Homeಮುಖಪುಟಮುಸ್ಲಿಮರ ಹತ್ಯಾಕಾಂಡ ಪ್ರಚೋದನೆ: ಫೆಡರಲ್ ಬ್ಯಾಂಕ್ ಅಧಿಕಾರಿ ವಿರುದ್ಧ FIR

ಮುಸ್ಲಿಮರ ಹತ್ಯಾಕಾಂಡ ಪ್ರಚೋದನೆ: ಫೆಡರಲ್ ಬ್ಯಾಂಕ್ ಅಧಿಕಾರಿ ವಿರುದ್ಧ FIR

- Advertisement -
- Advertisement -

ಮಂಗಳೂರು-ವಿಟ್ಲ ಭಾಗದ ಮುಸ್ಲಿಮರ ನರಮೇಧಕ್ಕೆ ಫೇಸ್ ಬುಕ್ ಪೋಸ್ಟ್ ಮೂಲಕ ಪ್ರಚೋದಿಸಿದ್ದ ಫೆಡರಲ್ ಬ್ಯಾಂಕ್ ಅಧಿಕಾರಿ ವಿಷ್ಣುಪ್ರಸಾದ್ ನಿಡ್ಡಾಜೆ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ವಿಟ್ಲ ಬಳಿ ತಾನು ಫೆಡರಲ್ ಬ್ಯಾಂಕಿನ ಅಧಿಕಾರಿಯೆಂದು ತನ್ನ ಫೇಸ್ ಬುಕ್ ಪ್ರೋಫೈಲ್‌ನಲ್ಲಿ ಹೇಳಿಕೊಂಡಿರುವ ವಿಷ್ಣುಪ್ರಸಾದ್ ಎಂಬುವವರು ವಿಟ್ಲದ ಬಳಿಯ ಸಾಲೆತ್ತೂರಿನಲ್ಲಿ ಮುಸ್ಲಿಮ್ ಮದುಮಗನೊಬ್ಬ ಕೊರಗರ ಆರಾದ್ಯ ದೈವ ಕೊರಗಜ್ಜನ ಅಣಕಿಸುವ ವೇಷ ತೊಟ್ಟಿದ್ದನೆಂಬ ಆರೋಪಕ್ಕೆ ಸಂಬಂಧಿಸಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ. ಇದರ ವಿರುದ್ದ ನೆಟ್ಟಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಟ್ವಿಟರ್ ಬಳಕೆದಾರರೊಬ್ಬರು ಫೆಡರಲ್ ಬ್ಯಾಂಕ್‌ನ್ನು ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೆ ಆರೋಪಿ ವಿರುದ್ದ ಪಿಎಫ್‌ಐ ಸಂಘಟನೆಯು ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಿತ್ತು.

ಈಗ ಆರೋಪಿ ವಿಷ್ಣುಪ್ರಸಾದ್ ನಿಡ್ಡಾಜೆ ಮೇಲೆ ಐಪಿಸಿ ಸೆಕ್ಷನ್ 505ರಡಿ ಎಫ್‌ಐಆರ್ ದಾಖಲಿಸಲಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ.

ನಮ್ಮದು ಕೃಷ್ಣನ ತತ್ವ, ಶಿಶುಪಾಲನ ನೂರು ಪೆಟ್ಟುಗಳನ್ನು ಸಹಿಸೋದು, ನೂರೊಂದನೆ ಪೆಟ್ಟಿಗೆ ಢಿಮ್… ಬಾಂಧವರ ಸಾವಿರ ಪೆಟ್ಟು ಸಹಿಸೋದು, ನಂತರ ಗೋಧ್ರಾ ತರದ ಒಂದು ಪೆಟ್ಟಿನಲ್ಲಿ 20 ವರ್ಷ ಗಪ್ ಚುಪ್… ಗುಜರಾತಿನ ಕೊನೆಯ ಕೋಮುಗಲಭೆ ಯಾವಾಗ ಎಲ್ಲಿ ಹೇಗೆ ನಡೆಯಿತು ಅನ್ನೂದನ್ನ ಸ್ವಲ್ಪ ಯೋಚಿಸಿ ನೋಡಿದರೆ ಇದು ಅರ್ಥವಾದೀತು… ಬಹುಶಃ ವಿಟ್ಲ, ಮಂಗಳೂರು ಕಡೆ ಇನ್ನೂ ಅವುಗಳ ಕೌಂಟ್ ಪೂರ್ತಿ ಆಗಿಲ್ಲ ಅನ್ಸುತ್ತೆ… ಬಂದೂ ಬಂದೂ ಕೆಣಕುತ್ತಿವೆ… ಎಂದು ಹಿಂಸಾತ್ಮಕ ಬರಹ ವಿಷ್ಣುಪ್ರಸಾದ್ ತನ್ನ ಫೇಸ್‌ಬುಕ್ ಖಾತೆಯಲ್ಲಿ ಹಾಕಿಕೊಂಡಿದ್ದ. ಮತ್ತೊಂದು ಪೋಸ್ಟ್‌ನಲ್ಲಿ-ಕೊರಗಜ್ಜನ ವೇಷ ಹಾಕಿದ್ದಾನೆಂದು ಆರೋಪಿಸಲಾಗಿರುವ ಮುಸ್ಲಿಮರ ಮದುಮಗನ ಮನೆ, ಕಾರು, ಅಂಗಡಿ ಧ್ವಂಸ ಮಾಡಬೇಕೆಂಬರ್ಥದಲ್ಲಿ ಬರೆದಿದ್ದ. ಈಗ ವಿಷ್ಣುಪ್ರಸಾದ್ ಫೇಸ್‌ಬುಕ್ ಖಾತೆ ಡಿಲೀಟ್ ಆಗಿದೆ.

ಇದೆಲ್ಲವನ್ನು ಜಾಲತಾಣಿಗರು ಟ್ವೀಟ್ ಮೂಲಕ ಫೆಡರಲ್ ಬ್ಯಾಂಕ್ ಗಮನಕ್ಕೆ ತಂದಿದ್ದರು. ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮುಜುಗರಕ್ಕೀಡಾಗಿದ್ದ ಫೆಡರಲ್ ಬ್ಯಾಂಕ್ ಆಡಳಿತಗಾರರು ಪ್ರತಿಕಿಯಿಸುವುದು ಅನಿವಾರ್ಯವಾಯಿತು. ಒಂದು ಜವಾಬ್ದಾರಿಯುತ ಸಂಸ್ಥೆಯಾಗಿ ನಮ್ಮ ಉದ್ಯೋಗಿಗಳ ಕಡೆಯಿಂದ ಯಾವುದೆ ಅಸಭ್ಯ, ಅನಪೇಕ್ಷಿತ ಅಥವಾ ಹಿಂಸಾತ್ಮಕ, ಪ್ರಶ್ನಾತ್ಮಕ ಕೃತ್ಯಗಳನ್ನು ಎಂದಿಗೂ ಪ್ರೋತ್ಸಾಹಿಸುವುದಿಲ್ಲ. ಅಂತಹ ವರ್ತನೆಯನ್ನು ಸಂಸ್ಥೆ ಎಂದು ಸಹಿಸುವುದಿಲ್ಲ. ಇಂತಹ ಯಾವುದೇ ಪ್ರಚೋದನೆಗೂ ಸಂಸ್ಥೆಗೂ ಸಂಬಂಧವಿಲ್ಲ. ಈ ಕುರಿತು ಸೂಕ್ತ ಕ್ರಮಕ್ಕಾಗಿ ವಿಚಾರಣೆ ಪ್ರಾರಂಭಿಸಲಾಗಿದೆ ಎಂದು ಫೆಡರಲ್ ಬ್ಯಾಂಕ್ ಹೇಳಿತ್ತು.


ಇದನ್ನೂ ಓದಿ: ಮಂಗಳೂರು: ಮುಸ್ಲಿಮರ ನರಮೇಧಕ್ಕೆ ಪ್ರಚೋದಿಸಿದ ಬ್ಯಾಂಕ್ ಅಧಿಕಾರಿ- ಕ್ರಮಕ್ಕೆ ಮುಂದಾದ ಬ್ಯಾಂಕ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...