Homeಕರ್ನಾಟಕಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಮ್ಮೆ ಹುಟ್ಟಿ ಬರಬೇಕು: ಡಿ.ಕೆ ಶಿವಕುಮಾರ್

ಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಮ್ಮೆ ಹುಟ್ಟಿ ಬರಬೇಕು: ಡಿ.ಕೆ ಶಿವಕುಮಾರ್

- Advertisement -
- Advertisement -

ಮೇಕೆದಾಟು ಪಾದಯಾತ್ರೆಗೆ ಅನುಮತಿ ಇಲ್ಲ, ಪಾದಯಾತ್ರೆ ಮಾಡಿದರೆ ಕಾಂಗ್ರೆಸ್ ನಾಯಕರನ್ನು ಬಂಧಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆಗೆ ಗುರುವಾರ ತಿರುಗೇಟು ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ‘‘ಜನರ ನೀರಿಗಾಗಿ, ರಾಜ್ಯದ ಹಿತಕ್ಕಾಗಿ ಕಾಂಗ್ರೆಸ್ ಪಕ್ಷ ನಡಿಗೆ ಮಾಡುತ್ತಿದ್ದು, ಇದನ್ನು ತಡೆಯಲು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಮತ್ತೊಂದು ಜನ್ಮ ಹುಟ್ಟಿ ಬರಬೇಕು’’ ಎಂದು ಹೇಳಿದ್ದಾರೆ.

‘‘ಅವರು ಯಾರನ್ನು ಬೇಕಾದರೂ ಬಂಧಿಸಲಿ, ನನ್ನನ್ನು ಬೇಕಾದರೂ ಬಂಧಿಸಲಿ, ಸಿದ್ದರಾಮಯ್ಯ ಅವರನ್ನಾದರೂ ಬಂಧಿಸಲಿ, ಶಾಸಕರನ್ನಾದರೂ ಬಂಧಿಸಲಿ. ನಾವು ಕೋವಿಡ್ ನಿಯಮ ಗೌರವಿಸಿ ಕಾರ್ಯಕ್ರಮ ಮಾಡುತ್ತೇವೆ. ರಾಜ್ಯದಲ್ಲಿ ಕೋವಿಡ್ ಇದೆ ಎಂದು ನಿರ್ಬಂಧ ಹಾಕಿದ್ದರೂ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ ನಲ್ಲಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದೆ. ಅಲ್ಲಿ ಸಾವಿರಾರು ಜನ ಸೇರಿದ್ದಾರೆ. ಸರ್ಕಾರ ಏನು ಮಾಡುತ್ತಿದೆ. ಗೃಹ ಮಂತ್ರಿಗಳು ಇಲ್ಲಿರುವ ಯಾರನ್ನಾದರೂ ಮುಟ್ಟಲು ಸಾಧ್ಯವೇ? ಇವರ ಮೇಲೆ ಯಾಕೆ ಪ್ರಕರಣ ದಾಖಲಿಸಿಲ್ಲ? ಇದು ಸಭೆ, ಸಮಾರಂಭವಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:‘ಬುಲ್ಲಿ ಬಾಯ್’ ಪ್ರಕರಣದ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಬಂಧನ: ದೆಹಲಿ ಪೊಲೀಸರು

“ವಿಧಾನ ಪರಿಷತ್ ನೂತನ ಸದಸ್ಯರು ಚುನಾವಣೆಯಲ್ಲಿ ಗೌರವದಿಂದ ಗೆದ್ದಿದ್ದಾರೆ. ಅವರು ಬರಬಾರದು ಎಂದು ಹೇಳುತ್ತಿಲ್ಲ. ನೂತನ ಸದಸ್ಯರಿಗೆ ಪ್ರಮಾಣ ವಚನ ನೀಡುವುದಾದರೆ ವರ್ಚುವಲ್ ಸಭೆ ಮಾಡಬೇಕಿತ್ತು. ಅಥವಾ ಪರಿಷತ್ ಒಳಗೆ ಪ್ರಮಾಣ ಬೋಧಿಸಬೇಕಿತ್ತು. ಆದರೆ ಇಲ್ಲಿ ಈ ರೀತಿ ಮಾಡುತ್ತಿರುವುದು ಯಾವ ಆಟ? ಗೃಹ ಸಚಿವರು ಏನು ಮಾಡುತ್ತಿದ್ದಾರೆ? ನಮ್ಮನ್ನು ಹೆದರಿಸುತ್ತಾರಾ? ಇಂತಹ ಗೊಡ್ಡು ಬೆದರಿಕೆಗೆ ಕಾಂಗ್ರೆಸ್ ಹೆದರುವುದಿಲ್ಲ. ನಾನು ಜೈಲಿಗೆ ಹೋಗಿ ಹೋರಾಡಲು ಸಿದ್ಧ. ಈ ರಾಜ್ಯದ ಜನರಿಗಾಗಿ ಹೋರಾಟ ಮಾಡುತ್ತಿದ್ದು, ನಾವು ನಡಿಗೆ ಮಾಡುತ್ತೇವೆ. ರಾಜ್ಯದ ಜನ, ಪಕ್ಷಾತೀತವಾಗಿ ನಾಯಕರು ಬರುತ್ತಾರೆ. ಗೃಹ ಸಚಿವರು ಈ ಬೆದರಿಕೆಯನ್ನು ದೂರದಲ್ಲಿ ಎಲ್ಲಾದರೂ ಇಟ್ಟುಕೊಳ್ಳಲಿ, ಇಲ್ಲಲ್ಲ” ಎಂದು ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗೃಹ ಸಚಿವರು ಹೇಗೆ ಅನುಮತಿ ಕೊಟ್ಟರು? ಯಾವುದೇ ಸಭೆ ಸಮಾರಂಭ ಮಾಡುವಂತಿಲ್ಲ ಎಂದು ನಿರ್ಬಂಧ ಹಾಕಿದ ಮೇಲೆ ಪ್ರಮಾಣ ವಚನ ಕಾರ್ಯಕ್ರಮವನ್ನು ಪರಿಷತ್‌ನಲ್ಲಿ ಮಾಡಬೇಕಾಗಿತ್ತು. ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಷ್ಟು ಜನ ಸೇರಿದ್ದಾರೆ, ಇಲ್ಲಿ ಕೋವಿಡ್ ಹರಡುವುದಿಲ್ಲವೇ? ಗೃಹ ಸಚಿವರು, ಆರೋಗ್ಯ ಸಚಿವರು, ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ? ಗೃಹ ಸಚಿವರು ಈ ಕಾರ್ಯಕ್ರಮ ಆಧಾರದ ಮೇಲೆ ಮೊದಲು ಪ್ರಕರಣ ದಾಖಲಿಸಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ:‘ನಮ್ಮ ಜಿಲ್ಲೆಯನ್ನು ಹಾಳು ಮಾಡಿಬಿಟ್ಟ’: ಸಚಿವ ಮಾಧುಸ್ವಾಮಿ ವಿರುದ್ಧ ಕಿಡಿಕಾರಿದ ಬಿಜೆಪಿ ಸಂಸದ ಜಿ.ಎಸ್. ಬಸವರಾಜ್

“ನಾವು 40 ವರ್ಷಗಳಿಂದ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ. ಅವರು ಯಾರನ್ನು ಹೆದರಿಸುತ್ತಿದ್ದಾರೆ? ನಾವು ನಾಡಿನ ಜನರ ನೀರಿಗಾಗಿ ಹೋರಾಟ ಮಾಡುತ್ತಿದ್ದೇವೆ. ಅವರು ರಾಜ್ಯದ ಜನರಿಗೆ ನ್ಯಾಯ ಒದಗಿಸದಿದ್ದಾಗ, ನ್ಯಾಯ ಒದಗಿಸುವಂತೆ ಮನವಿ ಮಾಡಿ ಪಾದಯಾತ್ರೆ ಮಾಡುತ್ತಿದ್ದೇವೆ. ಈ ಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಂದು ಜನ್ಮ ಹುಟ್ಟಬೇಕು. ನಮ್ಮನ್ನು ಬಂಧಿಸಲಿ, ಅವರ ತಾಕತ್ತು ತೋರಿಸಲಿ, ನಂತರ ನಾವು ಏನು ಮಾಡುತ್ತೇವೆ ಎಂಬುದನ್ನು ನಾವು ತೋರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

“ಸರ್ಕಾರ ಜನರಿಗೆ ತೊಂದರೆ ನೀಡಬೇಕು ಎನ್ನುವ ಉದ್ದೇಶದಿಂದಲೇ ನಿರ್ಬಂಧ ಹಾಕುತ್ತಿದೆ. ಮುಖ್ಯಮಂತ್ರಿಗಳು ಈ ವಿಚಾರವಾಗಿ ಏನು ಹೇಳುತ್ತಾರೆ ನೋಡಿಕೊಂಡು ನಂತರ ನಾನು ಮಾತನಾಡುತ್ತೇನೆ. ಹರಿಯೋ ನದಿ, ಬೀಸೋ ಗಾಳಿ, ಉದಯಿಸುವ ಸೂರ್ಯನನ್ನು ತಡೆಯಲು ಹೇಗೆ ಸಾಧ್ಯವಿಲ್ಲವೋ ಅದೇ ರೀತಿ ನೀರಿಗಾಗಿ ನಡಿಗೆ ತಡೆಯಲು ಗೃಹಮಂತ್ರಿ ಕೈಯಿಂದ ಸಾಧ್ಯವಿಲ್ಲ. ಇವರಿಗೆ, ಇವರ ಪಕ್ಷಕ್ಕೆ ಅನುಕೂಲವಾಗುವಂತೆ ಬೇಕಾದಂತೆ ನಿಯಮ ಮಾಡಿಕೊಂಡರೆ ಆಗುವುದಿಲ್ಲ. ಅವರು ತಮಗೆ ಬೇಕಾದ ಅಧಿಕಾರಿ ಹಾಕಿಸಿಕೊಂಡು, ನಮ್ಮನ್ನು ಬಂಧಿಸಿಸಲಿ. ಆಮೇಲೆ ನಮ್ಮ ಮಾತು. ಪಾದಯಾತ್ರೆ ನಡೆಯುತ್ತದೆ, ಬಸವನಗುಡಿ ತಲುಪುತ್ತೇವೆ” ಎಂದು ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ:‘ನಾನು 11 ಬಾರಿ ಲಸಿಕೆ ಪಡೆದಿದ್ದೇನೆ’ ಎಂದ ವ್ಯಕ್ತಿ: ತನಿಖೆಗೆ ಆದೇಶಿಸಿದ ಬಿಹಾರ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಘೋರ ಅಪರಾಧದ ಆರೋಪದ ಹೊರತು ಜಾಮೀನು ರಹಿತ ವಾರಂಟ್‌ ಹೊರಡಿಸಬಾರದು: ಸುಪ್ರೀಂ ಕೋರ್ಟ್‌

0
ಜಾಮೀನು ರಹಿತ ವಾರಂಟ್‌ಗಳನ್ನು ನೀಡುವುದನ್ನು ವಾಡಿಕೆಯಾಗಿರಿಸಿರುವ ಬಗ್ಗೆ ಮೇ 1ರಂದು ನೀಡಿದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಆರೋಪಿಯ ಮೇಲೆ ಘೋರ ಅಪರಾಧದ ಆರೋಪ ಹೊರಿಸದ ಹೊರತು ಜಾಮೀನು ರಹಿತ ವಾರಂಟ್‌ಗಳನ್ನು...