Homeಕರ್ನಾಟಕಸಾರ್ವಜನಿಕರಿಗೆ ಟೋಯಿಂಗ್‌ ಸಿಬ್ಬಂದಿಯ ಕಿರುಕುಳ ಸಲ್ಲದು: ಗೃಹ ಸಚಿವ ಆರಗ ಜ್ಞಾನೇಂದ್ರ

ಸಾರ್ವಜನಿಕರಿಗೆ ಟೋಯಿಂಗ್‌ ಸಿಬ್ಬಂದಿಯ ಕಿರುಕುಳ ಸಲ್ಲದು: ಗೃಹ ಸಚಿವ ಆರಗ ಜ್ಞಾನೇಂದ್ರ

- Advertisement -
- Advertisement -

ಬೆಂಗಳೂರು ನಗರದಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ನೆಪದಲ್ಲಿ ಸಾರ್ವಜನಿಕರಿಗೆ ವಾಹನ ಟೋಯಿಂಗ್‌ ಸಿಬ್ಬಂದಿ ನೀಡುವ ಕಿರುಕುಳ ಸಲ್ಲದು ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ಟೋಯಿಂಗ್‌ ಸಿಬ್ಬಂದಿಯಿಂದ ಸಾರ್ವಜನಿಕರಿಗಾಗುತ್ತಿರುವ ಕಿರುಕುಳದ ಬಗ್ಗೆ ಕೇಳಿ ಬಂದ ಆಪಾದನೆಗಳ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಾ ಪಂಥ್ ಹಾಗೂ ಹೆಚ್ಚುವರಿ ಆಯುಕ್ತ (ಸಂಚಾರ) ರವಿಕಾಂತೇಗೌಡ ಅವರ ಜೊತೆ ಸಭೆ ನಡೆಸಿರುವ ಅವರು, ಇನ್ನು ಮುಂದೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಯಾವುದೇ ವಾಹನವನ್ನು ಟೋಯಿಂಗ್ ಮಾಡುವ ಪೂರ್ವದಲ್ಲಿ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ವಾಹನ ಮಾಲೀಕರ ಗಮನ
ಸೆಳೆಯಲು ಸೈರನ್ ಅಥವಾ ಹಾರ್ನ್ ಮಾಡಬೇಕು. ವಾಹನ ಟೋಯಿಂಗ್‌ ಮಾಡಬೇಕಾದ ಸಂದರ್ಭದಲ್ಲಿ ಎಲ್ಲ ನಿಯಾಮಾವಳಿಗಳನ್ನು ಚಾಚೂ ತಪ್ಪದೆ ಅನುಸರಿಸಬೇಕು ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ಪ್ರತಿಯೊಂದು ತಂತ್ರವೂ ನಮ್ಮ ಪಕ್ಷವನ್ನು ಬಲಪಡಿಸುತ್ತದೆ: ಟಿಎಂಸಿ ಶಾಸಕ

ಟ್ರಾಫಿಕ್ ಪೊಲೀಸರು ವಾಹನವನ್ನು ಹೊತ್ತೊಯ್ಯುವ ಸಮಯದಲ್ಲಿ ವಾಹನದ ಮಾಲೀಕರು ಸ್ಥಳದಲ್ಲಿದ್ದರೆ ಕೇವಲ ‘ನೋ ಪಾರ್ಕಿಂಗ್’ ಶುಲ್ಕವನ್ನು ಮಾತ್ರ ಪಡೆದುಕೊಳ್ಳಬೇಕು ಹಾಗೂ ವಾಹನವನ್ನು ಅಲ್ಲಿಯೇ ಅವರಿಗೆ ಬಿಟ್ಟುಕೊಡಬೇಕು ಎಂದಿದ್ದಾರೆ.

ಟೋಯಿಂಗ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಟೋಯಿಂಗ್‌ ಮಾಡಲಾಗುವ ವಾಹನಗಳನ್ನು
ಅತ್ಯಂತ ಜಾಗರೂಕತೆಯಿಂದ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...