Homeಕರ್ನಾಟಕಒಂದು ವರ್ಷದಲ್ಲಿ ಹನ್ನೊಂದನೇ ಬಾರಿ ಮುಳುಗಡೆಯಾದ ಐತಿಹಾಸಿಕ ‘ಪುರಂದರ ಮಂಟಪ’

ಒಂದು ವರ್ಷದಲ್ಲಿ ಹನ್ನೊಂದನೇ ಬಾರಿ ಮುಳುಗಡೆಯಾದ ಐತಿಹಾಸಿಕ ‘ಪುರಂದರ ಮಂಟಪ’

- Advertisement -
- Advertisement -

ತುಂಗಾಭದ್ರ ಅಣೆಕಟ್ಟಿನಿಂದ ನದಿಯು ಉಕ್ಕಿ ಹರಿಯುತ್ತಿರುವುದರಿಂದ ಹಂಪಿಯ ಪುರಂದರ ಮಂಟಪ ಕಳೆದ ಒಂದು ವರ್ಷದಲ್ಲಿ 11 ಬಾರಿ ಮುಳುಗಡೆಯಾಗಿದೆ. 14ನೇ ಶತಮಾನದ ಈ ಸ್ಮಾರಕದಲ್ಲಿ ಇಷ್ಟೊಂದು ಬಾರಿ ನೀರು ಕಾಣಿಸಿಕೊಂಡಿರುವುದು ಇದೇ ಮೊದಲು ಎಂದು ಮಾಧ್ಯಮಗಳು ಉಲ್ಲೇಖಿಸಿವೆ.

ಭಾರತದ ಪುರಾತತ್ವ ಇಲಾಖೆ(ಎಎಸ್‌ಐ)ಯು ತುಂಗಭದ್ರಾ ನದಿಯ ದಡದಲ್ಲಿರುವ ಪುರಂದರ ಮಂಟಪಕ್ಕೆ 2021 ರ ಮಾನ್ಸೂನ್ ಪ್ರಾರಂಭವಾಗುವ ಮೊದಲು ಜಲನಿರೋಧಕವನ್ನು ಅಳವಡಿಸಿತ್ತು. ಜೊತೆಗೆ, ಅಣೆಕಟ್ಟಿನಿಂದ ಮೇಲಕ್ಕೆ ಬಿಡುವ ನೀರಿನ ಹರಿವನ್ನು ತಡೆದುಕೊಳ್ಳಲು ಪಿಲ್ಲರ್‌ಗಳನ್ನು ಬಲಪಡಿಸಲಾಗಿತ್ತು.

ಸ್ಮಾರಕವೂ ಯಾವ ಮಟ್ಟಿಗೆ ಹಾನಿಯಾಗಿದೆ ಎಂದು ತಿಳಿದುಕೊಳ್ಳಬೇಕಾಗದರೆ, ನೀರಿನ ಪ್ರಮಾಣ ಕಡಿಮೆಯಾಗಬೇಕು ಎಂದು ಹಂಪಿ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು TNIE ವರದಿ ಮಾಡಿದೆ.

“600 ವರ್ಷಗಳ ಹಿಂದೆ ನಿರ್ಮಿಸಲಾದ ಪುರಂದರ ಮಂಟಪದ ಕಂಬಗಳ ನಿರ್ವಹಣೆಯನ್ನು ‘ಎಎಸ್‌ಐ’ ವಹಿಸಿಕೊಂಡಿದ್ದು, ಕಂಬಗಳು ಗಟ್ಟಿಯಾಗಿ ನಿಂತಿವೆ. ಆದರೆ ಕಳೆದ ಕೆಲವು ವರ್ಷಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದರಿಂದ ಮಂಟಪವು ಮೊದಲಿಗಿಂತ ಹೆಚ್ಚು ಮುಳುಗಡೆಯಾಗುತ್ತಿದೆ. ನೀರಿನ ಮಟ್ಟ ಕಡಿಮೆಯಾದ ನಂತರ ಎಎಸ್‌ಐ ತಂಡವು ಪರಿಸ್ಥಿತಿಯನ್ನು ಅವಲೋಕಿಸುತ್ತದೆ. ಅಗತ್ಯಕ್ಕೆ ಅನುಗುಣವಾಗಿ ಮರುಸ್ಥಾಪನೆ ಕೆಲಸ ಅದು ಮಾಡಬಹುದು” ಎಂದು ಅಧಿಕಾರಿ ಹೇಳಿದ್ದಾರೆ.

“ಹಂಪಿ ಯುನೆಸ್ಕೋ ಪಾರಂಪರಿಕ ತಾಣವಾಗಿರುವುದರಿಂದ ಯಾವುದೇ ಸ್ಮಾರಕಗಳನ್ನು ಪುನಃಸ್ಥಾಪಿಸಲು ನಾವು ಸಿಮೆಂಟ್ ಸೇರಿದಂತೆ ಕೃತಕ ವಸ್ತುಗಳನ್ನು ಬಳಸುವುದಿಲ್ಲ. ಅಗತ್ಯವಿರುವ ಯಾವುದೇ ಕಟ್ಟಡವನ್ನು ಬಲಪಡಿಸಲು ಕಲ್ಲು ಮತ್ತು ಕಲ್ಲಿನ ಚಪ್ಪಡಿಗಳನ್ನು ಬಳಸಲಾಗುತ್ತದೆ. ಕಳೆದ ವರ್ಷ ಭಾರಿ ಮಳೆಯಿಂದಾಗಿ ಹಂಪಿಯಲ್ಲಿ ಮೂರು ಕಟ್ಟಡಗಳು ಭಾಗಶಃ ಹಾನಿಗೊಳಗಾಗಿದ್ದವು. ಪುನಃಸ್ಥಾಪನೆಯ ಕೆಲಸ ನಡೆಯುತ್ತಿದೆ, ಶಿಥಿಲಗೊಂಡಿರುವ ಇತರ ಸ್ಮಾರಕಗಳೂ ಇವೆ ಮತ್ತು ಅವುಗಳ ಸ್ಥಿರತೆಗಾಗಿ ನಿಯಮಿತವಾಗಿ ಪರಿಶೀಲಿಸಲಾಗುತ್ತದೆ” ಎಂದು ಅಧಿಕಾರಿ ಹೇಳಿದ್ದಾರೆ.

“ಪುರಂದರ ಮಂಟಪವು ಹಂಪಿಯಲ್ಲಿ ಛಾಯಾಚಿತ್ರಕ್ಕೆ ಬಲು ಬೇಡಿಕೆಯಿರುವ ತಾಣವಾಗಿದೆ. ಹಂಪಿಯಲ್ಲಿ ಹಲವಾರು ಪ್ರಮುಖ ಸ್ಮಾರಕಗಳಿದ್ದರೂ, ನೀರಿನ ಮಟ್ಟವು ಸಾಮಾನ್ಯವಾಗಿದ್ದರೆ ಹೆಚ್ಚಿನ ಪ್ರವಾಸಿಗರು ಇಲ್ಲಿ ಸೆಲ್ಫಿ ತೆಗೆದುಕೊಳ್ಳದೆ ಹಿಂತಿರುಗುವುದಿಲ್ಲ” ಎಂದು ಹಂಪಿಯ ಪ್ರವಾಸಿ ಗೈಡ್‌ ಒಬ್ಬರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...