಲಭೂತ ಹಕ್ಕುಗಳ ನಿರಂತರ ಉಲ್ಲಂಘನೆಗಳಿಗೆ ಪ್ರತಿಕ್ರಿಯಿಸಲು ಸಾಂವಿಧಾನಿಕ ಜವಾಬ್ದಾರಿಯನ್ನು ಹೊಂದಿದೆ. ಉಡುಪಿಯ ಪದವಿಪೂರ್ವ ಕಾಲೇಜಿನಲ್ಲಿ ಒಂದು ವರ್ಷಕ್ಕೂ ಹಿಂದೆ ಹಿಜಾಬ್ ಅನ್ನು ಹಠಾತ್ತನೆ ನಿಷೇಧಿಸಿದ ನಂತರ, ಕರ್ನಾಟಕದಾದ್ಯಂತ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಹೆಣಗಾಡುತ್ತಿದ್ದಾರೆ ಮತ್ತು ಮಾನಸಿಕ ತೊಂದರೆ ಮತ್ತು ಪ್ರತ್ಯೇಕತೆಯಂತಹ ಗಂಭೀರ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದೆ.

“ಅಕ್ಟೋಬರ್ 13, 2022 ರಂದು ನೀಡಲಾದ ಸುಪ್ರೀಂ ಕೋರ್ಟಿನ ವಿಭಜಿತ ತೀರ್ಪು, ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಕಾಯುವಿಕೆಯನ್ನು ದೀರ್ಘಗೊಳಿಸಿದೆ. ಆ ದಿನಾಂಕದಂದು ಸೂಕ್ತ ಪೀಠವನ್ನು ರಚಿಸುವಂತೆ ಗೌರವಾನ್ವಿತ ಮುಖ್ಯ ನ್ಯಾಯಾಧೀಶರ ಮುಂದೆ ವಿಷಯವನ್ನು ಇರಿಸಲಾಯಿತು. ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳಿಗೆ ಶಿಕ್ಷಣ, ಘನತೆ ಮತ್ತು ಖಾಸಗಿತನದ ಸಾಂವಿಧಾನಿಕ ಹಕ್ಕನ್ನು ನಿರಾಕರಿಸಲಾಗುತ್ತಿರುವುದರಿಂದ ಈ ವಿಷಯವನ್ನು ಸರ್ವೋಚ್ಚ ನ್ಯಾಯಾಲಯ ತ್ವರಿತವಾಗಿ ತೆಗೆದುಕೊಳ್ಳಬೇಕಾದ ತುರ್ತು ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟಿದೆ.

“ಕರ್ನಾಟಕದಾದ್ಯಂತ ಹಾಸನ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ರಾಯಚೂರು ಜಿಲ್ಲೆಗಳಿಗೆ ತಂಡ ಭೇಟಿ ನೀಡಿ ತೀರ್ಪಿನಿಂದ ಪ್ರಭಾವಿತವಾದ ಮಹಿಳಾ ವಿದ್ಯಾರ್ಥಿಗಳಿಂದ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ ಎಂದಿರುವ ಪಿಯುಸಿಎಲ್‌, ಈ ವಿದ್ಯಾರ್ಥಿಗಳಿಗೆ  ತಮ್ಮ ಶಿಕ್ಷಣದ ಹಕ್ಕನ್ನು ನಿರಾಕಾರಣೆ ಹೇಗಾಯಿತು ಹಾಗೂ  ಹೇಗೆ ದ್ವೇಷ, ಹಗೆತನ ಮತ್ತು ತಪ್ಪು ಮಾಹಿತಿಯ ವಾತಾವರಣದಲ್ಲಿ ಅವರನ್ನು ಹೇಗೆ ಘಾಸಿ ಗೊಳಿಸಲಾಯಿತು ಎಂಬುದನ್ನು ವರದಿಯು ಬಹಿರಂಗಪಡಿಸುತ್ತದೆ” ಎಂದು ವಿವರಿಸಿದೆ.

ಹಿಜಾಬ್ ಧರಿಸಿದ ವಿದ್ಯಾರ್ಥಿಗಳ ವಿರುದ್ಧ ಹಿಂದುತ್ವ ಕಿಡಿಗೇಡಿ ಗುಂಪುಗಳು ಹೇಗೆ ಅಪಪ್ರಚಾರ ನಡೆಸಿವೆ. ಸರ್ಕಾರ ಮತ್ತು ಪೊಲೀಸರ ನಿಷ್ಕ್ರಿಯತೆಯು ಹೇಗೆ ಈ ಮೂಲಭೂತವಾದಿ ಶಕ್ತಿಗಳಿಗೆ ಸೂಚ್ಯವಾಗಿ ಪ್ರೋತ್ಸಾಹ ನೀಡಿತು ಎಂಬುದರ ಬಗ್ಗೆಯೂ ವರದಿ ಗಮನ ಸೆಳೆದಿದೆ.

“ತಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲೆ ನಿರ್ಬಂಧವನ್ನು ಹೇರಿದ ನಂತರ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳ ಮೇಲೆ ಪರಿಣಾಮ, ಮುಸ್ಲಿಂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ಕಾರ್ಯನಿರ್ವಹಿಸಬೇಕಿದ್ದ ವಿವಿಧ  ವ್ಯಕ್ತಿ ಮತ್ತು ಸಂಸ್ಥೆಗಳ ವೈಫಲ್ಯ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ವಿಶೇಷವಾಗಿ ಮಹಿಳೆಯರ ವಿರುದ್ಧ ಪಕ್ಷಪಾತಗಳು, ಪೂರ್ವಾಗ್ರಹಗಳು ಮತ್ತು ಸ್ಟೀರಿಯೊಟೈಪ್‌ಗಳು ಸೇರಿದಂತೆ ವಿವಿಧ ಸಾಮಾಜಿಕ-ಸಾಂಸ್ಕೃತಿಕ ಅಂಶಗಳು ದ್ವೇಷದ ವಾತಾವರಣವನ್ನು ಹೆಚ್ಚಿಸಲು ಅನುವು ಮಾಡಿಕೊಟ್ಟಿವೆ” ಎಂದು ಬೇಸರ ವ್ಯಕ್ತಪಡಿಸಲಾಗಿದೆ.

ಈ ವಿಷಯದಲ್ಲಿ ಭಾಗಿಯಾಗಿರುವ ವಿವಿಧ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ವಿವರವಾದ  ಶಿಫಾರಸುಗಳನ್ನೂ ವರದಿ ಮಾಡಿದೆ. ಪಿಯುಸಿಎಲ್‌ ಕರ್ನಾಟಕದ ಅಧ್ಯಕ್ಷರಾದ ಅರವಿಂದ್ ನರೈನ್, ಪ್ರಧಾನ ಕಾರ್ಯದರ್ಶಿ ಶುಜಯತುಲ್ಲಾ ಅವರು ತಮ್ಮ ವರದಿಯಲ್ಲಿ ಹಲವು ವಿಷಯಗಳ ಕುರಿತು ಗಮನ ಸೆಳೆದಿದ್ದಾರೆ.

“ಮುಸ್ಲಿಂ ವಿದ್ಯಾರ್ಥಿಗಳು ಸಂಬಂಧಪಟ್ಟಂತೆ ತಾರತಮ್ಯ, ಖಾಸಗಿತನ, ಸ್ವಾಯತ್ತತೆ ಮತ್ತು ಘನತೆಯ ಸಾಂವಿಧಾನಿಕ ಮೌಲ್ಯಗಳನ್ನು ಕರ್ನಾಟಕ ಸರ್ಕಾರ  ಎತ್ತಿಹಿಡಿಯಬೇಕು. ಕರ್ನಾಟಕ ರಾಜ್ಯ ಸರ್ಕಾರ ತನ್ನ ಅಸಂವಿಧಾನಿಕ ಮತ್ತು ಅನಿಯಂತ್ರಿತ ಕ್ರಮದಿಂದಾಗಿ ಶಿಕ್ಷಣ, ಅಭಿವ್ಯಕ್ತಿ, ಘನತೆ ಮತ್ತು ತಾರತಮ್ಯದ ವಿರುದ್ದದ ಸಾಂವಿಧಾನಿಕ ಹಕ್ಕುಗಳಿಂದ ವಂಚಿತರಾದ ಮುಸ್ಲಿಂ ಹೆಣ್ಣು ವಿದ್ಯಾರ್ಥಿನಿಯರು ಅನುಭವಿಸಿದ ನಷ್ಟವನ್ನು ಭರಿಸಬೇಕು” ಎಂದು ಆಗ್ರಹಿಸಲಾಗಿದೆ.

“ಶಿಕ್ಷಣ ಇಲಾಖೆಯು ಕಡ್ಡಾಯವಾಗಿ ‘ರೇಶಮ್ ವರ್ಸಸ್ ಸ್ಟೇಟ್ ಆಫ್ ಕರ್ನಾಟಕ’ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಆದೇಶದ ವ್ಯಾಪ್ತಿಯನ್ನು ಸ್ಪಷ್ಟಪಡಿಸುವ ನಿರ್ದೇಶನಗಳನ್ನು ನೀಡಿಬೇಕು. ಕರ್ನಾಟಕ ರಾಜ್ಯ ಸರ್ಕಾರವು ಫೆಬ್ರವರಿ – ಏಪ್ರಿಲ್ 2022 ರ ಅವಧಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಿದ ಮುಸ್ಲಿಂ ವಿದ್ಯಾರ್ಥಿಗಳು, ಶಿಕ್ಷಕರು ಅಥವಾ ಅಂತಹ ಯಾವುದೇ ವ್ಯಕ್ತಿಯ ವಿರುದ್ಧ ಕೈಗೊಂಡಿರುವ ಕಾನೂನು ಕ್ರಮವನ್ನು ತಕ್ಷಣವೇ  ಹಿಂಪಡೆಯಬೇಕು” ಎಂದು ಒತ್ತಾಯಿಸಲಾಗಿದೆ.

“ಮಾಧ್ಯಮಗಳು ದುರ್ಬಲ ಸಮುದಾಯಗಳು, ಅಪ್ರಾಪ್ತ ವಯಸ್ಕರು ಮತ್ತು ವಿಚಾರಣೆಯಲ್ಲಿರುವ ನ್ಯಾಯಾಲಯದ ಪ್ರಕರಣಗಳಿಗೆ ಸಂಬಂಧಿಸಿದ ವರದಿಯನ್ನು ನೀಡುವಾಗ ಆಂತರಿಕ ಮಾರ್ಗಸೂಚಿಗಳನ್ನು ಸಿದ್ಧಪಡಿಸಬೇಕು  ಮತ್ತು ಅವುಗಳ ಪ್ರಸಾರದಿಂದಾಗಿ ಅಂಚಿನಲ್ಲಿರುವ ಸಮುದಾಯಗಳು ಅನುಭವಿಸುವ ಪರಕೀಯತೆ ಮತ್ತು ಕಳಂಕವನ್ನು ಉಲ್ಬಣಗೊಳಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ತಿಳಿಸಲಾಗಿದೆ.

“ಪೊಲೀಸರು ಕಡ್ಡಾಯವಾಗಿ ಈ ಪ್ರಕರಣದಲ್ಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಹಾಜರಾಗಿದ್ದ ಎಲ್ಲಾ ಅರ್ಜಿದಾರರು ಮತ್ತು ಅವರ ಕುಟುಂಬಗಳಿಗೆ ರಕ್ಷಣೆಯನ್ನು ವಿಸ್ತರಿಸಿ ಅವರ ದೈಹಿಕ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಬೇಕು. ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವ, ಈಗಾಗಲೇ ವರದಿಯಾಗಿರುವ  ವೀಡಿಯೊಗಳು ಮತ್ತು ಚಿತ್ರಗಳಲ್ಲಿ ಗೋಚರಿಸುವ ಹಿಂದುತ್ವ ಕಿಡಿಗೇಡಿ ಗುಂಪು/ಸದಸ್ಯರ ವಿರುದ್ಧ ಪ್ರಕರಣಗಳನ್ನು ದಾಖಲಿಸುವಲ್ಲಿ ತ್ವರಿತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಲಾಗಿದೆ.

“ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳು ಸಲ್ಲಿಸಿದ ದೂರುಗಳ ಮೇಲೆ ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಬೇಕು. ಅವರು ದೂರು ನೀಡಿರುವ ಕಾಲೇಜು ಅಧಿಕಾರಿಗಳು, ಹಿಂದುತ್ವ ಗುಂಪುಗಳು ಅಥವಾ ವಿದ್ಯಾರ್ಥಿಗಳ ಮೇಲೆ ಮತ್ತು ದೂರು ನೀಡಿರುವ ಕುಟುಂಬದವರ ಘನತೆ, ಖಾಸಗಿತನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸಿದ ಯಾವುದೇ ವ್ಯಕ್ತಿಯ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಬೇಕು. ಮುಸ್ಲಿಂ ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾಡಿದವರ ಮೇಲೆ ಇಲಾಖಾ ವಿಚಾರಣೆಯನ್ನು ಕೈಗೊಳ್ಳಬೇಕು. ತಮ್ಮ ನಿಷ್ಕ್ರಿಯತೆ ಮತ್ತು ಅನಧಿಕೃತ ಕ್ರಮದಿಂದಾಗಿ ಮುಸ್ಲಿಂ ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆಗೆ  ಕಾರಣವಾದ ತನ್ನ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮವನ್ನು ಪ್ರಾರಂಭಿಸಬೇಕು. 01.01.2022 ಮತ್ತು 30.04.2022 ರ ನಡುವೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ CrPC ಯ ಸೆಕ್ಷನ್ 144 ಅನ್ನು ವಿಧಿಸುವ ಎಲ್ಲಾ ಆದೇಶಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು” ಎಂದು ಆಗ್ರಹಿಸಲಾಗಿದೆ.

“ಮಹಿಳಾ ಮತ್ತು ಮಕ್ಕಳ ಇಲಾಖೆ, ಕರ್ನಾಟಕ ಕಡ್ಡಾಯವಾಗಿ ಹಿಜಾಬ್ ತೀರ್ಪಿನಿಂದ ಪ್ರತಿಕೂಲ ಪರಿಣಾಮ ಬೀರುವ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಬೆಂಬಲವನ್ನು ಒದಗಿಸುವ ಕಾರ್ಯಕ್ರಮಗಳನ್ನು ಪ್ರಾರಂಭಿಸಬೇಕು. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ (KSHRC), ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ (KMSC), ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (KSCPCR) ಮತ್ತು ಕರ್ನಾಟಕ ರಾಜ್ಯ ಮಹಿಳಾ ಆಯೋಗ (KSCW) ಹಕ್ಕುಗಳ ಉಲ್ಲಂಘನೆಯ ಬಗ್ಗೆ ಸ್ವಯಂ-ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು. ಮುಸ್ಲಿಂ ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರು, ಮತ್ತು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕಿರುಕುಳ, ತಾರತಮ್ಯ ಮತ್ತು ದ್ವೇಷ ಭಾಷಣದ ಪ್ರಕರಣಗಳಲ್ಲಿ ಮಧ್ಯಪ್ರವೇಶಿಸಬೇಕು” ಎಂದು ಸಲಹೆ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...