Homeಕರ್ನಾಟಕಹಿಜಾಬ್ ತೀರ್ಪು: ಸುಪ್ರೀಂಕೋರ್ಟ್ ಮೆಟ್ಟಿಲೇರಲಿರುವ ವಿದ್ಯಾರ್ಥಿನಿಯರು

ಹಿಜಾಬ್ ತೀರ್ಪು: ಸುಪ್ರೀಂಕೋರ್ಟ್ ಮೆಟ್ಟಿಲೇರಲಿರುವ ವಿದ್ಯಾರ್ಥಿನಿಯರು

- Advertisement -
- Advertisement -

ಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣದ ತೀರ್ಪು ಮಂಗಳವಾರ ರಾಜ್ಯ ಹೈಕೋರ್ಟ್‌ ನೀಡಿದ್ದು, ಹಿಜಾಬ್ ಪರವಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿನಿಯರಿಗೆ ನಿರಾಸೆ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ಹೇಳಿದ್ದಾರೆ.

ಹಿಜಾಬ್‌ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೇಳಿರುವ ಹೈಕೋರ್ಟ್‌, ಸಮವಸ್ತ್ರವನ್ನು ಸೂಚಿಸುವುದು ಮೂಲಭೂತ ಹಕ್ಕುಗಳ ಮೇಲೆ ಸಮಂಜಸವಾದ ನಿರ್ಬಂಧವಾಗಿದೆ ಎಂದು ಹೇಳಿ, ರಾಜ್ಯ ಸರ್ಕಾರದ ಆದೇಶವನ್ನು ಕೋರ್ಟ್‌ ಎತ್ತಿ ಹಿಡಿದಿದೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ರಿಟ್‌ ಅರ್ಜಿ ವಜಾ; ಹಿಜಾಬ್ ನಿರ್ಬಂಧ ಎತ್ತಿ ಹಿಡಿದ ಹೈಕೋರ್ಟ್

ಫೆಬ್ರವರಿ 25 ರಂದು ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ಅಂತಿಮ ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.

ತೀರ್ಪಿನ ಬಗ್ಗೆ ಮಾತನಾಡಿರುವ ವಿದ್ಯಾರ್ಥಿನಿಯರ ಪರವಾಗಿ ವಾದ ಮಂಡಿಸಿದ ವಕೀಲರಾದ ಕೆ.ವಿ.ಧನಂಜಯ್, “ಹೈಕೋರ್ಟ್‌ನ ಸಂಪೂರ್ಣ ಆದೇಶ ಹೊರಬಿದ್ದ ನಂತರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರುತ್ತೇವೆ” ಎಂದು ತಿಳಿಸಿದ್ದಾರೆ.

ಮತ್ತೊಬ್ಬ ವಕೀಲರಾದ ಶಾಹುಲ್ ಅವರು ಕೂಡಾ, “ವಿವರವಾದ ಆದೇಶ ಬಂದ ನಂತರ ಅದನ್ನು ವಿಶ್ಲೇಷಿಸಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗುತ್ತೇವೆ” ಎಂದು ಹೇಳಿದ್ದಾರೆ.

ಇಂದು ನ್ಯಾಯಾಲಯದಲ್ಲಿ ತೀರ್ಪನ್ನು ಓದಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, “ಇಡೀ ಪ್ರಕರಣದ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಂಡು, ನಾವು ಕೆಲವು ಪ್ರಶ್ನೆಗಳನ್ನು ರೂಪಿಸಿದ್ದೇವೆ. ಮತ್ತು ಅದಕ್ಕೆ ಅನುಗುಣವಾಗಿ ಉತ್ತರಿಸಿದ್ದೇವೆ” ಎಂದು ಹೇಳಿದರು.

“ಪ್ರಶ್ನೆಗಳನ್ನು ಹೀಗೆ ರೂಪಿಸಲಾಗಿದೆ: 1. ಆರ್ಟಿಕಲ್‌ 25 ರ ಅಡಿಯಲ್ಲಿ ಇಸ್ಲಾಮಿಕ್ ನಂಬಿಕೆಯಲ್ಲಿ ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮೀಕ ಆಚರಣೆ ಆಗಿದೆಯೇ? 2. ಶಾಲಾ ಸಮವಸ್ತ್ರದ ಸೂಚನೆಯು ಹಕ್ಕುಗಳ ಉಲ್ಲಂಘನೆಯಾಗಿದೆಯೇ? ಫೆಬ್ರುವರಿ 5 ರ ಸರ್ಕಾರಿ ಆದೇಶವು ಅಸಮರ್ಥ ಮತ್ತು ಸ್ಪಷ್ಟವಾಗಿ ಆರ್ಟಿಕಲ್ 14 ಮತ್ತು 15 ಅನ್ನು ಉಲ್ಲಂಘಿಸುತ್ತದೆಯೇ ಎಂಬುದು ಮೂರನೇ ಪ್ರಶ್ನೆಯಾಗಿದೆ” ಎಂದು ಹೇಳಿದ್ದಾರೆ.

ಈ ಪ್ರಶ್ನೆಗಳಿಗೆ ಉತ್ತರಿಸುತ್ತಾ ತೀರ್ಪು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ, “ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯಲ್ಲ. ಸಮವಸ್ತ್ರವನ್ನು ಸೂಚಿಸುವುದು ಮೂಲಭೂತ ಹಕ್ಕುಗಳ ಮೇಲೆ ಸಮಂಜಸವಾದ ನಿರ್ಬಂಧವಾಗಿದೆ” ಎಂದು ಹೇಳಿದ್ದಾರೆ.

ಜೊತೆಗೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಮತ್ತು ಫೆಬ್ರವರಿ 5 ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಎಲ್ಲಾ ರಿಟ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...